Homeಚಳವಳಿಬಿಜೆಪಿ ನಾಯಕರಿಗೆ ರೈತರಿಂದ ಘೇರಾವ್‌; ಕೈಮುಗಿದು ಕ್ಷಮೆಯಾಚಿಸಿದ ಮಾಜಿ ಸಚಿವ

ಬಿಜೆಪಿ ನಾಯಕರಿಗೆ ರೈತರಿಂದ ಘೇರಾವ್‌; ಕೈಮುಗಿದು ಕ್ಷಮೆಯಾಚಿಸಿದ ಮಾಜಿ ಸಚಿವ

- Advertisement -
- Advertisement -

ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ಕೇದಾರನಾಥ ದೇವಾಲಯಕ್ಕೆ ಭೇಟಿ ನೀಡಿದ್ದು, ಅಲ್ಲಿಂದ ನೇರಪ್ರಸಾರವಾಗುತ್ತಿರುವ ಕಾರ್ಯಕ್ರಮವನ್ನು ವೀಕ್ಷಿಸಲು ದೇವಸ್ಥಾನಕ್ಕೆ ತೆರಳಿದ್ದ ಹಲವಾರು ಬಿಜೆಪಿ ನಾಯಕರಿಗೆ ಹರಿಯಾಣ ರೈತರು ಪ್ರತಿಭಟನೆಯ ಬಿಸಿ ಮುಟ್ಟಿಸಿದ್ದಾರೆ.

ಮೂರು ವಿವಾದಾತ್ಮಕ ಕೃಷಿ ಕಾನೂನುಗಳ ವಿರುದ್ಧ ಸುಮಾರು ಒಂದು ವರ್ಷದಿಂದ ರೈತರು ಪ್ರತಿಭಟನೆ ನಡೆಸುತ್ತಿದ್ದು, ಅದರ ಭಾಗವಾಗಿ ಬಿಜೆಪಿ ನಾಯಕರಿಗೆ ಘೇರಾವ್ ಹಾಕಿರುವ ಘಟನೆ ಹರಿಯಾಣದಲ್ಲಿ ನಡೆದಿದೆ.

ಪ್ರತಿಭಟನಾಕಾರರು ನಿರ್ದಿಷ್ಟವಾಗಿ ಬಿಜೆಪಿ ನಾಯಕ ಮತ್ತು ಮಾಜಿ ಸಚಿವ ಮನೀಶ್ ಗ್ರೋವರ್ ಅವರ ನಡೆಯನ್ನು ಖಂಡಿಸಿದರು. ಮನೀಶ್‌ ಅವರು ರೈತರ ವಿರುದ್ಧ ಆಕ್ಷೇಪಾರ್ಹ ಭಾಷೆ ಬಳಸಿದ್ದಾರೆ ಎಂದು ರೈತರು ಆರೋಪಿಸಿದರು.

ಮಾಜಿ ಸಚಿವ ಮನೀಶ್ ಗ್ರೋವರ್

ಮಾಜಿ ಸಚಿವರು ಕ್ಷಮೆಯಾಚಿಸುವಂತೆ ಪ್ರತಿಭಟನಾಕಾರರು ಒತ್ತಾಯಿಸಿದ ಹಿನ್ನೆಲೆಯಲ್ಲಿ ಬಿಜೆಪಿ ಮುಖಂಡರು ಮತ್ತು ಇತರೆ ಪಕ್ಷದ ಸದಸ್ಯರು ಸುಮಾರು ಎಂಟು ಗಂಟೆಗಳ ಕಾಲ ದೇವಸ್ಥಾನದಲ್ಲಿ ಸಿಲುಕಿಕೊಳ್ಳಬೇಕಾಯಿತು.

ಅಂತಿಮವಾಗಿ, ಗ್ರೋವರ್ ಅವರು ಕೈ ಮಡಕಿ ರೈತರಲ್ಲಿ ಕ್ಷಮೆಯಾಚಿಸಿದರು. ನಂತರ ದೇವಸ್ಥಾನಕ್ಕೆ ಕೆಲವರು ತೆರಳಲು ಅನುಮತಿ ನೀಡಲಾಯಿತು ಎಂದು ರೈತರು ತಿಳಿಸಿದ್ದಾರೆ.

ಗುರಗಾಂವ್‌ನಿಂದ 78 ಕಿಮೀ ದೂರದಲ್ಲಿರುವ ರೋಹ್ಟಕ್ ಜಿಲ್ಲೆಯ ಕಿಲೋಯ್ ಗ್ರಾಮದ ದೇವಸ್ಥಾನದಲ್ಲಿ ನಡೆದ ಘಟನೆಯನ್ನು ನಿಯಂತ್ರಿಸಲು ಪೊಲೀಸರು ಹೆಚ್ಚಿನ ಸಂಖ್ಯೆಯಲ್ಲಿ ಧಾವಿಸಿದ್ದರು. ಇಬ್ಬರು ಪ್ರತಿಭಟನಾಕಾರರನ್ನು ಬಂಧಿಸಲಾಗಿದೆ. ದೆಹಲಿ-ಹಿಸಾರ್ ರಾಷ್ಟ್ರೀಯ ಹೆದ್ದಾರಿಯನ್ನು ಸ್ವಲ್ಪ ಹೊತ್ತು ಬಂದ್ ಮಾಡಲಾಗಿತ್ತು.

ಇದನ್ನೂ ಓದಿರಿ: ಜಾತಿ ತಾರತಮ್ಯ ಆರೋಪ: ದಲಿತ ವಿದ್ಯಾರ್ಥಿನಿಗೆ 10 ವರ್ಷ ಕಳೆದರೂ ಸಿಗದ ಪಿಎಚ್‌ಡಿ ಪದವಿ – ಉಪವಾಸ ಸತ್ಯಾಗ್ರಹ

ಮತ್ತೊಂದು ಘಟನೆ

ಬಿಜೆಪಿ ರಾಜ್ಯಸಭಾ ಸದಸ್ಯ ರಾಮ್ ಚಂದರ್ ಜಂಗ್ರಾ ಅವರು ಹರ್ಯಾಣದ ಹಿಸಾರ್ ಜಿಲ್ಲೆಯಲ್ಲಿ ಧರ್ಮಶಾಲಾ ಉದ್ಘಾಟಿಸಲು ತೆರಳಿದಾಗ ರೈತರು ಕಪ್ಪು ಭಾವುಟ ತೋರಿಸಿ ಪ್ರತಿಭಟನೆ ನಡೆಸಿದರು. ಪೊಲೀಸರು ಮತ್ತು ರೈತರ ನಡುವಿನ ಗಲಾಟೆಯಲ್ಲಿ ಜುಂಗ್ರಾ ಅವರ ಕಾರಿನ ಗಾಜು ಒಡೆದುಹೋಯಿತು.

ರೈತ ಚಳವಳಿಯನ್ನು ತಡೆಯಲು ಬಿಜೆಪಿ ನಾಯಕರು ಮೊದಲಿನಿಂದಲೂ ಯತ್ನಿಸುತ್ತಿದ್ದಾರೆ. ಸ್ವತಃ ಹರ್ಯಾಣ ಮುಖ್ಯಮಂತ್ರಿ ಮನೋಹರ್‌‌ಲಾಲ್‌‌ ಖಟ್ಟರ್‌ ಅವರು, ರೈತರ ಮೇಲೆ ಬಿಜೆಪಿ ಕಾರ್ಯಕರ್ತರು ದಾಳಿ ಮಾಡುವಂತೆ ಪ್ರಚೋದಿಸಿದ್ದು ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿತ್ತು. ಅದಕ್ಕೆ ವ್ಯಾಪಕ ಖಂಡನೆಯೂ ವ್ಯಕ್ತವಾಗಿತ್ತು.

ಖಟ್ಟರ್‌ ಹೇಳಿಕೆಯ ಬೆನ್ನಲ್ಲೇ ಉತ್ತರ ಪ್ರದೇಶದ ಲಖಿಂಪುರ್‌ ಖೇರಿಯಲ್ಲಿ ರೈತರ ಹತ್ಯೆಗೆ ದೇಶ ಸಾಕ್ಷಿಯಾಗಿತ್ತು. ಉತ್ತರ ಪ್ರದೇಶದ ಲಖಿಂಪುರ್‌ ಖೇರಿಯಲ್ಲಿ ಶಾಂತಿಯುತ ಪ್ರತಿಭಟನೆ ನಡೆಸಿ ಹಿಂತಿರುಗುತ್ತಿದ್ದ ರೈತರ ಮೇಲೆ ಕೇಂದ್ರ ಸಚಿವ ಅಜಯ್‌ ಮಿಶ್ರ ಅವರ ಪುತ್ರ ಆಶೀಶ್‌ ಮಿಶ್ರನಿದ್ದ ಕಾರು ಹರಿದು ರೈತರನ್ನು ಕೊಲ್ಲಲಾಯಿತು.


ಇದನ್ನೂ ಓದಿರಿ: ಉಪಚುನಾವಣೆ ಫಲಿತಾಂಶ ಬಿಜೆಪಿಗೆ ನೀಡಿದ ಉತ್ತರವಾಗಿದೆ: ಎಸ್‌ಕೆಎಂ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಫಾರೂಕ್ ಅಬ್ದುಲ್ಲಾರನ್ನು ಕೊಲ್ಲುವುದು ಸರ್ಕಾರದ ಉದ್ದೇಶವೇ?’..ರಾಜ್ಯ ಸಭೆಯಲ್ಲಿ ಖರ್ಗೆ ಪ್ರಶ್ನೆ

ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಹಾಗೂ ನ್ಯಾಷನಲ್ ಕಾನ್ಫರೆನ್ಸ್ (ಎನ್‌ಸಿ) ಪಕ್ಷದ ಮುಖ್ಯಸ್ಥ ಫಾರೂಕ್ ಅಬ್ದುಲ್ಲಾ ಅವರ ಹತ್ಯೆ ಯತ್ನ ವಿಚಾರವನ್ನು ವಿಪಕ್ಷ ಸದಸ್ಯರು ಗುರುವಾರ (ಮಾ.12) ರಾಜ್ಯಸಭೆಯಲ್ಲಿ ಪ್ರಸ್ತಾಪಿಸಿದರು. ಘಟನೆ ಬಗ್ಗೆ...

56 ಸಾವಿರ ಹುದ್ದೆಗಳ ನೇಮಕಾತಿಯಲ್ಲಿ ಒಳಮೀಸಲಾತಿ ಅನ್ವಯಕ್ಕೆ ಆಗ್ರಹಿಸಿ ಎಡಗೈ ಸಮುದಾಯದಿಂದ ಬೃಹತ್ ಪ್ರತಿಭಟನೆ 

ಸರ್ಕಾರವು ಒಳ ಮೀಸಲಾತಿಯನ್ನು ತಪ್ಪಿಸುವ ಹುನ್ನಾರದಿಂದ ತರಾತುರಿಯಲ್ಲಿ 56,432 ಹುದ್ದೆಗಳ ನೇಮಕಾತಿಗೆ ಆದೇಶ ಹೊರಡಿಸಿದೆ. ನೇಮಕಾತಿಯಲ್ಲಿ ಒಳಮೀಸಲಾತಿ ಅಳವಡಿಸದೆ, ಎಡಗೈ ಸಮುದಾಯಗಳಿಗೆ ಸರ್ಕಾರ ಮತ್ತೆ ವಂಚಿಸುತ್ತಿದೆ ಎಂದು ‘ಒಳಮೀಸಲಾತಿ ಹೋರಾಟ ಸಮಿತಿ’ ಆರೋಪಿಸಿದೆ....

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಬುಧವಾರ (ಮಾ.11) ಧ್ವನಿ ಮತದ ಮೂಲಕ ತಿರಸ್ಕಾರಗೊಂಡಿದೆ. ಸದನದಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲ ಮತ್ತು ಘೋಷಣೆಗಳ ನಡುವೆಯೇ ಸ್ಪೀಕರ್...

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...

ಮುಸ್ಲಿಂ ಮಹಿಳೆಯರ ವಿರುದ್ಧದ ಷರಿಯಾ ಕಾನೂನಿಗೆ ಏಕರೂಪ ನಾಗರಿಕ ಸಂಹಿತೆ ಪರಿಹಾರ: ಸುಪ್ರೀಂ ಕೋರ್ಟ್

"ಮುಸ್ಲಿಂ ವೈಯಕ್ತಿಕ ಕಾನೂನಿನಡಿಯಲ್ಲಿ ತಾರತಮ್ಯದ ಆನುವಂಶಿಕ ನಿಬಂಧನೆಗಳನ್ನು ಪರಿಹರಿಸಲು ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಅತ್ಯಂತ ಪರಿಣಾಮಕಾರಿ ಪರಿಹಾರ ಎಂದು ಸುಪ್ರೀಂ ಕೋರ್ಟ್ ಮಂಗಳವಾರ (ಮಾ.20) ಹೇಳಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ...

ಮುಂಬೈ: ಬಜೆಟ್ ಅಧಿವೇಶನದ ನಡುವೆ ವಿಧಾನ ಭವನದ ಬಳಿ ವ್ಯಕ್ತಿಯೊಬ್ಬನಿಂದ ಆತ್ಮಹತ್ಯೆಗೆ ಯತ್ನ: ವಶಕ್ಕೆ ಪಡೆದ ಪೊಲೀಸರು

ಮುಂಬೈ: ಮಾರ್ಚ್ 11, ಬುಧವಾರ ಮಹಾರಾಷ್ಟ್ರ ವಿಧಾನ ಭವನದ ಹೊರಗೆ ವ್ಯಕ್ತಿಯೊಬ್ಬರು ಆತ್ಮಾಹುತಿ ಮಾಡಿಕೊಳ್ಳಲು ಯತ್ನಿಸಿರುವುದಾಗಿ ವರದಿಯಾಗಿದೆ. ತಕ್ಷಣವೇ ಮುಂಬೈ ಪೊಲೀಸರು ಆತನನ್ನು ಬಂಧಿಸಿದ್ದಾರೆ.  2026 ರ ಮಹಾರಾಷ್ಟ್ರ ಬಜೆಟ್ ಅಧಿವೇಶನ ವಿಧಾನ ಭವನದಲ್ಲಿ...

ಕೋವಿಡ್ ಲಸಿಕೆ ಕೆಲ ಸಾವುಗಳಿಗೆ ಕಾರಣವಾಗಿದೆ ಎಂದು ಅಧಿಕೃತ ದತ್ತಾಂಶ ತೋರಿಸಿದೆ, ಸರ್ಕಾರ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್

ಸರ್ಕಾರದ ಅಧೀನದ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ಮೂಲಕ ಕೋವಿಡ್ ಲಸಿಕೆಯನ್ನು ವಿತರಿಸಲಾಗಿದೆ. ಕೋವಿಡ್ ಲಸಿಕೆ ಪಡೆದ ಬಳಿಕ ಕೆಲ ಸಾವುಗಳು ಸಂಭವಿಸಿರುವುದನ್ನು ಅಧಿಕೃತ ದತ್ತಾಂಶಗಳೇ ದೃಢಪಡಿಸಿವೆ. ಹೀಗಿರುವಾಗ, ಲಸಿಕೆ ಹಾಕಿಸಿಕೊಂಡ ನಂತರ ಸಾವು...