Homeಮುಖಪುಟಗೌರಿ ಲಂಕೇಶ್ ಹತ್ಯೆ ವಿಚಾರಣೆ: ಆರೋಪಿ ಪರಶುರಾಮ್ ವಾಗ್ಮೋರೆಯನ್ನು ಗುರುತಿಸಿದ ಸಾಕ್ಷಿಗೆ ಜೀವ ಬೆದರಿಕೆ

ಗೌರಿ ಲಂಕೇಶ್ ಹತ್ಯೆ ವಿಚಾರಣೆ: ಆರೋಪಿ ಪರಶುರಾಮ್ ವಾಗ್ಮೋರೆಯನ್ನು ಗುರುತಿಸಿದ ಸಾಕ್ಷಿಗೆ ಜೀವ ಬೆದರಿಕೆ

- Advertisement -
- Advertisement -

ಗೌರಿ ಲಂಕೇಶ್‌ರವರಿಗೆ ಗುಂಡಿಟ್ಟು ಹತ್ಯೆ ಮಾಡಿದ ಆರೋಪಿಗಳಲ್ಲಿ ಒಬ್ಬನಾದ ಪರಶುರಾಮ್ ವಾಗ್ಮೋರೆಯನ್ನು ಗುರುತಿಸಿದ ಸಾಕ್ಷಿಯೊಬ್ಬರ ಮನೆಗೆ ನುಗ್ಗಿ ಮತ್ತು ಫೋನ್ ಮೂಲಕ ಜೀವ ಬೆದರಿಕೆ ಹಾಕಿರುವ ಘಟನೆ ಜರುಗಿದೆ. ಇದನ್ನು ಗಂಭೀರವಾಗಿ ಪರಿಗಣಿಸಿರುವ ನ್ಯಾಯಾಧೀಶರು ತೆರೆದ ನ್ಯಾಯಾಲಯದಲ್ಲಿ ವಿಡಿಯೋ ಕಾನ್ಫರೆನ್ಸ್ ಮೂಲಕ ಆರೋಪಿಗಳಿಗೆ ಮೌಖಿಕ ಎಚ್ಚರಿಕೆ ನೀಡಿದ್ದು, ಈ ರೀತಿಯ ಘಟನೆ ಮರುಕಳಿಸಬಾರದೆಂದು ತಾಕೀತು ಮಾಡಿದ್ದಾರೆ.

ಬೆಂಗಳೂರಿನ ಸಿಟಿ ಸಿವಿಲ್ ಕೋರ್ಟ್ ಸಮುಚ್ಚಯದ ಹಾಲ್ ನಂ.1ರಲ್ಲಿ ಸೆಷನ್ಸ್ ನ್ಯಾಯಾಧೀಶರಾದ ರಾಮಚಂದ್ರ ಪಿ. ಹುದ್ದಾರ್‌ರವರು ಗೌರಿ ಲಂಕೇಶ್ ಹತ್ಯೆಯ ವಿಚಾರಣೆ ನಡೆಸುತ್ತಿದ್ದಾರೆ. ಈ ತಿಂಗಳ ವಿಚಾರಣೆಯ ಕೊನೆಯ ದಿನವಾದ ಇಂದು ಪರಶುರಾಮ್ ವಾಗ್ಮೋರೆಯ ಸ್ನೇಹಿತನೊಬ್ಬ ಆರೋಪಿಯನ್ನು ಗುರುತಿಸುವ ಮತ್ತು ಆರೋಪಿಯ ಮೇಲಿರುವ ಇತರ ಪ್ರಕರಣಗಳ ಬಗ್ಗೆ ಸಾಕ್ಷಿ ನುಡಿಯಬೇಕಾಗಿತ್ತು. ಆದರೆ ನಿನ್ನೆಯೇ ನಾಲ್ಕು ಜನರು ಆತನ ಮನೆಗೆ ನುಗ್ಗಿ ಸಾಕ್ಷಿ ನುಡಿಯದಂತೆ ಬೆದರಿಕೆಯೊಡ್ಡಿದ್ದಾರೆ ಮತ್ತು ಇಂದು ಬೆಳಿಗ್ಗೆ ಬೆಂಗಳೂರಿನಲ್ಲಿದ್ದಾಗ ಎರಡು ಮೂರು ಬಾರಿ ಫೋನ್ ಕರೆಗಳ ಮೂಲಕ ಧಮಕಿ ಹಾಕಿದ್ದಾರೆ ಎಂದು ಪ್ರಕರಣದ ವಿಶೇಷ ಪಬ್ಲಿಕ್ ಪ್ರಾಸಿಕ್ಯೂಟರ್ ಎಸ್ ಬಾಲನ್‌ರವರು ಮಾಹಿತಿ ಸಲ್ಲಿಸಿದ್ದಾರೆ.

ಬೆದರಿಕೆಗಳ ಹೊರತಾಗಿಯೂ ಸಾಕ್ಷಿಯಾಗಿದ್ದ ದೌಲತ್‌ರವರು ಆರೋಪಿ ಪರಶುರಾಮ್ ವಾಗ್ಮೋರೆಯನ್ನು ಗುರುತಿಸಿದ್ದು, ಈ ಹಿಂದೆ ಸಿಂಧಗಿಯಲ್ಲಿ ಪಾಕ್ ಧ್ವಜ ಹಾರಿಸಿದ ಆರೋಪಿಯಾಗಿದ್ದ ಎಂದು ಸಾಕ್ಷಿ ನುಡಿದಿದ್ದಾರೆ.

ಆನಂತರ ಸೆಷನ್ಸ್ ನ್ಯಾಯಾಧೀಶರಾದ ರಾಮಚಂದ್ರ ಪಿ. ಹುದ್ದಾರ್‌ರವರು ಸಾಕ್ಷಿ ನಾಶ ಮಾಡಲು ಯತ್ನಿಸಿದ ಆರೋಪಿಗಳಿಗೆ ಬೆದರಿಕೆ ಹಾಕದಂತೆ ಎಚ್ಚರಿಕೆ ನೀಡಿದ್ದಲ್ಲದೆ ಅದನ್ನು ಮುಂದುವರೆಸಿದರೆ ಗಂಭೀರ ಪರಿಣಾಮ ಎದುರಿಸಬೇಕಾಗುತ್ತದೆ ಎಂದು ಸೂಚಿಸಿದ್ದಾರೆ. ಅಲ್ಲದೆ ಸಾಕ್ಷಿಯನ್ನು ಪೊಲೀಸ್ ಬೆಂಗಾವಲಿನಲ್ಲಿ ಸಿಂಧಗಿಗೆ ತಲುಪಿಸಬೇಕು ಮತ್ತು ಅಲ್ಲಿನ ಸ್ಥಳೀಯ ಪೊಲೀಸರು ಸಾಕ್ಷಿಗೆ ಭದ್ರತೆ ಒದಗಿಸಬೇಕೆಂದು ಮೌಖಿಕ ನಿರ್ದೇಶನ ನೀಡಿದ್ದಾರೆ. ನ್ಯಾಯಾಧೀಶರು ವಿಚಾರಣೆಯನ್ನು ಮುಂದಿನ ತಿಂಗಳಿಗೆ ಮುಂದೂಡಿದ್ದಾರೆ.

ಜನವರಿ 1, 2012ರಂದು ಸಿಂಧಗಿಯ ತಹಶೀಲ್ದಾರ್ ಕಚೇರಿಯ ಎದುರು ದುಷ್ಕರ್ಮಿಗಳು ಪಾಕಿಸ್ತಾನದ ಧ್ವಜ ಹಾರಿಸಿ ಗಲಭೆಗೆ ಯತ್ನಿಸಿದ್ದರು. ಅದರಲ್ಲಿ ಪರುಶುರಾಮ್ ವಾಗ್ಮೋರೆ 5ನೇ ಆರೋಪಿಯಾಗಿದ್ದ. ಆದರೆ 2018ರಲ್ಲಿ ವಿಜಯಪುರದ 1ನೇ ಹೆಚ್ಚುವರಿ ನ್ಯಾಯಾಲವು ಆರು ಜನ ಆರೋಪಿಗಳನ್ನು ಆರೋಪಮುಕ್ತಗೊಳಿಸಿತ್ತು.

ಇದನ್ನೂ ಓದಿ: ಗೌರಿ ಹತ್ಯೆ ವಿಚಾರಣೆ: ಹತ್ಯೆಗೆ ಬಳಸಿದ್ದ ಪ್ಯಾಷನ್ ಪ್ರೊ ಬೈಕ್ ಗುರುತುಹಚ್ಚಿದ ಸಾಕ್ಷಿಗಳು

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಪ.ಬಂಗಾಳ: ತನ್ನ ವಿರುದ್ಧದ ತನಿಖೆಗೆ ಸಹಕರಿಸದಂತೆ ರಾಜಭವನದ ಸಿಬ್ಬಂದಿಗಳಿಗೆ ಸೂಚಿಸಿದ ಗವರ್ನರ್‌

0
ಪ.ಬಂಗಾಳದ ರಾಜ್ಯಪಾಲ ಸಿವಿ ಆನಂದ ಬೋಸ್ ವಿರುದ್ಧ ರಾಜಭವನದ ಮಹಿಳಾ ಉದ್ಯೋಗಿಯೋರ್ವರು ಲೈಂಗಿಕ ದೌರ್ಜನ್ಯದ ಆರೋಪದಲ್ಲಿ ಪ್ರಕರಣ ದಾಖಲಿಸಿದ್ದರು. ಈ ಕುರಿತು ತನಿಖೆ ನಡೆಸಲು ಕೋಲ್ಕತ್ತಾ ಪೊಲೀಸರು ತಂಡವನ್ನು ರಚಿಸಿದ್ದಾರೆ. ಇದರ ಬೆನ್ನಲ್ಲಿ...