Homeಅಂತರಾಷ್ಟ್ರೀಯಇಸ್ರೇಲ್ ಕ್ಷಿಪಣಿ ದಾಳಿಗೆ ಗಾಝಾದ ಅತೀ ಕಿರಿಯ ಮಾಧ್ಯಮ ಕಾರ್ಯಕರ್ತೆ ಯಕೀನ್ ಹಮ್ಮದ್ ಬಲಿ

ಇಸ್ರೇಲ್ ಕ್ಷಿಪಣಿ ದಾಳಿಗೆ ಗಾಝಾದ ಅತೀ ಕಿರಿಯ ಮಾಧ್ಯಮ ಕಾರ್ಯಕರ್ತೆ ಯಕೀನ್ ಹಮ್ಮದ್ ಬಲಿ

- Advertisement -
- Advertisement -

ಇಸ್ರೇಲ್ ಕ್ಷಿಪಣಿ ದಾಳಿಗೆ ಗಾಝಾದ ಅತೀ ಕಿರಿಯ ಮಾನವೀಯ, ಮಾಧ್ಯಮ ಕಾರ್ಯಕರ್ತೆ ಯಕೀನ್ ಹಮ್ಮದ್ ಬಲಿಯಾಗಿದ್ದಾರೆ ಎಂದು ವರದಿಯಾಗಿದೆ.

ಮೇ 23ರಂದು ಗಾಝಾದ ದೇರ್ ಅಲ್-ಬಲಾಹ್ ಪ್ರದೇಶದ ಅಲ್-ಬರಾಕಾ ಎಂಬಲ್ಲಿ ಇಸ್ರೇಲ್ ನಡೆಸಿದ ವಾಯುದಾಳಿಯಲ್ಲಿ ಯಕೀನ್ ಹಮ್ಮದ್ ಅವರ ಮನೆ ನೆಲಸಮವಾಗಿದೆ. ಈ ವೇಳೆ ಯಕೀನ್ ಜೊತೆ ಆಕೆಯ ತಾಯಿ ಮತ್ತು ಇಬ್ಬರು ಸಹೋದರರು ಕೂಡ ಸಾವಿಗೀಡಾಗಿದ್ದಾರೆ ಎಂದು ತಿಳಿದು ಬಂದಿದೆ.

“ಯಕೀನ್, ಇಸ್ರೇಲ್‌ ಆಕ್ರಮಣದಿಂದ ಸ್ಥಳಾಂತರಗೊಂಡ ಮತ್ತು ಅನಾಥರಾದ ಗಾಝಾದ ಮಕ್ಕಳಿಗೆ ಭರವಸೆಯ ದಾರಿ ದೀಪವಾಗಿದ್ದರು” ಎಂದು ವರದಿಗಳು ಬಣ್ಣಿಸಿವೆ.

“ವಯಸ್ಸು ಕೇವಲ 11 ಆಗಿದ್ದರೂ, ಯಕೀನ್ ಹಮ್ಮದ್ ಗಾಝಾದ ಅತ್ಯಂತ ಕಿರಿಯ ಮಾಧ್ಯಮ ಕಾರ್ಯಕರ್ತೆ ಮತ್ತು ಸ್ಥಳೀಯ ಸ್ವಯಂ ಸೇವಾ ಗುಂಪಿನ ಅತ್ಯಂತ ಕಿರಿಯ ಸದಸ್ಯೆ ಆಗಿದ್ದರು. ತನ್ನ ವಯಸ್ಸಿಗೆ ಮೀರಿದ ಬುದ್ಧಿವಂತಿಕೆಯಿಂದ, ಆಕೆ ಭಯ ಆವರಿಸಿದ್ದ ಕಂದಮ್ಮಗಳ ಮನಸ್ಸಿನಲ್ಲಿ ಭರವಸೆ ಮೂಡಿಸುತ್ತಿದ್ದರು” ಎಂದು ಕೊಂಡಾಡಿವೆ.

ಗಾಝಾದ ನಿರಾಶ್ರಿತ ಶಿಬಿರದಲ್ಲಿ ತನ್ನ ಕುಟುಂಬದೊಂದಿಗೆ ವಾಸಿಸುತ್ತಿದ್ದ ಯಕೀನ್, ತಮ್ಮ ಇನ್‌ಸ್ಟಾಗ್ರಾಂ ವಿಡಿಯೋಗಳ ಮೂಲಕ ಹತ್ತಾರು ಸಾವಿರ ಜನರನ್ನು ತಲುಪುವಲ್ಲಿ ಯಶಸ್ವಿಯಾಗಿದ್ದರು.

ಅನಾಥರು ಮತ್ತು ಸ್ಥಳಾಂತರಗೊಂಡ ಕುಟುಂಬಗಳಿಗೆ ಸಹಾಯ ಮಾಡುವ ಪ್ರಯತ್ನಗಳನ್ನು ಮತ್ತು ಅಂತಹ ಕುಟುಂಬಗಳ ಮಕ್ಕಳೊಂದಿಗೆ ನಗುತ್ತಾ ಆಟವಾಡುತ್ತಾ, ಸಂತೋಷದಿಂದ ಉಡುಗೊರೆಗಳನ್ನು ಹಂಚುತ್ತಿರುವುದನ್ನು ಯಕೀನ್ ತನ್ನ ವಿಡಿಯೋಗಳ ಮೂಲಕ ತೋರಿಸುತ್ತಿದ್ದರು.

ಇಸ್ರೇಲ್‌ನ ನಿರಂತರ ಬಾಂಬ್ ದಾಳಿಯ ನಡುವೆ ಜನರು ತಮ್ಮ ಜೀವನ ನಡೆಸಲು ಪ್ರತಿದಿನ ಹೇಗೆ ಹೋರಾಟ ಮಾಡುತ್ತಿದ್ದಾರೆ ಎಂಬುವುದನ್ನು ಯಕೀನ್ ತನ್ನ ವಿಡಿಯೋಗಳಲ್ಲಿ ದಾಖಲಿಸಿ ಹೊರ ಜಗತ್ತಿಗೆ ತೊರಿಸುತ್ತಿದ್ದರು. ಪುಟ್ಟ ಬಾಲಕಿಯ ಮಾತುಗಳು ಇಸ್ರೇಲ್‌ ನರಮೇಧ ಗಾಝಾ ಜನತೆಯ ಹಕ್ಕುಗಳನ್ನು ಹೇಗೆ ಹತ್ತಿಕ್ಕಿವೆ ಎಂಬುವುದನ್ನು ಜಗತ್ತಿಗೆ ವಿವರಿಸುತ್ತಿತ್ತು.

ಯಕೀನ್ ತನ್ನ ಅಣ್ಣ, ಮಾನವೀಯ ಕಾರ್ಯಕರ್ತ ಮೊಹಮ್ಮದ್ ಹಮ್ಮದ್ ಜೊತೆ ಸಹಾಯ ಕಾರ್ಯಗಳಲ್ಲಿ ಭಾಗವಹಿಸುತ್ತಿದ್ದರು. ಒಟ್ಟಿನಲ್ಲಿ ಅವರು ಸ್ಥಳಾಂತರಗೊಂಡ ಕುಟುಂಬಗಳಿಗೆ ಆಹಾರ, ಬಟ್ಟೆ ಮತ್ತು ಆ ಕುಟುಂಬಗಳ ಮಕ್ಕಳಿಗೆ ಆಟಿಕೆಗಳನ್ನು ತಲುಪಿಸುತ್ತಿದ್ದರು.

ತನ್ನವರನ್ನು ಕಳೆದುಕೊಂಡವರ, ವಿಶೇಷವಾಗಿ ಯುದ್ದದ ಭೀಕರತೆಗೆ ನಲುಗಿದ್ದ ಪುಟ್ಟ ಕಂದಮ್ಮಗಳ ಮುಖದಲ್ಲಿ ನಗು ತರಿಸುತ್ತಿದ್ದ ಯಕೀನ್, ಈಗ ಸಾವಿಗೀಡಾದ ಸಾವಿರಾರು ಮಕ್ಕಳ ಪಟ್ಟಿಗೆ ಸೇರಿದ್ದಾರೆ. ಆಕೆಯ ಮರಣದಿಂದ ಗಾಝಾ ಅತ್ಯಂತ ಕಿರಿಯ ಮತ್ತು ಅತ್ಯಂತ ಧೈರ್ಯಶಾಲಿ ಧ್ವನಿಗಳಲ್ಲಿ ಒಂದನ್ನು ಕಳೆದುಕೊಂಡಿದೆ.

ಯಕೀನ್ ಅವರ ಸಾವಿಗೆ ಸಂಪೂರ್ಣ ಗಾಝಾ ಮತ್ತು ಜಗತ್ತಿನ ವಿವಿಧ ಭಾಗಗಳ ಮನುಷ್ಯರು ದುಖಃ ವ್ಯಕ್ತಪಡಿಸಿದ್ದಾರೆ. ಗಾಝಾದ ಕರಾಳ ಅವಧಿಯಲ್ಲಿ ಬೆಳಕನ್ನು ಪಸರಿಸಲು ಬಂದ ಮಗುವಿನ ನಷ್ಟಕ್ಕೆ ಹೋರಾಟಗಾರರು, ಪತ್ರಕರ್ತರು ಮತ್ತು ಆಕೆಯ ಬೆಂಬಲಿಗರು ಕಂಬನಿ ಮಿಡಿದಿದ್ದಾರೆ.

“ದಿಗ್ಬಂಧನಗಳ ನಡುವೆ ಹುಟ್ಟಿ, ಬಾಂಬ್ ದಾಳಿಗಳ ನಡುವೆ ಬೆಳೆದು, ಆಘಾತಗಳಿಂದ ರೂಪುಗೊಂಡ ಯಕೀನ್, ಮೌನವಾಗಿರದೆ ಧ್ವನಿಯಾದಳು. ಆಕೆಯ ಧೈರ್ಯ ಹಲವರ ಮೇಲೆ ಶಾಶ್ವತ ಪ್ರಭಾವ ಬೀರಿತು. ಯಕೀನ್ ಅವಶೇಷಗಳ ನಡುವೆ ಮಾದರಿ ಜೀವನ ನಡೆಸಿ ಪುಟ್ಟ ಹುಡುಗಿ” ಎಂದು palestinechronicle.com ತನ್ನ ವರದಿಯಲ್ಲಿ ಯಕೀನ್ ಕುರಿತು ಹೇಳಿದೆ. 

ದೋಣಿ ದುರಂತದಲ್ಲಿ 427 ರೋಹಿಂಗ್ಯಾ ನಿರಾಶ್ರಿತರು ಮುಳುಗಿರುವ ಶಂಕೆ: UNHCR

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಟಿಎಂಸಿ ಪಕ್ಷದ ಹೆಸರು, ಚಿಹ್ನೆ ಫ್ರೀಝ್ : ಚು. ಆಯೋಗದ ಆದೇಶ ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ತೃಣಮೂಲಕ ಕಾಂಗ್ರೆಸ್ (ಟಿಎಂಸಿ) ಪಕ್ಷದ ಚಿಹ್ನೆ ಮತ್ತು ಹೆಸರನ್ನು ಭಾರತೀಯ ಚುನಾವಣಾ ಆಯೋಗ ಫ್ರೀಝ್ ಮಾಡಿರುವುದನ್ನು ಪ್ರಶ್ನಿಸಿ, ಪಕ್ಷದ ಸಂಸ್ಥಾಪಕಿ ಹಾಗೂ ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸುಪ್ರೀಂ ಕೋರ್ಟ್‌...

ನಂದಿಗ್ರಾಮದ ಬೆನ್ನಲ್ಲೇ ರೆಜಿನಗರ ಅಭ್ಯರ್ಥಿಯಿಂದಲೂ ನಾಮಪತ್ರ ವಾಪಸ್ : ಬಂಗಾಳ ಉಪ ಚುನಾವಣೆ ಕಣದಲ್ಲಿ ಮಮತಾ ಬ್ಯಾನರ್ಜಿ ಬಣಕ್ಕೆ ಮತ್ತೊಂದು ಹಿನ್ನಡೆ

ಪಶ್ಚಿಮ ಬಂಗಾಳದ ಉಪಚುನಾವಣಾ ಕಣದಲ್ಲಿ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರಿಗೆ ಮತ್ತೊಂದು ಹಿನ್ನಡೆಯಾಗಿದೆ. ನಂದಿಗ್ರಾಮದ ಬಳಿಕ ರೆಜಿನಗರ ವಿಧಾನಸಭಾ ಕ್ಷೇತ್ರದಲ್ಲೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಅಭ್ಯರ್ಥಿ ತನ್ನ ನಾಮಪತ್ರವನ್ನು ವಾಪಸ್ ಪಡೆದಿದ್ದಾರೆ...

ಅಮಾನವೀಯ ಕೃತ್ಯ : ಮಹಿಳೆಗೆ ಥಳಿಸಿ, ಕೂದಲು ಹಿಡಿದು ಎಳೆದೊಯ್ದ ಪೊಲೀಸ್ ಸಿಬ್ಬಂದಿ

ತೆಲಂಗಾಣದ ಹಫೀಝ್‌ಪೇಟ್ ರೈಲ್ವೆ ನಿಲ್ದಾಣದಲ್ಲಿ ಪೊಲೀಸ್ ಸಿಬ್ಬಂದಿಯೊಬ್ಬರು ಮಹಿಳೆಗೆ ಥಳಿಸಿ, ಆಕೆಯ ತಲೆಕೂದಲು ಹಿಡಿದು ಎಳೆದೊಯ್ದಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ತೀವ್ರ ಆಕ್ರೋಶ ವ್ಯಕ್ತವಾಗಿದೆ. ಶುಕ್ರವಾರ (ಸೆ.18) ರಾತ್ರಿ ರೈಲ್ವೆ...

ರಾಮಮಂದಿರ ದೇಣಿಗೆ ಕಳವು ಪ್ರಕರಣ: ಆರೋಪಿಗಳ ನ್ಯಾಯಾಂಗ ಬಂಧನ ಅವಧಿ ವಿಸ್ತರಣೆ

ರಾಮಮಂದಿರದಲ್ಲಿ ದೇಣಿಗೆ ಹಣ ಕಳವು ಮಾಡಿದ ಆರೋಪದ ಮೇಲೆ ಬಂಧಿಸಲಾಗಿರುವ ಎಲ್ಲಾ ಎಂಟು ಆರೋಪಿಗಳ ನ್ಯಾಯಾಂಗ ಬಂಧನವನ್ನು ಸೆಪ್ಟೆಂಬರ್ 21ರವರೆಗೆ ವಿಸ್ತರಿಸಲಾಗಿದೆ ಎಂದು ಅವರ ವಕೀಲರು (ಸೆ.18) ತಿಳಿಸಿದ್ದಾರೆ. ಅಯೋಧ್ಯೆಯ ಭ್ರಷ್ಟಾಚಾರ ನಿಗ್ರಹ ನ್ಯಾಯಾಲಯದ...

ಬಂಗಾಳದಲ್ಲಿ ಬಿಜೆಪಿ ದ್ವೇಷ ರಾಜಕಾರಣ: ಮಾಮತಾ ಬ್ಯಾನರ್ಜಿ ಬೆಂಬಲ ಘೋಷಿಸಿದ ಬೆನ್ನಲ್ಲೇ ನಂದಿಗ್ರಾಮ ಕಾಂಗ್ರೆಸ್ ಅಭ್ಯರ್ಥಿ ಬಂಧನ

ಪಶ್ಚಿಮ ಬಂಗಾಳದ ಪೂರ್ವ ಮೇದಿನಿಪುರ ಜಿಲ್ಲೆಯ ನಂದಿಗ್ರಾಮ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಮಿಲನ್ ಪ್ರಧಾನ್ ಅವರನ್ನು ಹಳೆಯ ಪ್ರಕರಣವೊಂದರಲ್ಲಿ ಶುಕ್ರವಾರ (ಸೆ.18) ಬಂಧಿಸಲಾಗಿದೆ ಎಂದು ಪೂರ್ವ ಮೇದಿನಿಪುರ ಜಿಲ್ಲಾ ಪೊಲೀಸ್...

‘ವೆಟ್ಟುವಂ’ ಪಾ.ರಂಜಿತ್ ಅವರ ಅದ್ಭುತ ಅಪೋಕಲಿಪ್ಟಿಕ್ ಆಕ್ಷನ್ ಸಿನಿಮಾ: ರಂಗನಾಥ್ ಆರ್. ವಿ

ತಮಿಳಿನ ಖ್ಯಾತ ನಿರ್ದೇಶಕ ಪಾ.ರಂಜಿತ್ ಅವರ ನಿರ್ದೇಶನದಲ್ಲಿ ಮೂಡಿಬರುತ್ತಿರುವ 'ವೆಟ್ಟುವಂ' ಚಿತ್ರವನ್ನು 'ಲರ್ನ್ ಆಂಡ್ ಟೀಚ್ ಪ್ರೊಡಕ್ಷನ್' ಸಂಸ್ಥೆಯ ಸಹಯೋಗದೊಂದಿಗೆ, ಪಾ.ರಂಜಿತ್ ಅವರ 'ನೀಲಂ ಪ್ರೊಡಕ್ಷನ್ಸ್' ನಿರ್ಮಿಸಿದೆ. ಈ ಚಿತ್ರದ ಜಗತ್ತನ್ನು ಪರಿಚಯಿಸುವ...

SIR ಮೋಸ: ಅಗತ್ಯಬಿದ್ದರೆ ಕಾಂಗ್ರೆಸ್‌ನಿಂದ ಕಾನೂನು ಹೋರಾಟ ಬಿ.ಕೆ. ಹರಿಪ್ರಸಾದ್ ಎಚ್ಚರಿಕೆ

ಕರ್ನಾಟಕದಲ್ಲಿ ಪ್ರಸ್ತುತ ನಡೆಯುತ್ತಿರುವ 2026ರ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಭಾರಿ ಪ್ರಮಾಣದ ತಾಂತ್ರಿಕ ಲೋಪಗಳು, ಅಂಕಿಅಂಶಗಳ ವ್ಯತ್ಯಾಸ ಹಾಗೂ ಮತದಾರರ ಪಟ್ಟಿಗೆ ಸಂಬಂಧಿಸಿದಂತೆ ಸ್ಪಷ್ಟತೆಯ ಕೊರತೆ ಎದ್ದುಕಾಣುತ್ತಿದೆ ಎಂದು...

ವಿಚಾರಣೆಯಿಲ್ಲದೆ ಆರು ವರ್ಷ ಜೈಲುವಾಸ: ಉಮರ್ ಖಾಲಿದ್ ಹೋರಾಟದ ಹಾದಿ

ಸೆಪ್ಟೆಂಬರ್ 13, 2020 ರಂದು, ಮಾನವ ಹಕ್ಕುಗಳ ಯುವ ಕಾರ್ಯಕರ್ತ ಉಮರ್ ಖಾಲಿದ್ ಅವರನ್ನು ದೇಶದ ರಾಜಧಾನಿಯಲ್ಲಿ ಗುರಿಯಾಗಿಸಿಕೊಳ್ಳಲಾಯಿತು. ವಿಚಾರಣೆಯೇ ಇಲ್ಲದೆ ಅವರು ಜೈಲಿನಲ್ಲಿ ಆರು ವರ್ಷಗಳನ್ನು ಪೂರೈಸಿದ್ದಾರೆ. ಸರ್ಕಾರದ ವಿರುದ್ಧದ ರಾಜಕೀಯ...

ಕನ್ವರ್ ಯಾತ್ರೆ ವೇಳೆ 18 ದ್ವೇಷ ಘಟನೆಗಳು: ಮುಸ್ಲಿಮರು, ಅವರ ವ್ಯಾಪಾರಗಳನ್ನು ಗುರಿಯಾಗಿಸಿಕೊಂಡ ಪ್ರಕರಣಗಳೇ ಹೆಚ್ಚು; APCR ವರದಿ

ನವದೆಹಲಿ: 2026ರ ಕನ್ವರ್ ಯಾತ್ರೆಯ 13 ದಿನಗಳ ಅವಧಿಯಲ್ಲಿ ಹಿಂಸಾಚಾರ, ಬಲವಂತ, ತಾರತಮ್ಯ, ಆರ್ಥಿಕ ಬಹಿಷ್ಕಾರ ಹಾಗೂ ಸಾರ್ವಜನಿಕ ಅಶ್ಲೀಲ ವರ್ತನೆಗೆ ಸಂಬಂಧಿಸಿದ ಕನಿಷ್ಠ 18 ಘಟನೆಗಳು ವರದಿಯಾಗಿವೆ ಎಂದು ನಾಗರಿಕ ಹಕ್ಕುಗಳ...

ಸಿಐಟಿಯು ಕಾನೂನು ಹೋರಾಟಕ್ಕೆ ಮೊದಲ ಜಯ: ಕನಿಷ್ಠ ವೇತನ ತಡೆಹಿಡಿದಿದ್ದ ಸರ್ಕಾರದ ಮೂರು ಸುತ್ತೋಲೆಗಳಿಗೆ ಹೈಕೋರ್ಟ್ ತಡೆ

ಸರ್ಕಾರಿ ಇಲಾಖೆಗಳು ಮತ್ತು ಸ್ಥಳೀಯ ಸಂಸ್ಥೆಗಳಲ್ಲಿ ಕೆಲಸ ಮಾಡುವ ಲಕ್ಷಾಂತರ ಕಾರ್ಮಿಕರ ಹೊಸ ಕನಿಷ್ಠ ವೇತನವನ್ನು ತಡೆಹಿಡಿದಿದ್ದ ಸರ್ಕಾರದ ನಿರ್ಧಾರಕ್ಕೆ ಹೈಕೋರ್ಟ್ ಬ್ರೇಕ್ ಹಾಕಿದೆ. ಹೊಸ ವೇತನ ನೀಡುವುದನ್ನು ಅಮಾನತಿನಲ್ಲಿಟ್ಟಿದ್ದ ಸರ್ಕಾರದ ಮೂರು...