Homeಮುಖಪುಟಸೆ.5 ಕ್ಕೆ ಗೌರಿ ಲಂಕೇಶ್ ನೆನಪಿನಲ್ಲಿ ಮೊಳಗಲಿದೆ 'ನಾವೆದ್ದು ನಿಲ್ಲದಿದ್ದರೆ…' ಧ್ವನಿ

ಸೆ.5 ಕ್ಕೆ ಗೌರಿ ಲಂಕೇಶ್ ನೆನಪಿನಲ್ಲಿ ಮೊಳಗಲಿದೆ ‘ನಾವೆದ್ದು ನಿಲ್ಲದಿದ್ದರೆ…’ ಧ್ವನಿ

ಅಭಿಯಾನವು ಭಾರತದ ಜನತೆಯ ಸಂವಿಧಾನಾತ್ಮಕ ಹಕ್ಕುಗಳ ವಿರುದ್ಧ ನಡೆಯುತ್ತಿರುವ ಗುರುತರ ದಾಳಿಯನ್ನು ಪ್ರತಿರೋಧಿಸುವ ಧ್ವನಿಗಳನ್ನು ಒಗ್ಗೊಡಿಸುವ ಧ್ಯೇಯವನ್ನು ಹೊಂದಿದೆ.

- Advertisement -
- Advertisement -

ಸೆಪ್ಟೆಂಬರ್ 05, 2017…. ಯಾರಿಗೆ ತಾನೇ ನೆನಪಿಲ್ಲ ಹೇಳಿ ಒಬ್ಬ ನಿರ್ಭಿತ, ದಿಟ್ಟ ಪತ್ರಕರ್ತೆಯನ್ನು ದೇಶ ಕಳೆದುಕೊಂಡ ದಿನ. ಪತ್ರಕರ್ತೆ ಎನ್ನುವುದಕ್ಕಿಂತ ಮಾತೃಹೃದಯಿ ನಮ್ಮನ್ನಗಲಿದ ದಿನ. ಅಭಿವ್ಯಕ್ತಿ ಸ್ವಾತಂತ್ರಕ್ಕೆ ಪೆಟ್ಟು ಬಿದ್ದ ದಿನ. ಮಹಿಳೆಯರ ಹಕ್ಕುಗಳ ಮೇಲೆ, ಸತ್ಯದ ಮೇಲೆ ಬರೆ ಬಿದ್ದ ದಿನ.. ಆ ದುರಂತಕ್ಕೆ 3 ವರ್ಷಗಳಾಗುತ್ತಾ ಬಂತು.

ರಾಜಕೀಯ ಮತ್ತು ಸಾರ್ವಜನಿಕ ಜೀವನದಲ್ಲಿ ಬೆಳೆಯುತ್ತಿರುವ ಪ್ಯಾಸಿಸ್ಟ್ ಶಕ್ತಿಗಳ ವಿರುದ್ಧ ಎದೆಗುಂದದೆ ಹೋರಾಡಿದ ಅಪ್ರತಿಮ ಮಹಿಳೆ ಗೌರಿ ಲಂಕೇಶ್. ಜನರಲ್ಲಿ ಬದುಕುವ ಹಕ್ಕು, ಭಿನ್ನಾಭಿಪ್ರಾಯಗಳನ್ನು ಹೊಂದುವ ಸ್ವತಂತ್ರ ಮನೋಭಾವವನ್ನು ಬೆಳೆಸಿಕೊಳ್ಳುವ ಹಕ್ಕುಗಳನ್ನು ಒಪ್ಪಿ, ಅಪ್ಪಿಕೊಂಡಿದ್ದ ಅವರು ತನ್ನ ಜೀವವನ್ನೇ ಪಣಕ್ಕಿಟ್ಟು ಮನುಷ್ಯ ಬದುಕಿನ ಸಂಕೇತವಾದರು. ಇವರ ನಿರ್ಭಿತ ಚೈತನ್ಯ ಮತ್ತು ಗಾಢ ನಂಬಿಕೆಗಳಿಂದ ಉತ್ತೇಜಿತವಾಗಿ, ಸಂವಿಧಾನ ಮತ್ತು ಜನರ ಮೇಲಿನ ಹಲ್ಲೆಗಳನ್ನು ಖಂಡಿಸಿ ಅವುಗಳ ವಿರುದ್ಧ ಧ್ವನಿ ಎತ್ತಲು ಇದೇ ಸೆಪ್ಟಂಬರ್ 5ರಂದೇ “ನಾವೆದ್ದು ನಿಲ್ಲದಿದ್ದರೆ”… ಆಂದೋಲನ ನಡೆಯುತ್ತಿದೆ.

ಅಂದು ರಾಷ್ಟ್ರಮಟ್ಟದಲ್ಲಿ ಮಹಿಳಾ ಪರ ಹೋರಾಟಗಾರರು, ಚಿಂತಕರು, ಲೈಂಗಿಕ ಅಲ್ಪ ಸಂಖ್ಯಾತ LGBTQIA ಸಮುದಾಯಗಳು ಮತ್ತು ಮಾನವ ಹಕ್ಕುಗಳ ಸಂಘಟನೆಗಳು “ನಾವೆದ್ದು ನಿಲ್ಲದಿದ್ದರೆ” ಎಂಬ ಪ್ರಚಾರಾಂದೋಲನ ಹಮ್ಮಿಕೊಂಡಿವೆ. ಅಭಿಯಾನವು ಭಾರತದ ಜನತೆಯ ಸಂವಿಧಾನಾತ್ಮಕ ಹಕ್ಕುಗಳ ವಿರುದ್ಧ ನಡೆಯುತ್ತಿರುವ ಗುರುತರ ದಾಳಿಯನ್ನು ಪ್ರತಿರೋಧಿಸುವ ಧ್ವನಿಗಳನ್ನು ಒಗ್ಗೊಡಿಸುವ ಧ್ಯೇಯವನ್ನು ಹೊಂದಿದೆ. ಈ ಅಭಿಯಾನದಲ್ಲಿ ಜಾತಿ, ಮತ, ಧರ್ಮಗಳ ಕಟ್ಟಳೆಗಳಿಂದ ಹೊರ ಬಂದು ತಮ್ಮ ಹಕ್ಕುಗಳಿಗಾಗಿ ಧ್ವನಿ ಎತ್ತುವ ಕೆಲಸ ನಡೆಯಲಿದೆ.

ದೇಶದಲ್ಲಿನ ಪ್ಯಾಸಿಸ್ಟ್ ಶಕ್ತಿಗಳ ಬೆಳವಣಿಗೆಯಿಂದ ಮಹಿಳೆಯರು, ಮಕ್ಕಳು ಮತ್ತು ಲೈಂಗಿಕ ಅಲ್ಪಸಂಖ್ಯಾತರು ತಮ್ಮ ಹಕ್ಕುಗಳಿಗಾಗಿ ಪರದಾಡುವಂತಾಗಿದೆ. ಅವರ ಜೀವನದ ಮೇಲೆ ಅಗಾಧ ಪರಿಣಾಮ ಉಂಟಾಗಿದೆ. ಅಭಿಯಾನದ ಮೂಲಕ ಅವರಲ್ಲಿ ಆತ್ಮಸ್ಥೈರ್ಯ ತುಂಬಲಾಗುತ್ತದೆ. ಈ ಮೂಲಕ ಸಂವಿಧಾನ ನೀಡಿರುವ ಹಕ್ಕುಗಳನ್ನು ಪಡೆಯಲು ಧ್ವನಿ ಎತ್ತಲಾಗುತ್ತಿದೆ ಎಂದು ಸುದ್ದಿಗೊಷ್ಟಿಯಲ್ಲಿ ಹೋರಾಟಗಾರ್ತಿಯರು ತಿಳಿಸಿದ್ದಾರೆ.

ಕೊರೊನಾ ಸಂಕಷ್ಟದ ಸಮಯದಲ್ಲಿ ಆಶಾ ಕಾರ್ಯಕರ್ತೆಯರು, ಪೌರ  ಕಾರ್ಮಿಕರು, ದಲಿತರ ಮೇಲೆ ಅತ್ಯಾಚಾರದ ಪ್ರಕರಣಗಳು ಹೆಚ್ಚಾಗಿದ್ದು, ಇವುಗಳನ್ನು ಪ್ರಚಾರಾಂದೋಲನದಲ್ಲಿ ಚರ್ಚಿಸಿ, ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಲು ಅಭಿಯಾನದ ಸಂಯೋಜಕರು ನಿರ್ಧರಿಸಿದ್ದಾರೆ.

ದೇಶದಲ್ಲಿ ನ್ಯಾಯಕ್ಕಾಗಿ ನಡೆಯುವ ಶಾಂತಿಯುತ ಪ್ರತಿಭಟನೆಗಳನ್ನು ಆಳುವ ಪಕ್ಷ ತಡೆಯುತ್ತಿದ್ದು, ದ್ವೇಷ ಕೆರಳಿಸುವ ಭಾಷಣ ಮಾಡುವ ನಾಯಕರನ್ನು ಬಂಧಿಸುವ ಬದಲು ಐಕ್ಯತೆ, ಶಾಂತಿ ಮತ್ತು ಸಂವಿಧಾನಕ್ಕೆ ಹೊರಾಡುತ್ತಿದ್ದವರನ್ನು ಬಂಧಿಸಿ ಜೈಲಿಗಟ್ಟಿದ್ದಾರೆ, ಅವರುಗಳ ಬಿಡುಗಡೆಯಾಗಬೇಕು. ಮಾಹಿತಿ ಹಕ್ಕು ಕಾಯ್ದೆಯನ್ನು ದುರ್ಬಲಗೊಳಿಸಲಾಗಿದೆ. ಕಠಿಣ ಲಾಕ್‌ಡೌನ್‌ನಲ್ಲಿ ವಲಸೆ ಕಾರ್ಮಿಕರು, ಬಡವರ ಬಗ್ಗೆ ಸರ್ಕಾರ ನಿರ್ಲಕ್ಷ್ಯ ತೋರಿದೆ ಎಂದು ಅಭಿಯಾನದ ಭಿತ್ತಿಪತ್ರಗಳು ಸಾರುತ್ತಿವೆ.

ಇನ್ನು ಅಭಿಯಾನದ ಮೂಲಕ ನಿರ್ದಿಷ್ಟ ಬೇಡಿಕೆಗಳಿರುವ ಮನವಿ ಪತ್ರವನ್ನು ಮುಖ್ಯಮಂತ್ರಿಗಳಿಗೆ ಸಲ್ಲಿಸಲಾಗುತ್ತದೆ. ಸ್ಥಳೀಯವಾದ ಬೇಡಿಕೆಗಳನ್ನು ಸ್ಥಳೀಯ ಮುಖಂಡರಿಗೆ ಸಲ್ಲಿಸಲು ನಿರ್ಧರಿಸಲಾಗಿದೆ. ಆನ್‌ಲೈನ್‌ ಮೂಲಕ ವಿವಿಧ ವಲಯಗಳ ಮಹಿಳೆಯರ, ರೈತರ, ದಿನಗೂಲಿ ಕಾರ್ಮಿಕರ, ಲೈಂಗಿಕ ಕಾರ್ಯಕರ್ತೆಯರ ಹೋರಾಟದ ಮಾಹಿತಿಗಳಿರುವ ವಿಡಿಯೋ ಬಿಡುಗಡೆ ಮಾಡಲಾಗುತ್ತದೆ. ಜೊತೆಗೆ ಅಂದು ವಿದ್ಯಾರ್ಥಿಗಳು, ವೃತ್ತಿಪರರು, ಚಿಂತಕರು, ಸಾಹಿತಿಗಳು, ಕಾರ್ಯಕರ್ತರು ಫೇಸ್‌ಬುಕ್ ಲೈವ್ ಬರಲಿದ್ದಾರೆ.

ರಾಷ್ಟ್ರವ್ಯಾಪಿ ನಡೆಯಲಿರುವ ಈ ಅಭಿಯಾನಕ್ಕೆ ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ಬೆಂಬಲ ವ್ಯಕ್ತವಾಗುತ್ತಿದೆ. ನಿರ್ದೇಶಕಿ ಕವಿತಾ ಲಂಕೇಶ್, ನಿರ್ದೇಶಕ ಬಿ.ಸುರೇಶ್, ಗುಜರಾತ್ ರಾಜಕಾರಣಿ ಜಿಗ್ನೇಶ್ ಮೇವಾನಿ, ನಟಿ ಅನಿತಾ ಭಟ್, ನೀತು, ಹೋರಾಟಗಾರರು, ಮಹಿಳಾ ಪರ ಚಿಂತಕರು ಚಲನಚಿತ್ರ ನಟ, ನಟಿಯರು ಈ ಅಭಿಯಾನದ ಮಹತ್ವವನ್ನು ಸೂಚಿಸಿ ತಮ್ಮ ಬೆಂಬಲ ನೀಡಿ ಆನ್‌ಲೈನ್ ಕ್ಯಾಂಪೇನ್‌ನಲ್ಲಿ ಭಾಗವಹಿಸಿ ಅಭಿಯಾನದ ಭಾಗವಾಗಲು ಜನರಲ್ಲಿ ಮನವಿ ಮಾಡಿದ್ದಾರೆ.

ಇದನ್ನೂ ಓದಿ:ಗಟ್ಟಿ ಗಿತ್ತಿಯಾಗಿ ಜೀವಂತವಾಗಿರುವ ಗೌರಿ ಲಂಕೇಶ್ ಹಾಗೂ ಮಂತ್ರಿ ರಾಜಶೇಖರ ಪಾಟೀಲರೂ…

ಅಭಿಯಾನ ಆಯೋಜಕರಲ್ಲಿ ಒಬ್ಬರಾದ ವಿದ್ಯಾ ದಿನಕರ್‌ ನಾನು ಗೌರಿ.ಕಾಂ ಜೊತೆ ಮಾತನಾಡುತ್ತಾ,  ಈ ಕ್ಯಾಂಪೇನ್ ಮಹಿಳಾಪರ, ಲೈಂಗಿಕ ಅಲ್ಪಸಂಖ್ಯಾತರು, ದಮನಿತರ ಪರ ಇದೆ. ಆನ್ಲೈನ್ ಮತ್ತು ಆಫ್‌ಲೈನ್ ಎರಡು ಕಡೆ ಹೋರಾಟ ನಡೆಯಲಿದೆ. ಜಿಲ್ಲೆಗಳಲ್ಲಿ ಮಹಿಳೆಯರು ನಮ್ಮ ಹಕ್ಕೋತ್ತಾಯಗಳನ್ನು ಸಲ್ಲಿಸಲಿದ್ದಾರೆ. ಸಾಂಸ್ಕೃತಿಕ ಪ್ರತಿರೋಧ ಕೂಡ ಇದೆ. ಕೋಲಾಟ, ಹಾಡುಗಳು, ನೃತ್ಯದ ಮೂಲಕ ಪ್ರತಿರೋಧ ಒಡ್ಡಲಿದ್ದಾರೆ. ಕೊರೋನಾ ಸಮಯದಲ್ಲಿ ಸುಮ್ಮನೆ ಕೂರುವುದಲ್ಲ. ಸಾಮಾಜಿಕ ಅಂತರ ಪಾಲಿಸಿಕೊಂಡೆ ನಮ್ಮ ಹಕ್ಕುಗಳ ಬಗ್ಗೆ ಹೋರಾಟ ಮಾಡಬೇಕಿದೆ. ಜೊತೆಗೆ ಹೆಚ್ಚು ಜನ ಸೇರಲು ಆಗದ ಹಿನ್ನೆಲೆ ಆನ್‌ಲೈನ್‌ನಲ್ಲೂ ಕೂಡ ಕ್ಯಾಂಪೇನ್ ಮಾಡಲಾಗುತ್ತದೆ ಎಂದು ಮಾಹಿತಿ ಹಂಚಿಕೊಂಡಿದ್ದಾರೆ.

ಮತ್ತೊಬ್ಬ ಸಾಮಾಜಿಕ ಕಾರ್ಯಕರ್ತೆ ಕಾವ್ಯ ಅಚ್ಯುತ್ ಮಾತನಾಡಿ “ಇಂದಿನ ಕೋಮುವಾದೀಕರಣ, ಆರ್ಥಿಕ ಕುಸಿತ, ಮಹಿಳೆ, ಮಕ್ಕಳು, ಕಾರ್ಮಿಕ ವಿರೋಧಿ ನೀತಿಗಳು ಮಹಿಳೆ, ಮಕ್ಕಳು, ಲೈಂಗಿಕ ಅಲ್ಪಸಂಖ್ಯಾತರ ಮೇಲೆ ಕೆಟ್ಟ ಪರಿಣಾಮ ಬೀರಿವೆ. ಹಾಗಂತ ಈ ಪರಿಸ್ಥಿತಿಯನ್ನು ಎದುರಿಸಲು ಮಹಿಳಾ ವಿಷಯಾಧಾರಿತ ಹೋರಾಟವೊಂದೇ ಸಾಕಾಗುವುದಿಲ್ಲ.. ಹಾಗಾಗಿ ಎಲ್ಲಾ ವರ್ಗದ ಹೋರಾಟಗಾರರು ಸೇರಿಕೊಂಡು ಸೆಪ್ಟೆಂಬರ್ 05 ರಂದು ರಾಷ್ಟ್ರಮಟ್ಟದಲ್ಲಿ ಅಭಿಯಾನ ಮಾಡುತ್ತಿದ್ದೆವೆ. ಸಾಮಾಜಿಕ ಜಾಲತಾಣದಲ್ಲಿ ನಡೆಯುವ ಈ ಪ್ರತಿರೋಧಕ್ಕೆ ಎಲ್ಲಾ ವರ್ಗಗಳಿಂದ ಬೆಂಬಲ ವ್ಯಕ್ತವಾಗಿದ್ದು ನಿರೀಕ್ಷೆಗೂ ಮೀರಿ ಯಶಸ್ವಿಯಾಗುತ್ತದೆ ಎಂಬ ನಂಬಿಕೆ ಇದೆ ಎಂದು ಹೇಳಿದರು.

ಚಿತ್ರ ನಟಿ ಅನಿತಾ ಭಟ್ ರವರು ಸೆಪ್ಟೆಂಬರ್ 05 ರಂದು ನಡೆಯುವ ಮಹಿಳಾ ಮತ್ತು ಮಕ್ಕಳ ಹಕ್ಕುಗಳ ಬಗೆಗಿನ ಆನ್ ಲೈನ್ ಕ್ಯಾಂಪೇನ್ ಗೆ ಜೊತೆಯಾಗಿದ್ದಾರೆ.. ✊#IfWeDoNotRise#IfWeDoNotRiseKarnataka#ನಾವೆದ್ದು_ನಿಲ್ಲದಿದ್ದರೆ

Posted by Kavya Achuth on Tuesday, September 1, 2020

ಅಭಿಯಾನದ ಕುರಿತು ಜನಪರ ಸಾಹಿತಿ ಜನಾರ್ಧನ ಕೆಸರಗದ್ದೆಯವರು ಅಭಿಯಾನದ ಥೀಮ್ ಸಾಂಗ್ ಬರೆದಿದ್ದು ಎಲ್ಲೆಡೆ ವೈರಲ್ ಆಗಿದೆ.

ಒಟ್ಟಾರೆ, ಕೊರೊನಾ, ಲಾಕ್‌ಡೌನ್  ಮಧ್ಯೆ ಯಾವ ದೌರ್ಜನ್ಯಗಳು ನಿಂತಿಲ್ಲ. ಇನ್ನು ಅಂತಹ ಪ್ರಕರಣಗಳು ಹೆಚ್ಚಾಗುತ್ತಿವೆ ಹೀಗಾಗಿ ಅವುಗಳ ವಿರುದ್ಧದ ಪ್ರತಿಭಟನೆಗಳು, ಪ್ರತಿರೋಧ ಕೂಡ ನಿಲ್ಲಬಾರದು ಎಂಬುದು ಅಭಿಯಾನ ಸಂಯೋಜಕರ ಅಭಿಪ್ರಾಯವಾಗಿದೆ.


ಇದನ್ನೂ ಓದಿ: ಸತ್ಯವ ನುಡಿಯುವ ದಿಟ್ಟತೆಗೆ ಪ್ರತೀಕವಾದ ಗೌರಿ ಲಂಕೇಶ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...