Homeಅಂತರಾಷ್ಟ್ರೀಯಗಾಝಾ: ಸಂಸತ್ತು, ಸರ್ಕಾರಿ ಕಚೇರಿಗಳನ್ನು ವಶಪಡಿಸಿಕೊಂಡ ಇಸ್ರೇಲ್‌ ಸೇನೆ

ಗಾಝಾ: ಸಂಸತ್ತು, ಸರ್ಕಾರಿ ಕಚೇರಿಗಳನ್ನು ವಶಪಡಿಸಿಕೊಂಡ ಇಸ್ರೇಲ್‌ ಸೇನೆ

- Advertisement -
- Advertisement -

ಗಾಝಾ ನಗರದಲ್ಲಿ ಹಮಾಸ್ ನಡೆಸುತ್ತಿದ್ದ ಸಂಸತ್ತು ಮತ್ತು ಇತರ ಸರ್ಕಾರಿ ಸಂಸ್ಥೆಗಳನ್ನು ವಶಪಡಿಸಿಕೊಂಡಿರುವುದಾಗಿ ಇಸ್ರೇಲ್‌ ಸೇನೆ ಹೇಳಿದೆ.

ಇಸ್ರೇಲ್‌ನ ಮಿಲಿಟರಿ ಘಟಕಗಳು ಹಮಾಸ್ ಸಂಸತ್ತು, ಸರ್ಕಾರಿ ಕಟ್ಟಡ, ಹಮಾಸ್ ಪೊಲೀಸ್ ಪ್ರಧಾನ ಕಚೇರಿ ಮತ್ತು  ಶಸ್ತ್ರಾಸ್ತ್ರಗಳ ಉತ್ಪಾದನೆ ಸಂಸ್ಥೆಯಾಗಿ ಕಾರ್ಯನಿರ್ವಹಿಸುತ್ತಿದ್ದ ಘಟಕವನ್ನು ಕೂಡ ವಶಪಡಿಸಿಕೊಂಡಿದೆ ಎಂದು ಸೇನೆಯು ಹೇಳಿಕೆಯಲ್ಲಿ ತಿಳಿಸಿದೆ.

ವೆಸ್ಟ್‌ಬ್ಯಾಂಕ್‌ನಲ್ಲಿ ಇಸ್ರೇಲ್ ಪಡೆಗಳ ದಾಳಿಯಿಂದಾಗಿ 8 ಮಂದಿ ಪ್ಯಾಲೆಸ್ತೀನಿಯನ್ನರು ಸಾವಿಗೀಡಾಗಿದ್ದಾರೆ . ತುಲ್ಕರೇಮ್‌ ನಗರದಲ್ಲಿ ಇಸ್ರೇಲ್‌ ಸೇನೆ ನಡೆಸಿದ ಕಾರ್ಯಾಚರಣೆಯಲ್ಲಿ 7 ಮಂದಿ ಸಾವಿಗೀಡಾಗಿದ್ದಾರೆ ಎಂದು  ಪ್ಯಾಲೆಸ್ತೀನ್‌ ಆರೋಗ್ಯ ಸಚಿವಾಲಯ ಮಾಹಿತಿ ನೀಡಿದೆ.

ಸೋಮವಾರ ಅಲ್ ಶಿಫಾ ಆಸ್ಪತ್ರೆಯ ಗೇಟ್‌ಗಳ ಹೊರಗೆ ಇಸ್ರೇಲ್‌ ಯುದ್ಧ ಟ್ಯಾಂಕ್‌ಗಳನ್ನು ನಿಲ್ಲಿಸಿತ್ತು. ಅಲ್ ಶಿಫಾ ಆಸ್ಪತ್ರೆಯ ಆವರಣದಲ್ಲಿ  ಇಸ್ರೇಲ್‌ ಸೇನೆ ನಡೆಸಿದ ದಾಳಿಯಲ್ಲಿ ವಿದ್ಯುತ್‌ ವ್ಯತ್ಯಯ ಉಂಟಾಗಿ ಅಲ್ ಶಿಫಾ ಆಸ್ಪತ್ರೆಯಲ್ಲಿ ನೂರಾರು ಸಾವುಗಳು ಸಂಭವಿಸಿದೆ. ನಿನ್ನೆ ಆಸ್ಪತ್ರೆಯ ಆವರಣದಲ್ಲೇ ನವಜಾತ ಶಿಶುಗಳು ಸೇರಿ 179 ಮಂದಿಯನ್ನು ಸಾಮೂಹಿಕವಾಗಿ ಸಮಾಧಿ ಮಾಡಲಾಗಿದೆ.

ಅಲ್ ಶಿಫಾ ಆಸ್ಪತ್ರೆಯು ಗಾಝಾ ನಗರದ ಅತಿದೊಡ್ಡ ಆಸ್ಪತ್ರೆಯಾಗಿದೆ. ಇಸ್ರೇಲ್‌ ಪಡೆ ಇದೀಗ ಆಸ್ಪತ್ರೆಯ ಗೇಟ್‌ನ್ನು ಸುತ್ತುವರಿದಿದೆ. ಆಸ್ಪತ್ರೆಯ ಆವರಣದ ಬಳಿ ಇಸ್ರೇಲ್‌ ದಾಳಿ ಬಳಿಕ ಆಸ್ಪತ್ರೆಗೆ ವಿದ್ಯುತ್‌ ಕೊರತೆ  ಉಂಟಾಗಿದೆ. ಆಮ್ಲಜನಕದ ಕೊರತೆಯಿಂದ ನವಜಾತ ಶಿಶುಗಳ ಸಾವು ಸಂಭವಿಸಿದೆ. ಐಸಿಯು ಘಟಕಗಳ ಸ್ಥಗಿತದಿಂದ ಅಪಾರ ಸಾವುಗಳು ಸಂಭವಿಸಿದೆ.

ರೋಗಿಗಳು, ಸಿಬ್ಬಂದಿ ಮತ್ತು ಸ್ಥಳಾಂತರಗೊಂಡ ನಾಗರಿಕರು ಸೇರಿದಂತೆ 10,000ಕ್ಕೂ ಹೆಚ್ಚು ಜನರು ಅಲ್ ಶಿಫಾದೊಳಗೆ ಇರಬಹುದು ಎನ್ನಲಾಗಿದೆ. ಆದರೆ ಆಸ್ಪತ್ರೆ ಸುತ್ತ ಇಸ್ರೇಲ್‌ ಪಡೆಗಳು ಆವರಿಸಿದ ಕಾರಣ ತೆರವಿಗೆ ಸಮಸ್ಯೆಯಾಗಿದೆ.

ಆಸ್ಪತ್ರೆಯ ಶಸ್ತ್ರಚಿಕಿತ್ಸೆ ವಿಭಾಗದ ಮುಖ್ಯಸ್ಥ ಮರ್ವಾನ್ ಅಬು ಸದಾ ಮಾತನಾಡಿ, ಅಲ್-ಶಿಫಾದ ಹೊರಗೆ ಎಲ್ಲೆಡೆ ಗುಂಡಿನ ದಾಳಿ ಮತ್ತು ಬಾಂಬ್ ದಾಳಿ ನಡೆದಿದೆ. ನೀವು ದಾಳಿಯ ಶಬ್ಧವನ್ನು ಪ್ರತಿ ಸೆಕೆಂಡಿನಲ್ಲಿ ಕೇಳಬಹುದು. ಅಲ್-ಶಿಫಾ ಆಸ್ಪತ್ರೆಯಿಂದ ಯಾರೂ ಹೊರಬರಲು ಸಾಧ್ಯವಾಗುತ್ತಿಲ್ಲ. ಯಾರೂ ಅಲ್-ಶಿಫಾ ಆಸ್ಪತ್ರೆಗೆ ಬರುವಂತಿಲ್ಲ ಎಂದು ಅವರು ಹೇಳಿದ್ದರು.

ಹಮಾಸ್‌ ಸಶಸ್ತ್ರ ಗುಂಪು ಅ.7 ರಂದು ದಕ್ಷಿಣ ಇಸ್ರೇಲ್‌ ಮೇಲೆ ನಡೆಸಿದ ದಾಳಿಯಲ್ಲಿ ಸುಮಾರು 1,200 ಜನರು ಮೃತಪಟ್ಟಿದ್ದು, 240 ಜನರನ್ನು ಒತ್ತೆಯಾಳುಗಳಾಗಿ ಇರಿಸಲಾಗಿತ್ತು. ಇದಕ್ಕೆ ಪ್ರತಿಯಾಗಿ ಇಸ್ರೇಲ್‌ ಯುದ್ಧ ಘೋಷಿಸಿ ನಡೆಸಿದ ದಾಳಿಯಲ್ಲಿ 11,200ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದಾರೆ ಎಂದು ಗಾಝಾ ವೈದ್ಯಕೀಯ ಅಧಿಕಾರಿಗಳು ದೃಢಪಡಿಸಿದ್ದಾರೆ. ಮೃತರಲ್ಲಿ 40% ಮಕ್ಕಳಿದ್ದಾರೆ ಎಂದು ಪ್ಯಾಲೆಸ್ತೀನ್‌ ಸಚಿವಾಲಯವು ತಿಳಿಸಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗ್ರೀನ್ ಕೇವ್ ನಿಂದ ಪ್ರವಾಸಿಗರನ್ನು ದೂರವಿಡಿ: ಛತ್ತೀಸ್‌ಗಢ ಸರ್ಕಾರಕ್ಕೆ ಪರಿಸರವಾದಿಗಳ ಎಚ್ಚರಿಕೆ

ರಾಯ್‌ಪುರ: ಒಂದು ಕಾಲದಲ್ಲಿ ಮಾವೋವಾದಿ ಪೀಡಿತ ಬಸ್ತಾರ್ ಜಿಲ್ಲೆಯ ಕಾಂಗರ್ ಕಣಿವೆ ರಾಷ್ಟ್ರೀಯ ಉದ್ಯಾನವನದಲ್ಲಿರುವ ಅಪರೂಪದ ಮತ್ತು ಪರಿಸರ ಸೂಕ್ಷ್ಮ 'ಹಸಿರು ಗುಹೆ'ಯನ್ನು ಪ್ರವಾಸಿಗರಿಗೆ ತೆರೆಯಲು ಛತ್ತೀಸ್‌ಗಢ ಸರ್ಕಾರ ನಿರ್ಧರಿಸಿದ್ದು, ಈ ಕ್ರಮಕ್ಕೆ...

ಅಹಮದಾಬಾದ್: ಅಮೃತಸರದಿಂದ ಮುಂಬೈಗೆ ಚಲಿಸುತ್ತಿದ್ದ ರೈಲಿನಲ್ಲಿ ಭಾರೀ ಮೌಲ್ಯದ ಕೊಕೇನ್ ಜಾಲ ಪತ್ತೆ

ಅಹಮದಾಬಾದ್: ಅಮೃತಸರ-ಮುಂಬೈ ಗೋಲ್ಡನ್ ಟೆಂಪಲ್ ಮೇಲ್ ರೈಲಿನ ಮೇಲೆ ತಡರಾತ್ರಿ ನಡೆದ ದಾಳಿಯಲ್ಲಿ ಮಿಜೋರಾಂ ಯುವಕನೊಬ್ಬ 2.19 ಕೋಟಿ ರೂ.ಗೂ ಹೆಚ್ಚು ಮೌಲ್ಯದ ಕೊಕೇನ್ ಮತ್ತು ಮೆಥಾಂಫೆಟಮೈನ್‌ನೊಂದಿಗೆ ಸಿಕ್ಕಿಬಿದ್ದ ನಂತರ ಬಹು ನಗರ,...

ನಿಲುವು ಬದಲಿಸಿದ ಸಿಪಿಐ(ಎಂ) : ವಿಎಸ್ ಅಚ್ಯುತಾನಂದನ್ ಅವರ ಪದ್ಮವಿಭೂಷಣ ಪ್ರಶಸ್ತಿ ಸ್ವೀಕರಿಸಲು ನಿರ್ಧಾರ

ತನ್ನ ದೀರ್ಘಕಾಲದ ಸೈದ್ಧಾಂತಿಕ ನಿಲುವಿಗಿಂತ ಭಿನ್ನಾಭಿಪ್ರಾಯ ವ್ಯಕ್ತಪಡಿಸಿರುವ ಸಿಪಿಐ(ಎಂ), ಪಕ್ಷದ ದಂತಕಥೆ ಮತ್ತು ಕೇರಳದ ಮಾಜಿ ಮುಖ್ಯಮಂತ್ರಿ ವಿ.ಎಸ್ ಅಚ್ಯುತಾನಂದನ್ ಅವರಿಗೆ ಮರಣೋತ್ತರವಾಗಿ ನೀಡಲಾಗುವ ಪದ್ಮವಿಭೂಷಣ ಪ್ರಶಸ್ತಿಯನ್ನು ಸ್ವೀಕರಿಸಲು ನಿರ್ಧರಿಸಿದೆ. ಕಮ್ಯುನಿಸ್ಟರು ಆಡಳಿತ ಅಥವಾ...

2024ರ ಪ್ರತಿಭಟನೆ ದಮನ ಪ್ರಕರಣ: ಬಾಂಗ್ಲಾದೇಶದ ಮಾಜಿ ಪೊಲೀಸ್ ಮುಖ್ಯಸ್ಥ ಹಬೀಬುರ್ ರೆಹಮಾನ್‌ಗೆ ಮರಣದಂಡನೆ

ಢಾಕಾ: ಪದಚ್ಯುತ ಪ್ರಧಾನಿ ಶೇಖ್ ಹಸೀನಾ ಅವರ ಆಳ್ವಿಕೆಯಲ್ಲಿ ನಡೆದ ಮಾನವೀಯತೆಯ ವಿರುದ್ಧದ ಅಪರಾಧಗಳಿಗಾಗಿ ಬಾಂಗ್ಲಾದೇಶ ನ್ಯಾಯಾಲಯವು ಸೋಮವಾರ ಢಾಕಾದ ಮಾಜಿ ಪೊಲೀಸ್ ಮುಖ್ಯಸ್ಥ ಮತ್ತು ಇಬ್ಬರು ಹಿರಿಯ ಸಹೋದ್ಯೋಗಿಗಳಿಗೆ ಮರಣದಂಡನೆ ವಿಧಿಸಲಾಗಿದೆ.  ರಾಜಧಾನಿಯ...

ಕೇರಳ, ತಮಿಳುನಾಡು, ಪ. ಬಂಗಾಳದ 32 ಮಂದಿಗೆ ‘ಪದ್ಮ’ ಪ್ರಶಸ್ತಿ : ವಿಧಾನಸಭೆ ಚುನಾವಣೆ ಮೇಲೆ ಬಿಜೆಪಿ ಕಣ್ಣು?

ಗಣರಾಜ್ಯೋತ್ಸವದ ಮುನ್ನಾದಿನದಂದು ಘೋಷಿಸಲಾದ 131 'ಪದ್ಮ ಪ್ರಶಸ್ತಿ'ಗಳಲ್ಲಿ, 38 ಪ್ರಶಸ್ತಿಗಳು ಈ ವರ್ಷ ವಿಧಾನಸಭೆ ಚುನಾವಣೆ ನಡೆಯಲಿರುವ ಕೇರಳ, ತಮಿಳುನಾಡು, ಪಶ್ಚಿಮ ಬಂಗಾಳ, ಅಸ್ಸಾಂ ಮತ್ತು ಪುದುಚೇರಿಯ ಪಾಲಾಗಿವೆ. ದೇಶದ ಎರಡನೇ ಅತ್ಯುನ್ನತ...

‘ಏಕರೂಪ ಭಾರತವನ್ನಲ್ಲ, ಏಕೀಕೃತ ಭಾರತವನ್ನ ಸಂಭ್ರಮಿಸೋಣ’: ತಮಿಳುನಾಡು ಸಿಎಂ ಎಂ.ಕೆ. ಸ್ಟಾಲಿನ್ 

ಚೆನ್ನೈ: ಗಣರಾಜ್ಯೋತ್ಸವವನ್ನು ಏಕರೂಪ ಭಾರತದಂತಲ್ಲದೇ ಏಕೀಕೃತ ಭಾರತವಾಗಿ ಆಚರಿಸಬೇಕೆಂದು ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಕರೆ ನೀಡಿದ್ದಾರೆ.  ಕೇಂದ್ರದಲ್ಲಿರುವ ಬಿಜೆಪಿ ಸರ್ಕಾರದ ವಿರುದ್ಧ ಪರೋಕ್ಷವಾಗಿ ವಾಗ್ದಾಳಿ ನಡೆಸಿದ ಸ್ಟಾಲಿನ್, "ಏಕರೂಪದ ಭಾರತವಲ್ಲ, ಏಕೀಕೃತ ಭಾರತವನ್ನು...

ಗಣರಾಜ್ಯೋತ್ಸವ ಪರೇಡ್ : ಸಿಆರ್‌ಪಿಎಫ್ ಪುರುಷರ ತುಕಡಿ ಮುನ್ನಡೆಸಿ ಗಮನಸೆಳೆದ ಮಹಿಳಾ ಅಧಿಕಾರಿ ಸಿಮ್ರಾನ್ ಬಾಲಾ

ದೆಹಲಿಯ ಕರ್ತವ್ಯ ಪಥದಲ್ಲಿ ನಡೆದ ಗಣರಾಜ್ಯೋತ್ಸವದ ಪರೇಡ್‌ನಲ್ಲಿ ಸಿಆರ್‌ಪಿಎಫ್ ಸಹಾಯಕ ಕಮಾಂಡೆಂಟ್ ಸಿಮ್ರಾನ್ ಬಾಲಾ ಅವರು ಅರೆಸೈನಿಕ ಪಡೆಯ ಸಂಪೂರ್ಣ ಪುರುಷರ ತುಕಡಿಯನ್ನು ಮುನ್ನಡೆಸುವ ಮೂಲಕ ಇತಿಹಾಸ ನಿರ್ಮಿಸಿದರು. ಜಮ್ಮು ಕಾಶ್ಮೀರದ ರಾಜೌರಿ ಜಿಲ್ಲೆಯವರಾದ...

ಉತ್ತರಾಖಂಡ: ಸೂಫಿ ಕವಿ ಬಾಬಾ ಬುಲ್ಲೆ ಶಾ ಅವರ ಮಂದಿರವನ್ನು ಧ್ವಂಸಗೊಳಿಸಿದ ಹಿಂದೂ ರಕ್ಷಣಾ ದಳದ ದುಷ್ಕರ್ಮಿಗಳು

ಉತ್ತರಾಖಂಡದ ಮಸ್ಸೂರಿಯಲ್ಲಿರುವ 18 ನೇ ಶತಮಾನದ ಸೂಫಿ ಕವಿ ಬಾಬಾ ಬುಲ್ಲೆಹ್ ಷಾ ಅವರ ದೇವಾಲಯವನ್ನು ಶುಕ್ರವಾರ ಹಿಂದೂ ರಕ್ಷಾ ದಳದೊಂದಿಗೆ ಸಂಪರ್ಕ ಹೊಂದಿರುವವರು ಧ್ವಂಸಗೊಳಿಸಿದ್ದಾರೆ ಎಂದು ಮಕ್ತೂಬ್ ಮೀಡಿಯಾ ವರದಿ ಮಾಡಿದೆ. "ಜೈ...

ಅಕ್ಷರಧಾಮ ದೇವಾಲಯ ದಾಳಿ ಪ್ರಕರಣ: 6 ವರ್ಷಗಳ ನಂತರ ಮೂವರ ಮುಸ್ಲಿಂ ವ್ಯಕ್ತಿಗಳನ್ನು ಖುಲಾಸೆಗೊಳಿಸಿದ ಅಹಮದಾಬಾದ್ ಪೋಟಾ ನ್ಯಾಯಾಲಯ

ಅಕ್ಷರಧಾಮ ದೇವಾಲಯದ ಮೇಲಿನ ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿಸಲ್ಪಟ್ಟ ಮೂವರು ಮುಸ್ಲಿಂ ಪುರುಷರನ್ನು ಕಳೆದ ವಾರ ಅಹಮದಾಬಾದ್‌ನ ವಿಶೇಷ ಭಯೋತ್ಪಾದನಾ ತಡೆ ಕಾಯ್ದೆ (ಪೋಟಾ) ನ್ಯಾಯಾಲಯವು ಖುಲಾಸೆಗೊಳಿಸಿದ್ದು, ವರ್ಷಗಳ ಕಾನೂನು ಪ್ರಕ್ರಿಯೆಗಳ ನಂತರ...

ಡಿಜಿ-ಐಜಿಪಿ ಎಂ.ಎ ಸಲೀಂ ವಿರುದ್ಧ ಸುಳ್ಳಾರೋಪ : ಕೊಲೆ ಆರೋಪಿ ಪುನೀತ್ ಕೆರೆಹಳ್ಳಿ ವಿರುದ್ಧ ಪ್ರಕರಣ ದಾಖಲು

ರಾಜ್ಯ ಪೊಲೀಸ್ ಮಹಾನಿರ್ದೇಶಕ ಹಾಗೂ ಮಹಾನಿರೀಕ್ಷಕ (ಡಿಜಿ-ಐಜಿಪಿ) ಎಂ.ಎ ಸಲೀಂ ಅವರ ವಿರುದ್ಧ ಸುಳ್ಳು ಮಾಹಿತಿ ಹರಡಿದ ಆರೋಪದ ಮೇಲೆ ಕೊಲೆ ಆರೋಪಿ ಪುನೀತ್ ಕೆರೆಹಳ್ಳಿ ವಿರುದ್ದ ಬೆಂಗಳೂರಿನ ಸೈಬರ್ ಅಪರಾಧ ಪೊಲೀಸರು...