Homeಮುಖಪುಟಸೆ. 5ಕ್ಕೆ ಗೌರಿ ನೆನಪು ಕಾರ್ಯಕ್ರಮ: ಅರುಂಧತಿರಾಯ್, ಪ್ರಕಾಶ್ ರಾಜ್, ಮೊಹಮ್ಮದ್ ಝುಬೇರ್ ಭಾಗಿ

ಸೆ. 5ಕ್ಕೆ ಗೌರಿ ನೆನಪು ಕಾರ್ಯಕ್ರಮ: ಅರುಂಧತಿರಾಯ್, ಪ್ರಕಾಶ್ ರಾಜ್, ಮೊಹಮ್ಮದ್ ಝುಬೇರ್ ಭಾಗಿ

- Advertisement -
- Advertisement -

2022ರ ಸೆಪ್ಟೆಂಬರ್‌ 5ಕ್ಕೆ ದಿಟ್ಟ ಪತ್ರಕರ್ತೆ ಗೌರಿ ಲಂಕೇಶ್‌ ಅವರ ಹತ್ಯೆಯಾಗಿ ಐದು ವರ್ಷಗಳು ತುಂಬುತ್ತಿರುವ ಸಂದರ್ಭದಲ್ಲಿ ಅಂದು ಬೆಂಗಳೂರಿನಲ್ಲಿ ಗೌರಿ ಮೆಮೋರಿಯಲ್ ಟ್ರಸ್ಟ್‌  ‘ಗೌರಿ ನೆನಪು’ ಕಾರ್ಯಕ್ರಮ ಆಯೋಜಿಸಲಾಗಿದೆ.

ಸೆಪ್ಟೆಂಬರ್ 05 ರ ಸೋಮವಾರ ಬೆಳಿಗ್ಗೆ 9 ಗಂಟೆಗೆ ಚಾಮರಾಜಪೇಟೆಯಲ್ಲಿರುವ ಗೌರಿ ಲಂಕೇಶ್ ಸಮಾಧಿ ಬಳಿ ನಮನ ಕಾರ್ಯಕ್ರಮ ನಡೆಯಲಿದೆ. ಆನಂತರ ಸಂಜೆ 5 ಗಂಟೆಗೆ ಅರಮನೆ ರಸ್ತೆಯಲ್ಲಿರುವ ಮಹಾರಾಣಿ ಕಾಲೇಜು ಪಕ್ಕದ ಸ್ಕೌಟ್ ಅಂಡ್ ಗೈಡ್ಸ್ ಸಭಾಂಗಣದಲ್ಲಿ ಗೌರಿ ನೆನಪಿನ ಉಪನ್ಯಾಸ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.

ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಬೂಕರ್ ಪ್ರಶಸ್ತಿ ವಿಜೇತ ಲೇಖಕಿ ಅರುಂಧತಿ ರಾಯ್, ಬಹುಭಾಷ ನಟ ಪ್ರಕಾಶ್ ರಾಜ್ ಮತ್ತು ಅಂತರಾಷ್ಟ್ರೀಯ ಖ್ಯಾತಿಯ ಪತ್ರಕರ್ತ ಮೊಹಮ್ಮದ್ ಝಬೇರ್ ಭಾಗವಹಿಸಲಿದ್ದಾರೆ. ಅಲ್ಲದೇ ಭಾಷಾತಜ್ಞರಾದ ಡಾ.ಜಿ.ಎನ್ ದೇವಿ, ಸಿನಿಮಾ ನಿರ್ದೇಶಕಿ ಕವಿತಾ ಲಂಕೇಶ್, ಪೆಡೆಸ್ಟ್ರಿಯನ್ ಪಿಕ್ಚರ್ಸ್‌ ನ ದೀಪು, ಪ್ರೊ.ವಿ.ಎಸ್ ಶ್ರೀಧರರವರು ಉಪಸ್ಥಿತರಿರುತ್ತಾರೆ  ಎಂದು ಟ್ರಸ್ಟ್‌ ಹೇಳಿಕೆಯಲ್ಲಿ ತಿಳಿಸಿದೆ.

ಅರುಂಧತಿ ರಾಯ್ ಕುರಿತು

‘ದ ಗಾಡ್ ಆಫ್‌ ಸ್ಮಾಲ್‌ ಥಿಂಕ್ಸ್‌’ ಕೃತಿಗೆ ಬೂಕರ್‌ ಪ್ರಶಸ್ತಿ ಪಡೆದಿರುವ ಖ್ಯಾತ ಬರಹಗಾರ್ತಿ, ಸಾಮಾಜಿಕ ಕಾರ್ಯಕರ್ತೆ ಅರುಂಧತಿ ರಾಯ್‌ ಅವರು ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ. ಜಾಗತೀಕರಣ ವಿರೋಧಿ ಹೋರಾಟದಲ್ಲಿ, ನರ್ಮದಾ ಉಳಿವು ಚಳವಳಿ ಸೇರಿದಂತೆ ಎಲ್ಲ ಪ್ರಗತಿಪರ ಧಾರೆಗಳಲ್ಲಿ ಗುರುತಿಸಿಕೊಂಡವರು  ಅರುಂಧತಿ ರಾಯ್‌. ಸಂವಿಧಾನ ಶಿಲ್ಪಿ ಡಾ.ಬಿ.ಆರ್‌.ಅಂಬೇಡ್ಕರ್‌ ಅವರ ‘ಜಾತಿ ವಿನಾಶ’ ಕೃತಿಗೆ ರಾಯ್ ಅವರು ಬರೆದ ಪರಿಚಯ ಬರಹ ಚರ್ಚೆಗೆ ಗ್ರಾಸವಾಗಿತ್ತು.

ಪ್ರಕಾಶ್ ರಾಜ್

ಬಹುಭಾಷಾ ನಟರಾದ ಪ್ರಕಾಶ್ ರಾಜ್‌ ಕನ್ನಡ ಮಣ್ಣಿನ ಅಪ್ಪಟ ಪ್ರತಿಭೆ. ಪ್ರಭುತ್ವ ತಾಳುವ ತಾರತಮ್ಯ, ಜನಾಂಗೀಯ ನೀತಿಗಳ ವಿರುದ್ಧ ದಿಟ್ಟವಾಗಿ ಪ್ರಶ್ನಿಸುವ ನಟರಲ್ಲಿ ಪ್ರಕಾಶ್ ರಾಜ್‌ ಕೂಡ ಒಬ್ಬರು. ಗೌರಿ ಲಂಕೇಶ್ ಅವರ ಹತ್ಯೆಯ ಬಳಿಕ ನಿರಂತರವಾಗಿ ಜನವಿರೋಧಿ ನೀತಿಗಳನ್ನು ಖಂಡಿಸುತ್ತಿರುವ ಪ್ರಕಾಶ್‌ ರಾಜ್ ಕಾರ್ಯಕ್ರಮದಲ್ಲಿ ಹಾಜರಿರಲಿದ್ದಾರೆ.

ಮೊಹಮ್ಮದ್ ಝುಬೇರ್

ಅಂತರಾಷ್ಟ್ರೀಯ ಖ್ಯಾತಿಯ ಪತ್ರಕರ್ತರಾದ ಮೊಹಮ್ಮದ್ ಝುಬೇರ್‌ ಅವರು ಭಾಗವಹಿಸುತ್ತಿದ್ದಾರೆ. ಗೌರಿಯವರ ಆಶಯಗಳನ್ನು ಉಸಿರಾಡುತ್ತಿರುವ ಅಸಂಖ್ಯಾತ ಪತ್ರಕರ್ತರಲ್ಲಿ ಜುಬೇರ್‌ ಅವರೂ ಒಬ್ಬರು. ಮೂಲತಃ ಕರ್ನಾಟಕದವರಾದ ಅವರು, ಫ್ಯಾಕ್ಟ್‌ಚೆಕ್‌ಗೆ ಹೆಸರಾದ ಆಲ್ಟ್‌ನ್ಯೂಸ್‌ ಜಾಲತಾಣದ ಸಹಸಂಸ್ಥಾಪಕರೂ ಹೌದು. ಕೋಮುದ್ವೇಷ ಪ್ರಕರಣಗಳನ್ನು ನಿರಂತರವಾಗಿ ಬಯಲಿಗೆಳೆಯುವಲ್ಲಿ ಸಕ್ರಿಯವಾಗಿರುವ ಜುಬೇರ್, ಇತ್ತೀಚೆಗೆ ಪ್ರಭುತ್ವದ ಕಿರುಕುಳವನ್ನು ಅನುಭವಿಸಿದವರು.

ಇದನ್ನೂ ಓದಿ: ಮರುಘಾ ಶರಣರ ಬಂಧನಕ್ಕೆ ಆಗ್ರಹಿಸಿ ಸೆ.2ರಂದು ರಾಜ್ಯಾದ್ಯಂತ ಬೃಹತ್ ಪ್ರತಿಭಟನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಾವರ್ಕರ್ ಕುರಿತು ಹೇಳಿಕೆ : ರಾಹುಲ್ ಗಾಂಧಿ ವಿರುದ್ಧದ ಮಾನನಷ್ಟ ಮೊಕದ್ದಮೆ ರದ್ದು

ಭಾರತ್ ಜೋಡೋ ಯಾತ್ರೆಯ ಸಂದರ್ಭದಲ್ಲಿ (2022ರಲ್ಲಿ) ಹಿಂದುತ್ವ ಸಿದ್ಧಾಂತವಾದಿ ವಿನಾಯಕ ದಾಮೋದರ್ ಸಾವರ್ಕರ್ ಕುರಿತು ನೀಡಿದ್ದ ಹೇಳಿಕೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ಮಾನನಷ್ಟ ಮೊಕದ್ದಮೆಯನ್ನು ನಾಸಿಕ್‌ನ...

‘ಒಳಮೀಸಲಾತಿ ಜಾರಿಯಲ್ಲಿ ಸರ್ಕಾರ ನಿರ್ಲಕ್ಷ್ಯ ಧೋರಣೆ ತೋರಿದರೆ ಹೋರಾಟ ವಿಧಾನಸೌಧಕ್ಕೆ ಸ್ಥಳಾಂತರವಾಗುತ್ತದೆ’: ಮಾದರ ಚೆನ್ನಯ್ಯ ಸ್ವಾಮೀಜಿ

ಕಳೆದ 35 ವರ್ಷಗಳಿಂದ ಹಲವಾರು ಹೋರಾಟಗಾರರು ತಮ್ಮ ಜೀವ-ಜೀವನವನ್ನು ಅರ್ಪಿಸಿ, ಮನೆ-ಮಠವನ್ನು ಬಿಟ್ಟು ಒಳಮೀಸಲಾತಿ ಹೋರಾಟವನ್ನು ಅಂತಿಮ ಘಟ್ಟಕ್ಕೆ ತಂದಿದ್ದಾರೆ. ಅನೇಕರು ಬದುಕನ್ನು ಮಾತ್ರವಲ್ಲ, ಪ್ರಾಣವನ್ನೂ ಕಳೆದುಕೊಂಡಿದ್ದಾರೆ. ಇದು 2ನೇ ಸ್ವಾತಂತ್ರ್ಯ ಹೋರಾಟವಾಗಿದೆ....

ಎಸ್‌ಎನ್‌ಡಿಪಿ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ವೆಳ್ಳಾಪ್ಪಳ್ಳಿ ನಟೇಶನ್ ಅನರ್ಹ

ಶ್ರೀ ನಾರಾಯಣ ಧರ್ಮ ಪರಿಪಾಲನ ಯೋಗಂ (ಎಸ್‌ಎನ್‌ಡಿಪಿ ಯೋಗಂ) ನ ಪ್ರಧಾನ ಕಾರ್ಯದರ್ಶಿ ಮತ್ತು ಮತ್ತು ಎಸ್‌ಎನ್ ಟ್ರಸ್ಟ್‌ನ ಕಾರ್ಯದರ್ಶಿ ಸ್ಥಾನದಿಂದ ವೆಳ್ಳಾಪ್ಪಳ್ಳಿ ನಟೇಶನ್ ಅವರನ್ನು ಕೇರಳ ಹೈಕೋರ್ಟ್ ಗುರುವಾರ (ಮಾ.12) ಅನರ್ಹಗೊಳಿಸಿದ್ದು,...

‘ಫಾರೂಕ್ ಅಬ್ದುಲ್ಲಾರನ್ನು ಕೊಲ್ಲುವುದು ಸರ್ಕಾರದ ಉದ್ದೇಶವೇ?’..ರಾಜ್ಯ ಸಭೆಯಲ್ಲಿ ಖರ್ಗೆ ಪ್ರಶ್ನೆ

ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಹಾಗೂ ನ್ಯಾಷನಲ್ ಕಾನ್ಫರೆನ್ಸ್ (ಎನ್‌ಸಿ) ಪಕ್ಷದ ಮುಖ್ಯಸ್ಥ ಫಾರೂಕ್ ಅಬ್ದುಲ್ಲಾ ಅವರ ಹತ್ಯೆ ಯತ್ನ ವಿಚಾರವನ್ನು ವಿಪಕ್ಷ ಸದಸ್ಯರು ಗುರುವಾರ (ಮಾ.12) ರಾಜ್ಯಸಭೆಯಲ್ಲಿ ಪ್ರಸ್ತಾಪಿಸಿದರು. ಘಟನೆ ಬಗ್ಗೆ...

56 ಸಾವಿರ ಹುದ್ದೆಗಳ ನೇಮಕಾತಿಯಲ್ಲಿ ಒಳಮೀಸಲಾತಿ ಅನ್ವಯಕ್ಕೆ ಆಗ್ರಹಿಸಿ ಎಡಗೈ ಸಮುದಾಯದಿಂದ ಬೃಹತ್ ಪ್ರತಿಭಟನೆ 

ಸರ್ಕಾರವು ಒಳ ಮೀಸಲಾತಿಯನ್ನು ತಪ್ಪಿಸುವ ಹುನ್ನಾರದಿಂದ ತರಾತುರಿಯಲ್ಲಿ 56,432 ಹುದ್ದೆಗಳ ನೇಮಕಾತಿಗೆ ಆದೇಶ ಹೊರಡಿಸಿದೆ. ನೇಮಕಾತಿಯಲ್ಲಿ ಒಳಮೀಸಲಾತಿ ಅಳವಡಿಸದೆ, ಎಡಗೈ ಸಮುದಾಯಗಳಿಗೆ ಸರ್ಕಾರ ಮತ್ತೆ ವಂಚಿಸುತ್ತಿದೆ ಎಂದು ‘ಒಳಮೀಸಲಾತಿ ಹೋರಾಟ ಸಮಿತಿ’ ಆರೋಪಿಸಿದೆ....

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಬುಧವಾರ (ಮಾ.11) ಧ್ವನಿ ಮತದ ಮೂಲಕ ತಿರಸ್ಕಾರಗೊಂಡಿದೆ. ಸದನದಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲ ಮತ್ತು ಘೋಷಣೆಗಳ ನಡುವೆಯೇ ಸ್ಪೀಕರ್...

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...