Homeಎಕಾನಮಿಜಿಡಿಪಿ ಕುಸಿತ: ನರೇಂದ್ರ ಮೋದಿ ಸರ್ಕಾರದ ಅನೀತಿಗಳೇ ಕಾರಣ ಎಂದ ಕಾಂಗ್ರೆಸ್ ನಾಯಕರು

ಜಿಡಿಪಿ ಕುಸಿತ: ನರೇಂದ್ರ ಮೋದಿ ಸರ್ಕಾರದ ಅನೀತಿಗಳೇ ಕಾರಣ ಎಂದ ಕಾಂಗ್ರೆಸ್ ನಾಯಕರು

ಭಾರತವು ತ್ರೈಮಾಸಿಕ ಅಂಕಿ ಅಂಶಗಳನ್ನು ಪ್ರಕಟಿಸಲು ಪ್ರಾರಂಭಿಸಿದ 1996 ರಿಂದೀಚೆಗೆ ಇದೇ ಮೊದಲ ಭಾರಿಗೆ ಆರ್ಥಿಕತೆ ಈ ಪ್ರಮಾಣದ ಇಳಿಕೆ ದಾಖಲಾಗಿದೆ.

- Advertisement -
- Advertisement -

ಭಾರತದ ಜಿಡಿಪಿ ಏಪ್ರಿಲ್-ಜೂನ್ ಅವಧಿಯಲ್ಲಿ ಶೇ. -23.9 ರಷ್ಟು ಗಣನೀಯ ಇಳಿಕೆಯಾಗಿರುವುದನ್ನು ಉಲ್ಲೇಖಿಸಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಸಿದ್ಧರಾಮಯ್ಯ ಸೇರಿದಂತೆ ಹಲವು ನಾಯಕರು ನರೇಂದ್ರ ಮೋದಿ ಮತ್ತು ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಭಾರತವು ತ್ರೈಮಾಸಿಕ ಅಂಕಿ ಅಂಶಗಳನ್ನು ಪ್ರಕಟಿಸಲು ಪ್ರಾರಂಭಿಸಿದ 1996 ರಿಂದೀಚೆಗೆ ಇದೇ ಮೊದಲ ಭಾರಿಗೆ ಆರ್ಥಿಕತೆ ಈ ಪ್ರಮಾಣದ ಇಳಿಕೆ ದಾಖಲಾಗಿದೆ. ಅಷ್ಟೇ ಅಲ್ಲದೆ ಏಷ್ಯಾದ ಪ್ರಮುಖ ಆರ್ಥಿಕತೆಯಲ್ಲಿ ಇದು ಅತ್ಯಂತ ಕೆಟ್ಟದಾದ ಆರ್ಥಿಕ ಕುಸಿತವಾಗಿದೆ ಎಂದು ಆರ್ಥಿಕ ತಜ್ಞರು ಅಭಿಪ್ರಾಯಪಟ್ಟಿದ್ದಾರೆ.

ಅಸಂಘಟಿತ ವಲಯದ ಮೇಲೆ ಆಕ್ರಮಣ ಮಾಡುವ ಮೂಲಕ ಸರ್ಕಾರವು ಆರ್ಥಿಕತೆಯನ್ನು ನಾಶಪಡಿಸಿದೆ ಎಂದು ರಾಹುಲ್ ಗಾಂಧಿ ನಿನ್ನೆ ಟ್ವೀಟ್ ಮಾಡಿರುವ ವೀಡಿಯೋವೊಂದರಲ್ಲಿ ಹೇಳಿದ್ದು, ತಜ್ಞರು ಮತ್ತು ಇತರರ ಸೂಚನೆಗಳನ್ನು ನಿರ್ಲಕ್ಷಿಸಿರುವುದು ದುರದೃಷ್ಟಕರ ಎಂದು ಹೇಳಿದ ನಂತರ, ಇಂದು ಮತ್ತೊಂದು ಟ್ವೀಟ್ ಮಾಡಿ ‘ಮೋದಿ ನಿರ್ಮಿಸಿದ ವಿಪತ್ತುಗಳಿಂದ ಭಾರತ ತತ್ತರಿಸುತ್ತಿದೆ’ ಎಂದಿದ್ದಾರೆ.

“1. ಐತಿಹಾಸಿಕ ಜಿಡಿಪಿ ಕಡಿತ -23.9%, 2. 45 ವರ್ಷಗಳಲ್ಲಿ ಅತಿ ಹೆಚ್ಚು ನಿರುದ್ಯೋಗ, 3. 12 ಕೋಟಿ ಉದ್ಯೋಗ ನಷ್ಟ, 4. ರಾಜ್ಯಗಳಿಗೆ ಜಿಎಸ್‌ಟಿ ಬಾಕಿ ಪಾವತಿಸುವುದಿಲ್ಲ, 5. ಜಾಗತಿಕವಾಗಿ ಅತಿ ಹೆಚ್ಚು ಕೊರೊನಾ, 6.ನಮ್ಮ ಗಡಿಯಲ್ಲಿ ಬೇರೆಯವರ ಅತಿಕ್ರಮಣ” ಎಂದು ಟ್ವೀಟ್ ಮಾಡಿದ್ದಾರೆ.

 

ಇದನ್ನೂ ಓದಿ: ಫ್ಯಾಕ್ಟ್‌ಚೆಕ್: ಜಿಡಿಪಿ ಪಾತಾಳದಲ್ಲಿದ್ದರೂ ಸುಳ್ಳು ಹೇಳುತ್ತಿರುವ ಕರ್ನಾಟಕ ಬಿಜೆಪಿ..

ಕರ್ನಾಟಕದ ಮಾಜಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಟ್ವೀಟ್ ಮಾಡಿ, “ದೇಶದ ಜಿಡಿಪಿ ಶೇಕಡಾ 23.9ರಷ್ಟು ಕುಸಿತ ಕಂಡಿರುವುದು ಆಘಾತಕಾರಿ ಬೆಳವಣಿಗೆ ನಿಜ. ಆದರೆ ಈ ಕುಸಿತದ ಪೂರ್ಣ ಹೊಣೆಯನ್ನು ಕೊರೊನಾ ರೋಗದ ಮೇಲೆ ಹೇರುವ ಮೂಲಕ ಪ್ರಧಾನಿಯವರು ತನ್ನ ಜವಾಬ್ದಾರಿಯಿಂದ ನುಣುಚಿಕೊಳ್ಳುವುದು ಇನ್ನೂ ಹೆಚ್ಚಿನ ಆಘಾತಕಾರಿ ಬೆಳವಣಿಗೆ” ಎಂದು ವಿಷಾದ ವ್ಯಕ್ತಪಡಿಸಿದ್ದಾರೆ.

“ಕೇಂದ್ರದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದ ದಿನದಿಂದ ದೇಶದ ಆರ್ಥಿಕತೆ ರೋಗಗ್ರಸ್ತವಾಗಿದೆ. ಆರ್‌ಬಿಐ ಗವರ್ನರ್ ಅವರಿಂದ ಹಿಡಿದು ಆರ್ಥಿಕ ಸಲಹೆಗಾರರವರೆಗೆ ಖ್ಯಾತ ಆರ್ಥಿಕ ತಜ್ಞರೆಲ್ಲರೂ ಆರ್ಥಿಕತೆ ಸಾಗುವ ದಾರಿ ಬಗ್ಗೆ ಆತಂಕ ಪಟ್ಟು ಎಚ್ಚರಿಸಿದ್ದರು. ಆಗಲೂ, ಈಗಲೂ ಸರ್ಕಾರ ಕುರುಡು-ಕಿವುಡು” ಎಂದು ಸಿದ್ಧರಾಮಯ್ಯ ಆರೋಪಿಸಿದ್ದಾರೆ.

ಸರಣಿ ಟ್ವೀಟ್ ಮಾಡಿರುವ ಸಿದ್ಧರಾಮಯ್ಯ, “2015ರಲ್ಲಿ ಜಿಡಿಪಿ ಅಂದಾಜು ಮಾಡುವ ಮೂಲವರ್ಷವನ್ನು 2004-05ರಿಂದ 2011-12ಕ್ಕೆ ಬದಲಾಯಿಸಲಾಯಿತು, ಅದರ ನಂತರ ಬಣ್ಣ ಬಯಲಾಗಬಾರದೆಂದು ಅಧಿಕೃತ ಅಂಕಿ ಅಂಶಗಳನ್ನೇ ತಡೆಹಿಡಿಯಲಾಯಿತು. ಈಗ ಎಲ್ಲವನ್ನು ಕೊರೊನಾ ಲೆಕ್ಕಕ್ಕೆ ಬರೆದು ಕೈತೊಳೆದುಕೊಳ್ಳಲು ನರೇಂದ್ರ ಮೋದಿಯವರು ಹೊರಟಿದ್ದಾರೆ. ಕೊರೊನಾ ರೋಗದ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸಿ ವಿಶ್ವಾಸಕ್ಕೆ ತೆಗೆದುಕೊಳ್ಳಬೇಕಾಗಿದ್ದ ಅವರು, ಜನರಿಗೆ ಜಾಗಟೆ ಬಾರಿಸಲು, ದೀಪ ಹಚ್ಚಲು ಹೇಳಿರುವುದು ಕೊರೊನಾ ಮಾರಿಯನ್ನು ಸರ್ಕಾರ ಎಷ್ಟು ಗಂಭೀರವಾಗಿದೆ ಎನ್ನುವುದಕ್ಕೆ ಸಾಕ್ಷಿ. ಈಗ ರೋದಿಸಿ ಏನು ಫಲ?” ಎಂದಿದ್ದಾರೆ.

ಕಾಂಗ್ರೆಸ್ ಕಾರ್ಯದರ್ಶಿಯಾದ ಈಶ್ವರ್ ಖಂಡ್ರೆ, “ಇದು ಸಾರ್ವಕಾಲಿಕ ಕುಸಿತ ಎಂದೇ ತಜ್ಙರು ಅಭಿಪ್ರಾಯ ಪಟ್ಟಿದ್ದಾರೆ. ಹೀಗಿದ್ದು ದೇಶದಲ್ಲಿ ಎಲ್ಲವು ಸರಿ ಇದೆ ಎಂಬಂತೆ ಬಿಂಬಿಸುತ್ತಾ ಕೇವಲ ಚಪ್ಪಾಳೆ ಹೊಡೆದು ದೀಪ ಹಚ್ಚಿ ಭಾವನಾತ್ಮಕ ವಿಷಯಗಳನ್ನೇ ಮುಂದಿಟ್ಟು ಇನ್ನೆಷ್ಟು ದಿನ ಜನರನ್ನ ಕತ್ತಲಲ್ಲಿಡುತ್ತಿರಿ ಪ್ರಧಾನಿಗಳೇ..??” ಎಂದು ಟ್ವೀಟ್ ಮಾಡಿದ್ದಾರೆ.

2019–20 ರ ಇದೇ ಅವಧಿಯಲ್ಲಿ ದೇಶದ ಜಿಡಿಪಿ ಶೇ 5.2 ರಷ್ಟು ಬೆಳವಣಿಗೆ ಕಂಡಿತ್ತು ಎಂದು ಎನ್‌ಎಸ್‌ಒ ಅಂಕಿ ಅಂಶ ಹೇಳಿದೆ.

2019–2020 ನೇ ಆರ್ಥಿಕ ವರ್ಷದ 1 ನೇ ತ್ರೈಮಾಸಿಕದಲ್ಲಿ ಭಾರತದ ಜಿಡಿಪಿ ಬೆಳವಣಿಗೆ 5.2% ದಾಖಲಾಗಿತ್ತು. 2ನೇ ತ್ರೈಮಾಸಿಕದಲ್ಲಿ 4.4 % ದಾಖಲಾದರೆ, 3ನೇ ತ್ರೈಮಾಸಿಕದಲ್ಲಿ 4.1% ದಾಖಲಾಗಿ, 4ನೇ ತ್ರೈಮಾಸಿಕದ ಹೊತ್ತಿಗೆ 3.1% ಬೆಳವಣಿಗೆ ದಾಖಲಾಗಿತ್ತು.

ಆದರೆ 2020–21 ನೇ ಆರ್ಥಿಕ ವರ್ಷದ 1 ನೇ ತ್ರೈಮಾಸಿಕದಲ್ಲೇ -23.9% ದಷ್ಟು ಇಳಿಯಾಗಿದೆ. ಈ ಇಳಿಕೆ ಎರಡನೆ ತ್ರೈಮಾಸಿಕದಲ್ಲೂ ಮುಂದುವೆರೆಯಲಿದೆ ಎನ್ನಲಾಗಿದೆ.

ಮೇ ತಿಂಗಳಲ್ಲಿ ಪ್ರಧಾನಿ ನರೇಂದ್ರ ಮೋದಿ ದೇಶದ ಜಿಡಿಪಿಯ ಶೇಕಡಾ 10 ಕ್ಕೆ ಸಮನಾದ ಪ್ರಚೋದಕ ಪ್ಯಾಕೇಜ್ ಅನ್ನು ಘೋಷಿಸಿದ ಹೊರತಾಗಿಯು ಬೇಡಿಕೆ ಮತ್ತು ಉತ್ಪಾದನೆ ಇನ್ನೂ ಚೇತರಿಸಿಕೊಂಡಿಲ್ಲ.


ಇದನ್ನೂ ಓದಿ: ಅಸಂಘಟಿತ ವಲಯದ ಆರ್ಥಿಕತೆ ನಾಶ; ಜಿಡಿಪಿ ಶೇ.-23.9ಕ್ಕೆ ಕುಸಿತ: ಕೇಂದ್ರ ಸರ್ಕಾರದ ಮೇಲೆ ರಾಹುಲ್ ವಾಗ್ದಾಳಿ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಮುಂದುವರಿದ ಬಿಜೆಪಿ ನಾಯಕರ ದ್ವೇಷ ಭಾಷಣ; ‘ಕಾಂಗ್ರೆಸ್ ದೇಶದಲ್ಲಿ ಷರಿಯಾ ಕಾನೂನು ಜಾರಿಗೆ ತರಲಿದೆ’...

0
ಸಂಪತ್ತು ಮರು ಹಂಚಿಕೆ ಕುರಿತು ದ್ವೇಷ ಭಾಷಣ ಮಾಡಿದ್ದ ಪ್ರಧಾನಿ ನರೇಂದ್ರ ಮೋದಿಯವರ ನಂತರ, ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಕೂಡ ಮಂಗಳವಾರ ಕಾಂಗ್ರೆಸ್ ವಿರುದ್ಧ ಗಂಭೀರ ಆರೋಪ ಮಾಡಿದ್ದಾರೆ. 'ಕಾಂಗ್ರೆಸ್...