Homeಮುಖಪುಟಛತ್ತೀಸ್‌ಗಢದಲ್ಲಿ ₹65 ಸಾವಿರ ಕೋಟಿ ಹೂಡಿಕೆ ಮಾಡುವುದಾಗಿ ಗೌತಮ್ ಅದಾನಿ ಘೋಷಣೆ

ಛತ್ತೀಸ್‌ಗಢದಲ್ಲಿ ₹65 ಸಾವಿರ ಕೋಟಿ ಹೂಡಿಕೆ ಮಾಡುವುದಾಗಿ ಗೌತಮ್ ಅದಾನಿ ಘೋಷಣೆ

ಛತ್ತೀಸ್‌ಗಢದಲ್ಲಿ ₹65,000 ಕೋಟಿ ಹೂಡಿಕೆ ಮಾಡುವುದಾಗಿ ಅದಾನಿ ಗ್ರೂಪ್ ಘೋಷಿಸಿದೆ. ಇದೇ ವೇಳೆ ಅಲ್ಲಿ 14 ಮಂದಿ ನಕ್ಸಲರ ಹತ್ಯೆಯಾಗಿದೆ.

- Advertisement -
- Advertisement -

ಕೈಗಾರಿಕೋದ್ಯಮಿ ಗೌತಮ್ ಅದಾನಿ ಭಾನುವಾರ (ಜ.12) ಛತ್ತೀಸ್‌ಗಢ ಮುಖ್ಯಮಂತ್ರಿ ವಿಷ್ಣು ದೇವ್ ಸಾಯಿ ಅವರನ್ನು ಭೇಟಿ ಮಾಡಿ ಅದಾನಿ ಗ್ರೂಪ್‌ನ ಇಂಧನ ಮತ್ತು ಸಿಮೆಂಟ್ ಯೋಜನೆಗಳಲ್ಲಿ ₹65,000 ಕೋಟಿ ಹೂಡಿಕೆ ಮಾಡುವುದಾಗಿ ಘೋಷಿಸಿದ್ದಾರೆ.

ಛತ್ತೀಸ್‌ಗಢ ರಾಜಧಾನಿ ರಾಯ್‌ಪುರದಲ್ಲಿರುವ ಮುಖ್ಯಮಂತ್ರಿಯ ಅಧಿಕೃತ ನಿವಾಸದಲ್ಲಿ ಅದಾನಿ ಅವರು ಸಾಯಿ ಅವರನ್ನು ಭೇಟಿಯಾದರು ಎಂದು ರಾಜ್ಯದ ಸಾರ್ವಜನಿಕ ಸಂಪರ್ಕ ಇಲಾಖೆ ಬಿಡುಗಡೆ ಮಾಡಿದ ಹೇಳಿಕೆಯಲ್ಲಿ ತಿಳಿಸಿದೆ.

ಸಿಎಂ ಭೇಟಿ ವೇಳೆ, ಅದಾನಿ ಕಂಪನಿಯು ಛತ್ತೀಸ್‌ಗಢದ ರಾಯ್‌ಪುರ, ಕೊರ್ಬಾ ಮತ್ತು ರಾಯ್‌ಗಢದಲ್ಲಿರುವ ತನ್ನ ವಿದ್ಯುತ್ ಸ್ಥಾವರಗಳನ್ನು ವಿಸ್ತರಿಸಲು ₹60,000 ಕೋಟಿ ಹೂಡಿಕೆ ಮಾಡುವುದಾಗಿ ಗೌತಮ್ ಅದಾನಿ ಘೋಷಿಸಿದ್ದಾರೆ. ಈ ವಿಸ್ತರಣೆಯು ಛತ್ತೀಸ್‌ಗಢದ ಒಟ್ಟು ವಿದ್ಯುತ್ ಉತ್ಪಾದನಾ ಸಾಮರ್ಥ್ಯವನ್ನು ಹೆಚ್ಚುವರಿಯಾಗಿ 6,120 ಮೆಗಾವ್ಯಾಟ್‌ಗಳಷ್ಟು ಹೆಚ್ಚಿಸುತ್ತದೆ ಎಂದು ಹೇಳಿಕೆ ತಿಳಿಸಿದೆ.

ಹೆಚ್ಚುವರಿಯಾಗಿ, ಗೌತಮ್ ಅದಾನಿಯವರು ರಾಜ್ಯದಲ್ಲಿನ ತಮ್ಮ ಸಮೂಹದ ಸಿಮೆಂಟ್ ಸ್ಥಾವರಗಳ ಅಭಿವೃದ್ಧಿ ಮತ್ತು ವಿಸ್ತರಣೆಗಾಗಿ ₹5,000 ಕೋಟಿ ನೀಡುವುದಾಗಿ ಘೋಷಣೆ ಮಾಡಿದ್ದಾರೆ.

ಮುಖ್ಯಮಂತ್ರಿಯವರ ಸಲಹೆಯ ಮೇರೆಗೆ, ಅದಾನಿ ಕಂಪನಿಯು ಮುಂದಿನ ನಾಲ್ಕು ವರ್ಷಗಳಲ್ಲಿ ಕಾರ್ಪೊರೇಟ್ ಸಾಮಾಜಿಕ ಜವಾಬ್ದಾರಿ (ಸಿಎಸ್‌ಆರ್) ಅಡಿಯಲ್ಲಿ ಶಿಕ್ಷಣ, ಆರೋಗ್ಯ ರಕ್ಷಣೆ, ಕೌಶಲ್ಯ ಅಭಿವೃದ್ಧಿ ಮತ್ತು ಪ್ರವಾಸೋದ್ಯಮದ ಉಪಕ್ರಮಗಳನ್ನು ಬೆಂಬಲಿಸಲು ರಾಜ್ಯ ಸರ್ಕಾರಕ್ಕೆ ₹10,000 ಕೋಟಿ ಅನುದಾನ ನೀಡುವುದಾಗಿ ಭರವಸೆ ನೀಡಿದೆ ಎಂದು ಹೇಳಿಕೆ ತಿಳಿಸಿದೆ.

ರಕ್ಷಣಾ ಸಂಬಂಧಿತ ಉಪಕರಣಗಳ ತಯಾರಿಕೆ ಮತ್ತು ದತ್ತಾಂಶ ಕೇಂದ್ರಗಳನ್ನು ಸ್ಥಾಪಿಸುವುದು ಹಾಗೂ ಛತ್ತೀಸ್‌ಗಢದಲ್ಲಿ ಜಾಗತಿಕ ಸಾಮರ್ಥ್ಯ ಕೇಂದ್ರವನ್ನು ಸ್ಥಾಪಿಸುವಲ್ಲಿ ಸಂಭಾವ್ಯ ಸಹಯೋಗಗಳ ಬಗ್ಗೆಯೂ ಗೌಮ್ ಅದಾನಿ ಮತ್ತು ಸಿಎಂ ವಿಷ್ಣು ದೇವ್ ಸಾಯಿ ನಡುವೆ ಚರ್ಚೆ ನಡೆದಿದೆ ಎಂದು ತಿಳಿದು ಬಂದಿದೆ.

ಐವರು ನಕ್ಸಲರ ಹತ್ಯೆ

ಛತ್ತೀಸ್‌ಗಢದ ಬಿಜಾಪುರ ಜಿಲ್ಲೆಯಲ್ಲಿ ಭದ್ರತಾ ಪಡೆಯೊಂದಿಗೆ ಭಾನುವಾರ (ಜ.12) ನಡೆದ ಗುಂಡಿನ ಚಕಮಕಿಯಲ್ಲಿ ಐವರು ನಕ್ಸಲರು ಹತರಾಗಿದ್ದಾರೆ. ಮೃತರಲ್ಲಿ ಇಬ್ಬರು ಮಹಿಳೆಯರು ಎಂದು ವರದಿಯಾಗಿದೆ. ಇದರೊಂದಿಗೆ ರಾಜ್ಯದಲ್ಲಿ ಈ ವರ್ಷ ಇದುವರೆಗೆ ಪ್ರತ್ಯೇಕ ಎನ್‌ಕೌಂಟರ್‌ಗಳಲ್ಲಿ 14 ಮಂದಿ ನಕ್ಸಲರು ಹತರಾಗಿದ್ದಾರೆ.

ಭದ್ರತಾ ಪಡೆಯ ಜಂಟಿ ತಂಡ ನಕ್ಸಲ್ ನಿಗ್ರಹ ಕಾರ್ಯಾಚರಣೆಯಲ್ಲಿ ತೊಡಗಿದ್ದಾಗ ಇಂದ್ರಾವತಿ ರಾಷ್ಟ್ರೀಯ ಉದ್ಯಾನ ಪ್ರದೇಶದ ಅರಣ್ಯದಲ್ಲಿ ಬೆಳಿಗ್ಗೆ ಗುಂಡಿನ ಚಕಮಕಿ ನಡೆಯಿತು ಎಂದು ಬಸ್ತಾರ್ ವಲಯ ಐಜಿಪಿ ಸುಂದರರಾಜ್ ಪಿ ತಿಳಿಸಿದ್ದಾರೆ.

ಮಣಿಪುರ| ಉಗ್ರಗಾಮಿ ಗುಂಪಿಗೆ ₹6 ಕೋಟಿ ನೀಡಲಾಗಿದೆ ಎಂದು ಆರೋಪಿಸಿದ ಕಾಂಗ್ರೆಸ್ 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವಿದ್ಯಾರ್ಥಿಗಳ ಮೇಲಿನ ಪೊಲೀಸ್ ದೌರ್ಜನ್ಯ: ವಿಚಾರಣೆ ತಿರಸ್ಕರಿಸಿದ ಸುಪ್ರೀಂ; “ವಿಡಿಯೋ ನೋಡಲು ನಮಗೆ ಆಸಕ್ತಿಯೂ ಇಲ್ಲ, ಸಮಯವೂ ಇಲ್ಲ” ಎಂದ ನ್ಯಾಯಮೂರ್ತಿ ಸೂರ್ಯಕಾಂತ್

ನವದೆಹಲಿ: ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಶಾಂತಿಯುತವಾಗಿ ಹೋರಾಡುತ್ತಿದ್ದ ಯುವ ಸಮೂಹದ ಮೇಲೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯದ ವಿರುದ್ಧ ನ್ಯಾಯದ ನಿರೀಕ್ಷೆಯಲ್ಲಿದ್ದ ವಿದ್ಯಾರ್ಥಿಗಳಿಗೆ ದೇಶದ ಅತ್ಯುನ್ನತ ನ್ಯಾಯಾಲಯದಿಂದ...

ರಾಹುಲ್ ಗಾಂಧಿ ವಿದ್ಯಾರ್ಥಿಗಳನ್ನು ‘ರಾಜಕೀಯ ದಾಳ’ವಾಗಿ ಬಳಸುತ್ತಿದ್ದಾರೆ ಎಂದ ಧರ್ಮೇಂದ್ರ ಪ್ರಧಾನ್ ವಿರುದ್ಧ ವ್ಯಾಪಕ ಆಕ್ರೋಶ

ನವದೆಹಲಿ: ದೇಶಾದ್ಯಂತ ನೀಟ್ (NEET) ಪರೀಕ್ಷೆಯ ಅಕ್ರಮಗಳು, ಪ್ರಶ್ನೆಪತ್ರಿಕೆ ಸೋರಿಕೆ ಹಾಗೂ ಶಿಕ್ಷಣ ಇಲಾಖೆಯ ಸರಣಿ ವೈಫಲ್ಯಗಳನ್ನು ಖಂಡಿಸಿ ವಿದ್ಯಾರ್ಥಿಗಳು ಮತ್ತು ವಿರೋಧ ಪಕ್ಷಗಳು ತೀವ್ರ ಪ್ರತಿಭಟನೆ ನಡೆಸುತ್ತಿದ್ದು, ಶಿಕ್ಷಣ ಸಚಿವ ಧರ್ಮೇಂದ್ರ...

ಸಿಜೆಪಿ ಪ್ರತಿಭಟನಾಕಾರರ ಮೇಲೆ ಪೆಲೆಟ್ ಗನ್ ಬಳಕೆ, ವಿದ್ಯುತ್ ಲಾಠಿ ಪ್ರಹಾರ: ಆರೋಪ ನಿರಾಕರಿಸಿದ ಪೊಲೀಸರು

ಸೋಮವಾರ (ಜುಲೈ 20) ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಕರೆ ನೀಡಿದ್ದ ಸಂಸತ್ ಚಲೋ ಮೆರವಣಿ ಸಂದರ್ಭದಲ್ಲಿ ನಡೆದ ಪೊಲೀಸರ ದೌರ್ಜನ್ಯದಲ್ಲಿ ಗಾಯಗೊಂಡ 80 ಪ್ರತಿಭಟನಾಕಾರರಲ್ಲಿ ಕನಿಷ್ಠ ಒಬ್ಬರಿಗೆ ಪೆಲೆಟ್ ಗನ್ ಗಾಯಗಳಾಗಿವೆ...

ಪ್ರತಿಭಟನಾನಿರತ ಮಹಿಳೆಯ ಕೆನ್ನೆಗೆ ಹೊಡೆದ ದೆಹಲಿ ಪೊಲೀಸ್ ಅಧಿಕಾರಿ ಸಂದೀಪ್ ಲಂಬಾ: ವಿಡಿಯೋ ವೈರಲ್ ನಂತರ ವ್ಯಾಪಕ ಟೀಕೆ

ದೆಹಲಿ: ಶಾಂತಿಯುತವಾಗಿ ತಮ್ಮ ಹಕ್ಕುಗಳಿಗಾಗಿ ಹೋರಾಡುತ್ತಿದ್ದ ಪ್ರತಿಭಟನಾಕಾರರ ಮೇಲೆ ದೆಹಲಿ ಪೊಲೀಸರು ನಡೆಸಿದ ಕ್ರೂರ ದಮನ ಕಾರ್ಯಾಚರಣೆಯ ಭೀಕರ ಮುಖವಾಡವೊಂದು ಮತ್ತೆ ಜಗಜ್ಜಾಹೀರಾಗಿದೆ. ಸೋಮವಾರ ಸಂಸತ್ತಿನ ಮೆರವಣಿಗೆಯಲ್ಲಿ ಭಾಗವಹಿಸಿದ್ದ ಪ್ರತಿಭಟನಾಕಾರರನ್ನು ಹತ್ತಿಕ್ಕುವ ನೆಪದಲ್ಲಿ,...

‘ಪೊಲೀಸರನ್ನು ನಿಯಂತ್ರಿಸದಿದ್ದರೆ ಜರ್ಮನಿಯ ನಾಜಿಗಳಂತೆ ಆಗಬಹುದು’: ದಲಿತ ವ್ಯಕ್ತಿಯ ಮೇಲಿನ ದೌರ್ಜನ್ಯ ಪ್ರಕರಣದಲ್ಲಿ ಪಾಟ್ನಾ ಹೈಕೋರ್ಟ್ ಕಳವಳ

ದಲಿತ ವ್ಯಕ್ತಿಯೊಬ್ಬರ ಜಾತಿ ತಿಳಿದ ನಂತರ ಅವರ ಮೇಲೆ ಕ್ರೂರವಾಗಿ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಬಿಹಾರದ ಮಾಜಿ ಪೊಲೀಸ್ ಅಧಿಕಾರಿಯ ವಿರುದ್ಧ ತಕ್ಷಣವೇ ಎಫ್‌ಐಆರ್ (FIR) ದಾಖಲಿಸುವಂತೆ ಪಾಟ್ನಾ ಹೈಕೋರ್ಟ್ ನಿರ್ದೇಶಿಸಿದೆ....

“ಎಷ್ಟೊಂದು ದುರಹಂಕಾರ!”: ಜೆ.ಪಿ.ನಡ್ಡಾ ಹೇಳಿಕೆಗೆ ಕಪಿಲ್ ಸಿಬಲ್ ತೀವ್ರ ಆಕ್ಷೇಪ; ಪ್ರತಿಭಟನಾನಿರತ ಸಿಜೆಪಿ ಬೆಂಬಲಿಸಿ ವೀಡಿಯೋ ಸಂದೇಶ

ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಕ್ರಾಂತಿಕಾರಿ ಜಿರಳೆ ಜನತಾ ಪಕ್ಷ (ಸಿಜೆಪಿ) ನಡೆಸುತ್ತಿರುವ ವಿದ್ಯಾರ್ಥಿ ಪ್ರತಿಭಟನೆಯ ವಿಚಾರದಲ್ಲಿ ಕೇಂದ್ರ ಸರ್ಕಾರದ ನಡೆಗೆ ದೇಶಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದೆ. ಈ ನಡುವೆ ಕೇಂದ್ರ ಸಚಿವ ಜೆ.ಪಿ....

ವಿದ್ಯಾರ್ಥಿಗಳ ಮೇಲೆ ಪೊಲೀಸ್ ದೌರ್ಜನ್ಯ: ಮೋದಿ-ಅಮಿತ್ ಶಾ ರಾಜೀನಾಮೆಗೆ ರಾಹುಲ್ ಗಾಂಧಿ ಆಗ್ರಹ

ನೀಟ್‌ ಪ್ರಶ್ನೆ ಪತ್ರಿಕೆ ಸೋರಿಕೆ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ 'ಸಂಸತ್ ಚಲೋ' ಹಮ್ಮಿಕೊಂಡಿದ್ದ ವಿದ್ಯಾರ್ಥಿಗಳ ಮೇಲೆ ನಡೆದ ಪೊಲೀಸ್ ದೌರ್ಜನ್ಯವನ್ನು ಕಾಂಗ್ರೆಸ್ ನಾಯಕ ರಾಹುಲ್...

ಕೇಂದ್ರ ಸಚಿವ ಜೆ.ಪಿ.ನಡ್ಡಾ ಅವರನ್ನು ಭೇಟಿಯಾದ ಸಿಜೆಪಿ ನಿಯೋಗ; ಮನವಿ ಪತ್ರ ಸಲ್ಲಿಕೆ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಆಗ್ರಹಿಸಿ ನವದೆಹಲಿಯಲ್ಲಿ ಪ್ರತಿಭಟನೆ ತೀವ್ರಗೊಂಡಿರುವ ಬೆನ್ನಲ್ಲೇ ಇಂದು ಕೇಂದ್ರ ಸಚಿವ ಜೆಪಿ ನಡ್ಡಾ ಅವರನ್ನು ಸಿಜೆಪಿ ಸದಸ್ಯರಾದ ಸೌರವ್ ದಾಸ್ ಮತ್ತು ಅಶುತೋಷ್ ರಂಕಾ...

‘ಸಂಸತ್ ಚಲೋ’: ‘ಸೋನಮ್ ವಾಂಗ್ಚುಕ್ ಪತ್ನಿ ಮೇಲೆ ದೆಹಲಿ ಪೊಲೀಸರಿಂದ ಹಲ್ಲೆ’: ವಿದ್ಯಾರ್ಥಿಗಳ ಮೇಲೂ ಲಾಠಿ ಚಾರ್ಜ್  

ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ಆಯೋಜಿಸಲಾಗಿದ್ದ ‘ಸಂಸದ್ ಚಲೋ’ ಮೆರವಣಿಗೆಯ ವೇಳೆ ಶಿಕ್ಷಣ ತಜ್ಞ ಹಾಗೂ ಲಡಾಖ್ ಹೋರಾಟಗಾರ ಸೋನಮ್ ವಾಂಗ್ಚುಕ್ ಅವರ ಪತ್ನಿ ಗೀತಾಂಜಲಿ ಜೆ. ಆಂಗ್ಮೋ ಸೇರಿದಂತೆ ಹಲವಾರು ಪ್ರತಿಭಟನಾಕಾರರ ಮೇಲೆ...

ಕನಿಷ್ಠ 20 ಸಾವಿರ ‘ಕಾಕ್ರೋಚ್‌’ಗಳಿಂದ ಸಂಸತ್ತಿಗೆ ಮೆರವಣಿಗೆ; ವಿದ್ಯಾರ್ಥಿಗಳ ಮೇಲೆ ಪೊಲೀಸರಿಂದ ಲಾಠಿಚಾರ್ಜ್ – ಅಶ್ರುವಾಯು

ಧರ್ಮೇಂದ್ರ ಪ್ರಧಾನ್ ರಾಜೀನಾಮಗೆ ಒತ್ತಾಯಿಸಿ ಮುಂಗಾರು ಅಧಿವೇಶನದ ಮೊದಲ ದಿನದಂದು ಸಂಸತ್ತಿಗೆ ಮೆರವಣಿಗೆ ನಡೆಸಲು ದೆಹಲಿಯಲ್ಲಿ ಜಮಾಯಿಸಿದ್ದ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ಸಾವಿರಾರು ಬೆಂಬಲಿಗರನ್ನು ಚದುರಿಸಲು ದೆಹಲಿ ಪೊಳಿಸರು ಅಶ್ರುವಾಯು ಶೆಲ್‌ಗಳನ್ನು...