Homeಕರ್ನಾಟಕಗೌರಿ ನುಡಿನಮನ: ಗುಂಡೇಟು ತಿಂದು ಸಾವನ್ನಪ್ಪಿದ ಗೌರಿ ನಮ್ಮೆಲ್ಲರ ಮನಸ್ಸಿನಲ್ಲಿ ಸದಾ ನೆನಸಿರುತ್ತಾರೆ; ಬಿ.ಟಿ.ಲಲಿತಾ ನಾಯಕ್

ಗೌರಿ ನುಡಿನಮನ: ಗುಂಡೇಟು ತಿಂದು ಸಾವನ್ನಪ್ಪಿದ ಗೌರಿ ನಮ್ಮೆಲ್ಲರ ಮನಸ್ಸಿನಲ್ಲಿ ಸದಾ ನೆನಸಿರುತ್ತಾರೆ; ಬಿ.ಟಿ.ಲಲಿತಾ ನಾಯಕ್

- Advertisement -
- Advertisement -

ಬೆಂಗಳೂರು: ಪತ್ರಕರ್ತೆ ಮತ್ತು ಹೋರಾಟಗಾರ್ತಿ ಗೌರಿ ಲಂಕೇಶ್‌ ಅವರ 8ನೇ ಪುಣ್ಯಸ್ಮರಣೆಯನ್ನು ಇಂದು (ಸೆಪ್ಟೆಂಬರ್ 6) ಬೆಂಗಳೂರಿನ ಚಾಮರಾಜಪೇಟೆ ರುದ್ರಭೂಮಿಯ ಅವರ ಸಮಾಧಿ ಬಳಿ “ಗೌರಿ ನುಡಿನಮನ” ಕಾರ್ಯಕ್ರಮದ ಮೂಲಕ ಆಚರಿಸಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ಮಾಜಿ ಸಚಿವೆ ಹಾಗೂ ಹಿರಿಯ ಸಾಹಿತಿ ಬಿ.ಟಿ.ಲಲಿತಾ ನಾಯಕ್, ಗೌರಿ ಲಂಕೇಶ್‌ ಅವರು ಸತ್ಯ ಮತ್ತು ನ್ಯಾಯಕ್ಕಾಗಿ ಗುಂಡೇಟಿಗೆ ಬಲಿಯಾದರೂ, ಅವರ ಹೋರಾಟ ಮತ್ತು ಆದರ್ಶಗಳು ಎಂದಿಗೂ ಜೀವಂತವಾಗಿವೆ ಎಂದು ಹೇಳಿದರು.

ಪ್ರತಿ ವರ್ಷ ಸೆಪ್ಟೆಂಬರ್ 5ರಂದು ನಡೆಯುವ ಈ ಕಾರ್ಯಕ್ರಮದಲ್ಲಿ, ಗೌರಿ ಲಂಕೇಶ್‌ ಅವರ ನಿಷ್ಠೆ, ಬದ್ಧತೆ ಮತ್ತು ನಿರ್ಭೀತ ಹೋರಾಟವನ್ನು ಸ್ಮರಿಸಲಾಯಿತು. ಈ ಬಾರಿ ಸೆ.5ರ ಬದಲು ಸೆ.6ರಂದು ಗೌರಿ ನುಡಿನಮನ ಕಾರ್ಯಕ್ರಮವನ್ನು ಆಚರಿಸಲಾಯಿತು. “ಸಾಮಾನ್ಯವಾಗಿ ಒಬ್ಬ ವ್ಯಕ್ತಿ ಮೃತಪಟ್ಟರೆ, ಅವರನ್ನು ಸ್ಮರಿಸಲು ಕೇವಲ ಕಲ್ಲಿನ ಸಮಾಧಿಗಳು ಮಾತ್ರ ಉಳಿಯುತ್ತವೆ. ಆದರೆ, ಗೌರಿ ಅವರು ನಮ್ಮೆಲ್ಲರ ಮನಸ್ಸಿನಲ್ಲಿ ಸದಾ ನೆಲೆಸಿದ್ದಾರೆ. ಇದಕ್ಕೆ ಕಾರಣ, ಅವರು ತಾವು ನಂಬಿದ ಸಿದ್ಧಾಂತಕ್ಕೆ, ತತ್ವಕ್ಕೆ ಕೊನೆಯವರೆಗೂ ಅಂಟಿಕೊಂಡಿದ್ದ ಬದ್ಧತೆ. ಸತ್ಯಕ್ಕಾಗಿ ತಮ್ಮ ಪ್ರಾಣವನ್ನೇ ತ್ಯಾಗ ಮಾಡಲು ಸಿದ್ಧರಾದ ಅವರ ಧೈರ್ಯ ಪ್ರತಿಯೊಬ್ಬರಿಗೂ ಸ್ಫೂರ್ತಿಯಾಗಿದೆ” ಎಂದು ಬಿ.ಟಿ.ಲಲಿತಾ ನಾಯಕ್ ತಿಳಿಸಿದರು.

ಅವರು ಮುಂದುವರೆದು, “ಗೌರಿ ಅವರ ಜೊತೆ ಜನರು ಇದ್ದರು, ಅವರ ನಂತರದ ಪೀಳಿಗೆಯೂ ಇದೆ. ಅವರು ಕೇವಲ ಪತ್ರಕರ್ತೆಯಾಗಿರಲಿಲ್ಲ, ಬದಲಿಗೆ ಸತ್ಯಪ್ರತಿಪಾದಕಿಯಾಗಿ, ಬಂಡಾಯದ ಪ್ರತೀಕವಾಗಿ ಘಮಘಮಿಸುತ್ತಲೇ ಇರುತ್ತಾರೆ. ಇಂದಿನ ಸಮಾಜದಲ್ಲಿ ನಡೆಯುತ್ತಿರುವ ಅನಾಹುತಗಳನ್ನು ಪ್ರಶ್ನಿಸಲು, ಸತ್ಯವನ್ನು ನಿರ್ಭೀತಿಯಿಂದ ಹೊರತರಲು ಗೌರಿ ಲಂಕೇಶ್‌ ತೋರಿಸಿದ ಹಾದಿಯಲ್ಲಿ ನಾವೆಲ್ಲರೂ ನಡೆಯಬೇಕು. ಯಾವುದೇ ಪ್ರಭಾವಕ್ಕೆ, ಯಾವುದೇ ಹಂಗಿಗೂ ಒಳಗಾಗದೆ, ನ್ಯಾಯ ಮತ್ತು ಸತ್ಯಕ್ಕಾಗಿ ಹೋರಾಡುವ ಮನೋಭಾವವನ್ನು ನಾವು ರೂಢಿಸಿಕೊಳ್ಳಬೇಕು” ಎಂದು ಕರೆ ನೀಡಿದರು.

ಈ ಸಂದರ್ಭದಲ್ಲಿ ಮಾತನಾಡಿದ ಅವರು, “ನಮ್ಮ ಎದೆಗೆ ಗುಂಡೇಟು ಬಿದ್ದರೂ ಚಿಂತೆಯಿಲ್ಲ ಎಂಬ ರೀತಿಯಲ್ಲಿ ಸತ್ಯಶೋಧಕರಾಗಿ ನಾವು ಮುನ್ನಡೆಯಬೇಕು. ಗೌರಿ ಅವರು ನಮಗೆ ಇದೇ ಸಂದೇಶವನ್ನು ನೀಡಿದ್ದಾರೆ. ನಾವು ಈ ಸಂದೇಶಕ್ಕೆ ಬದ್ಧರಾಗಿರೋಣ” ಎಂದು ಹೇಳಿದರು. ಗೌರಿ ಲಂಕೇಶ್‌ ಅವರ ಆದರ್ಶಗಳಿಗೆ ಬದ್ಧರಾಗಿ, ಸತ್ಯ ಮತ್ತು ನ್ಯಾಯದ ಪರವಾಗಿ ನಿಲ್ಲುವುದೇ ಅವರಿಗೆ ನಾವು ಸಲ್ಲಿಸುವ ನಿಜವಾದ ಶ್ರದ್ಧಾಂಜಲಿ ಎಂದು ಅವರು ಅಭಿಪ್ರಾಯಪಟ್ಟರು.

ಈ ಕಾರ್ಯಕ್ರಮದಲ್ಲಿ ಆರಂಭದಲ್ಲಿ ರಮೇಶ್ ಗಬ್ಬೂರು ರಚನೆಯ ಈ ಕೆಳಗಿನ ಹೋರಾಟ ಗೀತೆಯನ್ನು ಕೆವಿಎಸ್‌ನ ಗುರುಬಸವ ಮತ್ತು ಸಂಗಡಿಗರು ಹಾಡಿದರು.

ಬಿತ್ತುವ ಪ್ರೀತಿಯ ಅರ್ಥವ ಅರಿಯದೆ
ಗುಂಡು ಹೊಡೆದಿರಿ
ತೂರಿದ್ದು ಗೌರಿಗೆ ತಾಕಿದ್ದು ನಮ್ಮೆದೇಗೆ
ನೂರು ಗುಂಡುಗಳು ತೂರಿ ಬಂದರು
ಗುಡುಗುಡು ಗುಡುಗುಡು ಗುಡುಗುವೆವು

ಅಂದು ಬುದ್ಧ ಬಸವಣ್ಣ
ಇಂದು ಭೀಮನ ಮಕ್ಕಳು ನಾವಣ್ಣ
ಗಾಂಧಿಯಿಂದ ಗೌರಿಯವರೆಗೆ
ಶಾಂತಿ ಸಾರಿದವರು ಯಾರಣ್ಣ //ತೂರಿದ್ದು//

ಅಂದು ದಾಬೋಲ್ಕರ್ ಪನ್ಸಾರೆ
ಇಂದು ಕಲಬುರ್ಗಿ ಗೌರಿಯು
ಮುಂದೆ ನಾವಿರುವೆವು
ನಿಮ್ಮ ಗುಂಡಿಗೆ ಎದೆಗೊಟ್ಟು //ತೂರಿದ್ದು//

ಈ ಕಾರ್ಯಕ್ರಮದಲ್ಲಿ ಗೌರಿ ಲಂಕೇಶ್‌ ಅವರ ಸಹೋದರಿ ಕವಿತಾ ಲಂಕೇಶ್, ದಿನೇಶ್ ಅಮಿನ್ ಮಟ್ಟು, ಡಾ. ವಿಜಯಮ್ಮ, ಶಿವಸುಂದರ್, ಕೆ.ಬಾಲು, ವಿ.ಆರ್. ಕಾರ್ಪೆಂಟರ್, ಅಂಬಣ್ಣ ಅರೋಲಿಕರ್, ವಿ.ಎಸ್. ಶ್ರೀಧರ್, ದೊಡ್ಡಿಪಾಳ್ಯ ನರಸಿಂಹಮೂರ್ತಿ, ಕೆ.ಎಲ್. ಅಶೋಕ್, ನೂರ್ ಶ್ರೀಧರ್ ಮತ್ತು ರಾಜಲಕ್ಷ್ಮಿ ಅಂಕಲಗಿ, ಸುನೀಲ್ ಸಿರಸಂಗಿ, ಸಿರಿಮನೆ ನಾಗರಾಜ್, ಹೇಮಕ್ಕ ಸಿರಿಮನೆ ಸೇರಿದಂತೆ ಅನೇಕ ಗಣ್ಯರು, ಹೋರಾಟಗಾರರು, ಪತ್ರಕರ್ತರು ಹಾಗೂ ಗೌರಿ ಲಂಕೇಶ್‌ ಅಭಿಮಾನಿಗಳು ಭಾಗವಹಿಸಿದ್ದರು.

“ಒಬ್ಬ ಫ್ಯಾಸಿಸ್ಟ್‌ನ ಅಹಂಕಾರ ಭಾರತದ ಆತ್ಮಕ್ಕಿಂತ ದೊಡ್ಡದಾದದ್ದು ಯಾವಾಗ?”: ಸಂಜೀವ್ ಭಟ್ 7 ವರ್ಷಗಳ ಜೈಲು ಶಿಕ್ಷೆ ಪೂರ್ಣಗೊಳಿಸಿದ ಸಂದರ್ಭದಲ್ಲಿ ಪತ್ನಿ ಶ್ವೇತಾ ಭಟ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: ಚಿಂತಕ ಪರಕಾಲ ಪ್ರಭಾಕರ್‌ಗೆ ಚುನಾವಣಾ ಆಯೋಗದಿಂದ ನೋಟಿಸ್

ಅರ್ಥಶಾಸ್ತ್ರಜ್ಞ, ರಾಜಕೀಯ ವಿಶ್ಲೇಷಕ ಡಾ. ಪರಕಾಲ ಪ್ರಭಾಕರ್ ಅವರಿಗೂ ಈಗ ‘ವಿಶೇಷ ತೀವ್ರ ಪರಿಷ್ಕರಣೆ’ (SIR) ಪ್ರಕ್ರಿಯೆಯಡಿ ಚುನಾವಣಾ ಆಯೋಗದ ನೋಟಿಸ್ ಜಾರಿಯಾಗಿದೆ. ವೋಟರ್ ಐಡಿ ಪರಿಶೀಲನೆಯಲ್ಲಿ ‘Logical Discrepancy’ (ತಾರ್ಕಿಕ ಅಸಂಗತತೆ)...

ಕರ್ನಾಟಕ ಎಸ್‌ಐಆರ್: ಪದ್ಮಶ್ರೀ ಪುರಸ್ಕೃತ ಹರೇಕಳ ಹಾಜಬ್ಬರಿಗೆ ನೋಟಿಸ್ ನೀಡಿದ ಚುನಾವಣಾ ಆಯೋಗ

ಮಂಗಳೂರು: ಶೈಕ್ಷಣಿಕ ಕ್ಷೇತ್ರದಲ್ಲಿ ತಮ್ಮ ವಿಶಿಷ್ಟ ಸೇವೆಯ ಮೂಲಕ ದೇಶ-ವಿದೇಶಗಳಲ್ಲಿ ಗುರುತಿಸಿಕೊಂಡಿರುವ ಪದ್ಮಶ್ರೀ ಪುರಸ್ಕೃತ ಹರೇಕಳ ಹಾಜಬ್ಬ ಅವರಿಗೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಗೆ ಸಂಬಂಧಿಸಿದಂತೆ ಚುನಾವಣಾ ಆಯೋಗದ...

SIR ಸೂತ್ರದಿಂದ ಬದಲಾಗುತ್ತಾ ಬೆಂಗಳೂರಿನ 28 ಕ್ಷೇತ್ರಗಳ ಗೆಲುವಿನ ಸಮೀಕರಣ?

ರಾಜ್ಯ ರಾಜಕೀಯದ ಶಕ್ತಿಕೇಂದ್ರವಾದ ಬೆಂಗಳೂರಿನ 28 ವಿಧಾನಸಭಾ ಕ್ಷೇತ್ರಗಳಲ್ಲಿ ‘ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ (SIR)’ ಪ್ರಕ್ರಿಯೆಯು ಮಹತ್ವದ ರಾಜಕೀಯ ಮತ್ತು ಆಡಳಿತಾತ್ಮಕ ಚರ್ಚೆಯನ್ನು ಹುಟ್ಟುಹಾಕಿದೆ. ಎಸ್‌ಐಆರ್‌ಗೂ ಮುನ್ನ ನಗರದಲ್ಲಿದ್ದ ಸುಮಾರು 1.03...

ಮಣಿಪುರದಲ್ಲಿ ಹಿಂಸಾಚಾರಕ್ಕೆ 306 ಬಲಿ, 49 ಮಂದಿ ನಾಪತ್ತೆ: ವಿಧಾನಸಭೆಯಲ್ಲಿ ಗೃಹ ಸಚಿವರ ಸ್ಪಷ್ಟನೆ

ಇಂಫಾಲ್: ಮಣಿಪುರದಲ್ಲಿ 2023ರ ಮೇ ತಿಂಗಳಲ್ಲಿ ಭುಗಿಲೆದ್ದ ಜನಾಂಗೀಯ ಹಿಂಸಾಚಾರಕ್ಕೆ ಮೂರು ವರ್ಷಗಳಿಗೂ ಹೆಚ್ಚು ಕಾಲ ಕಳೆದಿದ್ದರೂ, ಅದರ ಪರಿಣಾಮದಿಂದ ರಾಜ್ಯ ಸಂಪೂರ್ಣವಾಗಿ ಹೊರಬಂದಿಲ್ಲ. ಹಿಂಸಾಚಾರ ಆರಂಭವಾದ ಬಳಿಕ ಇದುವರೆಗೆ ಕನಿಷ್ಠ 306...

ದಲಿತರ ಅಭಿವೃದ್ಧಿಗೆ ಮೀಸಲಿಟ್ಟ ನಿಧಿ ದುರ್ಬಳಕೆ; ಜನವಸತಿಯೇ ಇಲ್ಲದ ಜಾಗದಲ್ಲಿ ರೂ. 50 ಲಕ್ಷದ ಸಿ.ಸಿ. ರಸ್ತೆ ನಿರ್ಮಾಣ!

ಸಮಾಜ ಕಲ್ಯಾಣ ಇಲಾಖೆಯ 'ಪ್ರಗತಿ ಕಾಲೋನಿ' ಯೋಜನೆಯ ನಿಧಿ ದುರ್ಬಳಕೆಯಾಗಿರುವ ಆರೋಪ ಕೇಳಿಬಂದಿದ್ದು, ಜನವಸತಿಯೇ ಇಲ್ಲದ ಜಾಗದಲ್ಲಿ ರೂ. 50 ಲಕ್ಷ ವೆಚ್ಚದಲ್ಲಿ ಸಿಸಿ ರಸ್ತೆ ನಿರ್ಮಾಣ ಮಾಡಿರುವ ಪ್ರಕರಣ ಬೆಂಗಳೂರು...

SIR: ‘ಚುನಾವಣಾ ಆಯೋಗದಿಂದ ನೋಟಿಸ್‌’ ಇಲ್ಲದಿರುವ ದಾಖಲೆಗಳನ್ನು ಎಲ್ಲಿಂದಾ ತರೋದು? ಸಾರ್ವಜನಿಕರ ಪ್ರಶ್ನೆ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಚುನಾವಣಾ ಆಯೋಗವು ಬಳಸುತ್ತಿರುವ 'Logical Discrepancy' (ತಾರ್ಕಿಕ ವ್ಯತ್ಯಾಸ) ಎಂಬ ಸಾಫ್ಟ್‌ವೇರ್ ಆಧಾರಿತ ಪರಿಶೀಲನೆಯು ತಾಂತ್ರಿಕವಾಗಿ ದೋಷರಹಿತವೆಂದು ತೋರಿದರೂ, ವಾಸ್ತವದಲ್ಲಿ ಲಕ್ಷಾಂತರ ನೈಜ...

SIR ರಗಳೆ: ಕೊನೆಗೂ 43.81 ಲಕ್ಷ ಮತದಾರರ ನೋಟಿಸ್ ಪಟ್ಟಿ ಬಹಿರಂಗಪಡಿಸಿದ ಚುನಾವಣಾ ಆಯೋಗ

ಕರ್ನಾಟಕದಲ್ಲಿ ಭಾರಿ ಸದ್ದು ಮಾಡುತ್ತಿರುವ 'ವಿಶೇಷ ತೀವ್ರ ಪರಿಷ್ಕರಣೆ' (SIR) ಪ್ರಕ್ರಿಯೆಯಲ್ಲಿ ನೋಟಿಸ್‌ಗೆ ಗುರಿಯಾಗಿರುವ 43.81 ಲಕ್ಷ ಮತದಾರರ ಪಟ್ಟಿಯನ್ನು ರಾಜ್ಯ ಮುಖ್ಯ ಚುನಾವಣಾಧಿಕಾರಿ ಕಚೇರಿ ಕೊನೆಗೂ ತನ್ನ ಅಧಿಕೃತ ವೆಬ್‌ಸೈಟ್‌ನಲ್ಲಿ...

‘ಆರ್‌ಎಸ್‌ಎಸ್‌ ಅಡಗಿಕೊಂಡಿದೆ’: ಮೋಹನ್ ಭಾಗವತ್‌ ಯುಕೆ ಭೇಟಿ ವಿರೋಧಿಸಿ ಲಂಡನ್‌ನಲ್ಲಿ ಪ್ರತಿಭಟನೆ

ಲಂಡನ್: ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್‌ಎಸ್‌ಎಸ್) ಮುಖ್ಯಸ್ಥ ಮೋಹನ್ ಭಾಗವತ್ ಅವರ ಯುನೈಟೆಡ್ ಕಿಂಗ್‌ಡಮ್‌ ಭೇಟಿಯನ್ನು ವಿರೋಧಿಸಿ ಲಂಡನ್‌ನ ಪಾರ್ಲಿಮೆಂಟ್ ಸ್ಕ್ವೇರ್‌ನಲ್ಲಿ ನೂರಾರು ಜನರು ಪ್ರತಿಭಟನೆ ನಡೆಸಿದ್ದಾರೆ. ಭಾಗವತ್ ಅವರ ಯುಕೆ ಪ್ರವಾಸದ...

ಪಂಚಾಯಿತಿಯಲ್ಲಿ ಅಸ್ಪೃಶ್ಯತೆ ಆಚರಣೆ-ಪ್ರತ್ಯೇಕ ಟೀ ಲೋಟ; ಆತ್ಮಹತ್ಯೆಗೆ ಯತ್ನಿಸಿದ ಪೌರಕಾರ್ಮಿಕ ಮಹಿಳೆ

ಕೆಲಸದ ಸ್ಥಳದಲ್ಲಿ ನಡೆಯುತ್ತಿದ್ದ ಅಸ್ಪೃಶ್ಯತೆ ಆಚರಣೆಯಿಂದ ಮನನೊಂದ 37 ವರ್ಷದ ದಲಿತ ನೈರ್ಮಲ್ಯ ಕಾರ್ಮಿಕರೊಬ್ಬರು ಕ್ರಿಮಿನಾಶಕ ಸೇವಿಸಿ ಆತ್ಮತ್ಯೆಗೆ ಯತ್ನಿಸಿರುವ ಘಟನೆ ತಮಿಳುನಾಡಿನ ಮೇಲೂರು ಸಮೀಪದ ಕಂಬೂರ್ ಪಂಚಾಯತ್‌ನಲ್ಲಿ ಬೆಳಕಿಗೆ ಬಂದಿದೆ. ...

ಗೌರಿ, ಗಾಂಧಿಯನ್ನು ಕೊಂದದ್ದು ಬರೀ ಬುಲೆಟ್‌ಗಳಲ್ಲ, ಕೋಮುವಾದಿ ಸಿದ್ಧಾಂತ: ವಿದ್ಯಾರ್ಥಿ ನಾಯಕಿ ದಾನಿಶ್ ಅಲಿ

"ಗಾಂಧಿ, ಗೌರಿಯನ್ನು ಕೊಂದಿದ್ದು ಬರೀ ಬುಲೆಟ್‌ಗಳಲ್ಲ, ಅದು ಸಿದ್ಧಾಂತ ಎಂಬುದನ್ನು ನಾವು ನೆನಪಿಡಬೇಕು. ಈ ಸಿದ್ಧಾಂತಗಳ ವಿರುದ್ಧವಾಗಿ ನಾವು ಇಂದು ಹೋರಾಡಬೇಕಿದೆ” ಎಂದು ದೆಹಲಿಯ ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ (JNU) ವಿದ್ಯಾರ್ಥಿ ನಾಯಕಿ...