Homeಮುಖಪುಟದೇಶದ ಆರ್ಥಿಕ ಬೆಳವಣಿಗೆ ಕುಂಠಿತ : ಎರಡು ವರ್ಷಗಳಲ್ಲಿ ಕನಿಷ್ಠ ಮಟ್ಟಕ್ಕೆ ಕುಸಿದ ಜಿಡಿಪಿ

ದೇಶದ ಆರ್ಥಿಕ ಬೆಳವಣಿಗೆ ಕುಂಠಿತ : ಎರಡು ವರ್ಷಗಳಲ್ಲಿ ಕನಿಷ್ಠ ಮಟ್ಟಕ್ಕೆ ಕುಸಿದ ಜಿಡಿಪಿ

- Advertisement -
- Advertisement -

ಪ್ರಸಕ್ತ ಹಣಕಾಸು ವರ್ಷದ (2024-25) ಎರಡನೇ ತ್ರೈಮಾಸಿಕದಲ್ಲಿ (ಜುಲೈ-ಸೆಪ್ಟೆಂಬರ್) ದೇಶಿಯ ಆಂತರಿಕ ಉತ್ಪನ್ನ (ಜಿಡಿಪಿ) ಶೇ.5.4ರಷ್ಟು ದಾಖಲಾಗಿದ್ದು, ಎರಡು ವರ್ಷಗಳಲ್ಲಿ ಕನಿಷ್ಠ ಮಟ್ಟಕ್ಕೆ ಇಳಿದಿದೆ.

ಕೇಂದ್ರ ಸರ್ಕಾರದ ರಾಷ್ಟ್ರೀಯ ಸಾಂಖ್ಯಿಕ ಕಚೇರಿ (ಎನ್‌ಎಸ್‌ಒ) ಈ ಕುರಿತು ಶುಕ್ರವಾರ (ನ.29) ವರದಿ ಬಿಡುಗಡೆ ಮಾಡಿದೆ. ತಯಾರಿಕಾ ಮತ್ತು ಗಣಿ ವಲಯಗಳ ಪ್ರಗತಿ ಗಣನೀಯವಾಗಿ ಕುಸಿದಿರುವುದು ಹಾಗೂ ಜನರು ಮಾಡುತ್ತಿರುವ ವೆಚ್ಚ ಕಡಿಮೆಯಾಗಿರುವುದು ಈ ಕುಸಿತಕ್ಕೆ ಕಾರಣ ಎಂದು ಎನ್‌ಎಸ್‌ಒ ಹೇಳಿದೆ.

2022-23ರ ಹಣಕಾಸು ವರ್ಷದ ಮೂರನೇ ತ್ರೈಮಾಸಿಕದಲ್ಲಿ (ಅಕ್ಟೋಬರ್-ಡಿಸೆಂಬರ್) ಜಿಡಿಪಿ ಬೆಳವಣಿಗೆ ಶೇ.4.3ರಷ್ಟು ದಾಖಲಾಗಿತ್ತು. ಇದು ಈ ಹಿಂದಿನ ಕನಿಷ್ಠ ಮಟ್ಟವಾಗಿದೆ. 2023-24ರ ಎರಡನೇ ತ್ರೈಮಾಸಿಕದಲ್ಲಿ ಜಿಡಿಪಿ ಶೇ. 8.1ರಷ್ಟಿತ್ತು. ಪ್ರಸಕ್ತ ವರ್ಷದ ಮೊದಲ ತ್ರೈಮಾಸಿಕದಲ್ಲಿ ಶೇ. 6.7ರಷ್ಟಿತ್ತು.

ಜನರು ಸರಕು ಮತ್ತು ಸೇವೆಗಳಿಗಾಗಿ ಮಾಡುವ ವೆಚ್ಚವನ್ನು ಸೂಚಿಸುವ ಖಾಸಗಿ ಬಳಕೆ ವೆಚ್ಚದ ಬೆಳವಣಿಗೆಯ ಪ್ರಮಾಣ ಸೆಪ್ಟೆಂಬರ್ ತ್ರೈಮಾಸಿಕದಲ್ಲಿ ಶೇ.6ಕ್ಕೆ ಇಳಿದಿದೆ. ಈ ವರ್ಷದ ಏಪ್ರಿಲ್-ಜೂನ್ ಅವಧಿಯಲ್ಲಿ ಇದು ಶೇ. 7.4ರಷ್ಟಿತ್ತು.

ಕಳೆದ ವರ್ಷದ ಜುಲೈ-ಸೆಪ್ಟೆಂಬರ್ ಅವಧಿಯಲ್ಲಿ ತಯಾರಿಕಾ ವಲಯದ ಜಿವಿಎ ಪ್ರಗತಿ ಶೇ.14.3ರಷ್ಟಿತ್ತು. ಅದು ಈ ವರ್ಷ ಶೇ.2.2ಕ್ಕೆ ಇಳಿಕೆಯಾಗಿದೆ.

ನವ ಭಾರತದ ಕಠೋರ ಸತ್ಯ : ಕಾಂಗ್ರೆಸ್ 

ಜುಲೈ-ಸೆಪ್ಟೆಂಬರ್ ತ್ರೈಮಾಸಿಕದಲ್ಲಿ ಜಿಡಿಪಿ ಕುಸಿತ ಕಂಡಿರುವುದಕ್ಕೆ ಕಾಂಗ್ರೆಸ್ ಪ್ರಧಾನಿ ನರೇಂದ್ರ ಮೋದಿ ಮತ್ತು ಅವರ ಬಿಜೆಪಿ ಸರ್ಕಾರದ ವಿರುದ್ದ ವಾಗ್ದಾಳಿ ನಡೆಸಿದೆ. ಈ ಕುರಿತು ಎಕ್ಸ್‌ನಲ್ಲಿ ಬರೆದುಕೊಂಡಿರುವ ಎಐಸಿಸಿ ಪ್ರಧಾನ ಕಾರ್ಯದರ್ಶಿ (ಸಂವಹನ) ಜೈರಾಮ್ ರಮೇಶ್, “ಜುಲೈ-ಸೆಪ್ಟೆಂಬರ್ ತ್ರೈಮಾಸಿಕದಲ್ಲಿ ಜಿಡಿಪಿ ಕುಸಿದಿರುವುದು ಅತ್ಯಂತ ನಿರಾಶದಾಯಕವಾಗಿದೆ. ಪ್ರಧಾನಿ ಮತ್ತು ಅವರ ಬೆಂಬಲಿಗರು ಮಾಡುತ್ತಿರುವ ಪ್ರಚಾರ, ನೀಡುತ್ತಿರುವ ದೊಡ್ಡ ದೊಡ್ಡ ಹೇಳಿಕೆಗಳಿಗಿಂತ ವಾಸ್ತವತೆ ಸಂಪೂರ್ಣ ಭಿನ್ನವಾಗಿದೆ ಎಂಬುವುದನ್ನು ಇದು ತೋರಿಸುತ್ತದೆ ಎಂದಿದ್ದಾರೆ.

ಹಿಂದಿನ ಆರ್ಥಿಕ ಬೆಳವಣಿಗೆಯನ್ನು ‘ಮರು ಲೆಕ್ಕಾಚಾರ’ ಮಾಡಿದ ನಂತರವೂ, ಜೈವಿಕವಲ್ಲದ ಪ್ರಧಾನ ಮಂತ್ರಿಯ ಆರ್ಥಿಕ ಬೆಳವಣಿಗೆಯ ದಾಖಲೆಯು ಡಾ. ಮನಮೋಹನ್ ಸಿಂಗ್ ಅವರ ಅವಧಿಗಿಂತ ಕೆಟ್ಟದಾಗಿದೆ. ಇದು ‘ನವ ಭಾರತದ ಕಠೋರ ಸತ್ಯ’ ಎಂದು ಹೇಳಿದ್ದಾರೆ.

ಇದನ್ನೂ ಓದಿ : ಮಹಾರಾಷ್ಟ್ರ ಸೋಲಿನ ಬಗ್ಗೆ ಕಾಂಗ್ರೆಸ್ ಅಸಮಾಧಾನ; ಚುನಾವಣಾ ಆಯೋಗಕ್ಕೆ ‘ತುರ್ತು ಜ್ಞಾಪಕ ಪತ್ರ’

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವಿದ್ಯಾರ್ಥಿಗಳನ್ನು ಗುಂಡಿಕ್ಕಿ ಕೊಲ್ಲಬೇಕಿತ್ತು: ಆರ್‌ಎಸ್‌ಎಸ್ ಸಿದ್ಧಾಂತವಾದಿ ಟಿ.ಜಿ. ಮೋಹನ್‌ದಾಸ್ ವಿಕೃತ ಹೇಳಿಕೆ

ನವದೆಹಲಿ: ಕೇಂದ್ರ ಸರ್ಕಾರದ ಶಿಕ್ಷಣ ನೀತಿಗಳು ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ದೆಹಲಿಯ ಜಂತರ್ ಮಂತರ್‌ನಲ್ಲಿ ಬೃಹತ್ ಪ್ರತಿಭಟನೆ ನಡೆಸಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹಿಸಿದ್ದ ಯುವಜನರ ವಿರುದ್ಧ...

ಸಿಜೆಪಿ ಪ್ರತಿಭಟನೆ: ವಿದ್ಯಾರ್ಥಿಗಳ ಮೇಲೆ ‘ಪೆಲೆಟ್‌ ಗನ್’ ದಾಳಿ ದೃಢ; ನಿಯಮಾವಳಿಗಳನ್ನು ಉಲ್ಲಂಘಿಸಿ ಬಲಪ್ರಯೋಗ ನಡೆಸಿರುವ RAF

ನವದೆಹಲಿ: ತಮ್ಮ ಹಕ್ಕುಗಳಿಗಾಗಿ ಪ್ರಜಾಸತ್ತಾತ್ಮಕವಾಗಿ ಧ್ವನಿ ಎತ್ತುತ್ತಿದ್ದ ವಿದ್ಯಾರ್ಥಿ ಸಮುದಾಯದ ಮೇಲೆ ಕೇಂದ್ರದ ಸಶಸ್ತ್ರ ಪಡೆಗಳು ಎಸಗಿದ ದೌರ್ಜನ್ಯದ ಕರಾಳ ಮುಖ ಕೊನೆಗೂ ಅನಾವರಣಗೊಂಡಿದೆ. ಜುಲೈ 20ರಂದು ದೆಹಲಿಯ ಕನ್ಹಾಟ್ ಪ್ಲೇಸ್ ಪ್ರದೇಶದಲ್ಲಿ...

ಕೇವಲ ಪ್ರತಿಭಟಿಸಿದ್ದಕ್ಕೆ ವಿದ್ಯಾರ್ಥಿಗಳು ಜೈಲುಪಾಲು; ಗಂಗೆಯ ದೋಣಿಯಲ್ಲಿ ಬಿರಿಯಾನಿ ತಿಂದವರಿಗೂ ಸಿಗುತ್ತಿಲ್ಲ ಜಾಮೀನು : ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಕಳವಳ

ಭಾರತದಲ್ಲಿ ಭಿನ್ನಾಭಿಪ್ರಾಯಗಳನ್ನು ಗೌರವಿಸುವ ಮತ್ತು ಅವುಗಳಿಗೆ ಅವಕಾಶ ನೀಡುವ ಸಾರ್ವಜನಿಕ ಸ್ಥಳಗಳು ಎಷ್ಟು ಕಡಿಮೆಯಾಗುತ್ತಿವೆ ಎಂದರೆ, ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುವ ವಿದ್ಯಾರ್ಥಿಗಳನ್ನು ಬಂಧಿಸಿ ಅವರಿಗೆ ಜಾಮೀನು ನಿರಾಕರಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ...

ಪ.ಬಂಗಾಳ: ನೂತನ ‘ಗೂಂಡಾ ಕಾಯ್ದೆ’ ಅಡಿ NEET ಪ್ರತಿಭಟನೆಯಲ್ಲಿ ಭಾಗಿಯಾದ 10 ಮುಸ್ಲಿಂ ಯುವಕರು ಸೇರಿದಂತೆ 11 ಜನರ ಬಂಧನ 

ಕೋಲ್ಕತ್ತಾ: ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಶಿಕ್ಷಣ ಕ್ಷೇತ್ರದ ವೈಫಲ್ಯಗಳು ಹಾಗೂ ನೀಟ್-ಯುಜಿ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಬೃಹತ್ ವಿದ್ಯಾರ್ಥಿ ಪ್ರತಿಭಟನೆಯು ತೀವ್ರ ರಾಜಕೀಯ...

ಪೊಲೀಸರ ಅನುಮತಿ ಪಡೆದಿದ್ದರೂ ನೀಟ್ ಪ್ರತಿಭಟನೆಗೆ ವಾಟ್ಸಾಪ್ ಗ್ರೂಪ್ ರಚಿಸಿದ್ದಕ್ಕಾಗಿ ಅಸ್ಸಾಂನಲ್ಲಿ ಮೂವರು ಮುಸ್ಲಿಂ ವಿದ್ಯಾರ್ಥಿಗಳ ಬಂಧನ

ಅಸ್ಸಾಂನಲ್ಲಿ ಬಿಜೆಪಿ ಸರ್ಕಾರದ ಕೋಮುವಾದಿ ಧೋರಣೆ ಮತ್ತು ಪ್ರಜಾಸತ್ತಾತ್ಮಕ ಹಕ್ಕುಗಳ ದಮನದ ದಾರುಣ ಚಿತ್ರಣವೊಂದು ಮತ್ತೆ ಮುನ್ನೆಲೆಗೆ ಬಂದಿದೆ. ದೇಶಾದ್ಯಂತ ಸದ್ದು ಮಾಡಿದ್ದ 'ನೀಟ್' (NEET) ಅಕ್ರಮಗಳ ವಿರುದ್ಧ ಧ್ವನಿ ಎತ್ತಲು ಮತ್ತು...

‘ವಿದ್ಯಾರ್ಥಿಗಳ ಮೇಲಿನ ವಿಕೃತ ದಾಳಿಗೆ ನಿಮ್ಮ ಸಮ್ಮತಿ ಇತ್ತೇ?’: ಪತ್ರದ ಮೂಲಕ ಅಮಿತ್ ಶಾಗೆ ರಾಹುಲ್ ಗಾಂಧಿ ಪ್ರಶ್ನೆ

ನವದೆಹಲಿ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಕಾರಣವಾದ ದೇಶವ್ಯಾಪಿ ವಿದ್ಯಾರ್ಥಿ ಆಂದೋಲನದ ವೇಳೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯ ಮತ್ತು ಮಿತಿಮೀರಿದ ಬಲಪ್ರಯೋಗದ ವಿರುದ್ಧ ಲೋಕಸಭೆಯ ವಿರೋಧ...

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...

ಕಾಕ್ರೋಚ್‌ಗಳಿಗೆ ಮಣಿದ ಮೋದಿ ಸರ್ಕಾರ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ, ನೀಟ್ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು (ಜುಲೈ 25) ಪ್ರಧಾನ ಮಂತ್ರಿಗಳಿಗೆ ತಮ್ಮ...