Homeಮುಖಪುಟಜನಸಾಮಾನ್ಯರನ್ನು ಹಿಂಸಾಚಾರದಲ್ಲಿ ಮುನ್ನಡೆಸುವವರು ನಾಯಕರಲ್ಲ: ಸೇನಾಮುಖ್ಯಸ್ಥ ಬಿಪಿನ್‌ ರಾವತ್‌

ಜನಸಾಮಾನ್ಯರನ್ನು ಹಿಂಸಾಚಾರದಲ್ಲಿ ಮುನ್ನಡೆಸುವವರು ನಾಯಕರಲ್ಲ: ಸೇನಾಮುಖ್ಯಸ್ಥ ಬಿಪಿನ್‌ ರಾವತ್‌

- Advertisement -
- Advertisement -

ಸೇನಾ ಮುಖ್ಯಸ್ಥ ಬಿಪಿನ್ ರಾವತ್ ಅವರು ಪೌರತ್ವ ಕಾನೂನಿನ ವಿರುದ್ಧದ ಪ್ರತಿಭಟನೆಯ ಸಂದರ್ಭದಲ್ಲಿನ ಹಿಂಸಾಚಾರವನ್ನು ಟೀಕಿಸಿದ್ದಾರೆ, “ಜನಸಾಮಾನ್ಯರನ್ನು ಅಗ್ನಿಸ್ಪರ್ಶ ಮತ್ತು ಹಿಂಸಾಚಾರದಲ್ಲಿ ಮುನ್ನಡೆಸುವವರು ನಾಯಕರಲ್ಲ” ಎಂದು ಅವರು ಹೇಳಿದ್ದಾರೆ.

ಡಿಸೆಂಬರ್ 31 ರಂದು ನಿವೃತ್ತರಾಗಲಿರುವ ಜನರಲ್ ಬಿಪಿನ್ ರಾವತ್ ಅವರು ಮೊದಲ ಬಾರಿಗೆ ಪೌರತ್ವ ಕಾಯ್ದೆಯ ವಿರುದ್ಧ ರಾಷ್ಟ್ರವ್ಯಾಪಿ ನಡೆಯುತ್ತಿರುವ ಬೃಹತ್ ಪ್ರತಿಭಟನೆಯನ್ನು ಖಂಡಿಸಿದ್ದಾರೆ. ಅವರು ದೆಹಲಿಯಲ್ಲಿ ಗುರುವಾರ ನಡೆದ ಕಾರ್ಯಕ್ರಮದಲ್ಲಿ ಪ್ರತಿಭಟನೆಗೆಳಿಗೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

“ನಾಯಕತ್ವವು ಮುನ್ನಡೆಸುವ ವಿಷಯವಾಗಿದೆ. ನೀವು ಮುಂದುವರಿಯುವಾಗ ಎಲ್ಲರೂ ಅನುಸರಿಸುತ್ತಾರೆ. ಹಾಗಾಗಿ ಅದು ಅಷ್ಟು ಸುಲಭದ ವಿಷಯವಲ್ಲ. ಇದು ಸರಳವಾಗಿ ಕಾಣುತ್ತದೆ, ಆದರೆ ಇದು ತುಂಬಾ ಸಂಕೀರ್ಣವಾದ ವಿದ್ಯಮಾನವಾಗಿದೆ” ಎಂದು ಪರೋಕ್ಷವಾಗಿ ಸಿಎಎ ವಿರುದ್ಧದ ಹೋರಾಟ ಮುನ್ನಡೆಸುವವರಿಗೆ ಎಚ್ಚರಿಕೆ ನೀಡಿದ್ದಾರೆ.

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಪ್ರಜ್ವಲ್ ರೇವಣ್ಣ ಲೈಂಗಿಕ ದೌರ್ಜನ್ಯ ಪ್ರಕರಣ: ಅಪಹರಣಕ್ಕೊಳಗಾಗಿದ್ದ ಸಂತ್ರಸ್ತೆಯ ರಕ್ಷಣೆ

0
ಅಪಹರಣಕ್ಕೊಳಗಾಗಿದ್ದ ಪ್ರಜ್ವಲ್ ರೇವಣ್ಣ ಲೈಂಗಿಕ ದೌರ್ಜನ್ಯ ಪ್ರಕರಣದ ಸಂತ್ರಸ್ತೆ, ಶಾಸಕ ಹೆಚ್‌.ಡಿ ರೇವಣ್ಣ ಅವರ ಮನೆ ಕೆಲಸದ ಮಹಿಳೆಯನ್ನು ವಿಶೇಷ ತನಿಖಾ ತಂಡ (ಎಸ್‌ಐಟಿ)ದ ಅಧಿಕಾರಿಗಳು ಇಂದು (ಮೇ 4) ರಕ್ಷಣೆ ಮಾಡಿದ್ದಾರೆ. ಪ್ರಜ್ವಲ್...