Homeರಾಷ್ಟ್ರೀಯವಿಶ್ವದ ನಾಲ್ಕನೇ ಶ್ರೀಮಂತ ವ್ಯಕ್ತಿಯಾಗಿ ಹೊರ ಹೊಮ್ಮಿದ ಪ್ರಧಾನಿ ಮೋದಿ ಆಪ್ತ ಉದ್ಯಮಿ ಗೌತಮ್ ಅದಾನಿ

ವಿಶ್ವದ ನಾಲ್ಕನೇ ಶ್ರೀಮಂತ ವ್ಯಕ್ತಿಯಾಗಿ ಹೊರ ಹೊಮ್ಮಿದ ಪ್ರಧಾನಿ ಮೋದಿ ಆಪ್ತ ಉದ್ಯಮಿ ಗೌತಮ್ ಅದಾನಿ

- Advertisement -
- Advertisement -

ಪ್ರಧಾನಿ ಮೋದಿ ಆಪ್ತ, ಉದ್ಯಮಿ ಗೌತಮ್ ಅದಾನಿ ಅವರು ವಿಶ್ವದ ನಾಲ್ಕನೇ ಶ್ರೀಮಂತ ವ್ಯಕ್ತಿಯಾಗಿ ಹೊರಹೊಮ್ಮಿದ್ದಾರೆ. ಫೋರ್ಬ್ಸ್‌ನ ರಿಯಲ್‌ ಟೈಮ್ ಬಿಲಿಯನೇರ್‌ಗಳ ಪಟ್ಟಿಯ ಪ್ರಕಾರ ಅದಾನಿ ಗ್ರೂಪ್ ಮುಖ್ಯಸ್ಥ ಗೌತಮ್ ಅದಾನಿ ಅವರು ಮೈಕ್ರೋಸಾಫ್ಟ್ ಸಹಸಂಸ್ಥಾಪಕ ಬಿಲ್ ಗೇಟ್ಸ್‌ರನ್ನು ಹಿಂದಿಕ್ಕಿ 115.5 ಬಿಲಿಯನ್ ಡಾಲರ್‌ ಮೌಲ್ಯದ ಆಸ್ತಿಯೊಂದಿಗೆ ವಿಶ್ವದ 4 ನೇ ಶ್ರೀಮಂತ ವ್ಯಕ್ತಿಯಾಗಿದ್ದಾರೆ.

ಫೋರ್ಬ್ಸ್ ಅಂಕಿಅಂಶಗಳ ಪ್ರಕಾರ, ಅದಾನಿ ಅವರ ಸಂಪತ್ತು 2.9 ಬಿಲಿಯನ್ ಡಾಲರ್‌‌ಗೆ ಏರಿಕೆಯಾಗಿದೆ. ಕಳೆದ ವಾರ ಮೈಕ್ರೋಸಾಫ್ಟ್ ಸಂಸ್ಥಾಪಕ ಬಿಲ್ ಗೇಟ್ಸ್ ಅವರು ತಮ್ಮ ಲಾಭರಹಿತ ಸಂಸ್ಥೆಯಾದ ಬಿಲ್ & ಮೆಲಿಂಡಾ ಗೇಟ್ಸ್ ಫೌಂಡೇಶನ್‌ಗೆ ತಮ್ಮ ಸಂಪತ್ತಿನ 20 ಬಿಲಿಯನ್ ಡಾಲರ್‌ ದೇಣಿಗೆಯನ್ನು ಘೋಷಿಸಿದ ನಂತರ ಬಿಲಿಯನೇರ್‌ಗಳ ಶ್ರೇಯಾಂಕಗಳು ಬದಲಾಗಿವೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಇಷ್ಟೆ ಅಲ್ಲದೆ ರಿಲಯನ್ಸ್ ಗ್ರೂಪ್ ಮುಖ್ಯಸ್ಥ ಮುಖೇಶ್ ಅಂಬಾನಿ 87.7 ಬಿಲಿಯನ್ ಡಾಲರ್‌ ಸಂಪತ್ತನ್ನು ಹೊಂದಿದ್ದು, ಫೋರ್ಬ್ಸ್ ಪಟ್ಟಿಯಲ್ಲಿ 10 ನೇ ಸ್ಥಾನದಲ್ಲಿದ್ದಾರೆ.

ಅದಾಗ್ಯೂ ಬ್ಲೂಮ್‌ಬರ್ಗ್ ಬಿಲಿಯನೇರ್ಸ್‌ ಪಟ್ಟಿಯಲ್ಲಿ ಅದಾನಿ ಇನ್ನೂ 5 ನೇ ಸ್ಥಾನದಲ್ಲಿದ್ದಾರೆ. ಬ್ಲೂಮ್‌ಬರ್ಗ್ ರಿಯಲ್ ಟೈಮ್‌ ಮಾಹಿತಿಯ ಪ್ರಕಾರ ಅವರ ಸಂಪತ್ತು 110 ಶತಕೋಟಿ ಡಾಲರ್‌ ಇತ್ತು.

ಇದನ್ನೂ ಓದಿ: ಅದಾನಿಗೆ ಗುತ್ತಿಗೆ ನೀಡಲು ಶ್ರೀಲಂಕಾ ಅಧ್ಯಕ್ಷರ ಮೇಲೆ ಮೋದಿ ಒತ್ತಡ; ಆರೋಪ ಮಾಡಿದ್ದ ಅಧಿಕಾರಿ ರಾಜೀನಾಮೆ

ಅದಾನಿ ಗ್ರೂಪ್‌‌‌ ವ್ಯವಹಾರಗಳು ಮೂಲಸೌಕರ್ಯ, ಸರಕುಗಳು, ವಿದ್ಯುತ್ ಉತ್ಪಾದನೆ ಮತ್ತು ಪ್ರಸರಣ ಮತ್ತು ರಿಯಲ್ ಎಸ್ಟೇಟ್ ಅನ್ನು ವ್ಯಾಪಿಸಿದೆ. ಅದಾನಿ ತಮ್ಮ 60 ನೇ ಹುಟ್ಟುಹಬ್ಬದಂದು ಸಾಮಾಜಿಕ ಉದ್ದೇಶಗಳಿಗಾಗಿ 60,000 ಕೋಟಿ ರೂ. ನೀಡಿದ್ದರು. ಅದಾನಿ ಫೌಂಡೇಶನ್ ನಿರ್ವಹಣೆಯ ಅಡಿಯಲ್ಲಿ ಈ ದೇಣಿಗೆಯನ್ನು ಆರೋಗ್ಯ, ಶಿಕ್ಷಣ ಮತ್ತು ಕೌಶಲ್ಯ ಅಭಿವೃದ್ಧಿಗಾಗಿ ಬಳಸಲಾಗುತ್ತದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

2,000 ರೂ.ವರೆಗಿನ UPI ಪಾವತಿಗೆ ಶುಲ್ಕವಿಲ್ಲ ಎಂದ ಕೇಂದ್ರ ಸರ್ಕಾರ

ಡಿಜಿಟಲ್ ಪಾವತಿ ಬಳಸುವ ಕೋಟ್ಯಂತರ ಸಾಮಾನ್ಯ ಜನರಿಗೆ ಕೇಂದ್ರ ಹಣಕಾಸು ಸಚಿವಾಲಯ ಮಹತ್ವದ ಸ್ಪಷ್ಟನೆ ನೀಡಿದ್ದು, 2,000 ರೂಪಾಯಿವರೆಗಿನ ಯುಪಿಐ (UPI) ವಹಿವಾಟುಗಳಿಗೆ ಯಾವುದೇ ರೀತಿಯ ಶುಲ್ಕ ವಿಧಿಸುವಂತಿಲ್ಲ ಎಂದು ಅಧಿಸೂಚನೆ ಹೊರಡಿಸಿದೆ....

ಯಾದಗಿರಿ| ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತರ ಮೇಲೆ ಮಾರಣಾಂತಿಕ ಹಲ್ಲೆ

ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತ ಸಮುದಾಯದ ಭಕ್ತರ ಮೇಲೆ ಸವರ್ಣೀಯರು ಮಾರಣಾಂತಿಕ ಹಲ್ಲೆ ನಡೆದಿರುವ ಆರೋಪ ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಗುರುಸುಣಿಗಿ ಗುಡ್ಡದಲ್ಲಿ ಕೇಳಿಬಂದಿದೆ. ಚಾಮನಾಳ ಗ್ರಾಮದ ದಲಿತ ಭಕ್ತರನ್ನು ಗುರಿಯಾಗಿಸಿಕೊಂಡು ಗುರುಸುಣಿಗಿ...

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...