Homeಮುಖಪುಟ‘ತಿರುಪತಿ ಲಡ್ಡುಗಳಲ್ಲಿ ರಾಸಾಯನಿಕಗಳಿಂದ ಮಾಡಿದ ತುಪ್ಪ ಬಳಸಲಾಗುತ್ತಿತ್ತು’: ವೈಎಸ್ಆರ್ಸಿಪಿ ಸರ್ಕಾರದ ವಿರುದ್ಧ ಆಂಧ್ರ ಸಿಎಂ ಆರೋಪ

‘ತಿರುಪತಿ ಲಡ್ಡುಗಳಲ್ಲಿ ರಾಸಾಯನಿಕಗಳಿಂದ ಮಾಡಿದ ತುಪ್ಪ ಬಳಸಲಾಗುತ್ತಿತ್ತು’: ವೈಎಸ್ಆರ್ಸಿಪಿ ಸರ್ಕಾರದ ವಿರುದ್ಧ ಆಂಧ್ರ ಸಿಎಂ ಆರೋಪ

- Advertisement -
- Advertisement -

ಹಿಂದಿನ ವೈಎಸ್‌ಆರ್‌ಸಿಪಿ ಸರ್ಕಾರದ ಅವಧಿಯಲ್ಲಿ ತಿರುಪತಿ ಲಡ್ಡುಗಳನ್ನು ತುಪ್ಪ ಬಳಸಿ ತಯಾರಿಸಲಾಗುತ್ತಿತ್ತು, ಅದರಲ್ಲಿ ಬಾತ್ ರೂಂ(ಸ್ನಾನಗೃಹಗಳನ್ನು) ಸ್ವಚ್ಛಗೊಳಿಸಲು ಬಳಸುವ ರಾಸಾಯನಿಕಗಳನ್ನು ಬೆರೆಸಲಾಗುತ್ತಿತ್ತು ಎಂದು ಆಂಧ್ರಪ್ರದೇಶ ಮುಖ್ಯಮಂತ್ರಿ ಎನ್ ಚಂದ್ರಬಾಬು ನಾಯ್ಡು ಶುಕ್ರವಾರ ಆರೋಪಿಸಿದ್ದಾರೆ.

ಕರ್ನೂಲು ಜಿಲ್ಲೆಯ ಕಲುಗೋಟ್ಲಾ ಗ್ರಾಮದಲ್ಲಿ ನಡೆದ ಗ್ರಾಮ ಸಭೆಯನ್ನುದ್ದೇಶಿಸಿ ಮಾತನಾಡಿದ ಮುಖ್ಯಮಂತ್ರಿ, ಹಿಂದಿನ ಸರ್ಕಾರವು ಕಲಬೆರಕೆ ಪ್ರಸಾದ (ಪವಿತ್ರ ಆಹಾರ)ದ ಮೂಲಕ ವೆಂಕಟೇಶ್ವರ ಸ್ವಾಮಿಯ ಪ್ರತಿಷ್ಠೆಯನ್ನು ಹಾಳು ಮಾಡಲು ಪ್ರಯತ್ನಿಸಿದೆ ಎಂದು ಆರೋಪಿಸಿದ್ದಾರೆ. 

“ಹಿಂದಿನ ವೈಎಸ್‌ಆರ್‌ಸಿಪಿ ಸರ್ಕಾರವು ಸ್ನಾನಗೃಹ ಸ್ವಚ್ಛಗೊಳಿಸುವ ರಾಸಾಯನಿಕಗಳಿಂದ ತಯಾರಿಸಿದ ತುಪ್ಪವನ್ನು ಲಡ್ಡುಗಳಲ್ಲಿ ಬಳಸುತ್ತಿತ್ತು” ಎಂದು ಯಮ್ಮಿಗನೂರು ಕ್ಷೇತ್ರದಲ್ಲಿ ನಡೆದ ಪಟ್ಟದಾರ್ ಪಾಸ್‌ಬುಕ್ (ಭೂ ದಾಖಲೆಗಳು) ವಿತರಣಾ ಕಾರ್ಯಕ್ರಮದ ಸಂದರ್ಭದಲ್ಲಿ ನಾಯ್ಡು ಹೇಳಿದ್ದಾರೆ.

ಮುಖ್ಯಮಂತ್ರಿಗಳ ಪ್ರಕಾರ, ಐದು ವರ್ಷಗಳ ಕಾಲ ಲಡ್ಡು ತಯಾರಿಸಲು “ರಾಸಾಯನಿಕಗಳಿಂದ” ತಯಾರಿಸಿದ ಕಲಬೆರಕೆ ತುಪ್ಪವನ್ನು ಬಳಸಲಾಗುತ್ತಿತ್ತು. ಇವುಗಳಲ್ಲಿ ಎರಡು ರೀತಿಯ ರಾಸಾಯನಿಕಗಳಿವೆ ಎಂದು ಅವರು ಹೇಳಿದ್ದು, ಇವುಗಳಲ್ಲಿ ಕೆಲವು ತರಕಾರಿ ಮೂಲದವುಗಳಾಗಿದ್ದು, ಅವು ಹೆಚ್ಚು ದುಬಾರಿಯಾಗಿದ್ದವು, ಆದರೆ ಪ್ರಾಣಿಗಳ ಕೊಬ್ಬಿನ ಬೆಲೆ ಕಡಿಮೆ ಎಂದು ಅವರು ಗಮನಿಸಿದ್ದರು ಎಂದು ಆರೋಪಿಸಿದ್ದಾರೆ. 

ಜೊತೆಗೆ ರಾಷ್ಟ್ರೀಯ ಡೈರಿ ಅಭಿವೃದ್ಧಿ ಮಂಡಳಿ (ಎನ್‌ಡಿಡಿಬಿ) ವರದಿಯು ತಿರುಪತಿ ಲಡ್ಡುಗಳಲ್ಲಿ ಪ್ರಾಣಿಗಳ ಕೊಬ್ಬನ್ನು ಬಳಸಲಾಗಿದೆ ಎಂದು ಹೇಳುತ್ತದೆ ಎಂದು ನಾಯ್ಡು ಪುನರುಚ್ಚರಿಸಿದ್ದಾರೆ. 

ಒಬ್ಬ ಭಕ್ತನಾಗಿ, ವೆಂಕಟೇಶ್ವರ ಸ್ವಾಮಿಯ ಪಾವಿತ್ರ್ಯವನ್ನು ಗಮನದಲ್ಲಿಟ್ಟುಕೊಂಡು ಈ ಬಗ್ಗೆ ಹೆಚ್ಚು ಮಾತನಾಡಬಾರದು. ಆದರೆ ವೈಎಸ್‌ಆರ್‌ಸಿಪಿ ನಾಯಕರು ಸಿಬಿಐ ನೇತೃತ್ವದ ಎಸ್‌ಐಟಿ ಕಲಬೆರಕೆ ನಡೆದಿಲ್ಲ ಎಂದು ಕ್ಲೀನ್ ಚಿಟ್ ನೀಡಿದೆ ಎಂದು ವಾದಿಸುತ್ತಿದ್ದರೆ, ಟಿಡಿಪಿ ಮುಖ್ಯಸ್ಥ ವೈಎಸ್ ಜಗನ್ ಮೋಹನ್ ರೆಡ್ಡಿ ಅವರ ಚಿಕ್ಕಪ್ಪ ವೈವಿ ಸುಬ್ಬಾ ರೆಡ್ಡಿ ಕಲಬೆರಕೆ ನಡೆದಿದೆ ಎಂದು ಹೇಳಿದ್ದರು ಎಂದು ನೆನಪಿಸಿದ್ದಾರೆ. 

ತಿರುಮಲ ತಿರುಪತಿ ದೇವಸ್ಥಾನಗಳನ್ನು (ಟಿಟಿಡಿ) ಕಲಬೆರಕೆ ಪ್ರಸಾದದಿಂದ ಅಪವಿತ್ರಗೊಳಿಸಿದ ತಪ್ಪನ್ನು ಸರಿಪಡಿಸಲು ಪ್ರಯತ್ನಿಸಿದೆ ಎಂದು ನಾಯ್ಡು ಹೇಳಿದ್ದು, ಪ್ರಸ್ತುತ ಲಡ್ಡು ಮತ್ತು ಹಿಂದಿನದಕ್ಕೆ ಸಾಕಷ್ಟು ವ್ಯತ್ಯಾಸವಿದೆ ಎಂದು ಹೇಳಿದ್ದಾರೆ. 

ಗುರುವಾರ ಪತ್ರಿಕಾಗೋಷ್ಠಿಯಲ್ಲಿ, ನಾಯ್ಡು ಅವರು ತಿರುಪತಿ ಲಡ್ಡು ಕಲಬೆರಕೆ ಪ್ರಕರಣದಲ್ಲಿ ಯಾರನ್ನೂ ಬಿಡುವುದಿಲ್ಲ ಎಂದು ಪ್ರತಿಜ್ಞೆ ಮಾಡಿದ್ದು, ಈ ವಿಷಯದ ಬಗ್ಗೆ ಎಸ್‌ಐಟಿ ವರದಿಯ ನಂತರ ಸರಿಪಡಿಸುವ ಕ್ರಮಗಳನ್ನು ತೆಗೆದುಕೊಳ್ಳಲು ಏಕವ್ಯಕ್ತಿ ಸಮಿತಿಯನ್ನು ರಚಿಸಿದ್ದಾರೆ. 

ತಿರುಮಲ ಲಡ್ಡು ಪ್ರಸಾದದ ಕಲಬೆರಕೆ ಭಕ್ತರ ನಂಬಿಕೆಯ ವಿರುದ್ಧದ ಗಂಭೀರ ಅಪರಾಧವಾಗಿದೆ ಎಂದು ಹೇಳಿರುವ ಅವರು ಈ ವಿಷಯದಲ್ಲಿ ಯಾವುದೇ ವರದಿಯು ವೈಎಸ್‌ಆರ್‌ಸಿಪಿಗೆ ಕ್ಲೀನ್ ಚಿಟ್ ನೀಡಿಲ್ಲ ಎಂದು ಪ್ರತಿಪಾದಿಸಿದ್ದಾರೆ. 

ತುಪ್ಪ ಕಲಬೆರಕೆಯನ್ನು “ದೇವರ ವಿರುದ್ಧದ ಅತ್ಯಂತ ದೊಡ್ಡ ಪಾಪ” ಎಂದು ಕರೆದ ನಾಯ್ಡು, ವೈಎಸ್‌ಆರ್‌ಸಿಪಿ ಸರ್ಕಾರದ ಅವಧಿಯಲ್ಲಿ 2022 ರ ಕೇಂದ್ರೀಯ ಆಹಾರ ತಾಂತ್ರಿಕ ಸಂಶೋಧನಾ ಸಂಸ್ಥೆ (ಸಿಎಫ್‌ಟಿಆರ್‌ಐ) ವರದಿಯು “ಕಲಬೆರೆಕೆ ಇದೆ ಎಂದು ಸ್ಪಷ್ಟವಾಗಿ ಹೇಳಿದೆ” ಎಂದು ಆರೋಪಿಸಿದ್ದಾರೆ. 

ಗುರುವಾರ ಟಿಡಿಪಿ ವಿರುದ್ಧ ವಾಗ್ದಾಳಿ ನಡೆಸಿರುವ ವೈಎಸ್‌ಆರ್‌ಸಿಪಿ ರಾಜ್ಯಸಭಾ ಸಂಸದ ವೈವಿ ಸುಬ್ಬಾ ರೆಡ್ಡಿ, 2022 ರ ಸಿಎಫ್‌ಟಿಆರ್‌ಐ ವರದಿಯು ಪವಿತ್ರ ಸಿಹಿತಿಂಡಿ ತಯಾರಿಸಲು ಬಳಸುವ ತುಪ್ಪದಲ್ಲಿ ಪ್ರಾಣಿಗಳ ಕೊಬ್ಬಿನ ಕಲಬೆರಕೆಯನ್ನು ಉಲ್ಲೇಖಿಸಿಲ್ಲ, ಆದರೆ ತುಪ್ಪವನ್ನು ಕಲಬೆರಕೆ ಮಾಡಲಾಗುತ್ತಿದೆ ಎಂದು ಹೇಳಲಾಗಿದೆ ಎಂದು ಹೇಳಿದ್ದಾರೆ.

ಆ ವರದಿಯನ್ನು ಅವರು ಮುಚ್ಚಿಟ್ಟಿದ್ದಾರೆ ಎಂಬ ಟಿಡಿಪಿ ನೇತೃತ್ವದ ಎನ್‌ಡಿಎ ಸರ್ಕಾರದ ಆರೋಪವನ್ನು ಅವರು ತಿರಸ್ಕರಿಸಿದ್ದು, “ಒಂದು ವೇಳೆ ಅದನ್ನು ನಿಗ್ರಹಿಸಿದ್ದರೆ, ನಾನು ಮಾದರಿಗಳನ್ನು ಪರೀಕ್ಷಿಸಲು ಸಿಎಫ್‌ಟಿಆರ್‌ಐಗೆ ಏಕೆ ಬರೆಯಬೇಕು” ಎಂದು ಸುಬ್ಬಾ ರೆಡ್ಡಿ ಪ್ರಶ್ನಿಸಿದ್ದಾರೆ. 

“ಎಸ್‌ಐಟಿ ವರದಿಯು ಸಮಸ್ಯೆಯನ್ನು ಸ್ಪಷ್ಟಪಡಿಸಿದ್ದರೂ, ರಾಜ್ಯ ಸರ್ಕಾರವು ಸುಳ್ಳು ಹೇಳಿಕೆಗಳನ್ನು ಹರಡುವುದನ್ನು ಮತ್ತು ವೈಎಸ್‌ಆರ್‌ಸಿಪಿಯನ್ನು ದೂಷಿಸಲು ಹೋರ್ಡಿಂಗ್‌ಗಳನ್ನು ನಿರ್ಮಿಸುವುದನ್ನು ಮುಂದುವರೆಸಿದೆ” ಎಂದು ಅವರು ಪ್ರತ್ಯಾರೋಪ ಮಾಡಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಛತ್ತೀಸ್‌ಗಢ| ಕ್ರಿಶ್ಚಿಯನ್ ಯುವಕನ ಮೇಲೆ ಹಿಂದುತ್ವವಾದಿ ಗುಂಪಿನಿಂದ ಹಲ್ಲೆ; ‘ಜೈ ಶ್ರೀ ರಾಮ್’ ಕೂಗುವಂತೆ ಒತ್ತಾಯ

ಛತ್ತೀಸ್‌ಗಢದ ಜಂಜ್‌ಗೀರ್-ಚಂಪಾ ಜಿಲ್ಲೆಯಲ್ಲಿ ಕ್ರಿಶ್ಚಿಯನ್ ಯುವಕನ ಮೇಲೆ ಹಿಂದುತ್ವವಾದಿಗಳ ಗುಂಪೊಂದು ಹಲ್ಲೆ ನಡೆಸಿ, ಜೈಶ್ರೀರಾಮ್ ಎಂದು ಘೋಷಣೆಗಳನ್ನು ಕೂಗುವಂತೆ ಒತ್ತಾಯಿಸಿದೆ ಎಂಬ ಆರೋಪ ಕೇಳಿಬಂದಿದೆ. ಇಂದು (ಮಾ.18) ನಡೆದಿದೆ ಎನ್ನಲಾದ ಈ ಘಟನೆಯ...

ಯುಪಿಎಸ್‌ಸಿ 440 ನೇ ರ‍್ಯಾಂಕ್ ಎಂದು ಸುಳ್ಳು ಹೇಳಿ ಸಂಭ್ರಮಾಚರಣೆ ಮಾಡಿದ್ದ ಬಿಹಾರದ ಯುವಕನ ಬಂಧನ

ಕೇಂದ್ರ ಲೋಕಸೇವಾ ಆಯೋಗ (ಯುಪಿಎಸ್‌ಸಿ) ನಾಗರಿಕ ಸೇವಾ ಪರೀಕ್ಷೆ (ಸಿಎಸ್‌ಇ) 2025 ರಲ್ಲಿ ಅಖಿಲ ಭಾರತ ರ‍್ಯಾಂಕ್ (ಎಐಆರ್) 440 ಗಳಿಸಿದ್ದೇನೆ ಎಂದು ಸುಳ್ಳು ಹೇಳಿಕೊಂಡ ಕೆಲವು ದಿನಗಳ ನಂತರ, ಬಿಹಾರದ ಶೇಖ್‌ಪುರ...

‘ಜೈ ಬಾಂಗ್ಲಾ’ ಘೋಷಣೆ ಕೂಗಿದ ಆರೋಪ: ಮಹಿಳೆಗೆ ಜಾಮೀನು ನೀಡಿದ ಹೈಕೋರ್ಟ್

ಬೆಂಗಳೂರಿನ ಹೆಬ್ಬಗೂಡಿಯಲ್ಲಿ ಅಕ್ರಮ ಎನ್ನಲಾದ ಶೆಡ್‌ಗಳ ತೆರವು ಕಾರ್ಯಾಚರಣೆ ವೇಳೆ 'ಜೈ ಬಾಂಗ್ಲಾ' ಘೋಷಣೆ ಕೂಗಿದ ಆರೋಪದ ಮೇಲೆ ಬಂಧಿತರಾದ ಪಶ್ಚಿಮ ಬಂಗಾಳದ ಮಹಿಳೆಗೆ ಹೈಕೋರ್ಟ್ ಜಾಮೀನು ಮಂಜೂರು ಮಾಡಿದೆ. ನ್ಯಾಯಮೂರ್ತಿ ಎಸ್.ರಾಚಯ್ಯ...

ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಡಿಜೆ, ಐಟಂ ಹಾಡು ನಿಷೇಧಿಸಲು ಕರ್ನಾಟಕ ಯೋಜನೆ; ವಿಧಾನಸಭೆಯಲ್ಲಿ ಸಂತೋಷ್ ಲಾಡ್ ಪ್ರಸ್ತಾಪ

ಬೆಂಗಳೂರು: ಸಾಂಸ್ಕೃತಿಕ ಕಾರ್ಯಕ್ರಮಗಳು ಮತ್ತು ಧಾರ್ಮಿಕ ಮೆರವಣಿಗೆಗಳಲ್ಲಿ ಅಬ್ಬರದ ಸಂಗೀತ ಮತ್ತು "ಐಟಂ ಹಾಡುಗಳನ್ನು" ನುಡಿಸುವ ಡಿಸ್ಕ್ ಜಾಕಿಗಳನ್ನು (ಡಿಜೆ) ನಿಷೇಧಿಸುವ ಪರವಾಗಿ ಕರ್ನಾಟಕ ಸರ್ಕಾರವಿದೆ ಎಂದು ಕನ್ನಡ ಮತ್ತು ಸಂಸ್ಕೃತಿ ಸಚಿವ...

ದೆಹಲಿಯ ಪಾಲಂನಲ್ಲಿರುವ ಬಹುಮಹಡಿ ಕಟ್ಟಡದಲ್ಲಿ ಬೆಂಕಿ ಅವಘಡ: ಮೂವರು ಮಕ್ಕಳು ಸೇರಿ ಏಳು ಮಂದಿ ಸಾವು

ರಾಷ್ಟ್ರ ರಾಜಧಾನಿಯ ಪಾಲಂ ಪ್ರದೇಶದ ವಸತಿ ಕಟ್ಟಡದಲ್ಲಿ ಭಾರಿ ಬೆಂಕಿ ಕಾಣಿಸಿಕೊಂಡು ಮೂವರು ಮಕ್ಕಳು ಸೇರಿದಂತೆ ಕನಿಷ್ಠ ಏಳು ಜನರು ಸಾವನ್ನಪ್ಪಿದ್ದಾರೆ ಎಂದು ದೆಹಲಿ ಪೊಲೀಸರು ಬುಧವಾರ ತಿಳಿಸಿದ್ದಾರೆ. ಘಟನೆಯ ಮಾಹಿತಿ ತಿಳಿದ ತಕ್ಷಣ...

ವಾರಣಾಸಿ: ಗಂಗಾ ನದಿಯ ದೋಣಿಯಲ್ಲಿ ‘ಇಫ್ತಾರ್’ ಕೂಟ ಆಯೋಜಿಸಿದ್ದಕ್ಕಾಗಿ 14 ಜನರ ಬಂಧನ 

ವಾರಣಾಸಿಯಲ್ಲಿ ಗಂಗಾ ನದಿಯ ಮಧ್ಯದಲ್ಲಿ ದೋಣಿಯಲ್ಲಿ 'ಇಫ್ತಾರ್' (ರಂಜಾನ್ ಸಮಯದಲ್ಲಿ ಸೂರ್ಯಾಸ್ತದ ನಂತರ ತಿನ್ನುವ ಊಟ) ಕೂಟವನ್ನು ಆಯೋಜಿಸಿದ್ದಕ್ಕಾಗಿ ಹದಿನಾಲ್ಕು ಮುಸ್ಲಿಂ ಯುವಕರನ್ನು ಬಂಧಿಸಲಾಗಿದೆ.  ದೈನಂದಿನ ಮುಸ್ಲಿಂ ಜೀವನವನ್ನು ಅಪರಾಧೀಕರಿಸುವ ಮತ್ತೊಂದು ಪ್ರಕರಣ ಇದಾಗಿದ್ದು,...

ಚುನಾವಣೆ ಹೊಸ್ತಿಲಲ್ಲಿ ಅಸ್ಸಾಂ ಕಾಂಗ್ರೆಸ್‌ನ ಇಬ್ಬರು ಪ್ರಮುಖ ನಾಯಕರು ರಾಜೀನಾಮೆ

ಚುನಾವಣೆ ಹೊಸ್ತಿಲಲ್ಲಿ ಅಸ್ಸಾಂ ಕಾಂಗ್ರೆಸ್‌ನ ಇಬ್ಬರು ಪ್ರಮುಖ ನಾಯಕರು ತಮ್ಮ ಸ್ಥಾನಗಳಿಗೆ ಮಂಗಳವಾರ (ಮಾ.17) ರಾಜೀನಾಮೆ ಸಲ್ಲಿಸಿದ್ದಾರೆ. ಪಕ್ಷದ ಹಿರಿಯ ನಾಯಕ ಹಾಗೂ ನೌಗಾಂಗ್ ಲೋಕಸಭಾ ಕ್ಷೇತ್ರದ ಹಾಲಿ ಸಂಸದ ಪ್ರದ್ಯುತ್ ಬೋರ್ಡೊಲೊಯ್...

ರಾಜ್ಯಸಭೆ ಚುನಾವಣೆಯಲ್ಲಿ ಅಡ್ಡ ಮತದಾನ : ಮೂವರು ಶಾಸಕರನ್ನು ಅಮಾನತುಗೊಳಿಸಿದ ಒಡಿಶಾ ಕಾಂಗ್ರೆಸ್

ರಾಜ್ಯಸಭಾ ಚುನಾವಣೆಯಲ್ಲಿ ಅಡ್ಡ ಮತದಾನ ಮಾಡಿದ್ದಕ್ಕಾಗಿ ಒಡಿಶಾ ಕಾಂಗ್ರೆಸ್ ಮೂವರು ಶಾಸಕರಾದ ಸೋಫಿಯಾ ಫಿರ್ದೌಸ್, ರಮೇಶ್ ಜೆನಾ ಮತ್ತು ದಾಸರಥಿ ಗೊಮಾಂಗೊ ಅವರನ್ನು ಅಮಾನತುಗೊಳಿಸಿದೆ. ಒಡಿಶಾ ವಿಧಾನಸಭೆಯಲ್ಲಿ ಕಾಂಗ್ರೆಸ್ 14 ಶಾಸಕರನ್ನು ಹೊಂದಿದ್ದು, ನಾಲ್ಕನೇ...

ಅಮೆರಿಕ ರಾಷ್ಟ್ರೀಯ ಭಯೋತ್ಪಾದನಾ ನಿಗ್ರಹ ದಳದ ನಿರ್ದೇಶಕ ಜೋ ಕೆಂಟ್‌ ರಾಜೀನಾಮೆ

ಅಮೆರಿಕದ ರಾಷ್ಟ್ರೀಯ ಭಯೋತ್ಪಾದನಾ ನಿಗ್ರಹ ಕೇಂದ್ರದ (ಎನ್‌ಸಿಟಿಸಿ) ನಿರ್ದೇಶಕ ಜೋ ಕೆಂಟ್ ಅವರು ಇರಾನ್ ಜೊತೆಗಿನ ಯುದ್ಧಕ್ಕೆ ವಿರೋಧ ವ್ಯಕ್ತಪಡಿಸಿ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. "ಇರಾನ್‌ನಿಂದ ಅಮೆರಿಕಕ್ಕೆ ಯಾವುದೇ ತಕ್ಷಣದ ಅಪಾಯವಿರಲಿಲ್ಲ. ಇಸ್ರೇಲ್‌ನ ಒತ್ತಡದಿಂದಾಗಿ...

ಪಶ್ಚಿಮ ಏಷ್ಯಾ ಸಂಘರ್ಷ: ಇರಾನ್ ಭದ್ರತಾ ಮುಖ್ಯಸ್ಥ ಅಲಿ ಲಾರಿಜಾನಿ ಹತ್ಯೆ ಮಾಡಿರುವುದಾಗಿ ಹೇಳಿಕೊಂಡ ಇಸ್ರೇಲ್ 

ಇರಾನ್‌ನ ಭದ್ರತಾ ಮುಖ್ಯಸ್ಥ ಅಲಿ ಲಾರಿಜಾನಿ ವೈಮಾನಿಕ ದಾಳಿಯಲ್ಲಿ ಸಾವನ್ನಪ್ಪಿದ್ದಾರೆ ಎಂದು ಇಸ್ರೇಲ್ ರಕ್ಷಣಾ ಸಚಿವ ಕಾಟ್ಜ್ ಮಂಗಳವಾರ ಹೇಳಿದ್ದಾರೆ. ಆದರೆ ಟೆಹ್ರಾನ್‌ನಿಂದ ಯಾವುದೇ ಅಧಿಕೃತ ದೃಢೀಕರಣವಿಲ್ಲ. ಕಾಟ್ಜ್ ಪ್ರಕಾರ, ಜನರಲ್ ಘೋಲಮ್...