ಖ್ಯಾತ ಪತ್ರಕರ್ತೆ ಹಾಗೂ ಪ್ರಗತಿಪರ ಚಿಂತಕಿ ಗೌರಿ ಲಂಕೇಶ್ ಹತ್ಯೆಗೆ ಸಂಚು ರೂಪಿಸಿದ್ದ ನಾಲ್ವರು ಆರೋಪಿಗಳಿಗೆ ಕರ್ನಾಟಕ ಹೈಕೋರ್ಟ್ ಜಾಮೀನು ಮಂಜೂರು ಮಾಡಿದೆ. ಅವರನ್ನು ಷರತ್ತುಗಳೊಂದಿಗೆ ಬಿಡುಗಡೆ ಮಾಡುವಂತೆ ನ್ಯಾಯಮೂರ್ತಿ ಎಸ್ ವಿಶ್ವಜಿತ್ ಶೆಟ್ಟಿ ಇತ್ತೀಚೆಗೆ ಆದೇಶ ಹೊರಡಿಸಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ
ಪ್ರಕರಣದಲ್ಲಿ ಸಂಖ್ಯೆ 6, 9, 13 ಮತ್ತು 16ನೇ ಆರೋಪಿಗಳಾದ ಬೆಳಗಾವಿ ಜಿಲ್ಲೆಯ ಭರತ್ ಜಯವಂತ ಕುರಣೆ, ಮಹಾರಾಷ್ಟ್ರದ ಶ್ರೀಕಾಂತ್ ಪಂಗರ್ಕರ್, ಶಿವಮೊಗ್ಗ ಜಿಲ್ಲೆಯ ಸುಜಿತ್ ಕುಮಾರ್ ಮತ್ತು ಮಹಾರಾಷ್ಟ್ರದ ಸುಧನ್ವ ಗೊಂಧಲೇಕರ್ ಅವರಿಗೆ ಜಾಮೀನು ನೀಡಲಾಗಿದೆ.
ಆರೋಪಿಗಳ ವಿರುದ್ಧ 2017 ರಲ್ಲಿ ರಾಜರಾಜೇಶ್ವರಿ ನಗರ ಪೊಲೀಸರು ಭಾರತೀಯ ಶಸ್ತ್ರಾಸ್ತ್ರ ಕಾಯ್ದೆ, ಕರ್ನಾಟಕ ಸಂಘಟಿತ ಅಪರಾಧಗಳ ನಿಯಂತ್ರಣ ಕಾಯ್ದೆ ಮತ್ತು ಐಪಿಸಿಯ ನಿಬಂಧನೆಗಳ ಅಡಿಯಲ್ಲಿ ಪ್ರಕರಣ ದಾಖಲಿಸಿದ್ದರು. ಅವರು 2018 ರಿಂದ ನ್ಯಾಯಾಂಗ ಬಂಧನದಲ್ಲಿದ್ದರು.
ಇದನ್ನೂಓದಿ: ಗೌರಿ ಲಂಕೇಶ್ ಹತ್ಯೆ ಪ್ರಕರಣ : ಆರೋಪಿ ಮೋಹನ್ ನಾಯಕ್ ಜಾಮೀನು ರದ್ದುಗೊಳಿಸಲು ಸುಪ್ರೀಂ ನಕಾರ
ಬೆಂಗಳೂರಿನ ರಾಜರಾಜೇಶ್ವರಿನಗರದಲ್ಲಿರುವ ಗೌರಿ ಲಂಕೇಶ್ ಅವರನ್ನು 2017ರ ಸೆಪ್ಟೆಂಬರ್ 5ರಂದು ರಾತ್ರಿ ಬೈಕ್‌ನಲ್ಲಿ ಬಂದ ಇಬ್ಬರು ವ್ಯಕ್ತಿಗಳು ಗುಂಡು ಹಾರಿಸಿ ಹತ್ಯೆ ಮಾಡಿದ್ದರು. ವಿಶೇಷ ತನಿಖಾ ತಂಡವು ಮಾಸ್ಟರ್ ಮೈಂಡ್ ಅಮೋಲ್ ಕಾಳೆ, ಶೂಟರ್ ಪರಶುರಾಮ್ ವಾಘ್ಮೋರೆ ಮತ್ತು ಮೋಟಾರ್ ಸೈಕಲ್ ಸವಾರಿ ಮಾಡಿದ ಗಣೇಶ್ ಮಿಸ್ಕಿನ್ ಸೇರಿದಂತೆ ಒಟ್ಟು 18 ಆರೋಪಿಗಳು/ಅನುಮಾನಿತರನ್ನು ಗುರುತಿಸಿತ್ತು.
ಅರ್ಜಿದಾರರ ಪರ ವಕೀಲರು ವಾದ ಮಂಡಿಸಿ, ಇತರ ಆರೋಪಿಗಳಾದ ಕೆಟಿ ನವೀನ್ ಕುಮಾರ್, ಸುರೇಶ್ ಹೆಚ್ ಎಲ್ ಮತ್ತು ಅಮಿತ್ ದೆಗ್ವೇಕರ್ ಅವರಿಗೆ ಕೆಲವು ತಿಂಗಳ ಹಿಂದೆ ಜಾಮೀನು ಮಂಜೂರಾಗಿದ್ದು, ಸುಳ್ಯ ಮೂಲದ ಆಯುರ್ವೇದ ವೈದ್ಯ ವೈದ್ಯರಾಗಿದ್ದ ಮತ್ತೋರ್ವ ಆರೋಪಿ ಎನ್ ಮೋಹನ್ ನಾಯಕ್ ಅವರಿಗೂ ಜಾಮೀನು ಮಂಜೂರಾಗಿದೆ ಎಂದು ಹೇಳಿದ್ದಾರೆ.
ನಿಯಮಿತವಾಗಿ ವಿಚಾರಣೆಗೆ ಹಾಜರಾಗುವುದರೊಂದಿಗೆ ಇಬ್ಬರ ಶ್ಯೂರಿಟಿಗಳೊಂದಿಗೆ ತಲಾ ಒಂದು ಲಕ್ಷ ರೂಪಾಯಿಗಳ ವೈಯಕ್ತಿಕ ಬಾಂಡ್ ಅನ್ನು ನೀಡಿ ಅವರಿಗೆ ಜಾಮೀನು ನೀಡಲು ಹೈಕೋರ್ಟ್ ಆದೇಶಿಸಿದೆ. ಅರ್ಜಿದಾರರು ಪ್ರಾಸಿಕ್ಯೂಷನ್ ಸಾಕ್ಷಿಗಳಿಗೆ ನೇರವಾಗಿ ಅಥವಾ ಪರೋಕ್ಷವಾಗಿ ಬೆದರಿಕೆ ಹಾಕುವಂತಿಲ್ಲ ಮತ್ತು ಭವಿಷ್ಯದಲ್ಲಿ ಇಂತಹ ಅಪರಾಧಗಳಲ್ಲಿ ತಮ್ಮನ್ನು ತೊಡಗಿಸಿಕೊಳ್ಳಬಾರದು ಎಂದು ನ್ಯಾಯಾಲಯ ಹೇಳಿದೆ.
ವಿಡಿಯೊ ನೋಡಿ: ಕಪ್ಪು ನಮ್ಮ ಗುರುತು, ಕಾಯಕ ನಮ್ಮ ವಿಳಾಸ: ಹಂಸಲೇಖ


