Homeಎಕಾನಮಿ3-4ನೇ ತ್ರೈಮಾಸಿಕದಲ್ಲಿಯೂ ಜಿಡಿಪಿ ಋಣಾತ್ಮಕವಾಗಿಯೇ ಇರಲಿದೆ: ನಿರ್ಮಲಾ ಸೀತಾರಾಮನ್

3-4ನೇ ತ್ರೈಮಾಸಿಕದಲ್ಲಿಯೂ ಜಿಡಿಪಿ ಋಣಾತ್ಮಕವಾಗಿಯೇ ಇರಲಿದೆ: ನಿರ್ಮಲಾ ಸೀತಾರಾಮನ್

ಜೀವನೋಪಾಯಕ್ಕಿಂತ ಜೀವ ಮುಖ್ಯ ಎಂದು ಮನಗಂಡ ಸರ್ಕಾರವು ಮಾರ್ಚ್ 25 ರಿಂದ ಸರ್ಕಾರವು ಕಠಿಣವಾದ ಲಾಕ್‌ಡೌನ್ ವಿಧಿಸಿತ್ತು ಎಂದು ಹೇಳಿದ್ದಾರೆ.

- Advertisement -
- Advertisement -

ಆರ್ಥಿಕತೆಯಲ್ಲಿ ಪುನಶ್ಚೇತನದ ಲಕ್ಷಣಗಳು ಕಂಡುಬರುತ್ತಿವೆ ಎಂದಿರುವ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್, ಜಿಡಿಪಿ ಬೆಳವಣಿಗೆಯು ಪ್ರಸಕ್ತ ಹಣಕಾಸು ವರ್ಷದಲ್ಲಿ ಋಣಾತ್ಮಕ ವಲಯದಲ್ಲಿರಬಹುದು ಅಥವಾ ಶೂನ್ಯಕ್ಕೆ ಹತ್ತಿರವಾಗಬಹುದು ಎಂದು ಹೇಳಿದ್ದಾರೆ.

ಪ್ರಸಕ್ತ ಹಣಕಾಸು ವರ್ಷದ ಮೊದಲ ತ್ರೈಮಾಸಿಕದಲ್ಲಿ (ಏಪ್ರಿಲ್-ಜೂನ್) ಆರ್ಥಿಕತೆಯಲ್ಲಿ ಶೇಕಡಾ -23.9 ರಷ್ಟು ಕುಸಿತ ಕಂಡುಬಂದಿರುವುದು ಇದಕ್ಕೆ ಕಾರಣ ಎಂದು ಅವರು ಹೇಳಿದ್ದಾರೆ.

ಸೆರಾವೀಕ್‌ನ ಇಂಡಿಯಾ ಎನರ್ಜಿ ಫೋರಂನಲ್ಲಿ ಮಾತನಾಡಿದ ನಿರ್ಮಲಾ ಸೀತಾರಾಮನ್, “ಜೀವನೋಪಾಯಕ್ಕಿಂತ ಜೀವ ಮುಖ್ಯ ಎಂದು ಮನಗಂಡ ಸರ್ಕಾರವು ಮಾರ್ಚ್ 25 ರಿಂದ ಸರ್ಕಾರವು ಕಠಿಣವಾದ ಲಾಕ್‌ಡೌನ್ ವಿಧಿಸಿತ್ತು” ಎಂದು ಹೇಳಿದರು.

ಇದನ್ನೂ ಓದಿ: ಆರ್ಥಿಕತೆಯಲ್ಲಿ ಭಾರತವನ್ನು ಹಿಂದಿಕ್ಕಲಿರುವ ಬಾಂಗ್ಲಾದೇಶ!

“ಸಾಂಕ್ರಾಮಿಕ ರೋಗವನ್ನು ಎದುರಿಸಲು ಪೂರ್ವಸಿದ್ಧತಾ ಕಾರ್ಯಗಳನ್ನು ಮಾಡಲು ಲಾಕ್‌ಡೌನ್ ನಮಗೆ ಸಮಯ ನೀಡಿತು. ಆದರೆ ಅನ್‌ಲಾಕ್‌ನೊಂದಿಗೆ ಸ್ಥೂಲ ಆರ್ಥಿಕ ಸೂಚಕಗಳು ಪುನಶ್ಚೇತನದ ಲಕ್ಷಣಗಳನ್ನು ತೋರಿಸುತ್ತಿವೆ. ಹಬ್ಬಗಳ ಸಮಯವು ಆರ್ಥಿಕತೆಯನ್ನು ಮತ್ತಷ್ಟು ಉತ್ತೇಜಿಸುತ್ತಿದೆ. ಹಾಗಾಗಿ ಮೂರನೇ ಮತ್ತು ನಾಲ್ಕನೇ ತ್ರೈಮಾಸಿಕಗಳಲ್ಲಿ ಸಕಾರಾತ್ಮಕ ಬೆಳವಣಿಗೆಯ ಭರವಸೆ ಪುನರುಜ್ಜೀವನಗೊಂಡಿದೆ” ಎಂದು ಹೇಳಿದರು..

ಒಟ್ಟಾರೆಯಾಗಿ, ಪ್ರಸಕ್ತ ಹಣಕಾಸು ವರ್ಷದ (ಏಪ್ರಿಲ್ 2020 ರಿಂದ ಮಾರ್ಚ್ 2021) ಜಿಡಿಪಿ ಬೆಳವಣಿಗೆಯು ಋಣಾತ್ಮಕ ವಲಯ ಅಥವಾ ಶೂನ್ಯಕ್ಕೆ ಹತ್ತಿರವಾಗಲಿದ್ದು, ಮುಂದಿನ ಹಣಕಾಸು ವರ್ಷದಿಂದ ಈ ಬೆಳವಣಿಗೆ ಪುನರುಜ್ಜೀವನಗೊಳ್ಳುತ್ತದೆ ಎಂದು ಅವರು ಹೇಳಿದರು.

ಇತ್ತೀಚೆಗೆ ಐಎಂಎಫ್ ಬಿಡುಗಡೆ ಮಾಡಿದ ವರದಿಯನ್ವಯ ಭಾರತದ ಜಿಡಿಪಿಯು ಏಷ್ಯಾದ ರಾಷ್ಟ್ರಗಳಲ್ಲಿಯೇ ಅತ್ಯಂತ ಕೆಳಮಟ್ಟದಲ್ಲಿತ್ತು. ಸ್ವಾತಂತ್ರ್ಯಾ ನಂತರದಲ್ಲಿ ಇದು ಅತ್ಯಂತ ಕಳಪೆ ಪ್ರದರ್ಶನ ಎಂದು ಆರ್ಥಿಕ ತಜ್ಞರು ಅಭಿಪ್ರಾಯಪಟ್ಟಿದ್ದರು.

ಇದನ್ನೂ ಓದಿ:ಭಾರತವು ವಿಶ್ವದ ಆರ್ಥಿಕತೆಯಲ್ಲಿ 3ನೇ ಸ್ಥಾನಕ್ಕೆ ಬರಲು ಇನ್ನೂ 30 ವರ್ಷ ಬೇಕು: ಅಧ್ಯಯನ

ಇತ್ತೀಚೆಗೆ ಆರ್‌ಬಿಐನ ಉಪ ಗವರ್ನರ್ ಮೈಕೆಲ್ ಪಾತ್ರಾ ಮಾತನಾಡಿ, ಆರ್ಥಿಕತೆ ಪುನರುಜ್ಜೀವನಗೊಳ್ಳಲು ಕೆಲವು ವರ್ಷಗಳೇ ಬೇಕಾಗಬಹುದು ಎಂದು ಹೇಳಿದ್ದರು.

ಈಗ ನಿರ್ಮಲಾ ಸೀತಾರಾಮನ್ ನಿಡಿರುವ ಹೇಳಿಕೆಯ ಪ್ರಕಾರ, “3 ಅಥವಾ 4ನೇ ತ್ರೈಮಾಸಿಕದಲ್ಲಿ ಭಾರತದ ಜಿಡಿಪಿಯು ಋಣಾತ್ಮಕತೆಯಿಂದ ಧನಾತ್ಮಕತೆಯೆಡೆಗೆ (ಮೈನಸ್-ಪ್ಲಸ್) ಬೆಳವಣಿಗೆಯಾಗಬಹುದು. ಆದರೆ ಶೂನ್ಯದ (0) ಆಸುಪಾಸಿನಲ್ಲಿಯೇ ಇರುಬಹುದು ಅಥವಾ ಋಣಾತ್ಮಕವಾಗಿಯೇ (-) ಇರಬಹುದು” ಎಂದು ಹೇಳಿದ್ದಾರೆ. ಅಂದರೆ ಈ ವರ್ಷವೂ ಆರ್ಥಿಕತೆ ಧನಾತ್ಮಕ ಬೆಳವಣಿಗೆಯನ್ನು ಕಾಣುವುದಿಲ್ಲ ಎಂಬುದನ್ನು ಸೂಚ್ಯವಾಗಿ ಹೇಳಿದ್ದಾರೆ.

ಅರ್ಥಿಕ ಕುಸಿತದಿಂದ ಕೇಂದ್ರ ಬಿಜೆಪಿ ಸರ್ಕಾರವು ವ್ಯಾಪಕ ಟೀಕೆಗೆ ಗುರಿಯಾಗಿತ್ತು. ಇದರ ನಡುವೆ 20 ಲಕ್ಷ ಕೋಟಿ ಆರ್ಥಿಕ ಪ್ಯಾಕೇಜ್‌ ಅನ್ನು ಘೋಷಿಸಿತ್ತು. ಆದರೂ ಆರ್ಥಕತೆ ತೆವಳುತ್ತಲೇ ಇದೆ.


ಇದನ್ನೂ ಓದಿ: ಆರ್ಥಿಕತೆ ಮೇಲೆತ್ತಲು ಹರಸಾಹಸ: ಸರ್ಕಾರಿ ನೌಕರರಿಗೆ ಹಬ್ಬದ ಮುಂಗಡ ನೀಡಲು ಮುಂದಾದ ಕೇಂದ್ರ ಸರ್ಕಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...

ಬಿಹಾರ: ನಕಲಿ ದಾಖಲೆ ನೀಡಿ ಕೆಲಸ ಗಿಟ್ಟಿಸಿದ್ದ 3,000ಕ್ಕೂ ಹೆಚ್ಚು ಶಿಕ್ಷಕರು ವಜಾ!

ನಕಲಿ ಪದವಿ ಹಾಗೂ ನಕಲಿ ಶೈಕ್ಷಣಿಕ ಪ್ರಮಾಣಪತ್ರಗಳನ್ನು ನೀಡಿ ಸರ್ಕಾರಿ ಶಾಲೆಗಳಲ್ಲಿ ಉದ್ಯೋಗ ಗಿಟ್ಟಿಸಿಕೊಂಡಿದ್ದ 3,000ಕ್ಕೂ ಹೆಚ್ಚು ಶಿಕ್ಷಕರನ್ನು ಸೇವೆಯಿಂದ ವಜಾಗೊಳಿಸಲು ಬಿಹಾರ ಸರ್ಕಾರ ನಿರ್ಧರಿಸಿದೆ. ಈ ಕುರಿತು ಶುಕ್ರವಾರ ಅಧಿಕೃತ ಪ್ರಕಟಣೆ...

TMC ತೊರೆದು BJP ಸೇರಿದ ಮಾಜಿ ಸಂಸದರಿಗೆ ಬಿಜೆಪಿಯಿಂದ ರಾಜ್ಯಸಭಾ ಟಿಕೆಟ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (TMC) ಪಕ್ಷದ ರಾಜ್ಯಸಭಾ ಸ್ಥಾನಗಳಿಗೆ ರಾಜೀನಾಮೆ ನೀಡಿದ ಕೆಲವೇ ವಾರಗಳಲ್ಲಿ, ಆ ಮೂವರು ಮಾಜಿ ಸಂಸದರು ಈಗ ಬೇರೆ ಬಣ್ಣದ (BJP) ಶಾಲು ಧರಿಸಿ ಮತ್ತೆ...

ಪಶ್ಚಿಮ ಬಂಗಾಳ: ಟಿಎಂಸಿ ಖಾತೆ ಫ್ರೀಜ್ ಮಾಡಿದ್ದ ಪೊಲೀಸರಿಗೆ ಕಲ್ಕತ್ತಾ ಹೈಕೋರ್ಟ್ ತರಾಟೆ!

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಹಲವು ಬ್ಯಾಂಕ್ ಖಾತೆಗಳನ್ನು ಜಾರಿ ನಿರ್ದೇಶನಾಲಯ (ಇಡಿ) ಮುಟ್ಟುಗೋಲು ಹಾಕಿಕೊಂಡ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು ಮುಟ್ಟುಗೋಲು ಹಾಕಿಕೊಂಡಿದ್ದ ಪಕ್ಷದ ಮೂರು ಬ್ಯಾಂಕ್...

ಬಂಗಾಳದ ಬಿಸಿಯೂಟ ಇಸ್ಕಾನ್‌ಗೆ ಹಸ್ತಾಂತರವಿಲ್ಲ: ಸರ್ಕಾರದ ಸ್ಪಷ್ಟನೆ, ಕಲ್ಕತ್ತಾ ಹೈಕೋರ್ಟ್‌ನಿಂದ ಅಫಿಡವಿಟ್‌ಗೆ ನಿರ್ದೇಶನ 

ಕೋಲ್ಕತ್ತಾ: ರಾಜ್ಯದ ಶಾಲೆಗಳಲ್ಲಿ ಜಾರಿಯಲ್ಲಿರುವ ಪಿಎಂ-ಪೋಷಣ್ (ಮಧ್ಯಾಹ್ನದ ಬಿಸಿಯೂಟ) ಯೋಜನೆಯ ನಿರ್ವಹಣೆಯನ್ನು ಇಸ್ಕಾನ್ ಸಂಸ್ಥೆಗೆ ಹಸ್ತಾಂತರಿಸುವ ಯಾವುದೇ ಅನುಮೋದಿತ ಪ್ರಸ್ತಾಪ ಸರ್ಕಾರಕ್ಕಿಲ್ಲ ಎಂದು ಪಶ್ಚಿಮ ಬಂಗಾಳ ಸರ್ಕಾರ ಸ್ಪಷ್ಟಪಡಿಸಿದೆ. ಈ ಕುರಿತು ಅಫಿಡವಿಟ್...