Homeಎಕಾನಮಿಪಾತಾಳಕ್ಕೆ ಕುಸಿದ ಜಿಡಿಪಿ: ಕೇಂದ್ರ ಸರ್ಕಾರದ ವಿರುದ್ಧ ಟೀಕೆಗಳ ಸುರಿಮಳೆ

ಪಾತಾಳಕ್ಕೆ ಕುಸಿದ ಜಿಡಿಪಿ: ಕೇಂದ್ರ ಸರ್ಕಾರದ ವಿರುದ್ಧ ಟೀಕೆಗಳ ಸುರಿಮಳೆ

- Advertisement -
- Advertisement -

2019 ರ ಮೊದಲ ತ್ರೈಮಾಸಿಕ ಜಿಡಿಪಿ ಬೆಳವಣಿಗೆ ತೀವ್ರ ಕುಸಿತ ಕಂಡಿದ್ದು ಶೇ.5% ಕ್ಕೆ ಇಳಿದಿದೆ. ಇದು ಕಳೆದ 6 ವರ್ಷಗಳಲ್ಲಿ ಅತ್ಯಂತ ಕಡಿಮೆಯಾಗಿದ್ದು ಇಂದು ಕೇಂದ್ರ ಸರ್ಕಾರ ಈ ಮಾಹಿತಿ ಹೊರಹಾಕಿದೆ.

ಉತ್ಪಾದನಾ ವಲಯದ ತೀವ್ರ ಕುಸಿತ, ನಿರ್ಮಾಣ ಕ್ಷೇತ್ರದ ಹಿಂಜರಿತ ಜಿಡಿಪಿ ಕುಸಿತಕ್ಕೆ ಪ್ರಮುಖ ಕಾರಣವೆಂದು ಹೇಳಲಾಗುತ್ತಿದೆ. ಈ ನಡುವೆಯೇ ಆರ್ಥಿಕ ಸಚಿವೆ ನಿರ್ಮಲ ಸೀತಾರಾಮನ್ 10 ರಾಷ್ಟ್ರೀಕೃತ ಬ್ಯಾಂಕುಗಳನ್ನು 4 ಬ್ಯಾಂಕುಗಳಲ್ಲಿ ವಿಲೀನ ಮಾಡಲಾಗುವುದು ಎಂದು ಘೋಷಿಸಿದ್ದಾರೆ.

ದೇಶದಲ್ಲಿ ಪ್ರತಿನಿತ್ಯ ಆರ್ಥಿಕ ಕುಸಿತ ಕಂಡುಬರುತ್ತಿದ್ದು ಉದ್ಯೋಗ ನಷ್ಟದಿಂದಾಗಿ ಜನ ಹೈರಾಣಾಗುತ್ತಿದ್ದಾರೆ. ಇಂತಹ ದುಸ್ಥಿತಿಯಲ್ಲಿ ಜಿಡಿಪಿ ಕುಸಿತ ಮತ್ತಷ್ಟು ದುಷ್ಪರಿಣಾಮಗಳನ್ನು ಉಂಟುಮಾಡಲಿದೆ ಎನ್ನಲಾಗುತ್ತಿದೆ. ಈ ಕುರಿತ ಬಹಳಷ್ಟು ಚಿಂತಕರು ಕೇಂದ್ರ ಸರ್ಕಾರದ ನೀತಿಗಳ ಮೇಲೆ ಟೀಕಾಪ್ರಹಾರ ಮಾಡಿದ್ದಾರೆ.

5 ವರ್ಷಗಳಲ್ಲಿ ಕೆಟ್ಟ ಪರಿಸ್ಥಿತಿಗೆ ತಲುಪಿರುವ ಜಿಡಿಪಿ ಬೆಳವಣಿಗೆಯು ಶೇಕಡಾ 5ಕ್ಕೆ ಇಳಿದಿರುವುದನ್ನು ಬಹಿರಂಗಗೊಳಿಸುವ ಒಂದು ಗಂಟೆ ಮೊದಲು ಹಣಕಾಸು ಸಚಿವರು ಮೆಗಾ ಬ್ಯಾಂಕ್ ವಿಲೀನವನ್ನು ಘೋಷಿಸಿದ್ದಾರೆ .. ಅಂದರೆ ಕ್ಲಾಸಿಕ್ ಹೆಡ್‌ಲೈನ್ ನಿರ್ವಹಣೆ ಮಾಡಲು ಮುಂದಾಗಿದ್ದಾರೆ ಎಂದು ಪತ್ರಕರ್ತ ರಾಜ್ ದೀಪ್ ಸರ್ದೇಸಾಯಿ ವ್ಯಂಗ್ಯವಾಡಿದ್ದಾರೆ.

ನೆನಪಿಡಿ, ಇದು ಕೂಡ ಬಹುಶಃ ತಿದ್ದುಪಡಿ ಮಾಡಿದ, ಸುಳ್ಳಿನಿಂದ ಕೂಡಿದ ಜಿಡಿಪಿ ಬೆಳವಣಿಗೆಯ ಅಂಕಿ ಅಂಶಗಳಾಗಿವೆ. ಅರ್ಥಶಾಸ್ತ್ರಜ್ಞರು ಹೇಳಿದಂತೆ ನೈಜವಾಗಿ ಜಿಡಿಪಿ ಬೆಳವಣಿಗೆ ಇನ್ನೂ ಕಡಿಮೆ ಇರಬಹುದು. ಸುಳ್ಳಿಗೆ ಮರುಳಾಗಿ ಮೋಸ ಹೋಗಿ ಮೋದಿಗೆ ಮತ ಹಾಕಿದ ಭಕ್ತರಿಗೆ ಚಪ್ಪಾಳೆ ತಟ್ಟಬೇಕಾಗಿದೆ ಎಂದು ಯುವ ಚಿಂತಕ ಧೃವ್ ರಾಠೀ ವಿಷಾಧ ವ್ಯಕ್ತಪಡಿಸಿದ್ದಾರೆ.

ಈ ಸಂದರ್ಭದಲ್ಲಿ ಸರ್ಕಾರ ಹಿಂದೂಗಳು ಮತ್ತು ಮುಸ್ಲಿಮರು ವಿಚಾರ ಮುಂದೆ ತರುತ್ತಾರೆ. ಅವರು ದೇವಾಲಯ-ಮಸೀದಿಯ ಗಲಾಟೆಯನ್ನು ಮುಂದುವರಿಸುತ್ತಾರೆ. ಆದರೆ ನೀವು ಇದನ್ನು ಅರ್ಥಮಾಡಿಕೊಂಡು ನಿರಂತರ ಅರಿವು ಪಡಯೋಣ. ಅವರು ದೇಶವನ್ನು ಲೂಟಿ ಮಾಡುವುದನ್ನು ಮುಂದುವರಿಸುತ್ತಾರೆ, ನೀವು ದೇಶದ ಹಿತದೃಷ್ಟಿಗಾಗಿ ಕೆಲಸ ಮಾಡೋಣ ಎಂದು ಹೋರಾಟಗಾರ ಮತ್ತು ಗುಜರಾತಿನ ಶಾಸಕ ಜಿಗ್ನೇಶ್ ಮೇವಾನಿ ಅಭಿಪ್ರಾಯಪಟ್ಟಿದ್ದಾರೆ.

ಹೇಳಿದ್ದು 5 ಟ್ರಿಲಿಯನ್ ಡಾಲರ್ ಎಕಾನಮಿ ಆಗಿದ್ದು 5% ಜಿಡಿಪಿ! ದಯವಿಟ್ಟು ಎಚ್ಚರಗೊಳ್ಳಿ ಎಂದು ಅರವಿಂದ್ ಗುಣಶೇಖರ್ ಎಂಬುವವರು ಟ್ವೀಟ್ ಮಾಡಿದ್ದಾರೆ.

  1. ಜಿಡಿಪಿ 6 ವರ್ಷದಲ್ಲೇ ಕಡಿಮೆ

2. ರೂಪಾಯಿ 8 ತಿಂಗಳಲ್ಲೇ ಕಡಿಮೆ

3. ಷೇರು ಮಾರುಕಟ್ಟೆ 12 ತಿಂಗಳಲ್ಲೇ ಕಡಿಮೆ

4. ಕೋರ್ ಸೆಕ್ಟರ್ 48 ತಿಂಗಳಲ್ಲೇ ಕಡಿಮೆ

5. ಉದ್ಯೋಗ 45 ವರ್ಷ ಕಡಿಮೆ

ಏತನ್ಮಧ್ಯೆ, ಆರ್ಥಿಕತೆಯು ಉತ್ತಮವಾಗಿ ಕಾರ್ಯನಿರ್ವಹಿಸುತ್ತಿದೆ ಎಂದು 60% ಜನರು ನಂಬಿದ್ದಾರೆ ಎಂದು ಇಂಡಿಯಾ ಟುಡೇ ಸಮೀಕ್ಷೆ ಹೇಳಿದೆ, ಎಂದು ಹೂ ನೆಹ್ರು ಎನ್ನುವ ಟ್ವಟ್ಟರ್ ಹ್ಯಾಂಡಲ್ ನಿಂದ ಟ್ವೀಟ್ ಮಾಡಲಾಗಿದೆ.

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

5 COMMENTS

  1. ನಾನೂ ಅಮೇರಿಕಾ ದೇಶದಲ್ಲಿ ನಡೆದಾಗ ಹಣದ ಮುಗ್ಗಟ್ಟು ಆವರಿಸಿದಾಗ ಭಾರತ ದೇಶಕ್ಕೆ 10 ವರ್ಷಗಳ ನಂತರವೇ ಬರುತ್ತದೆ ಎಂದು ಭಾವಿಸಿದ್ದೇ ಈಗ್ಗೆ ಕೆಲವು ತಿಂಗಳ ಹಿಂದೆ ಬಂದದ್ದು ಸಂತೋಷವಾಯಿತು. ಈಗಿರುವ ಸರ್ಕಾರದವರಿಗೇ ಅದನ್ನು ಸರಿಪಡಿಸಲು ಯೋಗ್ಯತೆಯಿಲ್ಲವೆಂಬುದು ಸತ್ಯ ಸತ್ಯಸ್ಯ ಸತ್ಯ

    • ಖಂಡಿತಾ, ಒಂದು ಕುಟುಂಬ ನಡೆಸುವುದಕ್ಕೂ ನೂರು ಕುಟುಂಬ ಹಾಕುವುದಕ್ಕೂ ವ್ಯತ್ಯಾಸ ಇದೆ,,,

  2. Mr Modi you are not able to appoint a qualified FM for our country. The way ,Budget you people mananaged is horrible. Couldn’t manage the sources. Therefore youestimated 1 lakh Cr from disinvestment,1.76 Lakh Cr. From RBI surplus.,0.90 Lakh Cr grom RBI devident,1Lakh Cr. From LIC Loan.Tell me are you not bankrupt. If you deduct abovefigure from budget are we not 12 to 14 % deficit ? Now whom will u blame.You have proven what an uneducated PM can do

LEAVE A REPLY

Please enter your comment!
Please enter your name here

- Advertisment -

ವಿದ್ಯುತ್ ಖಾಸಗೀಕರಣ ವಿರುದ್ದದ ಹೋರಾಟಕ್ಕೆ ಗೆಲುವು: ಅರ್ಜಿ ಹಿಂಪಡೆದ ಟಾಟಾ ಪವರ್ ಕಂಪನಿ

ರಾಜ್ಯದಲ್ಲಿ ವಿದ್ಯುತ್ ಕ್ಷೇತ್ರದಲ್ಲಿ ಖಾಸಗೀಕರಣದ ಹೆಜ್ಜೆ ಇಡಲು ಮುಂದಾಗಿದ್ದ ಟಾಟಾ ಪವರ್ ಕಂಪನಿಗೆ ಭಾರಿ ಹಿನ್ನಡೆಯಾಗಿದೆ. ಕರ್ನಾಟಕ ವಿದ್ಯುತ್ ನಿಯಂತ್ರಣ ಆಯೋಗದ (KERC) ಮುಂದೆ ರಾಜ್ಯದ 19 ಕಂದಾಯ ಜಿಲ್ಲೆಗಳಿಗೆ ಸಂಬಂಧಿಸಿದಂತೆ ತಾನು...

SIR: ಮತದಾರರ ಮನೆಗೆ ಹೋಗದೆ ಕಚೇರಿಯಲ್ಲೇ ಕುಳಿತು ಫಾರ್ಮ್ ವಿತರಣೆ ಆರೋಪ, BLO ಗಳಿಗೆ ಎಚ್ಚರಿಕೆ ನೀಡಿದ ಆಯೋಗ

ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಸಾರ್ವಜನಿಕರಿಂದ ವ್ಯಾಪಕ ದೂರುಗಳು ಕೇಳಿಬಂದ ಬೆನ್ನಲ್ಲೇ, ರಾಜ್ಯ ಚುನಾವಣಾ ಆಯೋಗವು ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ. ಮತದಾರರ ಮನೆ-ಮನೆಗೆ ಭೇಟಿ...

ಅಳುವ ಕಂದಮ್ಮಗಳನ್ನು ವಾಷಿಂಗ್ ಮೆಷಿನ್‌ನಲ್ಲಿ ಕೂಡಿಹಾಕ್ತಿದ್ದ ಇಬ್ಬರು ಕೇರ್‌ಟೇಕರ್ ಅರೆಸ್ಟ್

ಸಿಲಿಕಾನ್ ಸಿಟಿಯ ಬ್ರೂಕ್‌ಫೀಲ್ಡ್‌ನಲ್ಲಿರುವ ಪ್ರಮುಖ ಐಟಿ ಸಂಸ್ಥೆ 'ಕ್ಯಾಪ್‌ಜೆಮಿನಿ' ಕ್ಯಾಂಪಸ್‌ನ ಡೇ-ಕೇರ್ ಸೆಂಟರ್‌ನಲ್ಲಿ ಪುಟ್ಟ ಕಂದಮ್ಮಗಳನ್ನು ಬಾತ್‌ರೂಮ್ ಹಾಗೂ ವಾಷಿಂಗ್ ಮೆಷಿನ್‌ಗಳಲ್ಲಿ ಕೂಡಿಹಾಕಿ ವಿಕೃತಿ ಮೆರೆದಿದ್ದ ಪ್ರಕರಣದಲ್ಲಿ ಪೊಲೀಸರು ಭರ್ಜರಿ ಬೇಟೆಯಾಡಿದ್ದಾರೆ. ಪ್ರಕರಣದ...

“ನಾಗರಿಕರು ಸರ್ಕಾರದ ಗುಲಾಮರಲ್ಲ”: ಸಿಎಎ, ಜ್ಞಾನವಾಪಿ ವಿರೋಧಿ ಪ್ರತಿಭಟನೆ ಸಂಬಂಧ ಎಸ್‌ಡಿಪಿಐ ನಾಯಕನ ಗಡಿಪಾರು ಪ್ರಶ್ನಿಸಿದ ಬಾಂಬೆ ಹೈಕೋರ್ಟ್

“ದೇಶದ ನಾಗರಿಕರು ಸರ್ಕಾರದ ಗುಲಾಮರಲ್ಲ. ಕೇವಲ ಸರ್ಕಾರದ ನಿರ್ಧಾರಗಳನ್ನು ವಿರೋಧಿಸುವುದು ಅಥವಾ ಆಡಳಿತ ವ್ಯವಸ್ಥೆಯ ವಿರುದ್ಧ ಘೋಷಣೆಗಳನ್ನು ಕೂಗುವುದು ಒಬ್ಬ ನಾಗರಿಕನನ್ನು ಗಡಿಪಾರು ಮಾಡಲು ಕಾನೂನಾತ್ಮಕ ಕಾರಣವಾಗಲಾರದು,” ಎಂದು ಬಾಂಬೆ ಹೈಕೋರ್ಟ್‌ ಐತಿಹಾಸಿಕ...

ಗೌರಿಯಕ್ಕ, ಸುರೇಶ್ ಭಟ್ರ ಬಗ್ಗೆ ತಿಳಿಯಲು ಎಕ್ಸ್ ಆರೆಸ್ಸೆಸ್‌ನವರ ಪ್ರಮಾಣ ಪತ್ರ ಬೇಕಿಲ್ಲ

ಕರ್ನಾಟಕ ಕೋಮು ಸೌಹಾರ್ದ ವೇದಿಕೆಯಲ್ಲಿ ನಮ್ಮ ಒಡನಾಡಿಯಾಗಿದ್ದ ಎ‌ಐಸಿಸಿ ಕಾರ್ಯದರ್ಶಿಯೂ ಆಗಿರುವ ಪಿ.ವಿ.ಮೋಹನ್‌ರಿಗೆ ವಿಧಾನ ಪರಿಷತ್ ಸದಸ್ಯತ್ವ ಸಿಕ್ಕಿದ್ದು ಸಹಜವಾಗಿಯೇ ನಮಗೆ ಖುಷಿಯಾಗಿತ್ತು. ಈ ನಿಟ್ಟಿನಲ್ಲಿ ಮಂಗಳೂರಿನ ವುಡ್‌ಲ್ಯಾಂಡ್ಸ್ ಹೋಟೆಲಲ್ಲಿ ಕೋಮು ಸೌಹಾರ್ದ...

ಡ್ರಗ್ಸ್ ಮುಕ್ತ ಕರ್ನಾಟಕ ನಮ್ಮ ಗುರಿ: ‘ಆಪರೇಷನ್ RISE’ ಮತ್ತು ‘ಬೇಡ BRO’ ಅಭಿಯಾನಕ್ಕೆ ಸಚಿವ ಪ್ರಿಯಾಂಕ್ ಖರ್ಗೆ ಕರೆ

ಬೆಂಗಳೂರು: ಮಾದಕ ದ್ರವ್ಯ ಮುಕ್ತ ಕರ್ನಾಟಕವನ್ನು ನಿರ್ಮಿಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಮಹತ್ವದ ಹೆಜ್ಜೆ ಇಟ್ಟಿದ್ದು, ಮಾದಕ ವ್ಯಸನದ ವಿರುದ್ಧ ಯುವಜನತೆ ಮತ್ತು ಸಾರ್ವಜನಿಕರು ಕೈಜೋಡಿಸಬೇಕು ಎಂದು ಗೃಹ ಸಚಿವ ಪ್ರಿಯಾಂಕ್ ಖರ್ಗೆ...

ಬೆಂಗಳೂರಿನ 3 ಪ್ರಮುಖ ಮಾರ್ಗಗಳಲ್ಲಿ ಟೋಲ್ ದರ ಭಾರಿ ಹೆಚ್ಚಳ: ಇಂದಿನಿಂದಲೇ ಜಾರಿ 

ಬೆಂಗಳೂರು: ಸಿಲಿಕಾನ್ ಸಿಟಿಯ ವಾಹನ ಸವಾರರಿಗೆ ಜುಲೈ ಒಂದರಿಂದಲೇ ಅನ್ವಯವಾಗುವಂತೆ ಬೆಲೆ ಏರಿಕೆಯ ಭಾರಿ ಬಿಸಿ ತಟ್ಟಿದೆ. ಬೆಂಗಳೂರಿನ ಪ್ರಮುಖ ಸಂಪರ್ಕ ರಸ್ತೆಗಳಾದ ನೈಸ್ ರಸ್ತೆ (NICE Road), ಎಲೆಕ್ಟ್ರಾನಿಕ್ಸ್ ಸಿಟಿ ಎಲಿವೇಟೆಡ್...

ಕೊಪ್ಪಳದ ಬೋಚನಹಳ್ಳಿಯಲ್ಲಿ ದಲಿತರ ಮೇಲೆ ಹಲ್ಲೆ: ದೂರು-ಪ್ರತಿದೂರು; ಹೋರಾಟಕ್ಕೆ ಸಂಘಟನೆಗಳ ನಿರ್ಧಾರ

ಮೊಹರಂ ಮೆರವಣಿಗೆ ವೇಳೆ ನಡೆದ ಗಲಾಟೆಗೆ ಸಂಬಂಧಿಸಿದಂತೆ ದಲಿತರ ಮನೆಗಳಿಗೆ ನುಗ್ಗಿ ಮಾರಣಾಂತಿಕ ಹಲ್ಲೆ ನಡೆಸಿದ ಘಟನೆ ಕೊಪ್ಪಳ ತಾಲೂಕಿನ ಅಳವಂಡಿ ಬಳಿಯ ಬೋಚನಹಳ್ಳಿ ಗ್ರಾಮದಲ್ಲಿ ನಡೆದಿದೆ. ಜೂನ್ 25ರಂದು ಗ್ರಾಮದಲ್ಲಿ ಮೊಹರಂ ಮೆರವಣಿಗೆ...

ಎನ್ಯೂಮರೇಷನ್ ಫಾರಂ ಭರ್ತಿ ಮಾಡುವ ಮೂಲಕ SIR ಗೆ ಚಾಲನೆ ನೀಡಿದ ಸಿಎಂ ಡಿ.ಕೆ ಶಿವಕುಮಾರ್

ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಇಂದು (ಜೂನ್ 30) ಮಂಗಳವಾರ ತಮ್ಮ ಸದಾಶಿವನಗರ ನಿವಾಸದಲ್ಲಿ ದಾಖಲಾತಿ ನಮೂನೆಯನ್ನು ಭರ್ತಿ ಮಾಡಿ ಸಲ್ಲಿಸುವ ಮೂಲಕ ಮತದಾರರ ಪಟ್ಟಿಯ 'ವಿಶೇಷ ತೀವ್ರ ಪರಿಷ್ಕರಣೆ' (SIR) ಅಭಿಯಾನಕ್ಕೆ ಅಧಿಕೃತವಾಗಿ...

‘ಆಪರೇಷನ್ ಸಿಂಧೂರ್‌’ ಕುರಿತು ಸಂಸತ್ತಿಗೆ ಸುಳ್ಳು ಮಾಹಿತಿ: ರಾಜನಾಥ್ ಸಿಂಗ್ ವಿರುದ್ಧ ಕಾಂಗ್ರೆಸ್‌ನಿಂದ ಹಕ್ಕುಚ್ಯುತಿ ನೋಟಿಸ್

ಕೇಂದ್ರ ರಕ್ಷಣಾ ಸಚಿವ ರಾಜ್‌ನಾಥ್ ಸಿಂಗ್ ವಿರುದ್ಧ ಕಾಂಗ್ರೆಸ್ ಪಕ್ಷ ಲೋಕಸಭೆಯಲ್ಲಿ ಹಕ್ಕುಚ್ಯುತಿ ನೋಟಿಸ್ ನೀಡಿದೆ. ಕಾಂಗ್ರೆಸ್ ಸಂಸದ ಕೆ. ಸಿ. ವೇಣುಗೋಪಾಲ್ ಅವರು ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಅವರಿಗೆ ಈ ಕುರಿತು ಪತ್ರ ಬರೆದಿದ್ದು,...