Homeಮುಖಪುಟಗಾಜಾ ನರಮೇಧ: ಹೈದರಾಬಾದ್‌ನಲ್ಲಿರುವ ಅಮೆರಿಕ ರಾಯಭಾರ ಕಚೇರಿ ಎದುರು ಪ್ರತಿಭಟನೆ; ವಿದ್ಯಾರ್ಥಿಗಳ ಬಂಧನ

ಗಾಜಾ ನರಮೇಧ: ಹೈದರಾಬಾದ್‌ನಲ್ಲಿರುವ ಅಮೆರಿಕ ರಾಯಭಾರ ಕಚೇರಿ ಎದುರು ಪ್ರತಿಭಟನೆ; ವಿದ್ಯಾರ್ಥಿಗಳ ಬಂಧನ

- Advertisement -
- Advertisement -

ಹೈದರಾಬಾದ್‌ನಲ್ಲಿರುವ ಅಮೆರಿಕದ ರಾಯಭಾರ ಕಚೇರಿ ಎದುರು ಗಾಜಾದಲ್ಲಿ ಇಸ್ರೇಲ್ ನಡೆಸುತ್ತಿರುವ ಸೇನಾ ಕಾರ್ಯಾಚರಣೆಗಳಿಗೆ ಅಮೆರಿಕವು ಬೆಂಬಲ ನೀಡುತ್ತಿರುವುದನ್ನು ವಿರೋಧಿಸಿ ಪ್ರತಿಭಟನೆ ನಡೆಸುತ್ತಿದ್ದ ವಿದ್ಯಾರ್ಥಿಗಳನ್ನು ಹೈದರಾಬಾದ್ ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಬಂಧಿತ ವಿದ್ಯಾರ್ಥಿಗಳನ್ನು ನರ್ಸಿಂಗಿ ಮತ್ತು ಗಚಿಬೌಲಿ ಪೊಲೀಸ್ ಠಾಣೆಗಳಿಗೆ ಕರೆದೊಯ್ಯಲಾಗಿದೆ. ನಿನ್ನೆ (ಜೂ.19)  ರಾಯಭಾರ ಕಚೇರಿ ಹೊರಗೆ ಹೆಚ್ಚಿನ ಸಂಖ್ಯೆಯ ವಿದ್ಯಾರ್ಥಿಗಳು ಸೇರಿ, ಸಾಮ್ರಾಜ್ಯಶಾಹಿ ವಿರೋಧಿ ಮತ್ತು ಝಿಯೋನಿಸ್ಟ್ ವಿರೋಧಿ ಘೋಷಣೆಗಳನ್ನು ಕೂಗಿದರು.

ಈ ಪ್ರತಿಭಟನೆಯ ಸಂದರ್ಭದಲ್ಲಿ ವಿದ್ಯಾರ್ಥಿಗಳು ‘ಝಿಯೋನಿಸಂಗೆ ಧಿಕ್ಕಾರ, ಅಮೆರಿಕನ್ ಸಾಮ್ರಾಜ್ಯಶಾಹಿಗೆ ಧಿಕ್ಕಾರ, ನೆತನ್ಯಾಹುನಿಂದ ಪ್ಯಾಲೇಸ್ತೀನ್ ಸ್ವತಂತ್ರವಾಗಲಿ,  ಅಮೆರಿಕದಿಂದ ಪ್ಯಾಲೇಸ್ತೀನ್ ಸ್ವತಂತ್ರವಾಗಲಿ’ ಎಂಬಂತಹ ಭಿತ್ತಿಪತ್ರಗಳನ್ನು ಪ್ರದರ್ಶಿಸಿದರು.

ಈ ಪ್ರತಿಭಟನೆಯನ್ನು ವಿವಿಧ ಎಡಪಂಥೀಯ ಪಕ್ಷಗಳು ಆಯೋಜಿಸಿದ್ದವು ಎಂದು ದಿ ಸಿಯಾ ಸತ್ ಡೈಲಿ ವರದಿ ಮಾಡಿದೆ.

ಈ ಪ್ರತಿಭಟನೆ ಸಂದರ್ಭದಲ್ಲಿ ಮಾತನಾಡಿದ ಸಿಪಿಐ(ಎಂಎಲ್) ಸಂಘಟನೆಯ ಸಂಧ್ಯಾ ಅವರು, “ಗಾಜಾದಲ್ಲಿ ಸಾವಿರಾರು ಜನರ ಸಾವಿಗೆ ಅಮೆರಿಕವೇ ಕಾರಣ. ಮಕ್ಕಳು, ಶಿಕ್ಷಕರು, ವೈದ್ಯರು, ಪತ್ರಕರ್ತರು ಸೇರಿದಂತೆ ಪ್ಯಾಲೆಸ್ತೀನ್‌ನ ನಿರಪರಾಧಿ ಜನರನ್ನು ಹತ್ಯಾಕಾಂಡ ನಡೆಸಲು ಇಸ್ರೇಲ್‌ಗೆ ಅಮೆರಿಕದ ಬೆಂಬಲವೇ ಕಾರಣವಾಗಿದೆ” ಎಂದು ಆಕ್ರೋಶ ವ್ಯಕ್ತಪಡಿಸಿದರು.

ಅಮೆರಿಕ ಬೆಂಬಲಿತ ಇಸ್ರೇಲ್‌ ಗಾಜಾದ ಮೇಲೆ ನಡೆಸುತ್ತಿರುವ ಈ ದಾಳಿಗಳು ಇಡೀ ವಿಶ್ವಕ್ಕೆ ಅಪಾಯಕಾರಿ. ನಾವು ಎಡಪಂಥೀಯ ಪಕ್ಷಗಳು, ಇವುಗಳನ್ನು ತಕ್ಷಣವೇ ನಿಲ್ಲಿಸುವಂತೆ ಒತ್ತಾಯಿಸುತ್ತೇವೆ ಎಂದು ಎಸ್‌ಯುಸಿಐ(ಸಿ)ನ  ಭರತ್ ತಿಳಿಸಿದರು.

ಪೊಲೀಸರು ಬಂಧಿಸಿದ ನಂತರ ನಮಗೆ ಕಿರುಕುಳ ನೀಡಲಾಯಿತು; ಪೊಲೀಸರು ನಮ್ಮ ಫೋನ್‌ಗಳನ್ನು ಬಲವಂತವಾಗಿ ಕಿತ್ತುಕೊಂಡಿದ್ದಾರೆ ಎಂದು ಆರೋಪಿಸಿದ್ದಾರೆ.

ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಸಿಪಿಐ), ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾರ್ಕ್ಸ್‌ವಾದಿ-ಲೆನಿನಿಸ್ಟ್) ನ್ಯೂ ಡೆಮಾಕ್ರಸಿ, ಸಿಪಿಐ(ಎಂಎಲ್)ಎನ್‌ಡಿ, ಸಿಪಿಐ(ಎಂಎಲ್)ಮಾಸ್‌ಲೈನ್, ಸಿಪಿಐ(ಎಂಎಲ್), ಮಾರ್ಕ್ಸ್‌ವಾದಿ ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಯುನೈಟೆಡ್), ಆಲ್ ಇಂಡಿಯಾ ಫಾರ್ವರ್ಡ್ ಬ್ಲಾಕ್ (ಎಐಎಫ್‌ಬಿ), ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾರ್ಕ್ಸ್‌ವಾದಿ-ಲೆನಿನಿಸ್ಟ್) ಲಿಬರೇಷನ್, ರೆವಲ್ಯೂಷನರಿ ಸೋಶಿಯಲಿಸ್ಟ್ ಪಾರ್ಟಿ (ಆರ್‌ಎಸ್‌ಪಿ) ಮತ್ತು ಸೋಶಿಯಲಿಸ್ಟ್ ಯೂನಿಟಿ ಸೆಂಟರ್ ಆಫ್ ಇಂಡಿಯಾ (ಕಮ್ಯುನಿಸ್ಟ್) (ಎಸ್‌ಯುಸಿಐ(ಸಿ)) ಸೇರಿದಂತೆ ಎಡಪಂಥೀಯ ಪಕ್ಷಗಳಿಗೆ ಸೇರಿದ ವಿದ್ಯಾರ್ಥಿಗಳು ಈ ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.

ಇಸ್ರೇಲ್-ಇರಾನ್ ಯುದ್ಧಕ್ಕೆ ಅಮೆರಿಕ ಎಂಟ್ರಿ | 2 ವಾರಗಳಲ್ಲಿ ನಿರ್ಧರಿಸುತ್ತೇನೆ ಎಂದ ಟ್ರಂಪ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ನಾಸಿಕ್‌| ಅಧಿಕಾರಿಯ ಮೇಜಿನ ಮೇಲೆ ಬೀದಿ ನಾಯಿಗಳನ್ನು ಬಿಟ್ಟ ಪ್ರತಿಭಟನಾಕಾರರು

ಮಹಾರಾಷ್ಟ್ರದ ನಾಸಿಕ್ ಜಿಲ್ಲೆಯ ನಿಫಾದ್ ನಗರ ಪಂಚಾಯತ್ ವ್ಯಾಪ್ತಿಯಲ್ಲಿ ಬೀದಿ ನಾಯಿಗಳ ಹಾವಳಿಯನ್ನು ಖಂಡಿಸಿ ಮತ್ತು ಅಧಿಕಾರಿಗಳ ನಿರ್ಲಕ್ಷ್ಯವನ್ನು ಖಂಡಿಸಿದ ಪ್ರತಿಭಟನಾಕಾರರ ಗುಂಪೊಂದು ನಗರ ಪಂಚಾಯತ್ ಅಧಿಕಾರಿಯ ಮೇಜಿನ ಮೇಲೆ ಬೀದಿ ನಾಯಿಗಳನ್ನು...

ವಿವಾಹಿತೆ ಮೇಲೆ ಅತ್ಯಾಚಾರ ಆರೋಪ : ಬಿಜೆಪಿ ಮಾಜಿ ಶಾಸಕನ ವಿರುದ್ಧ ಎಫ್‌ಐಆರ್

ಗನ್‌ ಪಾಯಿಂಟ್‌ ಇಟ್ಟು ಬೆದರಿಸಿ 22 ವರ್ಷದ ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ ಪ್ರಕರಣದಲ್ಲಿ ಮಹಾರಾಷ್ಟ್ರದ ಬಿಜೆಪಿ ಮಾಜಿ ಶಾಸಕ ಮತ್ತು ವಜಾಗೊಂಡಿರುವ ಪೊಲೀಸ್ ಸಿಬ್ಬಂದಿಯೊಬ್ಬರ ವಿರುದ್ಧ ಗುರುವಾರ (ಸೆ.17)...

ಬ್ರಿಕ್ಸ್ ಶೃಂಗಸಭೆಯಲ್ಲಿ ಸಂಪೂರ್ಣ ಸಸ್ಯಹಾರಿ ಮೆನು; ಶಿವಸೇನೆ ತೀವ್ರ ವಾಗ್ದಾಳಿ

ದೆಹಲಿಯಲ್ಲಿ ನಡೆದ 18ನೇ ಬ್ರಿಕ್ಸ್ ಶೃಂಗಸಭೆಯಲ್ಲಿ ವಿದೇಶಿ ಪ್ರತಿನಿಧಿಗಳಿಗೆ ಕೇವಲ ಸಸ್ಯಹಾರಿ ಆಹಾರವನ್ನು ಬಡಿಸಿರುವುದನ್ನು ಖಂಡಿಸಿರುವ ಶಿವಸೇನೆ (ಯುಬಿಟಿ) ಗುರುವಾರ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದೆ. ಇದು ಅಂತರರಾಷ್ಟ್ರೀಯ ಅತಿಥಿಗಳ ಮೇಲೆ...

ದೆಹಲಿ ಎಸ್‌ಐಆರ್: ಮತದಾರರ ಪಟ್ಟಿಯಿಂದ ಹೆಸರುಗಳ ಡಿಲೀಟ್ ಪ್ರಶ್ನಿಸಿ ಅರ್ಜಿ; ವಿಚಾರಣೆಗೆ ಸುಪ್ರೀಂ ಕೋರ್ಟ್ ಒಪ್ಪಿಗೆ

ದೆಹಲಿಯಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಅಭಿಯಾನದಡಿ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದನ್ನು ಪ್ರಶ್ನಿಸಿ ಸಲ್ಲಿಕೆಯಾಗಿರುವ ಅರ್ಜಿಯ ವಿಚಾರಣೆಯನ್ನು ಸೆಪ್ಟೆಂಬರ್ 21ರಂದು ನಡೆಸಲು ಸುಪ್ರೀಂ ಕೋರ್ಟ್ ಗುರುವಾರ ಒಪ್ಪಿಗೆ ಸೂಚಿಸಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್...

ಕೇರಳ | ಮಿತಿಗಿಂತ ಹೆಚ್ಚು ಮದ್ಯ ಸಂಗ್ರಹ ಆರೋಪ : ರಿಪೋರ್ಟರ್ ಟಿವಿ ಎಂಡಿ ಆಂಟೋ ಆಗಸ್ಟಿನ್ ಬಂಧನ

ಕೇರಳ ಅಬಕಾರಿ ಇಲಾಖೆಯು ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ವ್ಯವಸ್ಥಾಪಕ ನಿರ್ದೇಶಕ (ಎಂಡಿ) ಆಂಟೋ ಆಗಸ್ಟಿನ್ ಅವರನ್ನು ಗುರುವಾರ (ಸೆ.17) ಮುಂಜಾನೆ ಬಂಧಿಸಿದೆ. ಎರ್ನಾಕುಲಂನಲ್ಲಿರುವ ಸುದ್ದಿ ವಾಹಿನಿಯ ಕಚೇರಿಯಿಂದ ಮುಂಜಾನೆ ಸುಮಾರು...

ದೆಹಲಿ: ಜಾಮೀನು ಸಿಕ್ಕ ಬೆನ್ನಲ್ಲೇ ಸ್ವತಂತ್ರ ಭಾರದ್ವಾಜ್ ವಿಡಿಯೋ ವೈರಲ್; ಷರತ್ತು ಉಲ್ಲಂಘನೆ ಆರೋಪ!

ಜಂತರ್ ಮಂತರ್‌ನಲ್ಲಿ ದಲಿತ ವಿದ್ಯಾರ್ಥಿ ಹೋರಾಟಗಾರ್ತಿ ನಿಶು ಆಜಾದ್ ಅವರ ತಂದೆಯ ಮೇಲೆ ಹಲ್ಲೆ ನಡೆಸಿದ ಆರೋಪದಲ್ಲಿ ಬಂಧಿತರಾಗಿದ್ದ ಹಿಂದುತ್ವ ಪ್ರಭಾವಿ ಸ್ವತಂತ್ರ ಭಾರದ್ವಾಜ್ ಅವರಿಗೆ ದೆಹಲಿ ನ್ಯಾಯಾಲಯ ಮೂರು ವಾರಗಳ ಮಧ್ಯಂತರ...

ಸರ್ಕಾರದ ಹಸ್ತಕ್ಷೇಪದಿಂದ ಕ್ಯಾಂಪಸ್ ನಿರ್ಬಂಧದವರೆಗೆ: ಭಾರತದಲ್ಲಿ ಶೈಕ್ಷಣಿಕ ಸ್ವಾತಂತ್ರ್ಯದ ಕುಸಿತ ಬಯಲಿಗೆಳೆದ ಜಾಗತಿಕ ವರದಿ 

ಭಾರತದಲ್ಲಿ ಶೈಕ್ಷಣಿಕ ಸ್ವಾತಂತ್ರ್ಯವು ತೀವ್ರವಾಗಿ ನಿರ್ಬಂಧಿತವಾಗಿದ್ದು, ಉನ್ನತ ಶಿಕ್ಷಣ ಸಂಸ್ಥೆಗಳ ಮೇಲೆ ಸರ್ಕಾರದ ಹೆಚ್ಚುತ್ತಿರುವ ಹಸ್ತಕ್ಷೇಪ, ಕ್ಯಾಂಪಸ್‌ಗಳಲ್ಲಿ ಶೈಕ್ಷಣಿಕ ಮತ್ತು ರಾಜಕೀಯ ಅಭಿವ್ಯಕ್ತಿಯ ಮೇಲಿನ ನಿರ್ಬಂಧಗಳು, ವಿದ್ವಾಂಸರು ಹಾಗೂ ವಿದ್ಯಾರ್ಥಿಗಳ ವಿರುದ್ಧದ ಕ್ರಮಗಳು...

ಬಿಹಾರ| ದಲಿತ ಯುವಕನ ವಿವಾಹವಾದ ಯುವತಿ; ಮಗಳ ಸಾಂಕೇತಿಕ ಅಂತ್ಯಕ್ರಿಯೆ ನಡೆಸಿದ ಪೋಷಕರು

ತಮ್ಮ 18 ವರ್ಷದ ಮಗಳು ಅಂತರ್ಜಾತಿ ವಿವಾಹವಾಗಿದ್ದಕ್ಕೆ ತೀವ್ರ ಆಕ್ರೋಶ ವ್ಯಕ್ತಪಡಿಸಿರುವ ಪೋಷಕರು, ಆಕೆಗೆ ಸಾಂಕೇತಿಕವಾಗಿ ಅಂತ್ಯಕ್ರಿಯೆ ನಡೆಸಿದ ಘಟನೆ ಬಿಹಾರದ ಪೂರ್ಣಿಯಾದಲ್ಲಿ ಬೆಳಕಿಗೆ ಬಂದಿದೆ. ಯುವತಿಯ ಫೋಟೋವಿರುವ ಪ್ರತಿಕೃತಿಯನ್ನು ಸಿದ್ಧಪಡಿಸಿ ಊರಿನಲ್ಲಿ ಶವಯಾತ್ರೆ...

ಸ್ವಇಚ್ಛೆಯಿಂದ ಇಸ್ಲಾಂ ಸ್ವೀಕಾರ : ಆಯುಷ್ ಮಲಿಕ್‌ರನ್ನು ಗೃಹಬಂಧನದಿಂದ ಬಿಡುಗಡೆಗೊಳಿಸಿದ ಅಲಹಾಬಾದ್ ಹೈಕೋರ್ಟ್

ತಾನು ಸ್ವಇಚ್ಛೆಯಿಂದ ಇಸ್ಲಾಂ ಧರ್ಮವನ್ನು ಸ್ವೀಕರಿಸಿರುವುದಾಗಿ ಮತ್ತು ಆ ನಂತರ ತನ್ನ ತಂದೆಯೇ ತನಗೆ ಬೆದರಿಕೆ ಹಾಕಿ, ಕಾನೂನುಬಾಹಿರವಾಗಿ ಗೃಹಬಂಧನದಲ್ಲಿ ಇರಿಸಿದ್ದರು ಎಂದು ಆರೋಪಿಸಿದ್ದ ಆಯುಷ್ ಮಲಿಕ್ ಎಂಬ 31 ವರ್ಷದ ಯುವಕನನ್ನು...

ಬಿಜ್ನೋರ್‌ನಲ್ಲಿ ಮುಸ್ಲಿಂ ಶಿಕ್ಷಕನ ಗುಂಡಿಕ್ಕಿ ಹತ್ಯೆ: ‘ಲವ್ ಜಿಹಾದ್’ ಆರೋಪ; ವೈಯಕ್ತಿಕ ದ್ವೇಷದ ಬಗ್ಗೆಯೂ ಪೊಲೀಸರಿಂದ ತನಿಖೆ 

ಬಿಜ್ನೋರ್: ಉತ್ತರ ಪ್ರದೇಶದ ಬಿಜ್ನೋರ್ ಜಿಲ್ಲೆಯಲ್ಲಿ 43 ವರ್ಷದ ಮುಸ್ಲಿಂ ಸರ್ಕಾರಿ ಪ್ರಾಥಮಿಕ ಶಾಲಾ ಶಿಕ್ಷಕನೊಬ್ಬರನ್ನು ರೈತನೊಬ್ಬ ಗುಂಡಿಕ್ಕಿ ಹತ್ಯೆ ಮಾಡಿರುವ ಘಟನೆ ನಡೆದಿದೆ. ಶಿಕ್ಷಕ ನೌಶಾದ್ ಅಹ್ಮದ್ ಅವರು ‘ಲವ್ ಜಿಹಾದ್’...