Homeಕರ್ನಾಟಕಗೀತಾ ಶಿವರಾಜ್‌ಕುಮಾರ್‌ ನಾಳೆ ಕಾಂಗ್ರೆಸ್‌ ಸೇರ್ಪಡೆ

ಗೀತಾ ಶಿವರಾಜ್‌ಕುಮಾರ್‌ ನಾಳೆ ಕಾಂಗ್ರೆಸ್‌ ಸೇರ್ಪಡೆ

- Advertisement -
- Advertisement -

ಕನ್ನಡದ ಹಿರಿಯ ನಟ ಶಿವರಾಜ್​ಕುಮಾರ್​ ಅವರ ಪತ್ನಿ ಗೀತಾ ಶಿವರಾಜ್‌ಕುಮಾರ್ ಅವರು ನಾಳೆ (ಶುಕ್ರವಾರ) ಕಾಂಗ್ರೆಸ್ ಪಕ್ಷಕ್ಕೆ ಸೇರಲಿದ್ದಾರೆ ಎಂದು ವರದಿಯಾಗಿದೆ.

ಕೆಪಿಸಿಸಿ ಕಚೇರಿಯಲ್ಲಿ ಅಧ್ಯಕ್ಷರಾದ ಡಿ.ಕೆ.ಶಿವಕುಮಾರ್ ಸಮ್ಮುಖದಲ್ಲಿ ಶುಕ್ರವಾರ ಗೀತಾ ಶಿವರಾಜ್‌ಕುಮಾರ್‌ ಅವರು ಕಾಂಗ್ರೆಸ್‌ಗೆ ಸೇರಿಕೊಳ್ಳಲಿದ್ದಾರೆ ಎಂದು ಮೂಲಗಳು ಬಹಿರಂಗಪಡಿಸಿವೆ.

ಮಾಜಿ ಮುಖ್ಯಮಂತ್ರಿ ದಿವಂಗತ ಎಸ್. ಬಂಗಾರಪ್ಪನವರ ಪುತ್ರಿಯಾಗಿರುವ ಗೀತಾ ಅವರು, ಈ ಹಿಂದೆ ಜೆಡಿಎಸ್‌ನಿಂದ ಲೋಕಸಭಾ ಚುನಾವಣೆಗೆ ಬಿ.ಎಸ್.ಯಡಿಯೂರಪ್ಪನವರ ಎದುರಾಳಿಯಾಗಿ ಸ್ಪರ್ಧಿಸಿದ್ದರು. ಆದರೆ, ಯಡಿಯೂರಪ್ಪ ಅವರ ಎದುರು ಸೋತಿದ್ದರು.

2014ರ ಲೋಕಸಭಾ ಚುನಾವಣೆಯಲ್ಲಿ ಶಿವಮೊಗ್ಗ ಕ್ಷೇತ್ರದಿಂದ ಜೆಡಿಎಸ್‌ ಜೆಡಿಎಸ್ ಟಿಕೆಟ್‌ ಪಡೆದು ಗೀತಾ ಶಿವರಾಜ್‌ಕುಮಾರ್‌ ಸ್ಪರ್ಧಿಸಿ ಸೋಲು ಅನುಭವಿಸಿದ್ದರು. 2008ರಲ್ಲಿ ಜೆಡಿಎಸ್‌ನಿಂದ ಗೀತಾ ಶಿವರಾಜ್‌ಕುಮಾರ್‌ ಸ್ಪರ್ಧಿಸಿದ್ದರು.

ಬಂಗಾರಪ್ಪ ಅವರ ಐವರು ಮಕ್ಕಳಲ್ಲಿ ಮಧು ಬಂಗಾರಪ್ಪ, ಕುಮಾರ್ ಬಂಗಾರಪ್ಪ ಮತ್ತು ಗೀತಾ ಶಿವರಾಜ್‌ಕುಮಾರ್ ಅವರು ರಾಜಕೀಯ ಜೀವನದಲ್ಲಿದ್ದಾರೆ. ಮಧು ಬಂಗಾರಪ್ಪ ಕಾಂಗ್ರೆಸ್‌ ಪಕ್ಷದಲ್ಲಿ, ಕುಮಾರ್ ಬಂಗಾರಪ್ಪ ಬಿಜೆಪಿಯಲ್ಲಿದ್ದು, ಈ ಬಾರಿ ಸೊರಬ ವಿಧಾನಸಭಾ ಚುನಾವಣೆಯಲ್ಲಿ ಪರಸ್ಪರ ಸೆಣಸಲಿದ್ದಾರೆ.

2021ರ ಜುಲೈನಲ್ಲಿ ಮಧು ಬಂಗಾರಪ್ಪ ಜೆಡಿಎಸ್ ತೊರೆದು ಕಾಂಗ್ರೆಸ್ ಸೇರಿದ್ದರು. ಗೀತಾ ಶಿವರಾಜ್‌‌ಕುಮಾರ್ ಸಹ ಕಾಂಗ್ರೆಸ್ ಸೇರಲಿದ್ದಾರೆ ಎನ್ನುವ ಸುದ್ದಿಗಳು ಹರಿದಾಡಿದ್ದವು.

“ಗೀತಾ ಶಿವರಾಜ್‌ಕುಮಾರ್ ಅವರು ಕಾಂಗ್ರೆಸ್‌ಗೆ ಬಂದಿದ್ದಾರೆ ಎಂದುಕೊಳ್ಳಿ” ಎಂದು ಈ ಹಿಂದೆಯೇ ಮಧು ಬಂಗಾರಪ್ಪ ಹೇಳಿಕೆ ನೀಡಿದ್ದರು. ಇದೀಗ ಅಧಿಕೃತವಾಗಿ ಜೆಡಿಎಸ್ ತೊರೆದು ಕಾಂಗ್ರೆಸ್ ಪಕ್ಷವನ್ನು ಗೀತಾ ಅವರು ಸೇರ್ಪಡೆಯಾಗುತ್ತಿದ್ದಾರೆ.

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

2 COMMENTS

LEAVE A REPLY

Please enter your comment!
Please enter your name here

- Advertisment -

Must Read

ಕೇಂದ್ರ ಸಚಿವ ಅಮಿತ್‌ ಶಾ ವಿರುದ್ಧ ಕ್ರಿಮಿನಲ್‌ ಪ್ರಕರಣ ದಾಖಲು

0
ಚುನಾವಣೆ ಪ್ರಚಾರದಲ್ಲಿ ಮಕ್ಕಳನ್ನು ಬಳಸಿಕೊಂಡ ಹಿನ್ನೆಲೆ ಮಾದರಿ ನೀತಿ ಸಂಹಿತೆ ಉಲ್ಲಂಘನೆ ಆರೋಪದಲ್ಲಿ ಕೇಂದ್ರ ಗೃಹ ಸಚಿವ ಅಮಿತ್‌ ಶಾ ಸೇರಿದಂತೆ ಬಿಜೆಪಿ ನಾಯಕರ ವಿರುದ್ಧ ತೆಲಂಗಾಣದ ಹೈದರಾಬಾದ್‌ನಲ್ಲಿ ಕ್ರಿಮಿನಲ್ ಪ್ರಕರಣವನ್ನು ದಾಖಲಿಸಲಾಗಿದೆ. ಚುನಾವಣಾ...