Homeಮುಖಪುಟಬಿಜೆಪಿಯ ಫ್ಯಾಸಿಸ್ಟ್ ಆಕ್ರಮಣವನ್ನು ಹಿಮ್ಮೆಟ್ಟಿಸಲು ಹೋರಾಟಕ್ಕೆ ಸಿದ್ಧರಾಗಿ: ಬಿಹಾರದ ಮುಂಚೂಣಿ ಎಡಪಕ್ಷ ಸಿಪಿಐ(ಎಂಎಲ್) ಕರೆ

ಬಿಜೆಪಿಯ ಫ್ಯಾಸಿಸ್ಟ್ ಆಕ್ರಮಣವನ್ನು ಹಿಮ್ಮೆಟ್ಟಿಸಲು ಹೋರಾಟಕ್ಕೆ ಸಿದ್ಧರಾಗಿ: ಬಿಹಾರದ ಮುಂಚೂಣಿ ಎಡಪಕ್ಷ ಸಿಪಿಐ(ಎಂಎಲ್) ಕರೆ

ಪಕ್ಷದ 12 ಶಾಸಕರು ಮತ್ತು ಸಿಪಿಐ ಹಾಗೂ ಸಿಪಿಎಂ ಪಕ್ಷದ ನಾಲ್ವರು ಶಾಸಕರು ಬಿಹಾರದ ವಿಧಾನಸಭೆಯಲ್ಲಿ ಎನ್‌ಡಿಎ ಸರ್ಕಾರದ ವಿರುದ್ಧ ದನಿ ಎತ್ತಲು ಪ್ರಬಲವಾದ ಶಕ್ತಿಯಾಗಿ ಹೊರಹೊಮ್ಮುತ್ತೇವೆ ಎಂದು ಅದು ಭರವಸೆ ನೀಡಿದೆ.

- Advertisement -
- Advertisement -

ಸುಭದ್ರ ನೌಕರಿ, ಗುಣಮಟ್ಟದ ಶಿಕ್ಷಣ ಮತ್ತು ಆರೋಗ್ಯ ಸೇವೆಯನ್ನು ಸಮಸ್ತ ಜನತೆಗೂ ಒದಗಿಸುವುದು, ರೈತರ ಮತ್ತು ಕಾರ್ಮಿಕರ ಹಕ್ಕುಗಳ ರಕ್ಷಣೆ, ನ್ಯಾಯ ವ್ಯವಸ್ಥೆಯ ಸಮರ್ಪಕ ನಿರ್ವಹಣೆಯ ವಿಚಾರಗಳನ್ನೇ ಅಜೆಂಡವಾಗಿಸಿಕೊಂಡು ಸ್ಪರ್ಧಿಸಿದ ಎಡಪಕ್ಷಗಳು ಗೆದ್ದಿದ್ದು, ಈ ಕಾರ್ಯಸೂಚಿಯನ್ನು ಜಾರಿಗೊಳಿಸಲು ಹೋರಾಟವನ್ನು ಇನ್ನು ಮುಂದೆಯೂ ಮುನ್ನಡೆಸಲಿದೆ ಎಂದು ಬಿಹಾರ ಚುನಾವಣೆಯಲ್ಲಿ ಮಹಘಟಬಂಧನ್‌ನಲ್ಲಿದ್ದ ಮುಂಚೂಣಿ ಎಡಪಕ್ಷವಾದ ಸಿಪಿಐ(ಎಂಎಲ್) ತನ್ನ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದೆ.

ತನಗೆ ಕೊಟ್ಟ 19 ಕ್ಷೇತ್ರದಲ್ಲಿ 12 ಸ್ಥಾನಗಳನ್ನು ಗೆದ್ದು ಅಭೂಪೂರ್ವ ಸಾಧನೆ ಮಾಡಿರುವ ಸಿಪಿಐ(ಎಂಎಲ್) ಬಿಹಾರ ಜನತೆಯ ನಿರೀಕ್ಷೆಗಳನ್ನು ಸಾಕಾರಗೊಳಿಸುವ ಆಶ್ವಾಸನೆ ನೀಡಿದೆ. ಆ ಮೂಲಕ ಎಡ ಪಕ್ಷಗಳ ಸಮಸ್ತ ಕಾರ್ಯಕರ್ತರಿಗೆ ಮತ್ತು ದೇಶಾದ್ಯಂತ ಸಕ್ರಿಯವಾಗಿರುವ ಪ್ರಜಾತಂತ್ರ ಪರ ಹೋರಾಟದ ಸಂಘಟನೆಗಳಿಗೆ, ಮೋದಿ ಸರ್ಕಾರದ ವಿನಾಶಕಾರಿ ಕಾರ್ಪೋರೇಟ್ ಪರ ನೀತಿಗಳ ವಿರುದ್ಧ ಹೋರಾಟಕ್ಕೆ ಸಜ್ಜಾಗಲು ಕರೆ ಕೊಟ್ಟಿದ್ದು, ಬಿಜೆಪಿಯ ವಿಭಜಕ ರಾಜಕಾರಣ, ದ್ವೇಷ ರಾಜಕೀಯ ಮತ್ತು ಕೋಮು ಧೃವೀಕರಣ ಹಾಗೂ ಫ್ಯಾಸಿಸ್ಟ್ ಆಕ್ರಮಣವನ್ನು ಹಿಮ್ಮೆಟ್ಟಿಸಲು ಹೋರಾಟಕ್ಕೆ ಸಿದ್ಧರಾಗುವಂತೆ ಹೇಳಿದೆ.

Bihar Election Results
PC: Reuters

ಇದನ್ನೂ ಓದಿ: ಬಿಹಾರದಲ್ಲಿ ಎಡಪಕ್ಷಗಳ ಗೆಲುವು: ಒಂದು ವಿಶ್ಲೇಷಣೆ

“ಬಿಹಾರ ವಿಧಾನಸಭಾ ಚುನಾವಣೆಗಳಲ್ಲಿ ಬಿಜೆಪಿ ನೇತೃತ್ವದ ಎನ್‌ಡಿಎ ಕೂಟ ಅಲ್ಪ ಬಹುಮತದ ಜನದೇಶ ಪಡೆದಿದೆ. ಕೊರೊನಾ ಬಿಕ್ಕಟ್ಟಿನ ಸಮಯದಲ್ಲಿ ನಡೆದ ಮೊದಲ ಪೂರ್ಣ ಪ್ರಮಾಣದ ಚುನಾವಣೆಯಲ್ಲಿ ಬಿಹಾರದ ಜನತೆ ಬದಲಾವಣೆಯನ್ನು ಬಯಸಿರುವುದು ಸ್ಪಷ್ಟವಾಗಿದೆ. ಅಂತಿಮ ಫಲಿತಾಂಶದಲ್ಲಿ ಮತದಾರರು ಎನ್‌ಡಿಎ ಮೈತ್ರಿಕೂಟಕ್ಕೆ ಅಧಿಕಾರಕ್ಕೇರಲು ಆದೇಶ ನೀಡಿದ್ದರೂ, ಪ್ರಬಲ ವಿರೋಧ ಪಕ್ಷವನ್ನು ಆಯ್ಕೆ ಮಾಡುವ ಮೂಲಕ ಬಿಹಾರದ ಜನತೆ ಬಿಜೆಪಿಯ ವಿರೋಧ ಪಕ್ಷ ಮುಕ್ತ ಭಾರತದ ಘೋಷಣೆಗೆ ಧಕ್ಕೆ ಉಂಟುಮಾಡಿದ್ದಾರೆ” ಎಂದು ಪಕ್ಷದ ಕೇಂದ್ರ ಸಮಿತಿ ಹೇಳಿದೆ.

ಚುನಾವಣಾ ಅಧಿಕಾರಿಗಳ ವಿರುದ್ದ ಕೇಳಿಬಂದಿರುವ ಹಲವು ಅಕ್ರಮಗಳು ಮತ್ತು ಅವ್ಯವಹಾರಗಳ ಆರೋಪಗಳಲ್ಲೂ ಸಹ ಸತ್ಯಾಂಶವಿದೆ ಎಂದಿರುವ ಪಕ್ಷವು, ಆ ಆರೋಪಕ್ಕೆ ಅಗತ್ಯ ಸಾಕ್ಷಿ ಪುರಾವೆಗಳು ಹುಡುಕುವ ನಿಟ್ಟಿನಲ್ಲಿ ಪ್ರಯತ್ನಗಳು ನಡೆಯುತ್ತಿದೆ. ಸ್ಪರ್ಧಿಸಿದ 19 ಕ್ಷೇತ್ರಗಳ ಪೈಕಿ ಪಕ್ಷದ 12 ಅಭ್ಯರ್ಥಿಗಳು ಆಯ್ಕೆಯಾಗಿರುವುದು ಹೆಮ್ಮೆಯ ವಿಚಾರ. ಮೈತ್ರಿಕೂಟದ ಇತರ ಪಕ್ಷಗಳಿಗೆ ಹೋಲಿಸಿದರೆ ಪಕ್ಷದ ಅಭ್ಯರ್ಥಿಗಳ ಸ್ಟ್ರೈಕ್ ರೇಟ್ ಹೆಚ್ಚಾಗಿದ್ದು, 4% ಮತಗಳನ್ನು ಪಡೆದಿದೆ ಎಂದು ಸಿಪಿಐ(ಎಂಎಲ್) ಹೇಳಿದೆ.

Photo Courtesy: The Week

ಸಿಪಿಐ(ಎಂಎಲ್) ಪಕ್ಷದ 12 ಶಾಸಕರು ಮತ್ತು ಸಿಪಿಐ ಹಾಗೂ ಸಿಪಿಎಂ ಪಕ್ಷದ ನಾಲ್ವರು ಶಾಸಕರು ಬಿಹಾರದ ವಿಧಾನಸಭೆಯಲ್ಲಿ ಎನ್‌ಡಿಎ ಸರ್ಕಾರದ ವಿರುದ್ಧ ದನಿ ಎತ್ತಲು ಒಂದು ಪ್ರಬಲವಾದ ಶಕ್ತಿಯಾಗಿ ಹೊರಹೊಮ್ಮುತ್ತಾರೆ ಎಂದು ಅದು ಭರವಸೆ ನೀಡಿದ್ದು, ಚುನಾವಣಾ ಪ್ರಚಾರಕ್ಕೆ ಪ್ರೋತ್ಸಾಹ ನೀಡಿದವರಿಗೆ ಪಕ್ಷದ ಕೇಂದ್ರ ಸಮಿತಿ ಧನ್ಯವಾದ ತಿಳಿಸಿದೆ.

ಇದನ್ನೂ ಓದಿ: ಎಡಪಕ್ಷಗಳ ವಿಲೀನದ ಪ್ರಸ್ತಾಪ: ಅಗತ್ಯವೇ, ಸಾಧ್ಯವೇ? ಮುಖಂಡರು ಏನಂತಾರೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...