Homeಚಳವಳಿಘಾಜಿಯಾಬಾದ್: ಹಿಜಾಬ್ ನಿಷೇಧದ ವಿರುದ್ಧ ಪ್ರತಿಭಟಿಸುತ್ತಿದ್ದ ಮಹಿಳೆಯರ ಮೇಲೆ ಪೊಲೀಸರ ಹಲ್ಲೆ

ಘಾಜಿಯಾಬಾದ್: ಹಿಜಾಬ್ ನಿಷೇಧದ ವಿರುದ್ಧ ಪ್ರತಿಭಟಿಸುತ್ತಿದ್ದ ಮಹಿಳೆಯರ ಮೇಲೆ ಪೊಲೀಸರ ಹಲ್ಲೆ

- Advertisement -
- Advertisement -

ಉತ್ತರ ಪ್ರದೇಶದ ಘಾಜಿಯಾಬಾದ್‌ನಲ್ಲಿ ಹಿಜಾಬ್ ನಿಷೇಧದ ವಿರುದ್ಧ ನಡೆದ ಪ್ರತಿಭಟನೆಯ ವೇಳೆ ಪೊಲೀಸರು ಬುರ್ಖಾ ಧರಿಸಿ ಮುಸ್ಲಿಂ ಮಹಿಳೆಯರಿಗೆ ಹೊಡೆಯುತ್ತಿರುವ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಭಾರಿ ಆಕ್ರೋಶ ವ್ಯಕ್ತವಾಗಿದೆ.

ಕರ್ನಾಟಕದಲ್ಲಿ ಆರಂಭವಾದ ಹಿಜಾಬ್ ನಿಷೇಧ ವಿಚಾರವು ಹಿಜಾಬ್-ಕೇಸರಿ ಶಾಲು ಸಂಘರ್ಷವಾಗಿ ಬದಲಾಗಿದೆ. ಈ ವಿಚಾರ ಹೈಕೋರ್ಟಿನಲ್ಲಿ ವಿಚಾರಣೆ ನಡೆಯುತ್ತಿರುವ ಹೊತ್ತಿನಲ್ಲೇ ದೇಶಾದ್ಯಂತ ಹಲವು ಕಡೆ ಪ್ರತಿಭಟನೆಗಳು ನಡೆಯುತ್ತಿವೆ. ಇದೇ ರೀತಿ ಘಾಜಿಯಾಬಾದ್‌ನಲ್ಲೂ ಪ್ರತಿಭಟನೆ ನಡೆಯುತ್ತಿತ್ತು ಎನ್ನಲಾಗಿದೆ.

ಈ ವೀಡಿಯೊವನ್ನು ಸಾಮಾಜಿಕ ಮಾಧ್ಯಮದಲ್ಲಿ ವ್ಯಾಪಕವಾಗಿ ಹಂಚಿಕೊಂಡು, ಪೊಲೀಸರ ಕ್ರಮವನ್ನು ಟೀಕಿಸಿದ ನಂತರ, ವೀಡಿಯೊ ಕುರಿತು ತನಿಖೆ ಮಾಡಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಇದಲ್ಲದೆ ಕಳೆದ ಭಾನುವಾರ ನಡೆದ ಘಟನೆಯ ಕುರಿತು ಪ್ರತಿಭಟನಾಕಾರರ ವಿರುದ್ಧವೇ ಪೊಲೀಸರು ಎಫ್‌ಐಆರ್ ದಾಖಲಿಸಿದ್ದಾರೆ.

ಇದನ್ನೂ ಓದಿ: ಸಂಪುಟದಿಂದ ಈಶ್ವರಪ್ಪ ವಜಾಕ್ಕೆ ಕಾಂಗ್ರೆಸ್‌ ಆಗ್ರಹ: ಸದನದಲ್ಲಿ ರಾಷ್ಟ್ರಧ್ವಜ ಹಿಡಿದು ಪ್ರತಿಭಟನೆ

 

“ಘಾಜಿಯಾಬಾದ್‌ನ ಸಾನಿ ಬಜಾರ್ ರಸ್ತೆಯಲ್ಲಿ ಅನುಮತಿ ಪಡೆಯದೆ ಸುಮಾರು 15 ಮುಸ್ಲಿಂ ಮಹಿಳೆಯರು ಸರ್ಕಾರಿ ವಿರೋಧಿ ಪೋಸ್ಟರ್‌ಗಳೊಂದಿಗೆ ಜಮಾಯಿಸಿರುವುದು ತಮಗೆ ತಿಳಿದು ಬಂದಿತ್ತು. ಪೊಲೀಸ್ ತಂಡವು ಅಲ್ಲಿಗೆ ತಲುಪಿದಾಗ ಮಹಿಳೆಯರು ಘೋಷಣೆಗಳನ್ನು ಕೂಗಲು ಪ್ರಾರಂಭಿಸಿದರು” ಎಂದು ಎಫ್‌ಐಆರ್‌ನಲ್ಲಿ ದಾಖಲಾಗಿದೆ.

’ಮನೆಗೆ ಮರಳಲು ಮನವೊಲಿಸಲು ಪ್ರಯತ್ನಿಸಿದ ಮಹಿಳಾ ಕಾನ್‌ಸ್ಟೆಬಲ್‌ಗಳ ಮೇಲೆ ಪ್ರತಿಭಟನಾಕಾರರು  ಹಲ್ಲೆ ಮಾಡಿದ್ದಾರೆ. ಪ್ರತಿಭಟನಾಕಾರರೊಂದಿಗಿದ್ದ ಕೆಲವು ಪುರುಷರು ಸಹ ಕಾನ್‌ಸ್ಟೆಬಲ್‌ಗಳನ್ನು ನಿಂದಿಸಲು ಪ್ರಾರಂಭಿಸಿದರು. ಆರೋಪಿಗಳಲ್ಲಿ ಒಬ್ಬನನ್ನು ರಾಯೀಸ್ ಎಂದು ಗುರುತಿಸಲಾಗಿದೆ’ ಎಂದು ಪೊಲೀಸರು ದಾಖಲಿಸಿರುವ ಎಫ್‌ಐಆರ್‌ನಲ್ಲಿ ತಿಳಿಸಲಾಗಿದೆ.

ಪ್ರತಿಭಟನಾಕಾರರನ್ನು ಚದುರಿಸಲು ಪೊಲೀಸರು ಹೊಡೆಯುತ್ತಿರುವುದನ್ನು ದೃಶ್ಯಗಳು ವಿಡಿಯೋದಲ್ಲಿ ಸೆರೆಯಾಗಿವೆ. ಬುರ್ಖಾ ಧರಿಸಿದ ಮಹಿಳೆಯರನ್ನು ಪೊಲೀಸರನ್ನು ಲಾಠಿಯಿಂದ ಹೊಡೆಯುವುದನ್ನು, ಮಹಿಳೆಯರು ಹಲ್ಲೆಯನ್ನು ತಡೆಯಲು ಪ್ರಯತ್ನಿಸುತ್ತಿರುವುದನ್ನು ದೃಶ್ಯಗಳಲ್ಲಿ ಕಾಣಬಹುದು.


ಇದನ್ನೂ ಓದಿ: ಹಿಜಾಬ್‌: ತರಗತಿಗಳು ಸಮಾಜದ ವೈವಿಧ್ಯತೆಯ ಪ್ರತಿಬಿಂಬವಾಗಬೇಕು: ಹಿರಿಯ ವಕೀಲ ಪ್ರೊ. ರವಿವರ್ಮ ಕುಮಾರ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...