ಖ್ಯಾತ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದಲ್ಲಿ ಜಾಮೀನು ಪಡೆದು ಬಿಡುಗಡೆಯಾದ ಇಬ್ಬರು ಆರೋಪಿಗಳಿಗೆ ಬಿಜೆಪಿ ಬೆಂಬಲಿಗ ಸಂಘಟನೆಗಳು ಸನ್ಮಾನ ಮಾಡಿರುವ ಬಗ್ಗೆ ವರದಿಯಾಗಿದೆ. ಇಬ್ಬರು ಆರೋಪಿಗಳಿಗೆ ವಿಜಯಪುರ ಜಿಲ್ಲೆಯ ಸಂಘಪರಿವಾರ ಹಾಗೂ ಶ್ರೀರಾಮ ಸೇನೆಯ ಮುಖಂಡರು, ಕಾರ್ಯಕರ್ತರು ಸ್ವಾಗತ ಮಾಡಿದ್ದು ವಿಡಿಯೊ ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡುತ್ತಿವೆ. ಗೌರಿ ಲಂಕೇಶ್ ಹತ್ಯೆ
ಜಾಮೀನು ಪಡೆದು ವಿಜಯಪುರಕ್ಕೆ ಆಗಮಿಸಿದ್ದ ಆರೋಪಿಗಳಾದ ಪರಶುರಾಮ ವಾಗ್ಮೋರೆ ಹಾಗೂ ಮನೋಹರ ಯಡವೆ ನಗರದ ಕಾಳಿಕಾ ದೇವಾಲಯದಲ್ಲಿ ಪೂಜೆ ಮಾಡಿಸಿದ್ದಾರೆ. ಪೂಜೆಯ ನಂತರ ಬಿಜೆಪಿ ಬೆಂಬಲಿಗ ಸಂಘಟನೆಗಳ ಕಾರ್ಯಕರ್ತರು ಅವರಿಗೆ ಶಾಲು ಹೊದಿಸಿ ಹಾರ ಹಾಕಿ ಸನ್ಮಾನಿಸಿದ್ದಾರೆ. ಬಳಿಕ ಶಿವಾಜಿ ವೃತ್ತಕ್ಕೆ ತೆರಳಿ ಶಿವಾಜಿ ಮೂರ್ತಿಗೆ ಆರೋಪಿಗಳು ಹಾರ ಹಾಕಿದ್ದಾರೆ ಎಂದು ವಾರ್ತಾಭಾರತಿ ವರದಿ ಮಾಡಿದೆ.
ಇದನ್ನೂಓದಿ: ಗೌರಿ ಲಂಕೇಶ್ ಹತ್ಯೆ ಆರೋಪಿಯನ್ನು ಭೇಟಿಯಾದ ಮಾಜಿ ಬಿಜೆಪಿ ಸಂಸದ ಪ್ರತಾಪ್ ಸಿಂಹ
2017ರಲ್ಲಿ ಬೆಂಗಳೂರಿನಲ್ಲಿ ನಡೆದ ಗೌರಿ ಲಂಕೇಶ್ ಹತ್ಯೆ ಪ್ರಕರಣದಲ್ಲಿ ಬೆಂಗಳೂರು ಸೆಷನ್ಸ್ ಕೋರ್ಟ್ ಇಬ್ಬರು ಆರೋಪಿಗಳಿಗೆ ಷರತ್ತುಬದ್ಧ ಜಾಮೀನು ಇತ್ತಿಚೆಗೆ ನೀಡಿದೆ. ಸುಮಾರು ಆರುವರೆ ವರ್ಷಗಳ ಬಳಿಕ ಅವರು ಜಾಮೀನು ಪಡೆದಿದ್ದರು. ಪ್ರಕರಣದಲ್ಲಿ ಒಟ್ಟು 25 ಜನ ಆರೋಪಿಗಳನ್ನು ಎಸ್‌ಐಟಿ ಬಂಧಿಸಿತ್ತು.
ವಿಜಯಪುರದ ಸಿಂದಗಿ ಪಟ್ಟಣದ ಬಸವನಗರ ನಿವಾಸಿ ಪರಶುರಾಮ್ ವಾಗ್ಮೋರೆ ಹಾಗೂ ಜಯಪುರ ತಾಲೂಕಿನ ರತ್ನಾಪೂರ ಗ್ರಾಮದ ಮನೋಹರ ಯಡವೆ ಎಂಬುವರನ್ನು ಪ್ರಕರಣದ ತನಿಖೆ ನಡೆಸುತ್ತಿದ್ದ ವಿಶೇಷ ತನಿಖಾ ತಂಡ(ಎಸ್‌ಐಟಿ) 2018ರಲ್ಲಿ ಬಂಧಿಸಿತ್ತು. ಬಿಡುಗಡೆಯಾದ ಇಬ್ಬರುಲ್ಲಿ ಪರಶುರಾಮ್ ವಾಗ್ಮೋರೆ ಗೌರಿ ಲಂಕೇಶ್ ಅವರಿಗೆ ಗುಂಡು ಹಾರಿಸಿ ಹತ್ಯೆ ಮಾಡಿದ್ದ ಎಂದು ಆರೋಪಿಸಲಾಗಿದೆ. ಗೌರಿ ಲಂಕೇಶ್ ಹತ್ಯೆ
ಹತ್ಯೆ ಪ್ರಕರಣದ ಒಟ್ಟು 25 ಜನ ಆರೋಪಿಗಳಲ್ಲಿ ಈ ವರೆಗೆ 18 ಜನ ಆರೋಪಿತರಿಗೆ ಜಾಮೀನು ದೊರಕಿದೆ. ಇನ್ನೂ 7ಮಂದಿ ಆರೋಪಿಗಳಿಗೂ ಜಾಮೀನು ಸಿಗಲಿದೆ ಎನ್ನಲಾಗಿದೆ.
ಇದನ್ನೂ ಓದಿ:ರೈತರ ಪಂಪ್ ಸೆಟ್ ಗಳಿಗೆ ಪ್ರಿ ಪೇಯ್ಡ್ ಮೀಟರ್ ಅಳವಡಿಸಲು ಬಿಜೆಪಿ ಸಂಚು ಹೂಡುತ್ತಿದೆ: ಟಿ.ಯಶವಂತ್ #farmlaws


