Homeಕರ್ನಾಟಕಗೌರಿ ಮೀಡಿಯಾ ಟ್ರಸ್ಟ್‌ ಪ್ರಕಟಿತ 'ಚಹರೆಗಳೆಂದರೆ ಗಾಯಗಳೂ ಹೌದು' ಕೃತಿಗೆ ಕರ್ನಾಟಕ ಸಾಹಿತ್ಯ ಅಕಾಡೆಮಿ ಪ್ರಶಸ್ತಿ

ಗೌರಿ ಮೀಡಿಯಾ ಟ್ರಸ್ಟ್‌ ಪ್ರಕಟಿತ ‘ಚಹರೆಗಳೆಂದರೆ ಗಾಯಗಳೂ ಹೌದು’ ಕೃತಿಗೆ ಕರ್ನಾಟಕ ಸಾಹಿತ್ಯ ಅಕಾಡೆಮಿ ಪ್ರಶಸ್ತಿ

- Advertisement -
- Advertisement -

ಹಂಪಿ ವಿಶ್ವವಿದ್ಯಾನಿಲಯದ ಬುಡಕಟ್ಟು ಅಧ್ಯಯನ ವಿಭಾಗದ ಮುಖ್ಯಸ್ಥರಾದ ಡಾ. ಎ.ಎಸ್‌. ಪ್ರಭಾಕರ್ ಅವರ ‘ಚಹರೆಗಳೆಂದರೆ ಗಾಯಗಳೂ ಹೌದು’ ಸಮುದಾಯ ಅಧ್ಯಯನ ಕುರಿತ ಕಥನಗಳ ಕೃತಿಗೆ ಕರ್ನಾಟಕ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಘೋಷಣೆಯಾಗಿದೆ. ಗೌರಿ ಮೀಡಿಯಾ ಟ್ರಸ್ಟ್ ಪ್ರಕಟಣೆಯ ಈ ಕೃತಿಗೆ ಸಂಶೋಧನಾ ವಿಭಾಗದಲ್ಲಿ  ಪ್ರಶಸ್ತಿ ಘೋಷಣೆಯಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

‘ಚಹರೆಗಳೆಂದರೆ ಗಾಯಗಳೂ ಹೌದು’ ಸಮುದಾಯ ಅಧ್ಯಯನಗಳ ಕುರಿತ ಕಥನಗಳು ಕೃತಿಯು, ವರ್ತಮಾನದಲ್ಲಿ ನಮ್ಮೊಡನೆ ಬದುಕುತ್ತಿರುವ ಬುಡಕಟ್ಟು, ಆದಿವಾಸಿ ಸಮುದಾಯಗಳ ವೈರುಧ್ಯಗಳಿಂದ ಕೂಡಿದ ಸಮಾಜೋ – ಆರ್ಥಿಕ ಬದುಕಿನ ವಾಸ್ತವಗಳೇ ಆಗಿದ್ದರೂ, ನಾಗರೀಕ ಜಗತ್ತಿನ ಚಿಂತನಾಕ್ರಮವಲ್ಲದ ವಾಸ್ತವಿಕ ಸತ್ಯಗಳನ್ನು ಓದುಗರ ಮುಂದಿಡುತ್ತದೆ.

ಪ್ರಶಸ್ತಿಯು 25 ಸಾವಿರ ರೂ.ಗಳ ಬಹುಮಾನ, ಫಲಕ, ಶಾಲು, ಹಾರ ಮತ್ತು ಪ್ರಮಾಣ ಪತ್ರವನ್ನು ಒಳಗೊಂಡಿದೆ.

ತಮ್ಮ ಕೃತಿಗೆ ಪ್ರಶಸ್ತಿ ಘೋಷಣೆಯಾಗಿರುವ ಬಗ್ಗೆ ಮಾತನಾಡಿದ ಪ್ರೊಫೆಸರ್ ಎ.ಎಸ್. ಪ್ರಭಾಕರ, “ಸಮಾಜವಿಜ್ಞಾನದ ಓದು ನನಗೆ ಹೊಸದಾಗಿರಲಿಲ್ಲ. ವಿದ್ಯಾರ್ಥಿಯಾಗಿದ್ದಾಗ ನಾನು ಭಾಗಿಯಾಗಿದ್ದ ಸಂಘಟನೆಗಳ ಸ್ಟಡಿ ಸರ್ಕಲ್‌ಗಳಲ್ಲಿ ಸಮಾಜ, ರಾಜಕೀಯಾರ್ಥ ಶಾಸ್ತ್ರವನ್ನು ಕಲಿಯುವ ಸಂದರ್ಭಗಳು ಒದಗಿಬಂದಿದ್ದವು. ಅಲ್ಲಿ ಕಲಿತ ಕೆಲವು ಪಾಠಗಳು ಇಲ್ಲಿ ನೆನಪಾಗತೊಡಗಿದವು. ಸರಿಸುಮಾರು ಇನ್ನೂರು ವರ್ಷಗಳ ಕಾಲ ಭಾರತವನ್ನು ತಿರುಗಾಡಿದ ಯುರೋಪ್ ಮತ್ತು ಅಮೆರಿಕದ ವಿದ್ವಾಂಸರು ಭಾರಿ ಗಾತ್ರದ ಅಧ್ಯಯನದ ಸರಕನ್ನು ಇಲ್ಲಿ ಬಿಟ್ಟು ಹೋಗಿರುವುದನ್ನು ನೋಡಿ ಬೆರಗಾದೆ.

ಪಾಶ್ಚಾತ್ಯರಲ್ಲಿ ನಾನು ಆಯ್ಕೆ ಮಾಡಿಕೊಂಡ ವಿದ್ವಾಂಸರನ್ನು ಓದುವುದೇ ಸವಾಲಿನ ಕೆಲಸವಾಗಿತ್ತು. ಕನ್ನಡದಲ್ಲಿ ಪಾಶ್ಚಾತ್ಯ ಅಧ್ಯಯನಕಾರರನ್ನು ಮೆಚ್ಚಿ ಬರೆದ ಬರಹಗಳೇ ಜಾಸ್ತಿ. ಅವರು ಕಟ್ಟಿಕೊಟ್ಟ ಪ್ರಮೆಯಗಳನ್ನು ಮತ್ತು ಅಧ್ಯಯನದ ಸೂತ್ರಗಳನ್ನು ಕಣ್ಮುಚ್ಚಿ ಅನುಕರಿಸುವ ಪರಿಪಾಠ ಕನ್ನಡದಲ್ಲಿ ಇಂದಿಗೂ ಮುಂದು ವರೆದಿದೆ. ಕನ್ನಡದಲ್ಲಿ ಅಷ್ಟರಮಟ್ಟಿಗೆ ಈ ಕ್ಲಾಸಿಕಲ್ ಅಧ್ಯಯನಗಳ ವಿಮರ್ಶಾತ್ಮಕ ಓದು ನಡೆದಿಲ್ಲ. ಸಮಾಜವಿಜ್ಞಾನದಲ್ಲಿ ಬರೆಯುವುದು, ಅದರಲ್ಲೂ ಕನ್ನಡದಲ್ಲಿ ಬರೆಯುವುದು ಸವಾಲಿನ ಸಂಗತಿ.” ಎಂದು ಹೇಳಿದರು.

“ಈ ಹಿಂಜರಿಕೆಯಲ್ಲಿಯೇ ಓದು ಬರಹ ಶುರು ಮಾಡಿದ ನನಗೆ ಕನ್ನಡ ವಿಶ್ವವಿದ್ಯಾಲಯದ ಬೇರೆ ಬೇರೆ ವಿಭಾಗಗಳ ಕೆಲ ಹಿರಿಯ ಪ್ರಾಧ್ಯಾಪಕರು ನೆರವಾಗಿದ್ದಾರೆ. ಅವರನ್ನೆಲ್ಲ ಅತ್ಯಂತ ಕೃತಜ್ಞತೆಯಿಂದ ನೆನೆಯುವೆ.
ಬುಡಕಟ್ಟು ಅಧ್ಯಯನ ವಿಭಾಗವನ್ನೂ ಒಳಗೊಂಡಂತೆ, ಬೇರೆ ಬೇರೆ ವಿಭಾಗಗಳ ಸಂಶೋಧನಾ ವಿದ್ಯಾರ್ಥಿಗಳಿಗೆ ಕಳೆದ ಇಪ್ಪತ್ನಾಲ್ಕು ವರ್ಷಗಳಲ್ಲಿ ಅಧ್ಯಯನ ವಿಧಾನದ ಕುರಿತು ಪಾಠ ಮಾಡಿದ್ದೇನೆ. ಈ ಸಂದರ್ಭದಲ್ಲಿ ವಿದ್ಯಾರ್ಥಿಗಳಿಗೆ ಪೂರಕವಾಗುವ ಅನೇಕ ವಿಷಯಗಳ ಮೇಲೆ ನಾನು ಬರೆಯಬೇಕಾದ ಅನಿವಾರ್ಯತೆ ಸೃಷ್ಟಿಯಾಯ್ತು” ಎಂದು ಹೇಳಿದರು.

ಪ್ರಶಸ್ತಿ ವಿಜೇತ ಪುಸ್ತಕಕ್ಕಾಗಿ ಇಲ್ಲಿ ಕ್ಲಿಕ್ ಮಾಡಿ 

ಇದನ್ನೂ ಓದಿ: ಅಕ್ರಮವಾಗಿ ಮನೆ ಧ್ವಂಸ : ಯುಪಿ ಸರ್ಕಾರವನ್ನು ತೀವ್ರ ತರಾಟೆಗೆ ತೆಗೆದುಕೊಂಡ ಸುಪ್ರೀಂ ಕೋರ್ಟ್

ಅಕ್ರಮವಾಗಿ ಮನೆ ಧ್ವಂಸ : ಯುಪಿ ಸರ್ಕಾರವನ್ನು ತೀವ್ರ ತರಾಟೆಗೆ ತೆಗೆದುಕೊಂಡ ಸುಪ್ರೀಂ ಕೋರ್ಟ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ವೆನೆಜುವೆಲಾದ ಹಂಗಾಮಿ ಅಧ್ಯಕ್ಷ’ ಎಂದು ಘೋಷಿಸಿಕೊಂಡ ಡೊನಾಲ್ಡ್ ಟ್ರಂಪ್ 

ಸೋಮವಾರ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಟ್ರುತ್ ಸೋಶಿಯಲ್‌ನಲ್ಲಿ ತಮ್ಮದೇ ಆದ ವಿಕಿಪೀಡಿಯಾ ಪುಟದ ಫೋಟೋವನ್ನು ಪೋಸ್ಟ್ ಮಾಡಿದ್ದಾರೆ, ಅದರಲ್ಲಿ "ವೆನೆಜುವೆಲಾದ ಹಂಗಾಮಿ ಅಧ್ಯಕ್ಷ" ಎಂಬ ಹುದ್ದೆಯನ್ನು ಹೊಂದಿರುವ ಅವರ ಚಿತ್ರವಿದೆ. ಪೋಸ್ಟ್‌ನಲ್ಲಿ ಟ್ರಂಪ್...

ಪೊಲೀಸ್ ತುರ್ತು ವಾಹನದ ಚಾಲಕ ಸೇರಿ ಐವರಿಂದ ಯುವತಿ ಮೇಲೆ ಅತ್ಯಾಚಾರ!

ಪೊಲೀಸ್ ತುರ್ತು ಸೇವೆ (112) ವಾಹನದ ಚಾಲಕ ಸೇರಿದಂತೆ ಐವರು ಪುರುಷರು 19 ವರ್ಷದ ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿರುವ ಘಟನೆ ಛತ್ತೀಸ್‌ಗಢದ ಕೋರ್ಬಾ ಜಿಲ್ಲೆಯ ಬಂಕಿಮೊಂಗ್ರ ಪ್ರದೇಶದಲ್ಲಿ ನಡೆದಿದೆ. ಜನವರಿ...

ತ್ರಿಪುರಾದಲ್ಲಿ ಕೋಮು ಹಿಂಸಾಚಾರ : ಮಸೀದಿ, ಮನೆಗಳಿಗೆ ಹಾನಿ ; ನಿಷೇಧಾಜ್ಞೆ ಜಾರಿ

ಸ್ಥಳೀಯ ದೇವಾಲಯೊಂದಕ್ಕೆ ಚಂದಾ ಸಂಗ್ರಹಿಸುವ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು ಕನಿಷ್ಠ ಐದರಿಂದ ಆರು ಜನರು ಗಾಯಗೊಂಡು ಮನೆಗಳು, ಮರದ ಅಂಗಡಿ ಮತ್ತು ಮಸೀದಿಗೆ ಹಾನಿಯಾದ ನಂತರ, ಜನವರಿ 10ರ...

ಭದ್ರತಾ ಕಾರಣ ನೀಡಿ ಸ್ಮಾರ್ಟ್‌ಫೋನ್ ತಯಾರಕರು ಮೂಲ ಕೋಡ್ ನೀಡುವಂತೆ ಒತ್ತಾಯಿಸಲು ಕೇಂದ್ರದ ಪ್ರಸ್ತಾಪ

ನವದೆಹಲಿ: ಸ್ಮಾರ್ಟ್‌ಫೋನ್ ತಯಾರಕರು ಸರ್ಕಾರದೊಂದಿಗೆ ಮೂಲ ಕೋಡ್ ಹಂಚಿಕೊಳ್ಳುವುದು ಮತ್ತು ಭದ್ರತಾ ಕ್ರಮಗಳ ಭಾಗವಾಗಿ ಹಲವಾರು ಸಾಫ್ಟ್‌ವೇರ್ ಬದಲಾವಣೆಗಳನ್ನು ಮಾಡುವುದು ಕಡ್ಡಾಯಗೊಳಿಸಲು ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪ್ರಸ್ತಾಪಿಸಿದೆ, ಇದು ಆಪಲ್ ಮತ್ತು...

ದಾಳಿ ನಡೆಸಿದರೆ ನಮ್ಮ ನೇರ ಗುರಿಯಾಗುತ್ತೀರಿ : ಅಮೆರಿಕ, ಇಸ್ರೇಲ್‌ಗೆ ಎಚ್ಚರಿಕೆ ನೀಡಿದ ಇರಾನ್

ಇರಾನ್‌ನಲ್ಲಿ ನಡೆಯುತ್ತಿರುವ ಆಡಳಿತ ವಿರೋಧಿ ದಂಗೆಯಲ್ಲಿ ಸಾವುಗಳು ಹೆಚ್ಚಾದರೆ ಅಮೆರಿಕ ಮಧ್ಯಪ್ರವೇಶಿಸಲಿದೆ ಎಂದಿರುವ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಇರಾನ್‌ ತಿರುಗೇಟು ನೀಡಿದೆ. ಇರಾನ್‌ನ ಸಂಸತ್ತಿನ ಅಧ್ಯಕ್ಷ ಮೊಹಮ್ಮದ್ ಬಾಗರ್ ಖಲೀಬಾಫ್ "ಅಮೆರಿಕ ಇರಾನ್ ಮೇಲೆ...

ಕೇಂದ್ರ ಸರ್ಕಾರದ ಎಚ್ಜರಿಕೆ ನಂತರ 3,500 ಪೋಸ್ಟ್‌ಗಳ ನಿರ್ಬಂಧ, 600 ಖಾತೆಗಳನ್ನು ಅಳಿಸಿದ ಎಕ್ಸ್ ಪ್ಲಾಟ್ ಫಾರ್ಮ್

ಮಹಿಳೆಯರನ್ನು ಗುರಿಯಾಗಿಸಿಕೊಂಡು AI- ರಚಿತವಾದ ಅಶ್ಲೀಲ ವಿಡಿಯೋಗಳ ವಿಷಯವನ್ನು ಕೇಂದ್ರವು ಗಮನಕ್ಕೆ ತಂದ ಕಠಿಣ ಕಾನೂನು ಜಾರಿಗೊಳಿಸುವಿಕೆಗೆ ಪ್ರತಿಜ್ಞೆ ಮಾಡಿದ ನಂತರ X 3,500 ಪೋಸ್ಟ್‌ಗಳು ಮತ್ತು 600 ಖಾತೆಗಳನ್ನು ಅಳಿಸಿಹಾಕಿದೆ.   ಅಶ್ಲೀಲ ವಿಷಯಗಳ...

ಮಾನವ ತಲೆಬುರುಡೆ, ಹುಲಿಚರ್ಮದಂತಹ ಕಸ್ಟಮೈಸ್ ಚರ್ಮ ಸೇರಿದಂತೆ ಹಲವು ಅನುಮಾನಾಸ್ಪದ ವಸ್ತುಗಳ ಮಾರಾಟ: ಮಾಂತ್ರಿಕನ ಬಂಧನ

ಬೆಂಗಳೂರು ವಲಯ ಘಟಕದ ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ಉತ್ತರ ಬೆಂಗಳೂರಿನ ಭೂಪ್ಸಂದ್ರದ 39 ವರ್ಷದ ವ್ಯಕ್ತಿಯನ್ನು ವನ್ಯಜೀವಿ (ರಕ್ಷಣಾ) ಕಾಯ್ದೆ, 1972 ರ ಅಡಿಯಲ್ಲಿ ಬಂಧಿಸಿದೆ. "ಜನವರಿ 9 ರಂದು ನಡೆದ ಕಾರ್ಯಾಚರಣೆಯಲ್ಲಿ...

ದಲಿತ ಮಹಿಳೆಯನ್ನು ಕೊಂದು ಮಗಳ ಅಪಹರಣ : ಆರೋಪಿಯ ಬಂಧನ

ಉತ್ತರ ಪ್ರದೇಶದ ಮೀರತ್‌ನಲ್ಲಿ ದಲಿತ ಮಹಿಳೆಯನ್ನು ಕೊಂದು, ಆಕೆಯ ಮಗಳನ್ನು ಅಪಹರಿಸಿದ ಆರೋಪಿಯನ್ನು ಪೊಲೀಸರು ಶನಿವಾರ (ಜ.10) ಬಂಧಿಸಿದ್ದಾರೆ. ಬಂಧಿತನನ್ನು 22 ವರ್ಷದ ಪರಾಸ್ ಸೋಮ್ (ಪರಾಸ್ ಠಾಕೂರ್) ಎಂದು ಗುರುತಿಸಲಾಗಿದೆ. ರಜಪೂತ ಸಮುದಾಯದ...

‘ಮುಂಬೈ ಮಹಾರಾಷ್ಟ್ರ ನಗರವಲ್ಲ’: ಅಣ್ಣಾಮಲೈ ಹೇಳಿಕೆಗೆ ಶಿವಸೇನೆಯಿಂದ ತೀವ್ರ ಆಕ್ರೋಶ

ಮುಂಬೈ: ಐಪಿಎಸ್ ಅಧಿಕಾರಿಯಿಂದ ರಾಜಕಾರಣಿಯಾಗಿ ಬದಲಾದ ಕೆ.ಅಣ್ಣಾಮಲೈ ಅವರು "ಬಾಂಬೆ ಮಹಾರಾಷ್ಟ್ರ ನಗರವಲ್ಲ, ಅಂತರರಾಷ್ಟ್ರೀಯ ನಗರ" ಎಂದು ಹೇಳಿದ್ದು, ಇದು ಮುಂಬೈನಲ್ಲಿ ವಿವಾದ ಸೃಷ್ಟಿಸಿದೆ.  ಇದಕ್ಕೆ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (ಯುಬಿಟಿ)...

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...