Homeಕರ್ನಾಟಕಗೌರಿ ಹತ್ಯೆ ಪ್ರಕರಣ : ಮೂವರು ಆರೋಪಿಗಳ ಜಾಮೀನು ಅರ್ಜಿ ಆದೇಶ ಕಾಯ್ದಿರಿಸಿದ ಹೈಕೋರ್ಟ್‌

ಗೌರಿ ಹತ್ಯೆ ಪ್ರಕರಣ : ಮೂವರು ಆರೋಪಿಗಳ ಜಾಮೀನು ಅರ್ಜಿ ಆದೇಶ ಕಾಯ್ದಿರಿಸಿದ ಹೈಕೋರ್ಟ್‌

- Advertisement -
- Advertisement -

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಐದನೇ ಆರೋಪಿ ಅಮಿತ್‌ ದಿಗ್ವೇಕರ್‌, ಏಳನೇ ಆರೋಪಿ ಸುರೇಶ್‌ ಹೆಚ್‌.ಎಲ್‌ ಮತ್ತು 17ನೇ ಆರೋಪಿ ಕೆ.ಟಿ ನವೀನ್‌ ಕುಮಾರ್‌ ಸಲ್ಲಿಸಿರುವ ಪ್ರತ್ಯೇಕ ಜಾಮೀನು ಅರ್ಜಿಗಳ ಸುದೀರ್ಘ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಸ್.ವಿಶ್ವಜಿತ್‌ ಶೆಟ್ಟಿ ಅವರ ಹೈಕೋರ್ಟ್‌ ಏಕಸದಸ್ಯ ಪೀಠ ಆದೇಶ ಕಾಯ್ದಿರಿಸಿದೆ.

ಪ್ರಕರಣದ 11ನೇ ಆರೋಪಿ ಮೋಹನ್‌ ನಾಯಕ್‌ಗೆ ಹೈಕೋರ್ಟ್‌ ಜಾಮೀನು ಮಂಜೂರು ಮಾಡಿರುವುದನ್ನು ಪರಿಗಣಿಸಿ ತಮಗೂ ಜಾಮೀನು ಮಂಜೂರು ಮಾಡಬೇಕು ಎಂಬುವುದು ಎಲ್ಲಾ ಅರ್ಜಿದಾರರ ವಾದವಾಗಿದೆ. ಇದಕ್ಕೆ ತೀವ್ರ ಆಕ್ಷೇಪ ವ್ಯಕ್ತಪಡಿಸಿರುವ ಪ್ರಾಸಿಕ್ಯೂಷನ್‌ “ಮೋಹನ್‌ ನಾಯಕ್‌ ಈ ಹಿಂದೆ ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ಹೈಕೋರ್ಟ್‌ನ ಬೇರೊಂದು ಪೀಠ ತಿರಸ್ಕರಿಸಿದ್ದು, ಕೊಲೆ, ಪಿತೂರಿಯಂಥ ಗಂಭೀರ ಆರೋಪಗಳಿರುವಾಗ ಜಾಮೀನು ನೀಡಲಾಗದು” ಎಂದಿದೆ.

“ಇಡೀ ಪ್ರಕರಣದಲ್ಲಿ ಜಾಮೀನು ಪಡೆದಿರುವ ಏಕೈಕ ಮತ್ತು ಮೊದಲ ಆರೋಪಿ ಮೋಹನ್‌ ನಾಯಕ್‌ ಆಗಿದ್ದು, ಆತನ ಜಾಮೀನು ಆದೇಶವನ್ನು ರಾಜ್ಯ ಸರ್ಕಾರ ಸುಪ್ರೀಂ ಕೋರ್ಟ್‌ನಲ್ಲಿ ಪ್ರಶ್ನಿಸಿದೆ. ಅದು ವಿಚಾರಣೆಗೆ ಬಾಕಿಯಿದೆ” ಎಂದು ತಿಳಿಸಿದೆ.

ಆರೋಪಿ ಅಮಿತ್‌ ದಿಗ್ವೇಕರ್‌ ಪ್ರತಿನಿಧಿಸಿದ್ದ ವಕೀಲ ಬಸವರಾಜ ಸಪ್ಪಣ್ಣವರ್‌ ಅವರು “ಒಂದನೇ ಆರೋಪಿ ಅಮೋಲ್‌ ಕಾಳೆಯ ಸ್ವಯಂ ಹೇಳಿಕೆ ಆಧರಿಸಿ ಅಮಿತ್‌ನನ್ನು ಬಂಧಿಸಲಾಗಿದೆ. ಇಡೀ ಪ್ರಕರಣದಲ್ಲಿ ಅಮಿತ್‌ ಮೇಲಿರುವ ಏಕೈಕ ಆರೋಪ ಹಣಕಾಸಿನ ನೆರವು ನೀಡಿರುವುದು. ಅವರು ಕೊಲೆಯಲ್ಲಿ ನೇರವಾಗಿ ಭಾಗಿಯಾಗಿಲ್ಲ. ಅಮಿತ್‌ರಿಂದ ಆಧಾರ್‌ ಕಾರ್ಡ್‌, ಗುರುತಿನ ಚೀಟಿ, ಬಸ್‌ ಟಿಕೆಟ್‌ ಜಪ್ತಿ ಮಾಡಲಾಗಿದೆ. ಬೇರೆ ಏನೂ ಮಾಡಿಲ್ಲ. 2018ರ ಮೇ 21ರಿಂದ ಜೈಲಿನಲ್ಲಿದ್ದಾರೆ. 11ನೇ ಆರೋಪಿ ಮೋಹನ್‌ ನಾಯಕ್‌ಗೆ ನೀಡಿರುವಂತೆ ಅಮಿತ್‌ಗೂ ಜಾಮೀನು ಮಂಜೂರು ಮಾಡಬೇಕು” ಎಂದು ಕೋರಿದರು.

ಆರೋಪಿ ಕೆ.ಟಿ ನವೀನ್‌ ಕುಮಾರ್‌ನನ್ನು ಪ್ರತಿನಿಧಿಸಿದ್ದ ಹಿರಿಯ ವಕೀಲ ಎಂ. ಅರುಣ್‌ ಶ್ಯಾಮ್‌ ಅವರು “13ನೇ ಆರೋಪಿ ಸುಜಿತ್‌ ಜೊತೆ ನವೀನ್‌ ಕುಮಾರ್‌ ಪಾರ್ಕ್‌ನಲ್ಲಿ ಮಾತನಾಡಿದ್ದಾನೆ ಎಂದು ಆರೋಪಿಸಲಾಗಿದೆ. ನವೀನ್‌ನಿಂದ ಸಿಮ್‌ ಕಾರ್ಡ್‌ ವಶಪಡಿಸಲಾಗಿದೆ ಎಂದು ಹೇಳಲಾಗಿದೆ. ಸಿಮ್‌ ಕಾರ್ಡ್‌ ನೀಡಿದ ವ್ಯಕ್ತಿಯ ಹೆಸರು ನವೀನ್‌ ಕುಮಾರ್‌ ಆಗಿದ್ದು, ಅವರು ವಿರುದ್ಧವಾಗಿ ಸಾಕ್ಷ್ಯ ನುಡಿದಿದ್ದಾರೆ” ಎಂದರು.

ಮುಂದುವರಿದು, “ಮೊದಲಿಗೆ ಕೆ.ಟಿ ನವೀನ್‌ ಕುಮಾರ್‌ ಮೊದಲ ಆರೋಪ ಪಟ್ಟಿಯಲ್ಲಿ ಮೊದಲ ಆರೋಪಿ ಮಾಡಲಾಗಿತ್ತು. ಎರಡನೇ ಆರೋಪ ಪಟ್ಟಿಯಲ್ಲಿ 17ನೇ ಆರೋಪಿ ಮಾಡಲಾಗಿದೆ. ಸಕಾರಣವಿಲ್ಲದೇ ನವೀನ್‌ನನ್ನು ಬದಿಗೆ ಸರಿಸಲಾಗಿದೆ. ಮೆಜೆಸ್ಟಿಕ್‌ನಲ್ಲಿ ಸಜೀವ ಗುಂಡುಗಳನ್ನು ಮಾರಾಟ ಮಾಡುತ್ತಿದ್ದ ಆರೋಪದ ಮೇಲೆ ಮೊದಲಿಗೆ ನವೀನ್‌ನನ್ನು ಬಂಧಿಸಲಾಗುತ್ತದೆ. ಈ ಸಂಬಂಧ ಉಪ್ಪಾರ ಪೇಟೆಯಲ್ಲಿ ಪ್ರಕರಣ ದಾಖಲಾಗಿದೆ. ಈ ಪ್ರಕರಣದಲ್ಲಿ ಬಾಡಿ ವಾರೆಂಟ್‌ ಮೇಲೆ ಆತನನ್ನು ವಶಕ್ಕೆ ಪಡೆಯಲಾಗಿತ್ತು. ನವೀನ್‌ ವಿರುದ್ಧದ ಎಲ್ಲಾ ಸಾಕ್ಷಿಗಳ ಹೇಳಿಕೆ ದಾಖಲಾಗಿದೆ” ಎಂದು ವಿವರಿಸಿದರು.

“2020ರ ಜನವರಿ 10ರಂದು ಮೊದಲ ಜಾಮೀನು ಅರ್ಜಿ ವಜಾಗೊಂಡಿದೆ. ನಾಲ್ಕು ವರ್ಷಗಳ ಬಳಿಕ ಜಾಮೀನು ಕೋರುತ್ತಿದ್ದೇನೆ. ಆರೋಪ ನಿಗದಿಗೂ ಮುನ್ನ ಮತ್ತು ಮೂರನೇ ಆರೋಪ ಪಟ್ಟಿ ಸಲ್ಲಿಸಿದ ಬಳಿಕ ಜಾಮೀನು ಕೋರಿದ್ದೆ. ಮೋಹನ್‌ ನಾಯಕ್‌ಗೆ ಜಾಮೀನು ನೀಡಿರುವುದನ್ನು ಪರಿಗಣಿಸಿ, ಪರಿಸ್ಥಿತಿ ಬದಲಾಗಿರುವುದರಿಂದ ಜಾಮೀನು ನೀಡಬೇಕು. ಒಟ್ಟಾರೆ, 527 ಸಾಕ್ಷ್ಯಗಳನ್ನು ಆರೋಪ ಪಟ್ಟಿಯಲ್ಲಿ ಉಲ್ಲೇಖಿಸಲಾಗಿದೆ. 2022ರ ಜುಲೈ 11ರಂದು ವಿಚಾರಣೆ ಆರಂಭವಾಗಿದ್ದು, ಎರಡು ವರ್ಷದಲ್ಲಿ 130 ಸಾಕ್ಷಿ ಮಾತ್ರ ವಿಚಾರಣೆ ನಡೆಸಲಾಗಿದೆ. ಆರೋಪಿಯು ಆರು ವರ್ಷದಿಂದ ಜೈಲಿನಲ್ಲಿದ್ದಾರೆ. ಆರೋಗ್ಯದ ಕಾರಣ ನೀಡಿ ಹಿಂದೆ ಜಾಮೀನು ಕೋರಲಾಗಿತ್ತು. ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ನ್ಯಾಯಾಲಯ ಅನುಮತಿಸಿತ್ತು” ಎಂದರು.

“ಇನ್ನೊಬ್ಬ ಆರೋಪಿ ಸುರೇಶ್‌ ಪ್ರತಿನಿಧಿಸಿದ್ದ ವಕೀಲ ಮಧುಕರ್‌ ದೇಶಪಾಂಡೆ “15ನೇ ಆರೋಪಿ ವಿಕಾಸ್‌ ಪಾಟೀಲ್‌ಗೆ ಗೌರಿ ಲಂಕೇಶ್‌ ಅವರ ವಿಳಾಸ ಪತ್ತೆ ಮಾಡಿಕೊಡಿಕೊಟ್ಟಿರುವ, ಶಸ್ತ್ರಾಸ್ತ್ರಗಳನ್ನು ಬಚ್ಚಿಡಲು ನೆರವಾಗಿರುವ ಆರೋಪ ಸುರೇಶ್‌ ಮೇಲಿದೆ. 2017ರ ಜುಲೈನಲ್ಲಿ ಸೀಗೆಹಳ್ಳಿ ಗೇಟ್‌ ಸಮೀಪ ಮನೆ ಬಾಡಿಗೆ ಪಡೆದು ಶಸ್ತ್ರಾಸ್ತ್ರ ಸಂಗ್ರಹ ಮಾಡಿರುವುದು ಮತ್ತು ಗೌರಿಯವರನ್ನು ಕೊಲ್ಲಲು ಶೂಟಿಂಗ್‌ ರಿಹರ್ಸಲ್‌ ನಡೆಸಲು ಬೈಕ್‌ ನೀಡಿದ್ದ ಆರೋಪ ಮಾಡಲಾಗಿದೆ. ಅಮೋಲ್‌ ಕಾಳೆ ಮತ್ತು ವಿಕಾಸ್‌ ಪಾಟೀಲ್‌ ಬೈಕ್‌ ರಿಹರ್ಸಲ್‌ ಮಾಡಿದ್ದಾರೆ. ಇಲ್ಲಿ ಸುರೇಶ್‌ ಪಾತ್ರವಿಲ್ಲ. ಸಾಕ್ಷ್ಯ ನಾಶ ಮಾಡಿದ ಗಂಭೀರ ಆರೋಪ ಮಾಡಲಾಗಿದೆ. ಇತರೆ ಆರೋಪಿಗಳಿಗೆ ವಾಸಕ್ಕೆ ಅನುವು ಮಾಡಿಕೊಟ್ಟಿರುವುದಕ್ಕೆ ಯಾವುದೇ ದಾಖಲೆ ಇಲ್ಲ. ಅಪರಾಧ ನಡೆಯುವಾಗ ಸುರೇಶ್‌ ಹೆರೂರಿನಲ್ಲಿದ್ದರು. ಅಪರಾಧದಲ್ಲಿ ಭಾಗಿಯಾಗಿರುವುದಕ್ಕೆ ಪೂರಕವಾಗಿ ಇದುವರೆಗೆ ವಿಚಾರಣೆ ನಡೆಸಿರುವ ಯಾರೂ ಸಾಕ್ಷ್ಯ ನುಡಿದಿಲ್ಲ” ಎಂದು ಹೇಳಿದರು.

ಇದಕ್ಕೆ ತೀವ್ರ ಆಕ್ಷೇಪ ವ್ಯಕ್ತಪಡಿಸಿದ ವಿಶೇಷ ಸರ್ಕಾರಿ ಅಭಿಯೋಜಕ ಅಶೋಕ್‌ ನಾಯಕ್‌ “ಮೋಹನ್‌ ನಾಯಕ್‌ ವಿರುದ್ಧದ ಕೊಲೆ ಮತ್ತು ಪಿತೂರಿಗೆ ಸಾಕ್ಷಿ ಇದೆ ಎಂದು ಹೈಕೋರ್ಟ್‌ನ ಬೇರೊಂದು ಪೀಠವು (ನ್ಯಾ. ಬಿ ಎ ಪಾಟೀಲ್) ಜಾಮೀನು ತಿರಸ್ಕರಿಸಿದೆ. ತಾವು ಮೋಹನ್‌ ನಾಯಕ್‌ಗೆ ಜಾಮೀನು ಮಂಜೂರು ಮಾಡಿರುವ ‌ ಆದೇಶವನ್ನು ಹಾಲಿ ಜಾಮೀನು ಅರ್ಜಿಗಳಿಗೆ ಅನ್ವಯಿಸಬಾರದು. ಮೋಹನ್‌ ನಾಯಕ್‌ ಜಾಮೀನು ಆದೇಶವನ್ನು ಸುಪ್ರೀಂ ಕೋರ್ಟ್‌ನಲ್ಲಿ ಪ್ರಶ್ನಿಸಲಾಗಿದ್ದು, ವಿಚಾರಣೆಗೆ ಬಾಕಿ ಇದೆ” ಎಂದರು.

ಮುಂದುವರಿದು, “ಅರ್ಜಿದಾರರು ವಿಚಾರಣಾಧೀನ ನ್ಯಾಯಾಲಯದಲ್ಲಿ ಸಲ್ಲಿಸಿದ್ದ ಆರೋಪ ಮುಕ್ತಿ ಕೋರಿ ಸಲ್ಲಿಕೆ ಮಾಡಿದ್ದ ಅರ್ಜಿಗಳು ತಿರಸ್ಕರಿಸಲ್ಪಟ್ಟಿವೆ. ಅವುಗಳನ್ನು ಪ್ರಶ್ನಿಸಲಾಗಿಲ್ಲ. ಗೌರಿ ಹತ್ಯೆ ಪ್ರಕರಣದಲ್ಲಿ ಅಪಾರ ಸಾಕ್ಷ್ಯವಿದೆ. ಇದೊಂದು ಹೀನ ಕೃತ್ಯವಾಗಿದ್ದು, ಅಪರಾಧದ ಗಂಭೀರತೆಯನ್ನು ಪರಿಗಣಿಸಬೇಕು. ಇದೊಂದು ಅಂತಾರಾಜ್ಯ ಸಿಂಡಿಕೇಟ್‌ ಆಗಿದ್ದು, ಆರೋಪಿಗಳು ಸುದೀರ್ಘವಾಗಿ ಜೈಲಿನಲ್ಲಿದ್ದಾರೆ ಎಂಬುವುದು ಜಾಮೀನಿಗೆ ಮಾನದಂಡವಾಗಬಾರದು” ಎಂದು ಹೇಳಿದರು.

“ಗೌರಿ ಹತ್ಯೆ ಕೊಲೆ ಮಾಡಿರುವ ಇಡೀ ಸಿಂಡಿಕೇಟ್‌ ಒಂದಲ್ಲಾ ಒಂದು ರೀತಿಯಲ್ಲಿ ಎಂ.ಎಂ ಕಲಬುರ್ಗಿ, ಗೋವಿಂದ ಪಾನ್ಸರೆ, ನರೇಂದ್ರ ದಾಭೋಲ್ಕರ್‌ ಕೊಲೆಯಲ್ಲೂ ಭಾಗಿಯಾಗಿದೆ. ಇದೇ ಸಿಂಡಿಕೇಟ್‌ ಅದರಲ್ಲೂ ಅರ್ಜಿದಾರರಾಗಿರುವ ಅಮಿತ್‌ ಮತ್ತು ನವೀನ್‌ ಕುಮಾರ್‌ ಪ್ರೊ. ಭಗವಾನ್‌ ಅವರನ್ನು ಕೊಲೆ ಮಾಡಲು ಯತ್ನಿಸಿದ್ದು, ಅದೃಷ್ಟವಶಾತ್‌ ಅವರು ಪಾರಾಗಿದ್ದಾರೆ” ಎಂದರು.

“ಮಡಿಕೇರಿ, ಬೆಳಗಾವಿ, ಮಂಗಳೂರಿನಲ್ಲಿ ಈ ಸಿಂಡಿಕೇಟ್‌ ಸಭೆ ನಡೆಸಿದೆ. ನಿಡುಮಾಮಿಡಿ ಸ್ವಾಮೀಜಿ, ಸಾಹಿತಿಗಳಾದ ಗಿರೀಶ್‌ ಕಾರ್ನಾಡ್‌ ಮತ್ತು ಪ್ರೊ. ಭಗವಾನ್‌ ಅವರನ್ನು ಕೊಲ್ಲುವ ಪ್ರಯತ್ನ ಮಾಡಿದ್ದಾರೆ. ಅರ್ಜಿದಾರ ಸುರೇಶ್‌ ಮನೆಯಲ್ಲಿ ಆರೋಪಿಗಳು ಉಳಿದುಕೊಳ್ಳಲು ಅವರ ಪತ್ನಿಯನ್ನು ತವರಿಗೆ ಕಳುಹಿಸುತ್ತಾರೆ. ಕೊಲೆ ಉದ್ದೇಶ ಮನೆಯವರಿಗೆ ಗೊತ್ತಾಗುತ್ತದೆ ಎಂದು ಅವರನ್ನು ಕಳುಹಿಸಲಾಗಿತ್ತೇ ವಿನಃ, ಅವರು ಹಬ್ಬಕ್ಕೆ ಹೋಗಿರಲಿಲ್ಲ. ಸೆಪ್ಟೆಂಬರ್‌ 5ರಂದು ಗೌರಿ ಕೊಲೆಯಾದ ಬಳಿಕ ಆರೋಪಿಗಳು ಸುರೇಶ್‌ ಮನೆ ಖಾಲಿ ಮಾಡುತ್ತಾರೆ” ಎಂದರು ವಿವರಿಸಿದರು.

ವಾದ ಪ್ರತಿ ವಾದಗಳನ್ನು ಆಲಿಸಿದ ನ್ಯಾಯಾಲಯ ಆರೋಪಿಗಳ ಜಾಮೀನು ಅರ್ಜಿಯ ಆದೇಶ ಕಾಯ್ದಿರಿಸಿತು.

ಕೃಪೆ : ಬಾರ್ & ಬೆಂಚ್

ಇದನ್ನೂ ಓದಿ : ಸಿಎಂ ಭೇಟಿಯಾದ ರೇಣುಕಸ್ವಾಮಿ ಪೋಷಕರು; ಮೃತನ ಪತ್ನಿಗೆ ಕೆಲಸ ಕೊಡಿಸುವಂತೆ ಮನವಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಾಂಗ್ಲಾದೇಶದ ವಿದ್ಯಾರ್ಥಿ ನಾಯಕ ಷರೀಫ್ ಉಸ್ಮಾನ್ ಹಾದಿ ಸಾವಿನ ನಂತರ ರಾಜಧಾನಿ ಢಾಕಾದಲ್ಲಿ ಭುಗಿಲೆದ್ದ ಹಿಂಸಾಚಾರ

ಢಾಕಾ: ಬಾಂಗ್ಲಾದೇಶದ ವಿದ್ಯಾರ್ಥಿ ನಾಯಕ ಷರೀಫ್ ಉಸ್ಮಾನ್ ಹಾದಿ ಸಾವಿನ ಬಳಿಕ ಬಾಂಗ್ಲಾದೇಶದ ರಾಜಧಾನಿ ಢಾಕಾದಲ್ಲಿ ಶುಕ್ರವಾರ ಬೆಳಗಿನ ಜಾವ ಹಿಂಸಾಚಾರ ಭುಗಿಲೆದ್ದಿದೆ. ಹತ್ಯೆ ಯತ್ನದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಉಸ್ಮಾನ್ ಹಾದಿ, ಸಿಂಗಾಪುರದ ಆಸ್ಪತ್ರೆಯಲ್ಲಿ...

ಸತ್ನಾದಲ್ಲಿ ಆರು ಮಕ್ಕಳಿಗೆ ಎಚ್‌ಐವಿ ಪಾಸಿಟಿವ್: ಮಧ್ಯಪ್ರದೇಶ ಸರ್ಕಾರದಿಂದ ರಕ್ತ ನಿಧಿಯ ಮುಖ್ಯಸ್ಥ ಸೇರಿ ಮೂವರು ಅಮಾನತು

ಭೋಪಾಲ್: ಸತ್ನಾ ಜಿಲ್ಲೆಯ ಸರ್ದಾರ್ ವಲ್ಲಭಭಾಯಿ ಪಟೇಲ್ ಸರ್ಕಾರಿ ಆಸ್ಪತ್ರೆಯಲ್ಲಿ ಆರು ಮಕ್ಕಳಿಗೆ ಎಚ್‌ಐವಿ ಪಾಸಿಟಿವ್ ಬಂದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಧ್ಯಪ್ರದೇಶ ಸರ್ಕಾರ ಗುರುವಾರ ರಕ್ತ ನಿಧಿಯ ಉಸ್ತುವಾರಿ ಮತ್ತು ಇಬ್ಬರು ಪ್ರಯೋಗಾಲಯ...

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...