Homeಕರ್ನಾಟಕಗೌರಿ ಲಂಕೇಶ್‌ ಹತ್ಯೆ ಪ್ರಕರಣ: ಪ್ರತಿ ತಿಂಗಳೂ ಒಂದು ವಾರ ಪೂರ್ತಿ ವಿಚಾರಣೆ ನಿಗದಿ, ಜುಲೈ...

ಗೌರಿ ಲಂಕೇಶ್‌ ಹತ್ಯೆ ಪ್ರಕರಣ: ಪ್ರತಿ ತಿಂಗಳೂ ಒಂದು ವಾರ ಪೂರ್ತಿ ವಿಚಾರಣೆ ನಿಗದಿ, ಜುಲೈ 4ರಿಂದ ಆರಂಭ

- Advertisement -
- Advertisement -

ದಿಟ್ಟ ಪತ್ರಕರ್ತೆ ಗೌರಿ ಲಂಕೇಶ್ ಅವರ ಹತ್ಯೆ ನಡೆದು ನಾಲ್ಕೂವರೆ ವರ್ಷಗಳ ಬಳಿಕ ಇಂದು (ಜುಲೈ 27) ಆರಂಭವಾದ ವಿಚಾರಣೆಯ ವೇಳೆ 18 ಜನ ಆರೋಪಿಗಳ ಪೈಕಿ 11 ಮಂದಿ ಮಾತ್ರ ಹಾಜರಾಗಿದ್ದರು.

ವಿಶೇಷ ನ್ಯಾಯಾಲಯದಲ್ಲಿ ವಿಚಾರಣೆ ಆರಂಭವಾಗಿದ್ದು, ಆರೋಪಿಗಳು ಹಾಗೂ ಸಾಕ್ಷಿದಾರರ ಹೇಳಿಕೆಗಳನ್ನು ಕೋರ್ಟ್ ಪಡೆದುಕೊಳ್ಳಲಿದೆ. ಆದರೆ ಎಲ್ಲ ಆರೋಪಿಗಳು ಶುಕ್ರವಾರ ಹಾಜರಾಗದ ಕಾರಣ ಜುಲೈ 4ರಿಂದ ವಿಚಾರಣೆ ಶುರು ಮಾಡಿ, ಪ್ರತಿ ತಿಂಗಳು ಒಂದು ವಾರ ಕಾಲ ವಿಚಾರಣೆ ನಡೆಸುವುದಾಗಿ ಕೋರ್ಟ್ ತಿಳಿಸಿದೆ.

ಗೌರಿ ಲಂಕೇಶ್ ಅವರ ಸಹೋದರಿ ಕವಿತಾ ಲಂಕೇಶ್ ಅವರನ್ನು ವಿಚಾರಣೆಗೆ ಕರೆಸಿದ್ದರು. ಬಂಧಿತರಾಗಿರುವ 18 ಜನ ಆರೋಪಿಗಳ ಪೈಕಿ 11 ಮಂದಿ ಆರೋಪಿಗಳು ಕೇಂದ್ರ ಕಾರಾಗೃಹದಿಂದ ವಿಡಿಯೊ ಕಾನ್ಫರೆನ್ಸ್ ಮೂಲಕ ಹಾಜರಿದ್ದರು. ಉಳಿದ ಏಳು ಮಂದಿ ಬಂಧಿತರು ಮಹಾರಾಷ್ಟ್ರದಲ್ಲಿ ಅರ್ಥಾರ್‌ ರೋಡ್ ಜೈಲಿನಲ್ಲಿದ್ದಾರೆ. ಹೀಗಾಗಿ ಇಲ್ಲಿನ ವಿಚಾರಣೆಗೆ ಹಾಜರಾಗಿರಲಿಲ್ಲ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಆರೋಪಿಗಳನ್ನು ಗುರುತಿಸುವ ಪ್ರಕ್ರಿಯೆ ಈ ಹಂತದಲ್ಲಿ ಶುರುವಾಗಲಿದೆ. ವಿಶೇಷ ಪಬ್ಲಿಕ್‌ ಪ್ರಾಸಿಕ್ಯೂಟರ್‌ ಬಾಲನ್‌ ಮಾತನಾಡಿ, “ಘಟನೆಯ ಸಂದರ್ಭದಲ್ಲಿ ಕವಿತಾ ಲಂಕೇಶ್ ಅವರು ಹಾಜರಿರದ ಕಾರಣ ಆರೋಪಿಗಳನ್ನು ಅವರು ಗುರುತಿಸುವ ಪ್ರಶ್ನೆಯೇ ಬರುವುದಿಲ್ಲ. ಹಾಗಾಗಿ ಇದನ್ನು ಮುಖ್ಯವಾಗಿಟ್ಟುಕೊಂಡು ವಿಚಾರಣೆ ತಡ ಆಗುವುದು ಬೇಡ. ವಿಡಿಯೊ ಕಾನ್ಫರೆನ್ಸ್ ಮೂಲಕ ಎಲ್ಲ ಆರೋಪಿಗಳನ್ನು ಕರೆತಂದು ಟ್ರಯಲ್‌ ಶುರು ಮಾಡೋಣ” ಎಂದರು.

“ಆರೋಪಿ ಪರ ವಕೀಲರು ಒಪ್ಪುವುದಾದರೆ ವಿಚಾರಣೆ ಶುರುಮಾಡಲಾಗುವುದು” ಎಂದು ನ್ಯಾಯಾಧೀಶರು ಪ್ರತಿಕ್ರಿಯೆ ನೀಡಿದರು. ಆರೋಪಿಗಳ ಭೌತಿಕ ಹಾಜರಾತಿಯ ಪ್ರಶ್ನೆ ಬಂದಿತು. ವರ್ಚ್ಯೂವಲ್‌‌ ಹಾಜರಾತಿಯೂ ಸಾಧ್ಯವಾಗದ ಕಾರಣ, ಬಂಧಿತರೊಂದಿಗೆ ಮಾತನಾಡಲು ಸಾಧ್ಯವಾಗುತ್ತಿಲ್ಲ ಎಂದು ವಕೀಲರು ಪ್ರತಿಕ್ರಿಯೆ ನೀಡಿದರು.

ಜೈಲಿನ ಅಧಿಕಾರಿಗಳಿಗೆ ತಿಳಿಸಿ ಮಾತನಾಡಲು ಅವಕಾಶ ಮಾಡಿಕೊಡಲಾಗುವುದು, ಆದರೆ ವಿಚಾರಣೆಯನ್ನು ಜುಲೈ 4ರಿಂದ ಶುರು ಮಾಡಲೇಬೇಕು ಎಂದು ವಕೀಲರಿಗೆ ನ್ಯಾಯಾಧೀಶರು ಸ್ಪಷ್ಟಪಡಿಸಿದರು.

ವಿಚಾರಣೆ ಆರಂಭವಾದರೆ ಪ್ರತಿ ತಿಂಗಳು ನಿರಂತರವಾಗಿ ನಡೆಯಲಿದೆ. ಜುಲೈ 4ರಿಂದ 8 ತಾರೀಖಿನವರೆಗೆ ಮುಂದಿನ ಹಿಯರಿಂಗ್ ನಿಗದಿಯಾಗಿದೆ.

ಮೊದಲ ಹಂತದಲ್ಲಿ ಯಾರ್‍ಯಾರು ಸಾಕ್ಷಿದಾರರನ್ನು ಕರೆಸಲಾಗುವುದು ಎಂದು ಜೂನ್‌ 6ರೊಳಗೆ ಪ್ರಬ್ಲಿಕ್ ಪ್ರಾಸಿಕ್ಯೂಟರ್‌ ಮೆಮೊ ಹಾಕಬೇಕು. ಅದರ ಆಧಾರದಲ್ಲಿ ಯಾರ್‍ಯಾರನ್ನು ವಿಚಾರಣೆಗೆ ಒಳಪಡಿಸಬೇಕು ಎಂದು ಪ್ರತಿವಾದಿಗಳು ತಿಳಿಸಬೇಕಾಗಿದೆ.

“ಒಟ್ಟು 527 ಜನ ಸಾಕ್ಷಿಗಳು ಇದ್ದಾರೆ. ಅದರಲ್ಲಿ ಎಲ್ಲರನ್ನು ವಿಚಾರಣೆಗೆ ಒಳಪಡಿಸುವ ಅಗತ್ಯ ಬೀಳುವುದಿಲ್ಲ. ಕೆಲವರ ಹೇಳಿಕೆ ಒಂದೇ ರೀತಿಯಲ್ಲಿ ಇರುತ್ತದೆ. ಕನಿಷ್ಠ 250 ಸಾಕ್ಷಿಗಳನ್ನಾದರೂ ವಿಚಾರಣೆಗೆ ಒಳಪಡಿಸಬೇಕು” ಎಂದು ಬಾಲನ್ ಮಾಹಿತಿ ನೀಡಿದ್ದಾರೆ.

ಗೌರಿ ಲಂಕೇಶ್ ಹತ್ಯೆಯ ಆರೋಪಿಗಳ ಪಟ್ಟಿ ಹೀಗಿದೆ: ಅಮೋಲ್ ಕಾಳೆ (37), ಪರಶುರಾಮ್ ವಾಘ್ಮೋರೆ (27), ಗಣೇಶ್ ಮಿಸ್ಕಿನ್ (27), ಅಮಿತ್ ಬಾಡ್ (27), ಅಮಿತ್ ದೆಗ್ವೇಕರ್ (38), ಭರತ್ ಕುರಣೆ (37), ಸುರೇಶ್ ಹೆಚ್ ಎಲ್ (36), ರಾಜೇಶ್ ಬಂಗೇರ (50 ವರ್ಷ), ಸುಧನ್ವ ಗೊಂದಲೇಕರ್ (39), ಶರದ್ ಕಲಾಸ್ಕರ್ (25), ಮೋಹನ್ ನಾಯಕ್ (50), ವಾಸುದೇವ್ ಸೂರ್ಯವಂಶಿ (29), ಸುಜಿತ್ ಕುಮಾರ್ (37), ಮನೋಹರ ಎಡವೆ (29), ಶ್ರೀಕಾಂತ್ ಪಂಗರ್ಕರ್ (40), ಕೆ ಟಿ ನವೀನ್ ಕುಮಾರ್ (37) ಮತ್ತು ರುಶಿಕೇಶ್ ದಿಯೋದಿಕರ್ (44).

ಸೆಪ್ಟಂಬರ್ 05, 2017ರ ರಾತ್ರಿ ಗೌರಿ ಲಂಕೇಶ್‌ರವರ ಕಚೇರಿ ಕೆಲಸ ಮುಗಿಸಿ ಮನೆಗೆ ತಲುಪಿದಾಗ ದುಷ್ಕರ್ಮಿಗಳು ಅವರ ಮನೆ ಮುಂದು ಗುಂಡು ಹಾರಿಸಿ ಕೊಂದಿದ್ದರು. ಹತ್ಯೆ ನಡೆದು ನಾಲ್ಕೂವರೆ ವರ್ಷದ ನಂತರ ವಿಚಾರಣೆ ಆರಂಭವಾಗುತ್ತಿದೆ.

ಆರೋಪಿಗಳ ಪರವಾಗಿ 60ಕ್ಕೂ ಹೆಚ್ಚು ವಕೀಲರು ವಕಾಲತ್ತು ವಹಿಸಿದ್ದರು. ಅವರು ಸಲ್ಲಿಸಿದ್ದ ಅರ್ಜಿಗಳ ವಿಚಾರಣೆಯ ಕಾರಣಕ್ಕೆ ಹತ್ಯೆ ಪ್ರಕರಣದ ವಿಚಾರಣೆ ತಡವಾಗಿದೆ ಎಂದು ಪ್ರಾಸಿಕ್ಯೂಷನ್ ವಕೀಲರು ಹೇಳಿದ್ದಾರೆ.

ಗೌರಿ ಲಂಕೇಶ್ ಹತ್ಯೆ ಸಂದರ್ಭದಲ್ಲಿ ಕರ್ನಾಟಕ ಸರ್ಕಾರ ನೇಮಿಸಿದ್ದ ಎಸ್‌ಐಟಿ ತಂಡವು 17 ಆರೋಪಿಗಳನ್ನು ಬಂಧಿಸಿ ಅವರು ವಿರುದ್ದ 8500 ಪುಟಗಳ ಚಾರ್ಜ್ ಶೀಟ್ ಸಲ್ಲಿಸಿತ್ತು.

ಧಾರವಾಡದಲ್ಲಿ ಕನ್ನಡ ವಿದ್ವಾಂಸ ಎಂ.ಎಂ.ಕಲಬುರ್ಗಿ, ಕೊಲ್ಲಾಪುರದಲ್ಲಿ ಎಡಪಂಥೀಯ ಚಿಂತಕ ಗೋವಿಂದ್ ಪನ್ಸಾರೆ ಹತ್ಯೆಗೆ ಬಳಸಿದ 7.65 ಎಂಎಂ ಕಂಟ್ರಿಮೇಡ್ ಪಿಸ್ತೂಲ್, ಗೌರಿ ಲಂಕೇಶ ಅವರ ಹತ್ಯೆಗೂ ಬಳಕೆಯಾಗಿದೆ ಎಂದು ಎಸ್‌ಐಟಿ ಪತ್ತೆ ಹಚ್ಚಿತ್ತು.

ಇದನ್ನೂ ಓದಿರಿ: ಗೌರಿ ಲಂಕೇಶ್ ಹತ್ಯಾ ಆರೋಪಿ ಮೇಲಿನ ಕೋಕಾ ಮೊಕದ್ದಮೆ ಎತ್ತಿ ಹಿಡಿದ ಸುಪ್ರೀಂ

ಮಹಾರಾಷ್ಟ್ರದ ವಿಚಾರವಾದಿ ನರೇಂದ್ರ ದಾಭೋಲ್ಕರ್ ಅವರನ್ನು ಹತ್ಯೆ ಮಾಡಲು ಬಳಸಿದ ಬಂದೂಕಿಗೂ ಪನ್ಸಾರೆ ಗುಂಡಿನ ದಾಳಿಯಲ್ಲಿ ಬಳಸಿದ ಎರಡನೇ ಬಂದೂಕಿಗೂ ಹೊಂದಾಣಿಕೆಯಾಗಿರುವುದು ಕಂಡುಬಂದಿತ್ತು.

ಗೌರಿ ಲಂಕೇಶ್‌ ಅವರ ಹತ್ಯೆ ಆರೋಪಿಗಳಲ್ಲಿ ಒಬ್ಬನಾದ, ಅಮೋಲ್ ಕಾಳೆ ಸಹಚರ ಮೋಹನ್ ನಾಯಕ್‌ ವಿರುದ್ದ ದಾಖಲಾಗಿದ್ದ ‘ಕರ್ನಾಟಕ ಸಂಘಟಿತ ಅಪರಾಧಗಳ ಕಾಯ್ದೆ’ (KCOCA) ಪ್ರಕರಣವನ್ನು ಕರ್ನಾಟಕ ಹೈಕೊರ್ಟ್ ಈ ಹಿಂದೆ ರದ್ದು ಮಾಡಿತ್ತು. ಇದನ್ನು ಸುಪ್ರೀಂಕೋರ್ಟ್‌ನಲ್ಲಿ ಗೌರಿ ಲಂಕೇಶ್‌ ಅವರ ಸಹೋದರಿ ಕವಿತಾ ಲಂಕೇಶ್‌‌ ಅವರು ಪ್ರಶ್ನಿಸಿದ್ದರು.

“ಗೌರಿ ಲಂಕೇಶ್ ಅವರ ಹತ್ಯೆ ಸಾಮಾನ್ಯ ಕೊಲೆ ಅಲ್ಲ. ಒಂದು ಸಂಘಟಿತ ಮತ್ತು ಸೈದ್ಧಾಂತಿಕ ದ್ವೇಷದ ಕಾರಣಕ್ಕೆ ನಡೆಸಲಾದ ಹತ್ಯೆ. ಕೋಕಾ ಕಾಯ್ದೆಯನ್ನು ಕೈಬಿಡುವುದರಿಂದ ಹತ್ಯೆಯ ಹಿಂದಿರುವ ಕಾಣದ ಕೈಗಳಿಗೆ ಶಿಕ್ಷೆಯಾಗುವುದಿಲ್ಲ” ಎಂದು ಕವಿತಾ ಲಂಕೇಶ್ ಅವರ ಪರವಾಗಿ ನ್ಯಾಯವಾದಿ ತೀಸ್ತಾ ಸೆತಲ್ವಾದ್‌ ಅವರು ಸುಪ್ರೀಂ ಕೋರ್ಟ್‌ನಲ್ಲಿ ವಾದಿಸಿದ್ದರು. ನಂತರ ಸುಪ್ರೀಂ ಕೋರ್ಟ್ ಹೈಕೋರ್ಟ್ ಆದೇಶಕ್ಕೆ ತಡೆ ನೀಡಿ, ಕೋಕಾ ಕಾಯ್ದೆ ಹೇರಿತ್ತು.

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಗನ್ ತೋರಿಸಿ ಅತ್ಯಾಚಾರ: ಪ್ರಜ್ವಲ್ ರೇವಣ್ಣ ವಿರುದ್ಧ ಜಿಲ್ಲಾ ಪಂಚಾಯತ್ ಮಾಜಿ ಸದಸ್ಯೆ ದೂರು

0
ಹಾಸನ ಸಂಸದ ಪ್ರಜ್ವಲ್ ರೇವಣ್ಣ ವಿರುದ್ದದ ಮಹಿಳೆಯರ ಲೈಂಗಿಕ ದೌರ್ಜನ್ಯ ಪ್ರಕರಣ ದಿನಕ್ಕೊಂದು ತಿರುವು ಪಡೆಯುತ್ತಿದೆ. ಈಗಾಗಲೇ ಹೆಚ್‌.ಡಿ ರೇವಣ್ಣ ಮತ್ತು ಪ್ರಜ್ವಲ್ ರೇವಣ್ಣ ವಿರುದ್ದ ಕೆಲ ಸಂತ್ರಸ್ತೆಯರು ದೂರು ನೀಡಿದ್ದು, ತನಿಖೆ...