ಸ್ವರ ಭಾಸ್ಕರ್
PC: Scroll.in

ಜೂನ್ 5 ರಂದು ಗಾಜಿಯಾಬಾದ್‌ನಲ್ಲಿ ಮುಸ್ಲಿಂ ವೃದ್ಧರ ಮೇಲೆ ನಡೆದ ಹಲ್ಲೆಗೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣದಲ್ಲಿ ಹಾಕಲಾಗಿದ್ದ ಪೋಸ್ಟ್‌ಗಳಿಗೆ ಸಂಬಂಧಿಸಿದಂತೆ ನಟಿ ಸ್ವರ ಭಾಸ್ಕರ್, ಟ್ವಿಟರ್ ಇಂಡಿಯಾ ಎಂಡಿ ಮನೀಶ್ ಮಹೇಶ್ವರಿ ಮತ್ತು ಇತರರ ವಿರುದ್ಧ ದೆಹಲಿ ಪೊಲೀಸರಿಗೆ ದೂರು ಬಂದಿದೆ ಎಂದು ಅಧಿಕಾರಿಗಳು ಗುರುವಾರ ತಿಳಿಸಿದ್ದಾರೆ.

ತಿಲಕ್ ಮಾರ್ಗ ಪೊಲೀಸ್ ಠಾಣೆಗೆ ದೂರು ಬಂದಿದೆ ಎಂದು ಪೊಲೀಸರು ತಿಳಿಸಿದ್ದಾರೆ. “ತಿಲಕ್ ಮಾರ್ಗ ಪೊಲೀಸ್ ಠಾಣೆಯಲ್ಲಿ ಸ್ವರ ಭಾಸ್ಕರ್, ಟ್ವಿಟರ್ ಇಂಡಿಯಾ ಎಂಡಿ ಮನೀಶ್ ಮಹೇಶ್ವರಿ ಮತ್ತು ಇತರರ ವಿರುದ್ಧ ನಮಗೆ ದೂರು ಬಂದಿದೆ. ದೂರುಗಳು ವಿಚಾರಣೆಯಲ್ಲಿದೆ” ಎಂದು ಹಿರಿಯ ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ.

ದೂರಿನ ಬಗ್ಗೆ ಹೆಚ್ಚಿನ ವಿವರಗಳು ತಕ್ಷಣ ಲಭ್ಯವಿಲ್ಲ. ಸೋಷಿಯಲ್ ಮೀಡಿಯಾದಲ್ಲಿ ಅಪ್‌ಲೋಡ್ ಮಾಡಿದ ವಿಡಿಯೋವೊಂದರಲ್ಲಿ, ಸಂತ್ರಸ್ತ ವೃದ್ಧ ಅಬ್ದುಲ್ ಸಮದ್ ಎಂಬವರು ಪ್ರಾರ್ಥನೆ ಮುಗಿಸಿ ಮನೆಗೆ ತೆರಳುತ್ತಿದ್ದಾಗ ಆಟೋದಲ್ಲಿ ಬಂದ ದುಷ್ಕರ್ಮಿಗಳು ಅವರನ್ನು ಕಾಡಿನೊಳಗೆ ಎಳೆದೊಯ್ದು ಚಿತ್ರ ಹಿಂಸೆ ನೀಡಿದ್ದರು ಎಂದು ಆರೋಪಿಸಲಾಗಿತ್ತು. ಚಾಕುವಿನಲ್ಲಿ ವೃದ್ದನ ಗಡ್ಡ ಕತ್ತರಿಸಿ, ಕೋಲಿನಿಂದ ಹಲ್ಲೆ ಮಾಡುತ್ತಿರುವ ವಿಡಿಯೋ ವೈರಲ್ ಆಗಿತ್ತು. ಗಾಜಿಯಾಬಾದ್‌ನ ಲೋನಿ ಪ್ರದೇಶದಲ್ಲಿ “ಜೈ ಶ್ರೀ ರಾಮ್” ಎಂದು ಕೂಗುವಂತೆ ಒತ್ತಾಯಿಸಿದ್ದಾರೆ ಎನ್ನಲಾಗಿತ್ತು.

ಇದನ್ನೂ ಓದಿ: ಯುಪಿ ಮುಸ್ಲಿಂ ವೃದ್ದನ ಮೇಲಿನ ದಾಳಿ ಪ್ರಕರಣ: ಪೊಲೀಸರ ಪ್ರತಿಪಾದನೆ ನಿರಾಕರಿಸಿದ ಕುಟುಂಬ

ಜೂನ್ 5 ರಂದು ನಡೆದ ಈ ಘಟನೆಗೆ ಸಂಬಂಧಿಸಿದಂತೆ ಈಗಾಗಲೇ ಎಫ್‌ಐಆರ್ ದಾಖಲಿಸಲಾಗಿದೆ. ಘಟನೆ ನಡೆದು 2 ದಿನಗಳ ನಂತರ ಜೂನ್ 7 ರಂದು ಪೊಲೀಸರಿಗೆ ಮಾಹಿತಿ ದೊರೆತಿದೆ ಎಂದು ಗಾಜಿಯಾಬಾದ್ ಪೊಲೀಸರು ತಿಳಿಸಿದ್ದಾರೆ.

ಜೂನ್ 7 ರಂದು ದಾಖಲಾದ ಎಫ್‌ಐಆರ್‌ನಲ್ಲಿ ಜೈ ಶ್ರೀ ರಾಮ್ ಘೋಷಣೆ ಕೂಗಲು  ಅಥವಾ ಗಡ್ಡವನ್ನು ಕತ್ತರಿಸಿದ್ದಾರೆ ಎಂದು ಸಂತ್ರಸ್ತ ಬುಲಂದ್‌ಶಹರ್ ನಿವಾಸಿ ಅಬ್ದುಲ್ ಸಮದ್ ಯಾವುದೇ ಆರೋಪ ಮಾಡಿಲ್ಲ ಎಂದು ಗಾಜಿಯಾಬಾದ್ ಹಿರಿಯ ಪೊಲೀಸ್ ವರಿಷ್ಠಾಧಿಕಾರಿ ಅಮಿತ್ ಪಾಠಕ್ ಹೇಳಿದ್ದಾರೆ.

ಘಟನೆಗೆ ಸಂಬಂಧಿಸಿದಂತೆ ಗಾಜಿಯಾಬಾದ್ ಪೊಲೀಸರು ಪತ್ರಕರ್ತರಾದ ಮೊಹಮ್ಮದ್‌ ಜುಬೈರ್‌, ರಾಣಾ ಆಯೂಬ್‌, ಸಬಾ ನಖ್ವಿ, ಡಿಜಿಟಲ್ ಮಾಧ್ಯಮ ಸಂಸ್ಥೆಯಾದ ದಿ ವೈರ್‌, ಕಾಂಗ್ರೆಸ್‌ ನಾಯಕರಾದ ಸಲ್ಮಾನ್‌ ನಿಜಾಮಿ, ಮಸ್ಕೂರ್‌ ಉಸ್ಮಾನಿ, ಶಮಾ ಮೊಹಮ್ಮದ್‌ ಮತ್ತು ಟ್ವಿಟರ್‌ ಇಂಕ್‌ ಮತ್ತು ಟ್ವಿಟರ್‌ ಇಂಡಿಯಾ ವಿರುದ್ಧ ಎಫ್‌ಐಆರ್‌ ದಾಖಲಿಸಿದ್ದಾರೆ.

ಮುಸ್ಲಿಂ ವೃದ್ಧನ ಮೇಲೆ ಚಿತ್ರಹಿಂಸೆ ನೀಡಿರುವ ಘಟನೆಯ ಕುರಿತು ಟ್ವೀಟ್ ಮಾಡಿ ಕೋಮು ಪ್ರಚೋದನೆ ಮಾಡುತ್ತಿದ್ದಾರೆ. ಘಟನೆಯಲ್ಲಿ ಕೋಮು ಆಯಾಮ ಇಲ್ಲ ಎಂದು ಪೊಲೀಸರು ಹೇಳಿದ್ದಾರೆ. ಆದರೆ, ಅಬ್ದುಲ್ ಸಮದ್ ಅವರ ಕುಟುಂಬ ಬಬ್ಲೂ ಸೈಫಿ ಪೊಲೀಸರ ಪ್ರತಿಪಾದನೆಯನ್ನು ನಿರಾಕರಿಸಿದ್ದು, “ನನ್ನ ತಂದೆ ತಾಯತಗಳನ್ನು ಮಾರಾಟ ಮಾಡುತ್ತಿದ್ದರು ಎಂದು ಪೊಲೀಸರು ತಪ್ಪಾಗಿ ಹೇಳಿದ್ದಾರೆ. ನಾವು ಬಡಗಿಗಳಾಗಿದ್ದು, ನಮ್ಮ ಕುಟುಂಬದಲ್ಲಿ ಯಾರೂ ತಾಯತದ ವ್ಯವಹಾರವನ್ನು ಮಾಡುವುದಿಲ್ಲ. ಪೊಲೀಸರು ಸಳ್ಳು ಹೇಳುತ್ತಿದ್ದಾರೆ. ಅವರು ತನಿಖೆ ನಡೆಸಿ ಅದನ್ನು ಸಾಬೀತುಪಡಿಸಲಿ” ಎಂದು ತಿಳಿಸಿದ್ದಾರೆ.


ಇದನ್ನೂ ಓದಿ: ಯುಪಿ ಮುಸ್ಲಿಂ ವೃದ್ದನ ಮೇಲಿನ ದಾಳಿ ಪ್ರಕರಣ: ಟ್ವಿಟರ್‌‌, ಪತ್ರಕರ್ತರು, ರಾಜಕೀಯ ನಾಯಕರ ವಿರುದ್ದ FIR!

LEAVE A REPLY

Please enter your comment!
Please enter your name here