Homeಅಂತರಾಷ್ಟ್ರೀಯಗಾಜಾದಲ್ಲಿ ಮತ್ತೆ ಕದನ ವಿರಾಮ ಉಲ್ಲಂಘನೆ: ಇಸ್ರೇಲ್​ ವೈಮಾನಿಕ ದಾಳಿಗೆ 21 ಜನರು ಸಾವು

ಗಾಜಾದಲ್ಲಿ ಮತ್ತೆ ಕದನ ವಿರಾಮ ಉಲ್ಲಂಘನೆ: ಇಸ್ರೇಲ್​ ವೈಮಾನಿಕ ದಾಳಿಗೆ 21 ಜನರು ಸಾವು

- Advertisement -
- Advertisement -

ಹಮಾಸ್ ಮತ್ತು ಇಸ್ರೇಲ್ ನಡುವಿನ ಕದನ ವಿರಾಮ ಮತ್ತೆ ಉಲ್ಲಂಘನೆಯಾಗಿದೆ. ಉತ್ತರ ಮತ್ತು ಮಧ್ಯ ಗಾಜಾದಾದ್ಯಂತ ಇಸ್ರೇಲ್ ನಡೆಸಿದ ಡ್ರೋನ್, ಕ್ಷಿಪಣಿ ದಾಳಿಯಲ್ಲಿ ಕನಿಷ್ಠ 24 ಪ್ಯಾಲೆಸ್ಟೀನಿಯನ್ನರು ಸಾವನ್ನಪ್ಪಿದ್ದಾರೆ. ಹಲವಾರು ಜನರು ಗಾಯಗೊಂಡಿದ್ದಾರೆ.

ಇಸ್ರೇಲ್ ವೈಮಾನಿಕ ದಾಳಿಯಲ್ಲಿ 24 ಜನರು ಸಾವನ್ನಪ್ಪಿದ್ದು, ಮಕ್ಕಳು ಸೇರಿದಂತೆ 54 ಜನರು ಗಾಯಗೊಂಡಿದ್ದಾರೆ ಎಂದು ಗಾಜಾದ ಆರೋಗ್ಯ ಅಧಿಕಾರಿಗಳು ವರದಿ ಮಾಡಿದ್ದಾರೆ.

ಎರಡು ವರ್ಷಗಳ ಯುದ್ಧದ ನಂತರ, ಅಕ್ಟೋಬರ್ 10 ರಂದು ಯುಎಸ್ ಮಧ್ಯಸ್ಥಿಕೆಯಲ್ಲಿ ಇಸ್ರೇಲ್ ಮತ್ತು ಹಮಾಸ್ ನಡುವೆ ಕದನ ವಿರಾಮ ಜಾರಿಗೆ ಬಂದ ನಂತರ ಶನಿವಾರ ಭೀಕರ ದಾಳಿ ನಡೆದಿದೆ. ಸಶಸ್ತ್ರ ಭಯೋತ್ಪಾದಕ ಗಾಜಾ ಪಟ್ಟಿಯೊಳಗಿನ ಹಳದಿ ರೇಖೆಯನ್ನು ದಾಟಿದ್ದಾನೆ. ಈ ವೇಳೆ ಇಸ್ರೇಲ್​ ಸೈನಿಕರ ಮೇಲೆ ಗುಂಡು ಹಾರಿಸಿದ್ದಾನೆ ಎಂದು ಇಸ್ರೇಲ್​ ಮಿಲಿಟರಿ ಹೇಳಿದೆ.

ದಕ್ಷಿಣ ಗಾಜಾದಲ್ಲಿ ನಡೆದ ಘಟನೆಗೆ ಪ್ರತಿಕ್ರಿಯೆಯಾಗಿ, ಗಾಜಾ ಪಟ್ಟಿಯಲ್ಲಿರುವ ಭಯೋತ್ಪಾದಕ ತಾಣಗಳ ಮೇಲೆ ದಾಳಿ ಮಾಡಲು ಪ್ರಾರಂಭಿಸಿದೆ ಎಂದು ಇಸ್ರೇಲ್ ಸೇನೆ ತಿಳಿಸಿದೆ. ಹಮಾಸ್ ನಡೆಸುತ್ತಿರುವ ಗಾಜಾದಲ್ಲಿನ ಆರೋಗ್ಯ ಸಚಿವಾಲಯದ ಪ್ರಕಾರ, ಗುರುವಾರದ ವೇಳೆಗೆ, ಕದನ ವಿರಾಮ ಆರಂಭವಾದಾಗಿನಿಂದ ಇಸ್ರೇಲ್​ ಗುಂಡಿನ ದಾಳಿಯಲ್ಲಿ 312 ಪ್ಯಾಲೆಸ್ಟೀನಿಯನ್ನರು ಸಾವನ್ನಪ್ಪಿದ್ದಾರೆ.

ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರ ಕಚೇರಿ ಹಮಾಸ್ ಕದನ ವಿರಾಮ ಒಪ್ಪಂದವನ್ನು ಉಲ್ಲಂಘಿಸಿದೆ ಎಂದು ಆರೋಪಿಸಿದೆ. ಹಮಾಸ್ ಮತ್ತೆ ಕದನ ವಿರಾಮವನ್ನು ಉಲ್ಲಂಘಿಸಿದೆ, ಐಡಿಎಫ್ ಸೈನಿಕರ ಮೇಲೆ ದಾಳಿ ಮಾಡಲು ಇಸ್ರೇಲ್ ವಶದಲ್ಲಿರುವ ಪ್ರದೇಶಕ್ಕೆ ಭಯೋತ್ಪಾದಕನನ್ನು ಕಳುಹಿಸಿದೆ.ಇದಕ್ಕೆ ಪ್ರತಿಕ್ರಿಯೆಯಾಗಿ ಹಮಾಸ್ ನ ಐವರು ಹಿರಿಯ ಬಂಡುಕೋರರನ್ನು ಇಸ್ರೇಲ್ ಹತ್ಯೆ ಮಾಡಿರುವುದಾಗಿ ಅದು ಸಾಮಾಜಿಕ ಜಾಲತಾಣ X ನಲ್ಲಿ ಪೋಸ್ಟ್ ಮಾಡಿದೆ. 

ಇಸ್ರೇಲ್​ ಉಲ್ಲಂಘನೆ ಹೆಚ್ಚಳ “ಕದನ ವಿರಾಮವನ್ನು ದುರ್ಬಲಗೊಳಿಸುವ ಪ್ರಯತ್ನಗಳು” ಎಂದು ಹಮಾಸ್ ತನ್ನ ಹೇಳಿಕೆಯಲ್ಲಿ ತಿಳಿಸಿದ್ದು, ಮಧ್ಯವರ್ತಿಗಳು ತುರ್ತಾಗಿ ಮಧ್ಯಪ್ರವೇಶಿಸಿ ಈ ಉಲ್ಲಂಘನೆಗಳನ್ನು ತಕ್ಷಣವೇ ನಿಲ್ಲಿಸಲು ಒತ್ತಡ ಹಾಕುವಂತೆ ಒತ್ತಾಯಿಸಿದೆ. ಪ್ಯಾಲೆಸ್ಟೀನಿಯನ್ ವಿದೇಶಾಂಗ ಸಚಿವಾಲಯ ಈ ದಾಳಿಗಳನ್ನು ಖಂಡಿಸಿದೆ. ಹತ್ಯಾಕಾಂಡಗಳನ್ನು ನಿಲ್ಲಿಸಲು ಇಸ್ರೇಲ್ ಮೇಲೆ ತಕ್ಷಣ ಒತ್ತಡ ಹೇರುವಂತೆ ಅಂತಾರಾಷ್ಟ್ರೀಯ ಸಮುದಾಯವನ್ನು ಒತ್ತಾಯಿಸಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...