Homeಮುಖಪುಟಚುನಾವಣಾ ಆಯುಕ್ತರ ಆಯ್ಕೆ ಪ್ರಕ್ರಿಯೆ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ ಅಧೀರ್ ರಂಜನ್ ಚೌಧರಿ

ಚುನಾವಣಾ ಆಯುಕ್ತರ ಆಯ್ಕೆ ಪ್ರಕ್ರಿಯೆ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ ಅಧೀರ್ ರಂಜನ್ ಚೌಧರಿ

ಸಭೆ ಪ್ರಾರಂಭವಾಗುವ ಕೇವಲ 8-10 ನಿಮಿಷ ಮೊದಲು ಶಾರ್ಟ್‌ಲಿಸ್ಟ್ ಮಾಡಲಾದ ಅಧಿಕಾರಿಗಳ ಹೆಸರು ನೀಡಲಾಗಿತ್ತು ಎಂದ ಕಾಂಗ್ರೆಸ್ ನಾಯಕ

- Advertisement -
- Advertisement -

ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸಮಿತಿಯು ಗುರುವಾರ ನಿವೃತ್ತ ಐಎಎಸ್ ಅಧಿಕಾರಿಗಳಾದ ಜ್ಞಾನೇಶ್ ಕುಮಾರ್ ಮತ್ತು ಸುಖಬೀರ್ ಸಿಂಗ್ ಸಂಧು ಅವರನ್ನು ನೂತನ ಚುನಾವಣಾ ಆಯುಕ್ತರನ್ನಾಗಿ ಆಯ್ಕೆ ಮಾಡಿದೆ. ಈ ಸಮಿತಿಯ ಸದಸ್ಯರಾಗಿರುವ ಕಾಂಗ್ರೆಸ್‌ ನಾಯಕ ಅಧೀರ್ ರಂಜನ್ ಚೌಧರಿ ಅವರು ತಮ್ಮ ಭಿನ್ನಾಭಿಪ್ರಾಯವನ್ನು ವ್ಯಕ್ತಪಡಿಸಿದ್ದಾರೆ ಮತ್ತು ಆಯ್ಕೆ ಪ್ರಕ್ರಿಯೆಯನ್ನು ಪ್ರಶ್ನಿಸಿದ್ದಾರೆ.

ನೂತನ ಚುನಾವಣಾ ಆಯುಕ್ತರನ್ನು ಆಯ್ಕೆ ಮಾಡುವ ಮುನ್ನ ಶಾರ್ಟ್ ಲಿಸ್ಟ್ ಮಾಡಿದ ಅಧಿಕಾರಿಗಳ ಹೆಸರುಗಳನ್ನು ನನಗೆ ಮೊದಲೇ ಕೊಟ್ಟಿರಲಿಲ್ಲ. ಸುದೀರ್ಘ ಪಟ್ಟಿಯಲ್ಲಿ ಭಾರತ ಸರ್ಕಾರದಲ್ಲಿ ಕಾರ್ಯದರ್ಶಿ ಮತ್ತು ಸಮಾನ ಕಾರ್ಯದರ್ಶಿಯಾಗಿ ನಿವೃತ್ತರಾದ 92 ಅಧಿಕಾರಿಗಳು, ಭಾರತ ಸರ್ಕಾರದಲ್ಲಿ ಕಾರ್ಯದರ್ಶಿ ಮತ್ತು ಕಾರ್ಯದರ್ಶಿ ಸಮಾನ ಅಧಿಕಾರಿಗಳಾಗಿ ಸೇವೆ ಸಲ್ಲಿಸುತ್ತಿರುವ 93 ಅಧಿಕಾರಿಗಳು, ಕಳೆದ ಒಂದು ವರ್ಷದಲ್ಲಿ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಮುಖ್ಯ ಕಾರ್ಯದರ್ಶಿಗಳಾಗಿ ನಿವೃತ್ತರಾದ 15 ಅಧಿಕಾರಿಗಳು, 28 ಮತ್ತು 8 ಅಧಿಕಾರಿಗಳು ಕ್ರಮವಾಗಿ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಮುಖ್ಯ ಕಾರ್ಯದರ್ಶಿಗಳಾಗಿ ಸೇವೆ ಸಲ್ಲಿಸುತ್ತಿರುವವರು ಸೇರಿದ್ದರು ಎಂದು ಅಧೀರ್ ರಂಜನ್ ಚೌಧರಿ ತಿಳಿಸಿದ್ದಾರೆ.

ಚುನಾವಣಾ ಆಯುಕ್ತರ ಆಯ್ಕೆ ಸಭೆ ಪ್ರಾರಂಭವಾಗುವ ಕೇವಲ 8 ರಿಂದ 10 ನಿಮಿಷ ಮೊದಲು ಆರು ಶಾರ್ಟ್‌ಲಿಸ್ಟ್ ಮಾಡಿದ ಅಧಿಕಾರಿಗಳ ಹೆಸರನ್ನು ಸರ್ಕಾರ ನನಗೆ ನೀಡಿತ್ತು. ಕಾನೂನು ಸಚಿವ ಅರ್ಜುನ್ ರಾಮ್ ಮೇಘವಾಲ್ ಅವರು ಈ 6 ಅಧಿಕಾರಿಗಳ ವಿವರಗಳು, ಅವರು ನಿರ್ವಹಿಸಿದ ಹುದ್ದೆಗಳು, ಅವರ ಆಡಳಿತ ದಾಖಲೆ ಮತ್ತು ಎಲ್ಲದರ ವಿವರಗಳನ್ನು ಆಯ್ಕೆ ಸಮಿತಿಗೆ ತಿಳಿಸಿದರು. ಈ 6 ಅಧಿಕಾರಿಗಳ ಪಟ್ಟಿಯಿಂದ ಸಮಿತಿಯು ಇಬ್ಬರ ಹೆಸರನ್ನು ಆಯ್ಕೆ ಮಾಡಬೇಕಾಗಿತ್ತು ಎಂದು ಚೌಧರಿ ಹೇಳಿದ್ದಾರೆ.

ಚೌಧರಿ ಅವರ ಪ್ರಕಾರ ಆರು ಅಧಿಕಾರಿಗಳ ಹೆಸರುಗಳು ಹೀಗಿವೆ.. ಉತ್ಪಲ್ ಕುಮಾರ್ ಸಿಂಗ್, ಪ್ರದೀಪ್ ಕುಮಾರ್ ತ್ರಿಪಾಠಿ, ಜ್ಞಾನೇಶ್ ಕುಮಾರ್, ಇಂದೇವರ್ ಪಾಂಡೆ, ಸುಖಬೀರ್ ಸಿಂಗ್ ಸಂಧು ಮತ್ತು ಸುಧೀರ್ ಕುಮಾರ್ ಗಂಗಾಧರ್ ರಹಾಟೆ.

ಕಾನೂನು ಸಚಿವರು ಶಾರ್ಟ್ ಲಿಸ್ಟ್ ಮಾಡಲಾದ ಅಧಿಕಾರಿಗಳ ಬಗ್ಗೆ ಮಾಹಿತಿ ನೀಡಿದ ಬಳಿಕ, ಅಮಿತ್ ಶಾ ಅವರು ಜ್ಞಾನೇಶ್ ಕುಮಾರ್ ಮತ್ತು ಸುಖಭೀರ್ ಸಿಂಗ್ ಸಂಧು ಅವರ ಹೆಸರುಗಳನ್ನು ಪ್ರಸ್ತಾಪಿಸಿದರು. ಬಳಿಕ ನಿಮಗೆ ಏನಾದರು ಹೇಳಲಿಕ್ಕೆ ಇದೆಯಾ? ಎಂದು ನನ್ನನ್ನು ಕೇಳಿದರು. ಆಗ ನಾನು, “ಈಗಾಗಲೇ ಶಾರ್ಟ್ ಲಿಸ್ಟ್ ಮಾಡಲಾದ ಅಧಿಕಾರಿಗಳ ಪ್ರೊಪೈಲ್ ನನಗೆ ಕಳಿಸಿ, ಅದನ್ನು ಪರಿಶೀಲಿಸಿದ ಬಳಿಕ ನನಗೆ ಅಭಿಪ್ರಾಯ ತಿಳಿಸಲು ಸಹಾಯವಾಗುತ್ತದೆ ಎಂದೆ” ಎಂದು ಚೌಧರಿ ಹೇಳಿದ್ದಾರೆ.

“ನಾನು ನಿನ್ನೆ ರಾತ್ರಿ ನನ್ನ ಕ್ಷೇತ್ರದಿಂದ ದೆಹಲಿ ತಲುಪಿದ್ದೆ. ರಾತ್ರಿಯಷ್ಟೇ 212 ಅಧಿಕಾರಿಗಳ ಸಂಪೂರ್ಣ ಪಟ್ಟಿಯನ್ನು ನನಗೆ ನೀಡಲಾಗಿತ್ತು. ಕಡಿಮೆ ಸಮಯದಲ್ಲಿ 212 ಅಧಿಕಾರಿಗಳ ವಿವರ, ಅವರ ಸಮಗ್ರತೆ, ಅನುಭವ ಮತ್ತು ಆಡಳಿತ ಸಾಮರ್ಥ್ಯದ ವಿವರಗಳನ್ನು ನಾನು ಹೇಗೆ ಪರಿಶೀಲಿಸುವುದು? ಹಾಗಾಗಿಯೇ ಶಾರ್ಟ್ ಲಿಸ್ಟ್ ಮಾಡಿದ ಅಧಿಕಾರಿಗಳ ಫ್ರೊಫೈಲ್ ಕೇಳಿದ್ದೇನೆ” ಎಂದು ಎಂದಿದ್ದಾರೆ.

“ಪ್ರಧಾನಿ ಮತ್ತು ಗೃಹ ಸಚಿವರು ನನ್ನ ಅಭಿಪ್ರಾಯ ಕೇಳಿದಾಗ, ನಿಮಗೆ ಬಹುಮತ ಇದೆ. ಏನು ಬೇಕಾದರು ಮಾಡಬಹುದು ಎಂದು ನಾನು ಹೇಳಿದೆ. ಇಲ್ಲದಿದ್ದರೂ ನಾನೇನು ಮಾಡಲು ಸಾಧ್ಯ? ನನಗೆ ಅಧಿಕಾರಿಗಳ ಬಗ್ಗೆ ಯಾವುದೇ ಅಸಮಧಾನ ಇಲ್ಲ. ಅವರು ಸಮರ್ಥರಾಗಿದ್ದರೆ ಆಯ್ಕೆ ಆಗಲಿ. ಶಾರ್ಟ್ ಲಿಸ್ಟ್ ಮಾಡಲಾದ ಯಾವುದೇ ಅಧಿಕಾರಿ ನನಗೆ ಪರಿಚಯಸ್ಥರೂ ಅಲ್ಲ. ಅವರ ಬಗ್ಗೆ ನನಗೆ ಏನೂ ಗೊತ್ತಿಲ್ಲ. ಪಟ್ಟಿಯಲ್ಲಿ ನನ್ನ ರಾಜ್ಯ ಪಶ್ಚಿಮ ಬಂಗಾಳದ ಇಂದೇವರ್ ಪಾಂಡೆ ಕೂಡ ಇದ್ದರು. ಅವರ ಬಗ್ಗೆ ನನಗೆ ಗೊತ್ತಿದೆ. ಅವರು ಉತ್ತಮ ಸಮರ್ಥ ಅಧಿಕಾರಿ. ಅಧಿಕಾರಿಗಳು ಯಾರು ಬೇಕಾದರು ಆಯ್ಕೆಯಾಗಲಿ. ಆದರೆ, ಆಯ್ಕೆ ಮಾಡಿದ ವಿಧಾನದ ಬಗ್ಗೆ ನನಗೆ ಅಸಮಧಾನವಿದೆ. ಪ್ರತಿಪಕ್ಷ ಸದಸ್ಯರು ಆಯ್ಕೆ ಪ್ರಕ್ರಿಯೆ ಭಾಗವಾಗಬೇಕಾದರೆ, ಅದನ್ನು ಸರಿಯಾಗಿ ಮಾಡಲಿ. ಆಗ ನಾವೇನಾದರು ಸಲಹೆ ನೀಡಲು ಸಾಧ್ಯ” ಎಂದು ಅಧೀರ್ ರಂಜನ್ ಚೌಧರಿ ಅಸಮಧಾನ ವ್ಯಕ್ತಪಡಿಸಿದ್ದಾರೆ.

“ನೀವು ಔಪಚಾರಿಕವಾಗಿ ನನ್ನನ್ನು ಸಮಿತಿಯಲ್ಲಿ, ಆಯ್ಕೆ ಪ್ರಕ್ರಿಯೆಯಲ್ಲಿ ಪರಿಗಣಿಸಿದ್ದೀರಿ. ನಾನೂ ಅದೇ ರೀತಿ ಪರಿಗಣಿಸಿದ್ದೇನೆ. ನನ್ನ ಭಿನ್ನಭಿಪ್ರಾಯವನ್ನು ದಾಖಲೆಗೆ ಸೇರಿಸುವಂತೆ ಕೇಳಿಕೊಂಡಿದ್ದೇನೆ. ಇಲ್ಲದಿದ್ದರೆ, ಅವರು ಕೊಟ್ಟ 212 ಅಧಿಕಾರಿಗಳ ಹೆಸರುಗಳನ್ನು ಕಡಿಮೆ ಅವಧಿಯಲ್ಲಿ ಪರಿಶೀಲಿಸಿದ ಅಭಿಪ್ರಾಯ ಹೇಳಲು ನಾನು ಜಾದುಗಾರನಲ್ಲ” ಎಂದು ಚೌಧರಿ ಕಿಡಿಕಾರಿದ್ದಾರೆ.

ಇದನ್ನೂ ಓದಿ : ಕೇಂದ್ರ ಚುನಾವಣಾ ಆಯುಕ್ತರಾಗಿ ಜ್ಞಾನೇಶ್‌ ಕುಮಾರ್‌, ಸುಖಬೀರ್‌ ಸಂಧು ಆಯ್ಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR ಅಕ್ರಮಗಳ ವಿರುದ್ಧ ಜನಪರ ಒಕ್ಕೂಟದ ಸಮರ: ಸೆ.22ರಿಂದ ‘ಪರಿಶೋಧನೆ ಹಾಗೂ ಪ್ರತಿರೋಧ ಪ್ರವಾಸ’

ಎಸ್‌ಐಆರ್ (ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ) ಪ್ರಕ್ರಿಯೆಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳನ್ನು ಬಯಲಿಗೆ ತರಲು, ಸಂತ್ರಸ್ತರನ್ನು ನೇರವಾಗಿ ಭೇಟಿಯಾಗಿ ಸಾಕ್ಷ್ಯಗಳನ್ನು ಒಟ್ಟುಗೂಡಿಸುವ ಉದ್ದೇಶದಿಂದ ಸೆಪ್ಟೆಂಬರ್ 22ರಿಂದ 30ರವರೆಗೆ ಎಸ್‌ಐಆರ್ ವಿರೋಧಿ ಜನಪರ ಸಂಘಟನೆಗಳು...

ಮುಂಬೈನಲ್ಲಿ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನಕ್ಕೆ ತಡೆ ಆರೋಪ: ಪೊಲೀಸ್ ಕಣ್ಗಾವಲು, ಅಭಿವ್ಯಕ್ತಿ ಸ್ವಾತಂತ್ರ್ಯದ ಬಗ್ಗೆ ಕಳವಳ

ಮುಂಬೈ: ಜೈಲಿನಲ್ಲಿರುವ ವಿದ್ಯಾರ್ಥಿ ಹೋರಾಟಗಾರ ಉಮರ್ ಖಾಲಿದ್, ಶಾರ್ಜೀಲ್ ಇಮಾಮ್ ಸೇರಿದಂತೆ ರಾಜಕೀಯ ಕೈದಿಗಳೊಂದಿಗೆ ಒಗ್ಗಟ್ಟು ವ್ಯಕ್ತಪಡಿಸುವ ಉದ್ದೇಶದಿಂದ ಆಯೋಜಿಸಲಾಗಿದ್ದ ಖಾಸಗಿ ಸಾಕ್ಷ್ಯಚಿತ್ರ ಪ್ರದರ್ಶನವನ್ನು ರದ್ದುಗೊಳಿಸುವಂತೆ ಮುಂಬೈ ಪೊಲೀಸರು ಪ್ರದರ್ಶನಕ್ಕೆ ಸ್ಥಳ ನೀಡಿದ್ದ...

ರಮಾನಾಥ ರೈ ಪ್ರಯಾಣಿಸುತ್ತಿದ್ದ ಕಾರು ಮತ್ತು ಖಾಸಗಿ ಬಸ್ ನಡುವೆ ಢಿಕ್ಕಿ: ಆಸ್ಪತ್ರೆಗೆ ದಾಖಲು

ಕಾಂಗ್ರೆಸ್ ಹಿರಿಯ ನಾಯಕ ಹಾಗೂ ಮಾಜಿ ಸಚಿವ ಬಿ. ರಮಾನಾಥ ರೈ ಪ್ರಯಾಣಿಸುತ್ತಿದ್ದ ಕಾರು ಭೀಕರ ಅಪಘಾತಕ್ಕೀಡಾಗಿದ್ದು, ಘಟನೆಯಲ್ಲಿ ಮಾಜಿ ಸಚಿವರು ಹಾಗೂ ಅವರ ಕಾರು ಚಾಲಕ ಗಾಯಗೊಂಡಿದ್ದಾರೆ. ಕಾರ್ಕಳ-ಮೂಡುಬಿದ್ರೆ ಹೆದ್ದಾರಿಯ ಸಾಣೂರು...

ಮೋದಿ ಅಣಕ: ರಾಹುಲ್ ಗಾಂಧಿ ಮತ್ತು ಕಾಂಗ್ರೆಸ್ ವಿರುದ್ಧ ಬಿಜೆಪಿ ಕಿಡಿ

ಮಧ್ಯಪ್ರದೇಶದ ಇಂದೋರ್‌ನಲ್ಲಿ ನಡೆದ ‘ಛಾತ್ರೋಂ ಕಿ ಗೂಂಜ್’ ಕಾರ್ಯಕ್ರಮದಲ್ಲಿ ಲೋಕಸಭೆಯ ವಿಪಕ್ಷ ನಾಯಕ ರಾಹುಲ್ ಗಾಂಧಿ ಅವರೊಂದಿಗೆ ವೇದಿಕೆ ಹಂಚಿಕೊಂಡ ಸ್ಟ್ಯಾಂಡಪ್ ಕಾಮೆಡಿಯನ್‌ ಒಬ್ಬರು ಪ್ರಧಾನಿ ನರೇಂದ್ರ ಮೋದಿ ಅವರನ್ನು ಅಣಕಿಸಿರುವ ವಿಚಾರ...

ಪ.ಬಂಗಾಳ: ನಂದಿಗ್ರಾಮದಲ್ಲಿ ಕಾಂಗ್ರೆಸ್‌ಗೆ ಮಮತಾ ಬೆಂಬಲ: ಬಂಗಾಳದ ವಿರೋಧ ಪಕ್ಷಗಳ ರಾಜಕೀಯದಲ್ಲಿ ಮರುಹೊಂದಾಣಿಕೆಯ ಸುಳಿವು

ಕೋಲ್ಕತ್ತಾ: ಪಶ್ಚಿಮ ಬಂಗಾಳದ ನಂದಿಗ್ರಾಮ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ದಿನದಿಂದ ದಿನಕ್ಕೆ ಹೊಸ ರಾಜಕೀಯ ತಿರುವುಗಳನ್ನು ಪಡೆದುಕೊಳ್ಳುತ್ತಿದ್ದು, ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ನೇತೃತ್ವದ ಬಣ ಕಾಂಗ್ರೆಸ್ ಅಭ್ಯರ್ಥಿ ಮಿಲನ್ ಪ್ರಧಾನ ಅವರಿಗೆ...

SIR ಎಂದರೆ ‘ಶಾ ಇನ್ಸ್ಟಿಗೇಟೆಡ್ ರಿಮೂವಲ್ʼ : ಕಾಂಗ್ರೆಸ್

ಚುನಾವಣಾ ಆಯೋಗ ಕೈಗೊಂಡಿರುವ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯಲ್ಲಿ (ಎಸ್‌ಐಆರ್) ದೊಡ್ಡ ಪ್ರಮಾಣದಲ್ಲಿ ಮತದಾರರ ಹೆಸರುಗಳನ್ನು ಕೈಬಿಡುತ್ತಿರುವ ವಿಷಯವನ್ನು ಪ್ರಸ್ತಾಪಿಸಿರುವ ಕಾಂಗ್ರೆಸ್, ಈ ಎಸ್‌ಐಆರ್ ಪ್ರಕ್ರಿಯೆಯು ವಾಸ್ತವವಾಗಿ ಮತದಾರರ ಬೃಹತ್ "ಶಾ...

ಟಿ. ನರಸೀಪುರ ಗಣೇಶೋತ್ಸವದಲ್ಲಿ ಪ್ರಚೋದನಕಾರಿ ಭಾಷಣ: ಮಾಜಿ ಸಂಸದ ಪ್ರತಾಪ್ ಸಿಂಹ ವಿರುದ್ಧ ಎಫ್‌ಐಆರ್ ದಾಖಲು

ಗಣೇಶೋತ್ಸವ ಮೆರವಣಿಗೆಯ ವೇಳೆ ಪ್ರಚೋದನಕಾರಿ ಭಾಷಣ ಮಾಡಿದ ಮತ್ತು ಸ್ಥಳದಲ್ಲಿದ್ದ ಪೊಲೀಸ್ ಅಧಿಕಾರಿಗಳ ಕರ್ತವ್ಯಕ್ಕೆ ಅಡ್ಡಿಪಡಿಸಿದ ಗಂಭೀರ ಆರೋಪದ ಮೇಲೆ ಬಿಜೆಪಿ ಮುಖಂಡ ಹಾಗೂ ಮಾಜಿ ಸಂಸದ ಪ್ರತಾಪ್ ಸಿಂಹ ವಿರುದ್ಧ ಎಫ್‌ಐಆರ್...

ದೆಹಲಿ ವಿವಿ ಚುನಾವಣಾ ಫಲಿತಾಂಶ: ABVPಯನ್ನು ಸೋಲಿಸಬಹುದಾಗಿದ್ದ ಚುನಾವಣೆಯಲ್ಲಿ ಕಾಂಗ್ರೆಸ್ ಮಾಡಿಕೊಂಡ ಎಡವಟ್ಟು

ಜಂತರ್ ಮಂತರ್‌ನಲ್ಲಿ ಲಕ್ಷಾಂತರ ವಿದ್ಯಾರ್ಥಿಗಳು ಬೀದಿಗಿಳಿದು ನಡೆಸಿದ ಧರಣಿ ಹಾಗೂ ಇನ್‌ಸ್ಟಾಗ್ರಾಮ್‌ ನಂತಹ ಡಿಜಿಟಲ್ ವೇದಿಕೆಗಳಲ್ಲಿ ಹರಿದಾಡಿದ ರೀಲ್ಸ್‌ಗಳು ಬಿಜೆಪಿಯ ಜನಪ್ರಿಯತೆ ಕುಸಿದಿರುವುದನ್ನು ಬಿಂಬಿಸಿದ್ದವು. ಕ್ಯಾಂಪಸ್‌ಗಳಲ್ಲಿ ಬಿಜೆಪಿ ಮತ್ತು ಎಬಿವಿಪಿ ಕಾರ್ಯಕರ್ತರ ದಬ್ಬಾಳಿಕೆ,...

ಐಐಟಿ ಬಾಂಬೆ ವಿದ್ಯಾರ್ಥಿ ಸಾಹಿಲ್ ವಕೋಡ್ ಆತ್ಮಹತ್ಯೆ ಪ್ರಕರಣ: ಜಾತಿ ನಿಂದನೆ, ಬೆದರಿಕೆ ಆರೋಪ: ಪ್ರಾಧ್ಯಾಪಕರ ವಿರುದ್ಧವೂ ಎಫ್‌ಐಆರ್

ಮುಂಬೈ: ಐಐಟಿ ಬಾಂಬೆ ಕ್ಯಾಂಪಸ್‌ನಲ್ಲಿ ಎರಡನೇ ವರ್ಷದ ವಿದ್ಯಾರ್ಥಿ ಸಾಹಿಲ್ ವಕೋಡ್ ಆತ್ಮಹತ್ಯೆ ಮಾಡಿಕೊಂಡ ಪ್ರಕರಣ ಇದೀಗ ಗಂಭೀರ ತಿರುವು ಪಡೆದುಕೊಂಡಿದ್ದು, ವಿದ್ಯಾರ್ಥಿಯ ಕುಟುಂಬ ಮಾಡಿರುವ ಜಾತಿ ಆಧಾರಿತ ನಿಂದನೆ, ಕಿರುಕುಳ ಮತ್ತು...

SIR : ಕೇಜ್ರಿವಾಲ್, ಧನಕರ್, ಅಡ್ವಾಣಿಗೂ ಬಂತು ಚುನಾವಣಾ ಆಯೋಗದ ನೋಟಿಸ್

ದೇಶದ ರಾಜಧಾನಿ ದೆಹಲಿಯಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಭಾರೀ ವಿವಾದಕ್ಕೆ ಹಾಗೂ ಸಾರ್ವಜನಿಕ ಆತಂಕಕ್ಕೆ ಕಾರಣವಾಗಿದೆ. ದೆಹಲಿಯ ಒಟ್ಟು ಮತದಾರರ ಪೈಕಿ ಬರೋಬ್ಬರಿ ಶೇಕಡಾ 50ರಷ್ಟು...