Homeಕರ್ನಾಟಕಗೀತಾ ಶಿವರಾಜ್‌ಕುಮಾರ್ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆ

ಗೀತಾ ಶಿವರಾಜ್‌ಕುಮಾರ್ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆ

- Advertisement -
- Advertisement -

ಕನ್ನಡದ ಹಿರಿಯ ನಟ ಶಿವರಾಜ್​ಕುಮಾರ್​ ಅವರ ಪತ್ನಿ ಗೀತಾ ಶಿವರಾಜ್‌ಕುಮಾರ್ ಅವರು ಇಂದು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ.

ಕೆಪಿಸಿಸಿ ಕಚೇರಿಯಲ್ಲಿ ಅಧ್ಯಕ್ಷರಾದ ಡಿ.ಕೆ.ಶಿವಕುಮಾರ್ ಸಮ್ಮುಖದಲ್ಲಿ ಗೀತಾ ಶಿವರಾಜ್‌ಕುಮಾರ್‌ ಅವರು ಕಾಂಗ್ರೆಸ್‌ಗೆ ಸೇರಿದ್ದಾರೆ.

ಮಾಜಿ ಮುಖ್ಯಮಂತ್ರಿ ದಿವಂಗತ ಎಸ್‌. ಬಂಗಾರಪ್ಪ ಅವರ ಪುತ್ರಿಯಾಗಿರುವ ಗೀತಾ ಅವರು, ಈ ಹಿಂದೆ ಜೆಡಿಎಸ್‌ನಿಂದ ಲೋಕಸಭಾ ಚುನಾವಣೆಗೆ ಬಿ.ಎಸ್.ಯಡಿಯೂರಪ್ಪನವರ ಎದುರಾಳಿಯಾಗಿ ಸ್ಪರ್ಧಿಸಿದ್ದರು. ಆದರೆ, ಯಡಿಯೂರಪ್ಪ ಅವರ ಎದುರು ಸೋತಿದ್ದರು.

2014ರ ಲೋಕಸಭಾ ಚುನಾವಣೆಯಲ್ಲಿ ಶಿವಮೊಗ್ಗ ಕ್ಷೇತ್ರದಿಂದ ಜೆಡಿಎಸ್‌ ಜೆಡಿಎಸ್ ಟಿಕೆಟ್‌ ಪಡೆದು ಗೀತಾ ಶಿವರಾಜ್‌ಕುಮಾರ್‌ ಸ್ಪರ್ಧಿಸಿ ಸೋಲು ಅನುಭವಿಸಿದ್ದರು. 2008ರಲ್ಲಿ ಜೆಡಿಎಸ್‌ನಿಂದ ಗೀತಾ ಅವರು ಸ್ಪರ್ಧಿಸಿದ್ದರು.

ಬಂಗಾರಪ್ಪ ಅವರ ಐವರು ಮಕ್ಕಳಲ್ಲಿ ಮಧು ಬಂಗಾರಪ್ಪ, ಕುಮಾರ್ ಬಂಗಾರಪ್ಪ ಮತ್ತು ಗೀತಾ ಶಿವರಾಜ್‌ಕುಮಾರ್ ಅವರು ರಾಜಕೀಯ ಜೀವನದಲ್ಲಿದ್ದಾರೆ. ಮಧು ಬಂಗಾರಪ್ಪ ಕಾಂಗ್ರೆಸ್‌ ಪಕ್ಷದಲ್ಲಿ, ಕುಮಾರ್ ಬಂಗಾರಪ್ಪ ಬಿಜೆಪಿಯಲ್ಲಿದ್ದು, ಈ ಬಾರಿ ಸೊರಬ ವಿಧಾನಸಭಾ ಚುನಾವಣೆಯಲ್ಲಿ ಪರಸ್ಪರ ಸೆಣಸಲಿದ್ದಾರೆ.

2021ರ ಜುಲೈನಲ್ಲಿ ಮಧು ಬಂಗಾರಪ್ಪ ಜೆಡಿಎಸ್ ತೊರೆದು ಕಾಂಗ್ರೆಸ್ ಸೇರಿದ್ದರು. ಇದೀಗ ಗೀತಾ ಶಿವರಾಜ್‌‌ಕುಮಾರ್ ಸಹ ಕಾಂಗ್ರೆಸ್ ಸೇರಿದ್ದಾರೆ.

“ಗೀತಾ ಶಿವರಾಜ್‌ಕುಮಾರ್ ಅವರು ಕಾಂಗ್ರೆಸ್‌ಗೆ ಬಂದಿದ್ದಾರೆ ಎಂದುಕೊಳ್ಳಿ” ಎಂದು ಈ ಹಿಂದೆಯೇ ಮಧು ಬಂಗಾರಪ್ಪ ಹೇಳಿಕೆ ನೀಡಿದ್ದರು. ಇದೀಗ ಅಧಿಕೃತವಾಗಿ ಜೆಡಿಎಸ್ ತೊರೆದು ಕಾಂಗ್ರೆಸ್ ಪಕ್ಷವನ್ನು ಗೀತಾ ಅವರು ಸೇರ್ಪಡೆಯಾಗಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ನಾಗ್ಪುರ-ಮುಂಬೈ ಎಕ್ಸ್‌ಪ್ರೆಸ್‌ವೇಯಲ್ಲಿ ಅಪಘಾತ : 8 ಮಹಿಳಾ ಕಾರ್ಮಿಕರು ಸಾವು

ವೇಗವಾಗಿ ಬಂದ ಟ್ರಕ್ ಟೆಂಪೋಗೆ ಡಿಕ್ಕಿ ಹೊಡೆದ ಪರಿಣಾಮ ಎಂಟು ಮಹಿಳಾ ಕಾರ್ಮಿಕರು ಸಾವನ್ನಪ್ಪಿ, ಮೂವರು ಗಾಯಗೊಂಡ ಘಟನೆ ಮಹಾರಾಷ್ಟ್ರದ ಜಲ್ನಾ ಜಿಲ್ಲೆಯ ನಾಗ್ಪುರ-ಮುಂಬೈ ಎಕ್ಸ್‌ಪ್ರೆಸ್‌ವೇಯಲ್ಲಿ ಬುಧವಾರ (ಏ.1) ಸಂಜೆ ನಡೆದಿದೆ. ಎಕ್ಸ್‌ಪ್ರೆಸ್‌ವೇಯ...

ಭಾರತದಲ್ಲಿ 12 ಸಾವಿರ ಉದ್ಯೋಗಿಗಳನ್ನು ವಜಾಗೊಳಿಸಿದ ಒರಾಕಲ್ : ಜಾಗತಿಕವಾಗಿ 30 ಸಾವಿರ ಜನರ ಕೆಲಸಕ್ಕೆ ಕುತ್ತು

ಐಟಿ ದೈತ್ಯ ಒರಾಕಲ್ ಜಾಗತಿಕ ಮಟ್ಟದಲ್ಲಿ ಸುಮಾರು 30,000 ಉದ್ಯೋಗಿಗಳನ್ನು ವಜಾಗೊಳಿಸಲು ನಿರ್ಧರಿಸಿದ್ದು, ಇದು ಭಾರತದ ಮೇಲೂ ತೀವ್ರ ಪರಿಣಾಮ ಬೀರಿದೆ. ವರದಿಗಳ ಪ್ರಕಾರ, ಭಾರತವೊಂದರಲ್ಲೇ ಸುಮಾರು 12,000 ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕಲಾಗಿದೆ. ಕಂಪನಿಯು ತನ್ನ ಒಟ್ಟು ಉದ್ಯೋಗಿಳ...

ಗೋವಾ ನೈಟ್‌ಕ್ಲಬ್ ಬೆಂಕಿ ಪ್ರಕರಣ: ಮಾಲೀಕರಾದ ಸೌರಭ್ ಲೂತ್ರಾ, ಗೌರವ್ ಲೂತ್ರಾ ಸಹೋದರರಿಗೆ ಜಾಮೀನು

ಪಣಜಿ: ಕಳೆದ ಡಿಸೆಂಬರ್‌ನಲ್ಲಿ 25 ಜನರ ಸಾವಿಗೆ ಕಾರಣವಾದ ವಿನಾಶಕಾರಿ ಬೆಂಕಿ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಿರ್ಚ್ ಬೈ ರೋಮಿಯೋ ಲೇನ್ ನೈಟ್‌ಕ್ಲಬ್‌ನ ಮಾಲೀಕರಾದ ಸೌರಭ್ ಲೂತ್ರಾ ಮತ್ತು ಗೌರವ್ ಲೂತ್ರಾ ಅವರಿಗೆ...

ಲೈಂಗಿಕ ದೌರ್ಜನ್ಯ ಆರೋಪ: ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ 

ಕೇರಳ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಿರ್ದೇಶಕ ಮತ್ತು ನಿರ್ಮಾಪಕ ರಂಜಿತ್ ಬಾಲಕೃಷ್ಣನ್ ಅವರನ್ನು ಬುಧವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಪ್ರಸ್ತುತ ಅವರನ್ನು ಎರ್ನಾಕುಲಂ ಸಬ್ ಜೈಲಿನಲ್ಲಿ ಇರಿಸಲಾಗಿದೆ.  ಜನವರಿ...

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...