Homeಮುಖಪುಟಗಾಜಿಯಾಬಾದ್: ಮೇಲ್ವಿಚಾರಕರಿಂದ ಅತ್ಯಾಚಾರಕ್ಕೊಳಗಾದ ಬಳಿಕ ಮಹಿಳಾ ಭದ್ರತಾ ಸಿಬ್ಬಂದಿ ಸಾವು

ಗಾಜಿಯಾಬಾದ್: ಮೇಲ್ವಿಚಾರಕರಿಂದ ಅತ್ಯಾಚಾರಕ್ಕೊಳಗಾದ ಬಳಿಕ ಮಹಿಳಾ ಭದ್ರತಾ ಸಿಬ್ಬಂದಿ ಸಾವು

- Advertisement -
- Advertisement -

19 ವರ್ಷದ ಮಹಿಳಾ ಭದ್ರತಾ ಸಿಬ್ಬಂದಿ ಮೇಲೆ ಅವರ ಮೇಲ್ವಿಚಾರಕರು ಅತ್ಯಾಚಾರವೆಸಗಿದ ಬಳಿಕ ಆಕೆ ಸಾವನ್ನಪ್ಪಿರುವ ಘಟನೆ ಉತ್ತರ ಪ್ರದೇಶದ ಗಾಜಿಯಾಬಾದ್‌ನಲ್ಲಿ ನಡೆದಿದೆ.

ಈ ಬಗ್ಗೆ ಮಾಹಿತಿ ನೀಡಿದ ಉಪ ಪೊಲೀಸ್ ಆಯುಕ್ತ (ಗ್ರಾಮೀಣ) ವಿವೇಕ್ ಚಂದ್ರ ಯಾದವ್ ಅವರು, ”ಜಾರ್ಖಂಡ್ ಮೂಲದ ಮಹಿಳೆ ಗಾಜಿಯಾಬಾದದ್‌ನ ಹೌಸಿಂಗ್ ಸೊಸೈಟಿಯಲ್ಲಿ ಕಾವಲುಗಾರ್ತಿಯಾಗಿ ಕೆಲಸ ಮಾಡುತ್ತಿದ್ದರು. ಭಾನುವಾರ ಬೆಳಗ್ಗೆ ಮೇಲ್ವಿಚಾರಕರು ಮಹಿಳೆಯನ್ನು ತಮ್ಮ ಕಚೇರಿಗೆ ಕರೆಸಿ ಅತ್ಯಾಚಾರ ಎಸಗಿದ್ದಾರೆ” ಎಂದು ಹೇಳಿದ್ದಾರೆ.

”45 ನಿಮಿಷಗಳ ನಂತರ, ಮಹಿಳೆಯು ಘಟನೆಯ ಬಗ್ಗೆ ತನ್ನ ಸಹೋದ್ಯೋಗಿಗಳಿಗೆ ತಿಳಿಸಿದ್ದಾಳೆ. ನಂತರ ಸಂತ್ರಸ್ತೆಯನ್ನು ಮಧ್ಯಾಹ್ನ 1.30ಕ್ಕೆ ಆಸ್ಪತ್ರೆಗೆ ಕರೆದೊಯ್ದಿದ್ದಾರೆ” ಎಂದು ಅಧಿಕಾರಿಗಳು ಹೇಳಿದ್ದಾರೆ.

”ಲೈಂಗಿಕ ದೌರ್ಜನ್ಯದ ನಂತರ ತೀವ್ರ ಉಸಿರಾಟದ ತೊಂದರೆಯಿಂದ ಮಹಿಳೆ ಬಳಲುತ್ತಿದ್ದಳು” ಎಂದು ಆಸ್ಪತ್ರೆ ತಿಳಿಸಿದೆ.

ಭಾನುವಾರ ಸಂಜೆ, ಕ್ರಿಮಿನಲ್ ಪ್ರಕ್ರಿಯಾ ಸಂಹಿತೆಯ ಸೆಕ್ಷನ್ 164ರ ಅಡಿಯಲ್ಲಿ ಮ್ಯಾಜಿಸ್ಟ್ರೇಟ್ ಮುಂದೆ ಹೇಳಿಕೆಯನ್ನು ದಾಖಲಿಸಿದ್ದಾರೆ.

ಪೊಲೀಸರು ಅಜಯ್ ಎಂಬ ವ್ಯಕ್ತಿಯನ್ನು ಬಂಧಿಸಿದ್ದಾರೆ ಮತ್ತು ಇಬ್ಬರು ಆರೋಪಿಗಳನ್ನು ಬಂಧಿಸಲು ತಂಡಗಳನ್ನು ರಚಿಸಿದ್ದಾರೆ.

ಶವಪರೀಕ್ಷೆ ಮತ್ತು ವೈದ್ಯಕೀಯ ವರದಿಯ ಫಲಿತಾಂಶಕ್ಕಾಗಿ ಅಧಿಕಾರಿಗಳು ಕಾಯುತ್ತಿದ್ದಾರೆ. ಆಕೆಯ ಶ್ವಾಸಕೋಶಕ್ಕೆ ಹಾನಿಯಾಗಿದೆ, ಆದರೆ ಅದಕ್ಕೆ ಕಾರಣ ಇನ್ನೂ ತಿಳಿದುಬಂದಿಲ್ಲ. ಘಟನೆಯ ನಂತರ ಅವಳು ಆತ್ಮಹತ್ಯೆಯಿಂದ ಸಾಯಲು ಪ್ರಯತ್ನಿಸಿದಳು ಎನ್ನುವ ಮಾತುಗಳು ಕೇಳಿಬಂದಿವೆ ಆದರೆ ಅದಕ್ಕೆ ಯಾವುದೇ ಪುರಾವೆಗಳಿಲ್ಲ. ಆಕೆಯ ಸಾವಿಗೆ ಕಾರಣವನ್ನು ಕಂಡುಹಿಡಿಯಲು ಪೊಲೀಸರು ವಿಧಿ ವಿಜ್ಞಾನ ಪ್ರಯೋಗಾಲಯದಿಂದ ವರದಿಗಾಗಿ ಕಾಯುತ್ತಿದ್ದಾರೆ” ಎಂದು ಉಪ ಪೊಲೀಸ್ ಆಯುಕ್ತರು ತಿಳಿಸಿದ್ದಾರೆ.

ಇದನ್ನೂ ಓದಿ: ರಾಜಸ್ಥಾನ: ಬಿಜೆಪಿ ನಾಯಕ ಸೇರಿ ಆರು ಜನರ ವಿರುದ್ಧ ಸಾಮೂಹಿಕ ಅತ್ಯಾಚಾರ ಪ್ರಕರಣ ದಾಖಲು

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಪ.ಬಂಗಾಳ: ಲೈಂಗಿಕ ದೌರ್ಜ್ಯನ್ಯದ ಆರೋಪದ ಬೆನ್ನಲ್ಲಿ ರಾಜಭವನಕ್ಕೆ ಪೊಲೀಸರಿಗೆ ಪ್ರವೇಶ ನಿಷೇಧಿಸಿದ ಗವರ್ನರ್‌

0
ಪಶ್ಚಿಮ ಬಂಗಾಳದ ರಾಜ್ಯಪಾಲ ಸಿ.ವಿ.ಆನಂದ ಬೋಸ್ ವಿರುದ್ಧ ನಿನ್ನೆ ರಾಜಭವನದ ಮಹಿಳಾ ಉದ್ಯೋಗಿಯೋರ್ವರು ಲೈಂಗಿಕ ದೌರ್ಜನ್ಯದ ಆರೋಪ ಹೊರಿಸಿದ್ದರು. ಇದರ ಬೆನ್ನಲ್ಲಿ ರಾಜ್ಯಪಾಲರು ತನಿಖೆಯ ನೆಪದಲ್ಲಿ ಪೊಲೀಸರು ರಾಜಭವನಕ್ಕೆ ಪ್ರವೇಶಿಸದಂತೆ ನಿಷೇಧಿಸಿದ್ದಾರೆ, ಇದಲ್ಲದೆ...