Homeಕರ್ನಾಟಕಗಾಜಿಯಾಬಾದ್‌: ಏಪ್ರಿಲ್‌ 10ರವರೆಗೆ ಹಸಿ ಮಾಂಸ ಮಾರಾಟ ನಿಷೇಧ

ಗಾಜಿಯಾಬಾದ್‌: ಏಪ್ರಿಲ್‌ 10ರವರೆಗೆ ಹಸಿ ಮಾಂಸ ಮಾರಾಟ ನಿಷೇಧ

- Advertisement -
- Advertisement -

ಹೊಸದಿಲ್ಲಿ: ಉತ್ತರ ಪ್ರದೇಶದ ಗಾಜಿಯಾಬಾದ್‌ನ ಮುನ್ಸಿಪಲ್ ಕಾರ್ಪೊರೇಷನ್, ಏಪ್ರಿಲ್ 2 ರಿಂದ 10 ರವರೆಗೆ ನಗರದಲ್ಲಿ ಹಸಿ ಮಾಂಸ ಮಾರಾಟವನ್ನು ನಿಷೇಧಿಸಿದೆ. ಪ್ರತಿ ವರ್ಷ ಹೊರಡಿಸುವ ವಾಡಿಕೆಯ ಆದೇಶ ಇದಾಗಿದೆ ಎಂದು ದಿ ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ.

“ಈ ನವರಾತ್ರಿಗಳ ಅವಧಿಯಲ್ಲಿ ದೇವಸ್ಥಾನಗಳಲ್ಲಿ ಸ್ವಚ್ಛತೆ ಕಾಪಾಡುವಂತೆ ಹಾಗೂ ಮಾಂಸದ ಅಂಗಡಿಗಳನ್ನು ಮುಚ್ಚುವಂತೆ ಮೇಯರ್‌ ನಿರ್ದೇಶನ ನೀಡಿದ್ದಾರೆ. ಆಯಾ ವಲಯಗಳಲ್ಲಿ, ದೇವಸ್ಥಾನಗಳಲ್ಲಿ ಶುಚಿತ್ವ ಕಾಪಾಡುವಂತೆ ಮತ್ತು ಮಾಂಸದ ಅಂಗಡಿಗಳನ್ನು ತೆರೆಯದಂತೆ ನೋಡಿಕೊಳ್ಳಲು ಸೂಚಿಸಲಾಗಿದೆ” ಎಂದು ನಾಗರಿಕ ಮಂಡಳಿ ಹೊರಡಿಸಿದ ಆದೇಶದಲ್ಲಿ ತಿಳಿಸಲಾಗಿದೆ. ಇದು ಜಿಲ್ಲೆಯ ಐದು ವಲಯಗಳನ್ನು ಒಳಗೊಂಡಿದೆ.

ಸ್ಥಳೀಯ ಬಿಜೆಪಿ ಶಾಸಕ ನಂದ್ ಕಿಶೋರ್ ಗುರ್ಜರ್ ಮಾರ್ಚ್ 31ರಂದು ಜಿಲ್ಲಾಧಿಕಾರಿಗಳಿಗೆ ಪತ್ರ ಬರೆದ ನಂತರ ಪ್ರಾಸಂಗಿಕವಾಗಿ ಈ ಆದೇಶವು ಹೊರಬಿದ್ದಿದೆ. ಕ್ಷೇತ್ರದಲ್ಲಿ ಹಲವಾರು ರೆಸ್ಟೋರೆಂಟ್‌ಗಳು ತೆರೆದ ಮಾಂಸವನ್ನು ಮಾರಾಟ ಮಾಡುತ್ತಿವೆ ಎಂದು ಆದೇಶದಲ್ಲಿ ಉಲ್ಲೇಖಿಸಲಾಗಿದೆ. “ಯಾವುದೇ ರೋಗ ಹರಡುವುದನ್ನು ತಡೆಗಟ್ಟುವ ಮುಂಜಾಗ್ರತಾ ಕ್ರಮವಾಗಿ ಕ್ರಮ ಜರುಗಿಸಬೇಕು” ಎಂದು ಪತ್ರದಲ್ಲಿ ಕೋರಿದ್ದರು.

ವಾಸ್ತವವಾಗಿ, ಗುರ್ಜರ್ ಅವರು ಇಂತಹ ಮನವಿಗಳನ್ನು ಮಾಡಿದ್ದು ಇದೇ ಮೊದಲಲ್ಲ. ಮಾಂಸದ ಅಂಗಡಿಗಳಿಗೆ ನಿರ್ಬಂಧ ಹಾಕಬೇಕೆಂದು ಅವರು ಈಗ ಮನವಿ ಮಾಡಿದ್ದಾರೆ.

ನಾಗರಿಕ ಮಂಡಳಿಯ ವ್ಯಾಪ್ತಿಯಲ್ಲಿರುವ ನಗರ ಮತ್ತು ಗ್ರಾಮಾಂತರ ಪ್ರದೇಶಗಳಲ್ಲಿ ಮಾಂಸದ ಅಂಗಡಿಗಳನ್ನು ಪ್ರತಿವರ್ಷದ ವಾಡಿಕೆಯಂತೆ ಮುಚ್ಚಲಾಗುತ್ತಿದೆ ಅಧಿಕಾರಿಗಳು ಹೇಳಿದ್ದಾರೆ.

“ಪ್ರತಿ ವರ್ಷ ಆದೇಶವನ್ನು ಹೊರಡಿಸಲಾಗುತ್ತದೆ. ನವರಾತ್ರಿಯ ಸಮಯದಲ್ಲಿ ಮಾತ್ರ ನಿಷೇಧ ಮಾಡಲಾಗುತ್ತದೆ. ಈ ಐದು ವಲಯಗಳಲ್ಲಿ ಹಸಿ ಮಾಂಸ ಮಾರಾಟವನ್ನು ನಿಷೇಧಿಸಲಾಗಿದೆ. ಸಂಬಂಧಿಸಿದ ಎಲ್ಲಾ ನಗರ ನಿಗಮ ಇಲಾಖೆಗಳಿಗೆ ಸೂಚನೆಯನ್ನು ನೀಡಲಾಗಿದೆ” ಎಂದು ಗಾಜಿಯಾಬಾದ್ ಮೇಯರ್ ಆಶಾ ಶರ್ಮಾ ತಿಳಿಸಿದ್ದಾರೆ.

ಬಿಜೆಪಿ ಆಡಳಿತವಿರುವ ರಾಜ್ಯಗಳಲ್ಲಿ ಹಿಂದುತ್ವ ಗುಂಪುಗಳು ಮಾಂಸ ಮತ್ತು ಕೋಳಿ ಉತ್ಪನ್ನಗಳನ್ನು ಮಾರಾಟ ಮಾಡುವ ಅಂಗಡಿಗಳ ಮೇಲೆ ಹೆಚ್ಚಾಗಿ ದಾಳಿ ಮಾಡುತ್ತಿವೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹50 ₹100 ₹500 ₹1000 Others


ಇದನ್ನೂ ಓದಿರಿ: ಹಲಾಲ್‌‌ ಮಾಂಸ ಮಾರಾಟ ಮಾಡಿದ ಅಂಗಡಿ ಮಾಲಿಕನಿಗೆ ಹಲ್ಲೆ: ಐವರು ಬಜರಂಗದಳದ ದುಷ್ಕರ್ಮಿಗಳು ಅರೆಸ್ಟ್‌

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

‘ಟಿಪ್ಪು ಸುಲ್ತಾನ್’ ಸಿನಿಮಾದಲ್ಲಿ ಶಾರುಖ್ ಖಾನ್ ನಟಿಸಲಿದ್ದಾರೆ ಎಂಬುವುದು ಸುಳ್ಳು

0
"ಜಿಹಾದಿ ಶಾರುಖ್ ಖಾನ್‌ನ ಭಾರೀ ಬಜೆಟ್‌ನಿಂದ ತಯಾರಾದ ದೇಶದ್ರೋಹಿ, ಮತಾಂಧ ತಿಪ್ಪೆ ಸುಲ್ತಾನನ ನಕಲಿ ಚರಿತ್ರೆ ಬರುತ್ತಿದೆ. ಇಂತಹ ದೇಶದ್ರೋಹಿಯ ಸಿನಿಮಾವನ್ನು ಬಹಿಷ್ಕರಿಸಲು ಶೇರ್ ಮಾಡಿ" ಎಂದು ಪೋಸ್ಟರ್ ಒಂದನ್ನು ಸಾಮಾಜಿಕ ಜಾಲತಾಣಗಳಲ್ಲಿ...