Homeಮುಖಪುಟಉತ್ತರ ಪ್ರದೇಶ: ಜಾಮಾ ಮಸೀದಿಗೆ ಭೇಟಿ ನೀಡದಂತೆ ಯತಿ ನರಸಿಂಗಾನಂದಗೆ ಜಿಲ್ಲಾಡಳಿತ ಸೂಚನೆ

ಉತ್ತರ ಪ್ರದೇಶ: ಜಾಮಾ ಮಸೀದಿಗೆ ಭೇಟಿ ನೀಡದಂತೆ ಯತಿ ನರಸಿಂಗಾನಂದಗೆ ಜಿಲ್ಲಾಡಳಿತ ಸೂಚನೆ

- Advertisement -
- Advertisement -

ಉತ್ತರ ಪ್ರದೇಶದ ಘಾಜಿಯಾಬಾದ್ ಆಡಳಿತವು ದಾಸ್ನಾ ದೇವಿ ದೇವಸ್ಥಾನದ ಅರ್ಚಕ ಯತಿ ನರಸಿಂಹಾನಂದ ಅವರಿಗೆ ಜೂನ್ 17 ರಂದು ಜಾಮಾ ಮಸೀದಿಗೆ ಭೇಟಿ ನೀಡುವುದನ್ನು ರದ್ದುಗೊಳಿಸುವಂತೆ ನೋಟಿಸ್ ನೀಡಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ವಿವಾದಿತ ಹೇಳಿಕೆಗಳು ಮತ್ತು ದ್ವೇಷ ಭಾಷಣಗಳಿಗೆ ಹೆಸರಾಗಿರುವ ಯತಿ ನರಸಿಂಗಾನಂದ ಭೇಟಿ ಕೋಮು ಸೌಹಾರ್ದತೆಗೆ ಭಂಗ ತರಬಹುದು ಎಂದು ಆತಂಕ ವ್ಯಕ್ತಪಡಿಸಲಾಗಿದೆ.

ಪ್ರವಾದಿ ಮುಹಮ್ಮದ್ ಬಗ್ಗೆ ಮುಸ್ಲಿಮರು ಏನು ಹೇಳುತ್ತಾರೆಂದು ತೋರಿಸಲು ಕುರಾನ್ ಮತ್ತು ಇಸ್ಲಾಮಿಕ್ ಇತಿಹಾಸದ ಪುಸ್ತಕಗಳೊಂದಿಗೆ ಜೂನ್ 17 ರಂದು ಜಾಮಾ ಮಸೀದಿಗೆ ಭೇಟಿ ನೀಡುವುದಾಗಿ ನರಸಿಂಹಾನಂದ ಸೋಮವಾರ ಹೇಳಿದ್ದರು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಇದನ್ನೂ ಓದಿ: ದ್ವೇಷ ಭಾಷಣ: ಬಲಪಂಥೀಯ ನಾಯಕಿ ಸಾಧ್ವಿ ಅನ್ನಪೂರ್ಣ ವಿರುದ್ಧ ಪ್ರಕರಣ ದಾಖಲು

“ಕುರಾನ್ ಮತ್ತು ಇಸ್ಲಾಮಿಕ್ ಇತಿಹಾಸದ ಪುಸ್ತಕಗಳೊಂದಿಗೆ ಜಾಮಾ ಮಸೀದಿಗೆ ಭೇಟಿ ನೀಡುವುದಾಗಿ ನರಸಿಂಹಾನಂದ್ ಅವರ ವೀಡಿಯೊವನ್ನು ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಂಡಿದ್ದಾರೆ. ವಿಡಿಯೋ ಸಂದೇಶವು ಕೋಮು ಸೌಹಾರ್ದತೆಗೆ ಭಂಗ ತರಬಹುದು ಎಂಬ ಕಾರಣಕ್ಕೆ ಜೂನ್ 7 ರಂದು ದಾಸ್ನಾ ದೇವಿ ಮಂದಿರದಲ್ಲಿರುವ ಅವರ ನಿವಾಸದಲ್ಲಿ ನರಸಿಂಹಾನಂದರಿಗೆ ನೋಟಿಸ್ ನೀಡಲಾಗಿದೆ. ಅವರಿಂದ ಇನ್ನೂ ಯಾವುದೇ ಪ್ರತಿಕ್ರಿಯೆಯನ್ನು ನಾವು ಸ್ವೀಕರಿಸಿಲ್ಲ” ಎಂದು ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಸೋಮವಾರ ನರಸಿಂಗಾನಂದ ಅಮಾನತುಗೊಂಡಿರುವ ಬಿಜೆಪಿ ವಕ್ತಾರ ನೂಪುರ್ ಶರ್ಮಾ ಅವರಿಗೆ ಬೆಂಬಲ ವ್ಯಕ್ತಪಡಿಸಿದ್ದಾರೆ. ಆಕೆಯ ವಿರುದ್ಧ ಕ್ರಮ ಕೈಗೊಂಡವರು “ಇಸ್ಲಾಮಿಕ್ ಜಿಹಾದ್‌ಗೆ ಹೆದರುತ್ತಾರೆ” ಎಂದು ಹೇಳಿದ್ದರು.

ಇದರ ನಡುವೆ ಕೋಮು ಸೌಹಾರ್ದತೆ ಕದಡುವ ಹೇಳಿಕೆ ನೀಡಿದರೆ ಕಾನೂನು ಕ್ರಮ ಜರುಗಿಸುವುದಾಗಿ ಘಾಜಿಯಾಬಾದ್ ಜಿಲ್ಲಾಡಳಿತ ಎಚ್ಚರಿಕೆ ನೀಡಿದೆ.

ಹರಿದ್ವಾರದಲ್ಲಿ ನಡೆದ ಧಾರ್ಮಿಕ ಸಮಾವೇಶದಲ್ಲಿ ಮುಸ್ಲಿಮರ ನರಮೇಧಕ್ಕೆ ಕರೆ ನೀಡಿದ್ದ ನರಸಿಂಗಾನಂದರನ್ನು ಜನವರಿ 15 ರಂದು ಬಂಧಿಸಲಾಗಿತ್ತು. “ಸಮುದಾಯಗಳ ನಡುವೆ ಭಿನ್ನಾಭಿಪ್ರಾಯಗಳನ್ನು ಸೃಷ್ಟಿಸುವ ಉದ್ದೇಶದಿಂದ” ಯಾವುದೇ ಸಭೆದಲ್ಲಿ ಭಾಗವಹಿಸುವುದಿಲ್ಲ ಎಂಬ ಷರತ್ತಿನ ಮೇಲೆ ಫೆಬ್ರವರಿ 7 ರಂದು ಈ ಪ್ರಕರಣದಲ್ಲಿ ಜಾಮೀನು ಪಡೆದಿದ್ದರು.

ಆದರೂ, ಏಪ್ರಿಲ್ 17 ರಂದು, ಹಿಮಾಚಲ ಪ್ರದೇಶದ ಉನಾ ಜಿಲ್ಲೆಯಲ್ಲಿ ನಡೆದ ಧಾರ್ಮಿಕ ಸಮಾವೇಶದಲ್ಲಿ ಮತ್ತೊಂದು ದ್ವೇಷಪುರಿತ ಭಾಷಣ ಮಾಡಿದ್ದರು. ಭಾರತವು ಇಸ್ಲಾಮಿಕ್ ರಾಷ್ಟ್ರವಾಗದಂತೆ ನೋಡಿಕೊಳ್ಳಲು ಹಿಂದೂಗಳು ಹೆಚ್ಚಿನ ಮಕ್ಕಳನ್ನು ಪಡೆಯಬೇಕೆಂದು ಹೇಳಿದ್ದರು.


ಇದನ್ನೂ ಓದಿ: ಕುವೆಂಪು, ಸ್ತ್ರೀದ್ವೇಷಿ ಮತ್ತು ರೇಪ್‌ ಸಮರ್ಥನೆಯ ಟ್ವೀಟ್‌ಗಳು ವೈರಲ್‌‌: ಫೇಸ್‌ಬುಕ್ & ಟ್ವಿಟರ್‌ಗೆ ಲಾಕ್‌ ಮಾಡಿದ ರೋಹಿತ್ ಚಕ್ರತೀರ್ಥ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: ನೋಟಿಸ್ ನೀಡಿದರೆ ಸಾಲದು, ಹೊರಗಿಟ್ಟ ಮತದಾರರ ಲೆಕ್ಕ ಕೊಡಿ ಚುನಾವಣಾ ಆಯೋಗಕ್ಕೆ ಜಾಗೃತ ಕರ್ನಾಟಕ ಒತ್ತಾಯ

ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ಭಾಗವಾಗಿ ಲಕ್ಷಾಂತರ ಮತದಾರರಿಗೆ ನೋಟಿಸ್ ಜಾರಿ ಮಾಡಿ ವಿಚಾರಣೆಗಳನ್ನು ನಡೆಸಿದ ನಂತರ, ಅಂತಿಮವಾಗಿ ಎಷ್ಟು ಜನರ ಹೆಸರುಗಳನ್ನು ಮತದಾರರ ಪಟ್ಟಿಯಿಂದ ಕೈಬಿಡಲಾಗಿದೆ...

ಗಣೇಶ ಮೆರವಣಿಗೆ ಡಿಜೆ ವಿಚಾರಕ್ಕೆ ಗಲಾಟೆ : ದಲಿತರ ಮೇಲೆ ಹಲ್ಲೆ, ಜಾತಿ ನಿಂದನೆ; 31 ಜನರ ಮೇಲೆ ಎಫ್‌ಐಆರ್

ಗಣೇಶ ಮೆರವಣಿಗೆಯ ಡಿಜೆ ವಿಚಾರಕ್ಕೆ ನಡೆದ ಗಲಾಟೆಯಲ್ಲಿ ದಲಿತರ ಮೇಲೆ ಹಲ್ಲೆ ನಡೆಸಿ, ಜಾತಿ ನಿಂದನೆ ಮಾಡಿದ ಆರೋಪದ ಮೇಲೆ 31 ಜನರ ವಿರುದ್ಧ ಕೊಪ್ಪಳದ ಮುನಿರಾಬಾದ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ....

ಚಿಕ್ಕಬಳ್ಳಾಪುರ: ಮೂಲ ಗಣಿತ, ಕನ್ನಡ ಬಾರದ 7ನೇ ತರಗತಿ ವಿದ್ಯಾರ್ಥಿಗಳು: 180 ಶಿಕ್ಷಕರಿಗೆ ನೋಟಿಸ್‌ ಜಾರಿ

ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ 7ನೇ ತರಗತಿಯ ಕೆಲವು ವಿದ್ಯಾರ್ಥಿಗಳಿಗೆ ಮೂಲ ಗಣಿತದ ಲೆಕ್ಕಗಳನ್ನು ಮಾಡಲು ಮತ್ತು ಕನ್ನಡ ಅಕ್ಷರಗಳನ್ನು ಬರೆಯಲು ಬರುವುದಿಲ್ಲ ಎಂಬುದು ತಿಳಿದುಬಂದ ಹಿನ್ನೆಲೆಯಲ್ಲಿ ಶಿಕ್ಷಣ ಇಲಾಖೆಯು 180 ಸರ್ಕಾರಿ ಶಾಲೆಗಳ ಶಿಕ್ಷಕರಿಗೆ...

ಕರಾವಳಿಯನ್ನು ‘ಕೋಮುವಾದದ ಪ್ರಯೋಗಶಾಲೆ’ ಮಾಡಿದ್ದ ಬಿಜೆಪಿಗೆ ನಮ್ಮ ಅಭಿವೃದ್ಧಿ ಕಂಡು ಅಸ್ತಿತ್ವದ ಭಯ: ಪ್ರಿಯಾಂಕ್ ಖರ್ಗೆ

ಮಂಗಳೂರಿನಲ್ಲಿ ನಡೆದ ವಿಶೇಷ ಸಚಿವ ಸಂಪುಟ ಸಭೆ ಹಾಗೂ ಕರಾವಳಿಯ ಮೂರು ಜಿಲ್ಲೆಗಳಿಗೆ ₹32,611 ಕೋಟಿ ಮೊತ್ತದ ಅಭಿವೃದ್ಧಿ ಯೋಜನೆಗಳಿಗೆ ಅನುಮೋದನೆ ನೀಡಿರುವುದನ್ನು ಬಿಜೆಪಿ ಟೀಕಿಸಿರುವ ಬೆನ್ನಲ್ಲೇ, ಗೃಹ ಸಚಿವ ಪ್ರಿಯಾಂಕ್ ಖರ್ಗೆ...

KPSC ಅಕ್ರಮ: ಮೀಟರ್ ಬಡ್ಡಿ ದಂಧೆಯಿಂದ ಕೆಪಿಎಸ್‌ಸಿ ಅಧ್ಯಕ್ಷ ಸ್ಥಾನದವರೆಗೆ – ಅಧ್ಯಕ್ಷ ಸಾಹುಕಾರ್ ಬಿಜೆಪಿ ಅವಧಿಯಲ್ಲಿ ನೇಮಕ, ಕಾಂಗ್ರೆಸ್ ಆಡಳಿತದಲ್ಲಿ ರಕ್ಷಣೆ

ಶಿವಶಂಕರಪ್ಪ ಸಾಹುಕಾರ್ ಅವರ ಈ ಇಡೀ ಕಥನವು ಕರ್ನಾಟಕದ ಕಾರ್ಯಾಂಗ ಮತ್ತು ರಾಜಕೀಯ ವ್ಯವಸ್ಥೆಯಲ್ಲಿ ಭ್ರಷ್ಟಾಚಾರ ಎಷ್ಟು ಆಳವಾಗಿ ಬೇರೂರಿದೆ ಎಂಬುದಕ್ಕೆ ಸಾಕ್ಷಿಯಾಗಿದೆ. ಬಿಜೆಪಿ ಸರ್ಕಾರವು ನಿಯಮಗಳನ್ನು ಗಾಳಿಗೆ ತೂರಿ, ಒಬ್ಬ ಕನಿಷ್ಠ...

ಟಿಎಂಸಿ ಪಕ್ಷದ ಹೆಸರು, ಚಿಹ್ನೆ ಫ್ರೀಝ್ : ಚು. ಆಯೋಗದ ಆದೇಶ ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ತೃಣಮೂಲಕ ಕಾಂಗ್ರೆಸ್ (ಟಿಎಂಸಿ) ಪಕ್ಷದ ಚಿಹ್ನೆ ಮತ್ತು ಹೆಸರನ್ನು ಭಾರತೀಯ ಚುನಾವಣಾ ಆಯೋಗ ಫ್ರೀಝ್ ಮಾಡಿರುವುದನ್ನು ಪ್ರಶ್ನಿಸಿ, ಪಕ್ಷದ ಸಂಸ್ಥಾಪಕಿ ಹಾಗೂ ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸುಪ್ರೀಂ ಕೋರ್ಟ್‌...

ನಂದಿಗ್ರಾಮದ ಬೆನ್ನಲ್ಲೇ ರೆಜಿನಗರ ಅಭ್ಯರ್ಥಿಯಿಂದಲೂ ನಾಮಪತ್ರ ವಾಪಸ್ : ಬಂಗಾಳ ಉಪ ಚುನಾವಣೆ ಕಣದಲ್ಲಿ ಮಮತಾ ಬ್ಯಾನರ್ಜಿ ಬಣಕ್ಕೆ ಮತ್ತೊಂದು ಹಿನ್ನಡೆ

ಪಶ್ಚಿಮ ಬಂಗಾಳದ ಉಪಚುನಾವಣಾ ಕಣದಲ್ಲಿ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರಿಗೆ ಮತ್ತೊಂದು ಹಿನ್ನಡೆಯಾಗಿದೆ. ನಂದಿಗ್ರಾಮದ ಬಳಿಕ ರೆಜಿನಗರ ವಿಧಾನಸಭಾ ಕ್ಷೇತ್ರದಲ್ಲೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಅಭ್ಯರ್ಥಿ ತನ್ನ ನಾಮಪತ್ರವನ್ನು ವಾಪಸ್ ಪಡೆದಿದ್ದಾರೆ...

ಅಮಾನವೀಯ ಕೃತ್ಯ : ಮಹಿಳೆಗೆ ಥಳಿಸಿ, ಕೂದಲು ಹಿಡಿದು ಎಳೆದೊಯ್ದ ಪೊಲೀಸ್ ಸಿಬ್ಬಂದಿ

ತೆಲಂಗಾಣದ ಹಫೀಝ್‌ಪೇಟ್ ರೈಲ್ವೆ ನಿಲ್ದಾಣದಲ್ಲಿ ಪೊಲೀಸ್ ಸಿಬ್ಬಂದಿಯೊಬ್ಬರು ಮಹಿಳೆಗೆ ಥಳಿಸಿ, ಆಕೆಯ ತಲೆಕೂದಲು ಹಿಡಿದು ಎಳೆದೊಯ್ದಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ತೀವ್ರ ಆಕ್ರೋಶ ವ್ಯಕ್ತವಾಗಿದೆ. ಶುಕ್ರವಾರ (ಸೆ.18) ರಾತ್ರಿ ರೈಲ್ವೆ...

ರಾಮಮಂದಿರ ದೇಣಿಗೆ ಕಳವು ಪ್ರಕರಣ: ಆರೋಪಿಗಳ ನ್ಯಾಯಾಂಗ ಬಂಧನ ಅವಧಿ ವಿಸ್ತರಣೆ

ರಾಮಮಂದಿರದಲ್ಲಿ ದೇಣಿಗೆ ಹಣ ಕಳವು ಮಾಡಿದ ಆರೋಪದ ಮೇಲೆ ಬಂಧಿಸಲಾಗಿರುವ ಎಲ್ಲಾ ಎಂಟು ಆರೋಪಿಗಳ ನ್ಯಾಯಾಂಗ ಬಂಧನವನ್ನು ಸೆಪ್ಟೆಂಬರ್ 21ರವರೆಗೆ ವಿಸ್ತರಿಸಲಾಗಿದೆ ಎಂದು ಅವರ ವಕೀಲರು (ಸೆ.18) ತಿಳಿಸಿದ್ದಾರೆ. ಅಯೋಧ್ಯೆಯ ಭ್ರಷ್ಟಾಚಾರ ನಿಗ್ರಹ ನ್ಯಾಯಾಲಯದ...

ಬಂಗಾಳದಲ್ಲಿ ಬಿಜೆಪಿ ದ್ವೇಷ ರಾಜಕಾರಣ: ಮಾಮತಾ ಬ್ಯಾನರ್ಜಿ ಬೆಂಬಲ ಘೋಷಿಸಿದ ಬೆನ್ನಲ್ಲೇ ನಂದಿಗ್ರಾಮ ಕಾಂಗ್ರೆಸ್ ಅಭ್ಯರ್ಥಿ ಬಂಧನ

ಪಶ್ಚಿಮ ಬಂಗಾಳದ ಪೂರ್ವ ಮೇದಿನಿಪುರ ಜಿಲ್ಲೆಯ ನಂದಿಗ್ರಾಮ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಮಿಲನ್ ಪ್ರಧಾನ್ ಅವರನ್ನು ಹಳೆಯ ಪ್ರಕರಣವೊಂದರಲ್ಲಿ ಶುಕ್ರವಾರ (ಸೆ.18) ಬಂಧಿಸಲಾಗಿದೆ ಎಂದು ಪೂರ್ವ ಮೇದಿನಿಪುರ ಜಿಲ್ಲಾ ಪೊಲೀಸ್...