Homeಮುಖಪುಟಗಾಝಾ ಕದನ ವಿರಾಮ | ಮೊದಲ ಹಂತದಲ್ಲಿ ಬಂಧಿತರು, ಒತ್ತೆಯಾಳುಗಳ ಬಿಡುಗಡೆ

ಗಾಝಾ ಕದನ ವಿರಾಮ | ಮೊದಲ ಹಂತದಲ್ಲಿ ಬಂಧಿತರು, ಒತ್ತೆಯಾಳುಗಳ ಬಿಡುಗಡೆ

ಮನೆಗಳತ್ತ ಮರಳುತ್ತಿರುವ ಪ್ಯಾಲೆಸ್ತೀನಿಯರು

- Advertisement -
- Advertisement -

ಸುಮಾರು ಒಂದೂವರೆ ವರ್ಷಗಳ ಭೀಕರ ಯುದ್ದದ ಬಳಿಕ ಗಾಝಾದಲ್ಲಿ ಕದನ ವಿರಾಮ ಪ್ರಕ್ರಿಯೆ ಪ್ರಾರಂಭಗೊಂಡಿದೆ. ಒಪ್ಪಂದಂತೆ ಒತ್ತೆಯಾಳುಗಳು ಮತ್ತು ಬಂಧಿತರ ಬಿಡುಗಡೆಯಾಗಿದೆ.

ಕದನ ವಿರಾಮದ ಮೊದಲ ಹಂತವಾಗಿ ಭಾನುವಾರ (ಜ.19) ಹಮಾಸ್ ಗುಂಪು 3 ಮಂದಿ ಇಸ್ರೇಲಿ ಒತ್ತೆಯಾಳುಗಳನ್ನು ಬಿಡುಗಡೆ ಮಾಡಿತ್ತು. ಇದಕ್ಕೆ ಪ್ರತಿಯಾಗಿ ಸೋಮವಾರ (ಜ.20) ಇಸ್ರೇಲ್ 90 ಮಂದಿ ಬಂಧಿತ ಪ್ಯಾಲೆಸ್ತೀನಿಯರನ್ನು ಬಿಡುಗಡೆ ಮಾಡಿದೆ ಎಂದು ವರದಿಯಾಗಿದೆ.

PC : ndtv.com

ಈ ಮೂಲಕ 46ಸಾವಿರಕ್ಕೂ ಅಧಿಕ ಪ್ಯಾಲೆಸ್ತೀನಿಯರನ್ನು ಬಲಿ ತೆಗೆದುಕೊಂಡ ಇಸ್ರೇಲ್‌ನ ನಿರಂತರ ಆಕ್ರಮಣ ಶಾಶ್ವತವಾಗಿ ಕೊನೆಗೊಳ್ಳುವ ಆಶಾ ಭಾವನೆ ಮೂಡಿದೆ.

ಹಮಾಸ್ ಭಾನುವಾರ ಬಿಡುಗಡೆ ಮಾಡಿರುವ ಒತ್ತೆಯಾಳುಗಳಲ್ಲಿ ಮೂವರೂ ಮಹಿಳೆಯರು. ಕದನ ವಿರಾಮದ ಮೊದಲ ಹಂತವಾಗಿ ಮುಂದಿನ 6 ವಾರಗಳಲ್ಲಿ ಹಮಾಸ್ ಒಟ್ಟು 33 ಒತ್ತೆಯಾಳುಗಳನ್ನು ಬಿಡುಗಡೆ ಮಾಡಲಿದೆ. ಇದಕ್ಕೆ ಪ್ರತಿಯಾಗಿ ಇಸ್ರೇಲ್ ಕೂಡ ಬಂಧಿತರನ್ನು ಬಿಡುಗಡೆ ಮಾಡಬೇಕಿದೆ.

ಅಕ್ಟೋಬರ್ 7,2023ರಂದು ಇಸ್ರೇಲ್ ಮೇಲೆ ದಾಳಿ ಮಾಡಿದಾಗ ಟೆಲ್‌ ಅವೀವ್‌ನ ನೋವಾ ಸಂಗೀತ ಉತ್ಸವದಿಂದ ಅಪಹರಿಸಲ್ಪಟ್ಟ 24 ವರ್ಷದ ರೋಮಿ ಗೊನೆನ್, ಕಿಬ್ಬುಟ್ಜ್ ಕ್ಫರ್ ಆಝಾದಿಂದ ಅಪಹರಿಸಲ್ಪಟ್ಟ 28 ವರ್ಷದ ಎಮಿಲಿ ಡಮರಿ ಮತ್ತು 31 ವರ್ಷದ ಡೊರೊನ್ ಸ್ಟೈನ್ಬ್ರೆಚರ್ ಎಂಬ ಮೂವರು ಒತ್ತೆಯಾಳುಗಳನ್ನು ಹಮಾಸ್ ಬಿಡುಗಡೆ ಮಾಡಿದೆ. ಇವರನ್ನು ಕುಟುಂಬಸ್ಥರು ಮತ್ತು ಇತರರು ಸೇರಿ ಅಪಾರ ಸಂಖ್ಯೆಯಲ್ಲಿ ಜನರು ಸ್ವಾಗತಿಸಿದ್ದಾರೆ.

ಇದೇ ರೀತಿ ಇಸ್ರೇಲ್ ಬಂಧಿಸಿ ಜೈಲಿನಲ್ಲಿಟ್ಟಿದ 90 ಪ್ಯಾಲೆಸ್ತೀನಿಯರು ಕೂಡ ಬಿಡುಗಡೆಯಾಗಿದ್ದಾರೆ. ಅವರನ್ನೂ ಕುಟುಂಬಸ್ಥರು ಮತ್ತು ಇತರರು ಕಣ್ಣೀರು ಹಾಕುತ್ತಾ ಬರಮಾಡಿಕೊಂಡಿದ್ದಾರೆ ಎಂದು ವರದಿಗಳು ಹೇಳಿವೆ.

ಮನೆಗಳಿಗೆ ಮರಳುತ್ತಿರುವ ಗಾಝಾ ಜನತೆ

ಕದನ ವಿರಾಮದ ಮೊದಲ ಹಂತ ಜಾರಿಯಾಗುತ್ತಿದ್ದಂತೆ ಗಾಝಾ ಜನತೆ ನಿರಾಶ್ರಿತರ ಶಿಬಿರಗಳಿಂದ ತಮ್ಮ ಮೂಲ ಸ್ಥಳಗಳಿಗೆ ಮರಳುತ್ತಿದ್ದಾರೆ. ಭಾನುವಾರ ಸಾವಿರಾರು ಜನರು ಉತ್ತರ ಗಾಝಾದ ಜಬಲಿಯಾ ಪ್ರದೇಶಕ್ಕೆ ಮರಳುತ್ತಿದ್ದ ದೃಶ್ಯಗಳು ಅಂತಾರಾಷ್ಟ್ರೀಯ ಮಾಧ್ಯಗಳಲ್ಲಿ ಕಂಡು ಬಂದಿವೆ.

PC : Reuters Via dailysabah.com

15 ತಿಂಗಳ ಇಸ್ರೇಲ್ ಆಕ್ರಮಣದಲ್ಲಿ ತಮ್ಮದೆಲ್ಲವನ್ನೂ ಕಳೆದುಕೊಂಡರೂ, ಕದನ ವಿರಾಮ ಘೋಷಣೆಯಾಗಿರುವುದಕ್ಕೆ ಗಾಝಾ ಜನತೆ ಸಂಭ್ರಮಾಚರಣೆ ಮಾಡಿದ್ದಾರೆ. ದುಖಃದ ನಡುವೆ ಅವರಲ್ಲಿ ಮಂದಹಾಸ ಕಂಡು ಬಂದಿದೆ. ತಮ್ಮ ಮೂಲ ಸ್ಥಳಗಳಿಗೆ ಮರಳಿದ ಅನೇಕರಿಗೆ ತಮ್ಮ ಮನೆಗಳು ಎಲ್ಲಿತ್ತು ಎಂಬುವುದೇ ಗೊತ್ತಾಗುತ್ತಿಲ್ಲ. ಉತ್ತರ ಗಾಝಾ ಸಂಪೂರ್ಣ ಜನ ವಾಸಿಸಲು ಅಸಾಧ್ಯವಾದ ಸ್ಥಿತಿಗೆ ಬದಲಾಗಿದೆ ಎಂದು ಮಾಧ್ಯಮ ವರದಿಗಳು ಹೇಳಿವೆ.

PC : aljazeera.com

ಉತ್ತರ ಗಾಝಾದ ಜಬಲಿಯಾ ನಗರ ಇಸ್ರೇಲ್ ಆಕ್ರಮಣಕ್ಕೂ ಮುನ್ನ ಸುಮಾರು 250,000ಕ್ಕೂ ಅಧಿಕ ಜನರ ಅಶ್ರಯ ತಾಣವಾಗಿತ್ತು. ಇಸ್ರೇಲ್ ಈ ನಗರದ ಮೇಲೆ ಹೆಚ್ಚಿನ ದಾಳಿ ನಡೆಸಿದೆ. ಈ ದಾಳಿಗಳಲ್ಲಿ 4,000ಕ್ಕೂ ಅಧಿಕ ಪ್ಯಾಲೆಸ್ತೀನಿಯರು ಸಾವನ್ನಪ್ಪಿದ್ದಾರೆ ಎಂದು ಹಮಾಸ್ ಆರೋಗ್ಯ ಸಚಿವಾಲಯ ಹೇಳಿದೆ. ಜಬಲಿಯಾದಲ್ಲಿ ಈಗ ಬರೀ ಕಟ್ಟಡಗಳ ಅವಶೇಷಗಳು ಮಾತ್ರ ಉಳಿದಿವೆ.

ಮಾನವೀಯ ನೆರವು

ಕದನ ವಿರಾಮದ ಒಪ್ಪಂದಂತೆ ಇಸ್ರೇಲ್ ಸೇನೆಯು ಗಾಝಾದ ಬಫರ್ ವಲಯದಿಂದ ಹಂತ ಹಂತವಾಗಿ ಹಿಂದೆ ಸರಿಯಬೇಕು. ಜನರಿಗೆ ಅಗತ್ಯ ಸಾಮಾಗ್ರಿಗಳನ್ನು ಪೂರೈಸುವ ಮಾನವೀಯ ನೆರವಿಗೆ ಅನುವು ಮಾಡಿಕೊಡಬೇಕು.

ವಿಶ್ವಸಂಸ್ಥೆಯ ವಿವಿಧ ತಂಡಗಳು, ಮಾನವ ಹಕ್ಕು ಸಂಘಟನೆ ರೆಡ್ ಕ್ರೆಸೆಂಟ್ ಸೇರಿದಂತೆ ಹಲವರು ಗಾಝಾದ ಜನತೆಯ ಬದುಕನ್ನು ಮರು ರೂಪಿಸಲು ಸಿದ್ದರಾಗಿ ನಿಂತಿದ್ದಾರೆ. ಅಲ್ -ಜಝೀರಾ ವರದಿಯ ಪ್ರಕಾರ, ಕದನ ವಿರಾಮದ ಮೊದಲ ಹಂತವಾಗಿ ಅಗತ್ಯ ಸಾಮಾಗ್ರಿಗಳನ್ನು ಹೊತ್ತ 600ಕ್ಕೂ ಹೆಚ್ಚು ಟ್ರಕ್‌ಗಳು ಭಾನುವಾರ ಗಾಝಾ ಪ್ರವೇಶಿಸಿವೆ.

PC : Egyptian Government Press Center via timesofisrael.com

ಅಕ್ಟೋಬರ್ 7, 2023ರಿಂದ ಇಸ್ರೇಲ್ ನಡೆಸಿದ ಗಾಝಾ ಮೇಲಿನ ಆಕ್ರಮಣದಲ್ಲಿ ಇದುವರೆಗೆ 46,913 ಪ್ಯಾಲೆಸ್ತೀನಿಯರು ಸಾವನ್ನಪ್ಪಿದ್ದಾರೆ ಮತ್ತು 110,750 ಜನರು ಗಾಯಗೊಂಡಿದ್ದಾರೆ. ಅಕ್ಟೋಬರ್ 7, 2023ರಂದು ಹಮಾಸ್ ನೇತೃತ್ವದ ಗುಂಪುಗಳು ಇಸ್ರೇಲ್‌ನ ಟೆಲ್ ಅವೀವ್ ನಗರದ ಮೇಲೆ ನಡೆಸಿದ ದಾಳಿಯಲ್ಲಿ 1,139 ಜನರು ಸಾವನ್ನಪ್ಪಿದ್ದರು ಮತ್ತು 200ಕ್ಕೂ ಹೆಚ್ಚು ಜನರನ್ನು ಸೆರೆ ಹಿಡಿದ ಹಮಾಸ್ ಒತ್ತೆಯಾಳುಗಳಾಗಿ ಇಟ್ಟುಕೊಂಡಿತ್ತು.

ಅಕ್ರಮ ವಲಸಿಗರ ತಡೆಗೆ ಮಣಿಪುರದಲ್ಲಿ NRC ಜಾರಿಗೆ ಮೈತೇಯಿ ಸಂಘಟನೆ ಒತ್ತಾಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸತೀಶ್‌ ಜಾರಕಿಹೊಳಿ ಮೇಲಿನ ಇಡಿ ದಾಳಿಯನ್ನು ‘ಚಾರಿತ್ರ್ಯ ಹರಣ’ ಎಂದ ವಿಜಯ್ ಮಲ್ಯ

ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರ ಮನೆ ಹಾಗೂ ಕಚೇರಿಗಳ ಮೇಲೆ ಜಾರಿ ನಿರ್ದೇಶನಾಲಯವು (ಇಡಿ) ನಡೆಸಿದ ದಾಳಿಯನ್ನು ಮಾಜಿ ಸಂಸದ ಮತ್ತು ದೇಶದಿಂದ ಪರಾರಿಯಾಗಿರುವ ಉದ್ಯಮಿ ವಿಜಯ್ ಮಲ್ಯ, "ಸಾರ್ವಜನಿಕವಾಗಿ ಚಾರಿತ್ರ್ಯ...

ಒಗ್ಗಟ್ಟಿನ ಮಾತುಗಳಷ್ಟೇ ಸಾಲದು, ಕೃತಿಯಲ್ಲಿರಲಿ ದಿಟ್ಟತನ : ಬ್ರಿಕ್ಸ್ ವಿಚಾರದಲ್ಲಿ ಕೇಂದ್ರಕ್ಕೆ ಕಾಂಗ್ರೆಸ್ ಚಾಟಿ

ಜಾಗತಿಕ ಮಟ್ಟದಲ್ಲಿ ಬ್ರಿಕ್ಸ್ (BRICS) ಒಕ್ಕೂಟದ ಪ್ರಭಾವ ಹೆಚ್ಚುತ್ತಿರುವುದನ್ನು ಸ್ವಾಗತಿಸಿರುವ ಕಾಂಗ್ರೆಸ್, ಈ ಒಕ್ಕೂಟದ ಅಧ್ಯಕ್ಷತೆಯನ್ನು ವಹಿಸಿರುವ ಭಾರತವು ‘ಗ್ಲೋಬಲ್ ಸೌತ್’ (Global South) ರಾಷ್ಟ್ರಗಳ ನಡುವೆ ತನ್ನ ರಾಜತಾಂತ್ರಿಕ ಸ್ಥಾನಮಾನವನ್ನು ಮರುಸ್ಥಾಪಿಸಲು...

9/11 ರ ಹಿಂದಿನ ದಾಳಿಯನ್ನು ಇರಾನ್ ಜೊತೆಗಿನ ಇಂದಿನ ಯುದ್ಧಕ್ಕೆ ಜೋಡಿಸಿದ ಡೊನಾಲ್ಡ್‌ ಟ್ರಂಪ್

"ಸೆಪ್ಟೆಂಬರ್ 11, 2001 ರ ದಾಳಿಯನ್ನು ಯುನೈಟೆಡ್ ಸ್ಟೇಟ್ಸ್ ಎಂದಿಗೂ ಮರೆಯುವುದಿಲ್ಲ. 25 ವರ್ಷಗಳ ನಂತರವೂ ಇರಾನ್ ಮೇಲೆ ದಾಳಿ ಮಾಡುವ ಮೂಲಕ ದೇಶವು ಭಯೋತ್ಪಾದನೆ ವಿರುದ್ಧದ ಯುದ್ಧವನ್ನು ಮುಂದುವರೆಸಿದೆ" ಎಂದು ಅಧ್ಯಕ್ಷ...

SIR ನೋಟಿಸ್ ಮತ್ತು ವಿಚಾರಣೆಯಲ್ಲಿ ಅಕ್ರಮ : ಚು. ಆಯೋಗದ ವಿರುದ್ಧ ನಾಗರಿಕ ಸಂಘಟನೆಗಳಿಂದ 2ನೇ ಎಫ್‌ಐಆರ್

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಭಾಗವಾಗಿ, ಆಗಸ್ಟ್ 24ರಂದು ರಾಜ್ಯ ಚುನಾವಣಾ ಆಯೋಗ ಬಿಡುಗಡೆ ಮಾಡಿದ್ದ ಕರಡು ಮತದಾರರ ಪಟ್ಟಿಯನ್ನು ತಿರಸ್ಕರಿಸಿ ಕೇಂದ್ರ ಚುನಾವಣಾ ಆಯೋಗದ ವಿರುದ್ಧ ಎಫ್‌ಐಆರ್ ಬಿಡುಗಡೆ...

‘ಕೊಂಕಣಿ – ಮಾಲ್ವಣಿ ಸಮುದಾಯಗಳು ಹಿಂದುತ್ವದ ಬೆಂಬಲಿಗರು..’; ಮಹಾರಾಷ್ಟ್ರ ಬಿಜೆಪಿ ನಾಯಕ ಅಮೀತ್ ಸತಮ್

ಮುಂಬೈನಲ್ಲಿ ವಾಸಿಸುತ್ತಿರುವ ಕೊಂಕಣಿ ಮತ್ತು ಮಾಲ್ವಣಿ ಸಮುದಾಯಗಳು ಸೇರಿದಂತೆ ಕೊಂಕಣ ಪ್ರದೇಶದ ಜನರು ಹಿಂದುತ್ವವನ್ನು ಬೆಂಬಲಿಸುತ್ತಾರೆ ಎಂದು ಬಿಜೆಪಿ ನಾಯಕ ಅಮೀತ್ ಸತಮ್ ಹೇಳಿದ್ದಾರೆ. ಮಹಾರಾಷ್ಟ್ರದ ಕೊಂಕಣ ಪ್ರದೇಶದ ಸಾವಂತವಾಡಿಗೆ ಗಣಪತಿ ಭಕ್ತರಿಗಾಗಿ ಛತ್ರಪತಿ...

SIR! ಸಾಮಾನ್ಯರಿಗೆ ಸಂಕಷ್ಟ; ಗಣ್ಯರಿಗೆ ಮನೆ ಬಾಗಿಲಲ್ಲೇ ಸೇವೆ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಕರ್ನಾಟಕದಲ್ಲಿ ಮುಂದುವರೆದಿರುವ ನಡುವೆಯೇ, ಅದರ ಜಾರಿಯಲ್ಲಿ ಸಾಮಾನ್ಯ ಮತದಾರರು ಮತ್ತು ಪ್ರಭಾವಿ ವ್ಯಕ್ತಿಗಳ ಅನುಭವದ ನಡುವಿನ ವ್ಯತ್ಯಾಸದ ಕುರಿತು ಪ್ರಶ್ನೆಗಳು ಎದ್ದಿವೆ. ಮತದಾರರ ಪಟ್ಟಿಯಲ್ಲಿನ...

ದಲಿತ ಬಾಲಕಿ ನಿಶು ಆಜಾದ್ ಕುಟುಂಬಕ್ಕೆ ನಿಲ್ಲದ ಕಿರುಕುಳ; ಅಸಭ್ಯ ಭಾಷೆ – ಬೆದರಿಕೆ ಸಂದೇಶ ರವಾನೆ

ಸಿಜೆಪಿ ಪ್ರತಿಭಟನೆಯಲ್ಲಿ ಗಮನ ಸೆಳೆದಿದ್ದ ಹದಿನಾಲ್ಕು ವರ್ಷ ವಯಸ್ಸಿನ ದಲಿತ ಸಮುದಾಯದ ಕಂಟೆಂಟ್ ಕ್ರಿಯೇಟರ್ ನಿಶು ಆಜಾದ್ ಮತ್ತು ಅವರ ಕುಟುಂಬಕ್ಕೆ ಮೊಬೈಲ್‌ ಫೋನ್‌ ಮೂಲಕ ನಿರಂತರ ಕಿರುಕುಳ ಸಂದೇಶ ಬರುತ್ತಿವೆ ಎಂದು...

ಉತ್ತರ ಪ್ರದೇಶ| 8ನೇ ತರಗತಿಯ ದಲಿತ ವಿದ್ಯಾರ್ಥಿಗೆ ಶಿಕ್ಷಕಿಯಿಂದ ಜಾತಿ ತಾರತಮ್ಯ

ಉತ್ತರ ಪ್ರದೇಶದ ಲಖಿಂಪುರ ಖೇರಿ ಜಿಲ್ಲೆಯ ಸರ್ಕಾರಿ ಉನ್ನತ ಪ್ರಾಥಮಿಕ ಶಾಲೆಯ 8ನೇ ತರಗತಿಯ ವಿದ್ಯಾರ್ಥಿಯೊಬ್ಬರು ಶಿಕ್ಷಕಿಯಿಂದ ಜಾತಿ ಆಧಾರಿತ ತಾರತಮ್ಯ ಎಸಗಲಾಗಿದೆ ಎಂದು ಆರೋಪಿಸಿದ್ದಾನೆ. ಕೃಷ್ಣ ಎಂದು ಗುರುತಿಸಲ್ಪಟ್ಟ ಈ ವಿದ್ಯಾರ್ಥಿ ಪರಿಶಿಷ್ಟ...

ಯೆಮನ್ | ಸಂಪೂರ್ಣ ರೆಡ್ ಸೀ ಕರಾವಳಿಯನ್ನು ನಿಯಂತ್ರಣಕ್ಕೆ ತೆಗೆದುಕೊಂಡ ಹೌತಿ ಪಡೆ : ಮಂದೇಬ್ ಜಲಸಂಧಿ ಮೇಲೆಯೂ ಹಿಡಿತ ಸಾಧಿಸಿರುವುದಾಗಿ ವರದಿ

ಮಹತ್ವದ ಬೆಳವಣಿಗೆಯಲ್ಲಿ, ಹೌತಿ ಬಂಡುಕೋರರು ಯೆಮನ್‌ನ ಇಡೀ ಕೆಂಪು ಸಮುದ್ರದ (ರೆಡ್ ಸೀ) ಕರಾವಳಿಯನ್ನು ತಮ್ಮ ನಿಯಂತ್ರಣಕ್ಕೆ ತೆಗೆದುಕೊಂಡಿದ್ದಾರೆ ಎಂದು ವರದಿಯಾಗಿದೆ. ಇರಾನ್ ಬೆಂಬಲಿತ ಹೌತಿ ಸಶಸ್ತ್ರ ಪಡೆಗಳು ಯೆಮನ್ ಸರ್ಕಾರದ ನಿಯಂತ್ರಣದಲ್ಲಿದ್ದ...

ಭಾರತದ ಚುನಾವಣಾ ಪ್ರಕ್ರಿಯೆಯು ಅತ್ಯಂತ ಪಾರದರ್ಶಕವಾಗಿದೆ: ಸಿಇಸಿ ಜ್ಞಾನೇಶ್ ಕುಮಾರ್

ಭಾರತದ ಚುನಾವಣಾ ಪ್ರಕ್ರಿಯೆಯು ವಿಶ್ವದಲ್ಲೇ ಅತ್ಯಂತ ಪಾರದರ್ಶಕವಾದದ್ದು ಎಂದು ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ (ಸೆ.11) ಹೇಳಿದ್ದಾರೆ. ಗುಜರಾತ್ ವಿಶ್ವವಿದ್ಯಾಲಯದ ಅಟಲ್ ಕಲಾಂ ಸಭಾಂಗಣದಲ್ಲಿ ನಡೆದ 'ಮತಗಟ್ಟೆ ಮಟ್ಟದ ಅಧಿಕಾರಿಗಳೊಂದಿಗೆ...