Homeಮುಖಪುಟಎಲ್ಗಾರ್ ಪರಿಷತ್ ಪ್ರಕರಣ: ಗೌತಮ್ ನವ್ಲಾಖಾ ಬಿಡುಗಡೆ; ಇನ್ನೆಷ್ಟು ಮಂದಿ ಜೈಲಿನಲ್ಲಿದ್ದಾರೆ?

ಎಲ್ಗಾರ್ ಪರಿಷತ್ ಪ್ರಕರಣ: ಗೌತಮ್ ನವ್ಲಾಖಾ ಬಿಡುಗಡೆ; ಇನ್ನೆಷ್ಟು ಮಂದಿ ಜೈಲಿನಲ್ಲಿದ್ದಾರೆ?

- Advertisement -
- Advertisement -

ಎಲ್ಗಾರ್ ಪರಿಷತ್ ಪ್ರಕರಣದಲ್ಲಿ ನವಿ ಮುಂಬೈನಲ್ಲಿ ಗೃಹಬಂಧನದಲ್ಲಿದ್ದ ಗೌತಮ್ ನವ್ಲಾಖಾ ಅವರನ್ನು ಶನಿವಾರ ತಡರಾತ್ರಿ 8:30ರ ಸುಮಾರಿಗೆ ಬಂಧನದಿಂದ ಬಿಡುಗಡೆ ಮಾಡಲಾಗಿದೆ.

ಎಲ್ಗಾರ್ ಪರಿಷತ್ ಪ್ರಕರಣದಲ್ಲಿ ಮಾನವ ಹಕ್ಕುಗಳ ಕಾರ್ಯಕರ್ತ ಗೌತಮ್ ನವ್ಲಾಖಾ ಅವರಿಗೆ ನೀಡಲಾಗಿದ್ದ ಜಾಮೀನಿನ ಮೇಲಿನ ತಡೆಯನ್ನು ಸುಪ್ರೀಂ ಕೋರ್ಟ್ ಮೇ 14 ರಂದು ತೆರವುಗೊಳಿಸಿತ್ತು. ಇದರ ಬೆನ್ನಲ್ಲಿ ಗೃಹ ಬಂಧನದಿಂದ ಬಿಡುಗಡೆಯಾಗಿ ಗೌತಮ್ ನವ್ಲಾಖಾ ಕುಟುಂಬ ವರ್ಗವನ್ನು ಸೇರಿಕೊಂಡಿದ್ದಾರೆ.

ನವ್ಲಾಖಾ ಪರ ಹಿರಿಯ ವಕೀಲ ನಿತ್ಯಾ ರಾಮಕೃಷ್ಣನ್ ವಾದ ಮಂಡಿಸಿದರೆ, ಹೆಚ್ಚುವರಿ ಸಾಲಿಸಿಟರ್ ಜನರಲ್ ಎಸ್.ವಿ. ರಾಜು ರಾಷ್ಟ್ರೀಯ ತನಿಖಾ ಸಂಸ್ಥೆ ಪರವಾಗಿ ಕೋರ್ಟ್‌ನಲ್ಲಿ ವಾದವನ್ನು ಮಂಡಿಸಿದ್ದಾರೆ.

ಬಾಂಬೆ ಹೈಕೋರ್ಟ್ ಕಳೆದ ವರ್ಷ ಡಿಸೆಂಬರ್ 19ರಂದು ನವ್ಲಾಖಾಗೆ ಜಾಮೀನು ನೀಡಿತ್ತು, ಆದರೆ ರಾಷ್ಟ್ರೀಯ ತನಿಖಾ ಸಂಸ್ಥೆ ಸುಪ್ರೀಂಕೋರ್ಟ್‍ಗೆ ಮೇಲ್ಮನವಿ ಸಲ್ಲಿಸುವ ಸಾಧ್ಯತೆ ಹಿನ್ನೆಲೆಯಲ್ಲಿ ತನ್ನ ತೀರ್ಪಿಗೆ ಮೂರು ವಾರ ತಡೆಯಾಜ್ಞೆ ನೀಡಿತ್ತು. ಗೌತಮ್ ನವ್ಲಾಖಾ ಅವರನ್ನು 2020ರ ಏಪ್ರಿಲ್ 14ರಂದು ಬಂಧಿಸಲಾಗಿದೆ. 2022ರ ನ.19ರಿಂದ ಅವರು ಮುಂಬೈನಲ್ಲಿ ಗೃಹಬಂಧನದಲ್ಲಿದ್ದರು.

ಎಲ್ಗರ್ ಪರಿಷತ್ ಪ್ರಕರಣದಲ್ಲಿ 16 ಮಾನವ ಹಕ್ಕುಗಳ ಕಾರ್ಯಕರ್ತರು, ವಕೀಲರು, ಬರಹಗಾರರು ಮತ್ತು ಶಿಕ್ಷಣ ತಜ್ಞರನ್ನು ಬಂಧಿಸಲಾಗಿತ್ತು. ಇದು ತೀವ್ರ ಟೀಕೆಗೆ ಒಳಗಾಗಿತ್ತು. ಆರೋಪಿಗಳ ಎಲೆಕ್ಟ್ರಾನಿಕ್ ಸಾಧನಗಳಲ್ಲಿ ಪುರಾವೆಗಳನ್ನು ಹಾಕಲು ಹ್ಯಾಕರ್‌ಗಳನ್ನು ಬಳಸಲಾಗುತ್ತಿದೆ ಎಂದು ಆರೋಪ ಕೇಳಿ ಬಂದಿತ್ತು.

ಭೀಮಾ ಕೋರೆಗಾಂವ್ ಹಿಂಸಾಚಾರ ಪ್ರಕರಣದಲ್ಲಿ ಆರೋಪಿಯಾಗಿದ್ದ ತೆಲುಗು ಕವಿ ವರವರ ರಾವ್ ಅವರಿಗೆ ವೈದ್ಯಕೀಯ ಕಾರಣಗಳಿಗಾಗಿ ಫೆಬ್ರವರಿ 2021ರಲ್ಲಿ ಆರು ತಿಂಗಳ ಕಾಲ ಜಾಮೀನು ನೀಡಲಾಗಿದೆ. ಜಾಮೀನು ವಿಸ್ತರಿಸಿದಾಗ, ಬಾಂಬೆ ಹೈಕೋರ್ಟ್ ಏಪ್ರಿಲ್ 2022ರಲ್ಲಿ ಶಾಶ್ವತ ಜಾಮೀನಿಗಾಗಿ ಅವರ ಮನವಿಯನ್ನು ತಿರಸ್ಕರಿಸಿದೆ. ಆದರೆ ಆಗಸ್ಟ್ 2022ರಲ್ಲಿ ಸುಪ್ರೀಂ ಕೋರ್ಟ್ ರಾವ್ ಅವರ ಆರೋಗ್ಯದ ಸ್ಥಿತಿ ಆಧಾರದ ಮೇಲೆ ಜಾಮೀನು ನೀಡಿದೆ.

ಏಪ್ರಿಲ್‌ನಲ್ಲಿ ಶೋಮಾ ಸೇನ್‌ಗೆ ಈ ಪ್ರಕರಣದಲ್ಲಿ ಜಾಮೀನು ನೀಡಲಾಗಿತ್ತು. 2021 ರಲ್ಲಿ ವಕೀಲೆ ಸುಧಾ ಭಾರದ್ವಾಜ್ ಅವರು ಡೀಫಾಲ್ಟ್ ಜಾಮೀನು ಪಡೆದಿದ್ದರು. 2022ರಲ್ಲಿ ಮಾನವ ಹಕ್ಕುಗಳ ಕಾರ್ಯಕರ್ತ ಆನಂದ್ ತೇಲ್ತುಂಬ್ಡೆ ಪ್ರಕರಣದಲ್ಲಿ ಜಾಮೀನು ಪಡೆದಿದ್ದರು. 2023ರಲ್ಲಿ ಪ್ರಕರಣಕ್ಕೆ ಸಂಬಂಧಿಸಿ ವೆರ್ನಾನ್ ಗೊನ್ಸಾಲ್ವೆಸ್ ಮತ್ತು ಅರುಣ್ ಫೆರೇರಾ ಜಾಮೀನು ಪಡೆದಿದ್ದಾರೆ. ಇದಲ್ಲದೆ ಮಹೇಶ್ ರಾವುತ್‌ಗೆ ಬಾಂಬೆ ಹೈಕೋರ್ಟ್ ಜಾಮೀನು ನೀಡಿತ್ತು.

ಇನ್ನೂ ಯಾರು ಕಂಬಿಗಳ ಹಿಂದೆ ಇದ್ದಾರೆ?

ಎಲ್ಗಾರ್ ಪರಿಷತ್ ಪ್ರಕರಣದಲ್ಲಿ ಪತ್ರಕರ್ತ ಸುಧೀರ್ ಧಾವಳೆ, ಹೋರಾಟಗಾರ ರೋನಾ ವಿಲ್ಸನ್, ವಕೀಲ ಸುರೇಂದ್ರ ಗಡ್ಲಿಂಗ್, ದೆಹಲಿ ವಿಶ್ವವಿದ್ಯಾಲಯದ ಸಹಾಯಕ ಪ್ರಾಧ್ಯಾಪಕ ಹನಿ ಬಾಬು ಮತ್ತು ಸಾಂಸ್ಕೃತಿಕ ಕಲಾವಿದರು ಮತ್ತು ಕಾರ್ಯಕರ್ತರಾದ ಸಾಗರ್ ಗೋರ್ಖೆ, ರಮೇಶ್ ಗೈಚೋರ್ ಮತ್ತು ಜ್ಯೋತಿ ಜಗತಾಪ್ ಅವರು ಜೈಲು ಶಿಕ್ಷೆಯನ್ನು ಅನುಭವಿಸುತ್ತಿದ್ದಾರೆ.

ವಿಲ್ಸನ್, ಗ್ಯಾಡ್ಲಿಂಗ್ ಮತ್ತು ಧವಳೆ ಅವರ ಮೇಲ್ಮನವಿಗಳು ಪ್ರಸ್ತುತ ಹೈಕೋರ್ಟ್‌ನಲ್ಲಿ ಬಾಕಿ ಉಳಿದಿವೆ, ಈ ಹಿಂದೆ ವಿಶೇಷ ನ್ಯಾಯಾಲಯವು ಅವರ ಮನವಿಗಳನ್ನು ತಿರಸ್ಕರಿಸಿತ್ತು. ಇದಲ್ಲದೆ ಬಾಬು ಅವರ ಜಾಮೀನು ಅರ್ಜಿ ಸುಪ್ರೀಂ ಕೋರ್ಟ್‌ನಲ್ಲಿ ಬಾಕಿ ಉಳಿದಿದೆ.

ಇದನ್ನು ಓದಿ: ಲೋಕಸಭೆ ಚುನಾವಣೆ: ಮುಸ್ಲಿಂ ಸಮುದಾಯಕ್ಕೆ ಕಡಿಮೆ ಪ್ರಾತನಿಧ್ಯ ನೀಡಿದ ರಾಜಕೀಯ ಪಕ್ಷಗಳು

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ದಲಿತ ಸಮುದಾಯದ ಆಕ್ರೋಶಕ್ಕೆ ಮಣಿದ ರಾಜ್ಯ ಸರ್ಕಾರ; ‘ಪ್ರಬುದ್ಧ’ ಯೋಜನೆ ಪುನರಾರಂಭ

0
ಎಸ್‌ಸಿ-ಎಸ್‌ಟಿ ಮತ್ತು ಇತರ ದುರ್ಬಲ ಸಮುದಾಯಗಳ ವಿದ್ಯಾರ್ಥಿಗಳು ತಮ್ಮ ಸ್ನಾತಕೋತ್ತರ ಮತ್ತು ಪಿಎಚ್‌ಡಿ ಕೋರ್ಸ್‌ಗಳನ್ನು ವಿದೇಶದ ವಿಶ್ವವಿದ್ಯಾಲಯಗಳಲ್ಲಿ ಅಧ್ಯಯನ ನಡೆಸಲು ಸಮಾಜ ಕಲ್ಯಾಣ ಇಲಾಖೆಯಿಂದ ನೀಡುವ ಆರ್ಥಿಕ ಯೋಜನೆಯಾದ 'ಪ್ರಬುದ್ಧ' ಕಾರ್ಯಕ್ರಮವನ್ನು ನಿಲ್ಲಿಸಿದ್ದ...