Homeಚಳವಳಿಹರಿಯಾಣ ಉಪ ಮುಖ್ಯಮಂತ್ರಿಯ ಹೆಲಿಕಾಪ್ಟರ್‌ ಇಳಿಯದಂತೆ ಘೆರಾವ್‌ ಹಾಕಿದ ರೈತರು

ಹರಿಯಾಣ ಉಪ ಮುಖ್ಯಮಂತ್ರಿಯ ಹೆಲಿಕಾಪ್ಟರ್‌ ಇಳಿಯದಂತೆ ಘೆರಾವ್‌ ಹಾಕಿದ ರೈತರು

ಬಿಜೆಪಿ ಮತ್ತು ಅದರ ಮೈತ್ರಿಪಕ್ಷಗಳ ನಾಯಕರ ಮೇಲೆ ಶಾಂತಿಯುತ ಬಹಿಷ್ಕಾರವನ್ನು ರೈತರು ಮುಂದುವರೆಸಿದ್ದಾರೆ.

- Advertisement -
- Advertisement -

ಕೇಂದ್ರದ ವಿರುದ್ದ ರೈತರು ನಡೆಸುತ್ತಿರುವ ಹೋರಾಟ ಬಲಗೊಳ್ಳುತ್ತಿದೆ. ಗುರುವಾರ ಹರಿಯಾಣದ ಉಪ ಮುಖ್ಯಮಂತ್ರಿ ದುಶ್ಯಂತ್ ಚೌಟಾಲಾ ಹೆಲಿಕಾಪ್ಟರ್‌ ಮೂಲಕ ಹಿಸಾರ್‌ ತಲುಪಿದ್ದು, ಅವರನ್ನು ಪ್ರತಿಭಟನಾ ನಿರತ ರೈತರು ಘೆರಾವ್ ಹಾಕಿದರು.

ಉಪ ಮುಖ್ಯಮಂತ್ರಿಯಿದ್ದ ಹೆಲಿಕಾಪ್ಟರ್‌ ಅನ್ನು ಹೋರಾಟಗಾರರು ಇಳಿಯಲು ಬಿಡದ ಕಾರಣ ಅದು ಬಂದ ದಾರಿಯಲ್ಲೇ ವಾಪಾಸ್ ಹೋದ ಘಟನೆ ನಡೆದಿದೆ.

ರಾಜಸ್ಥಾನದ ಹನುಮಾನ್‌ಗಡದ ಡಬ್ಲಿ ಟೋಲ್ ಪ್ಲಾಜಾದಲ್ಲಿ ಪಿಲಿಬಂಗನ್ ಶಾಸಕ ಧರ್ಮೇಂದ್ರ ಸಿಂಗ್ ಅವರನ್ನು ಪ್ರತಿಭಟನಾ ನಿರತ ರೈತರು ಘೆರಾವ್ ಹಾಕಿದರು. ಚುನಾವಣೆ ಸಮಯದಲ್ಲಿ ರೈತರು ಮತ್ತು ಜನರೊಂದಿಗೆ ಭಾರಿ ಸ್ನೇಹ ವ್ಯಕ್ತಪಡಿಸುತ್ತಾರೆ. ಹೋರಾಟ ನಡೆಸುತ್ತಿರುವಾಗ ರೈತರ ವಿರುದ್ದವೆ ನಿಲ್ಲುತ್ತಾರೆ ಎಂದು ರೈತರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ರೈತ ಹೋರಾಟ: ಸಿಂಘು ಗಡಿಯಲ್ಲಿ ನಡೆಯಲಿದೆ ಶೂಟಿಂಗ್ ಬಾಲ್ ಕಿಸಾನ್ ಪ್ರೀಮಿಯರ್ ಲೀಗ್!

ರೈತ ಸಂಘಟನೆಗಳು ಬಿಜೆಪಿಯ ಸಂಸದರು, ಅದರ ಮೈತ್ರಿಪಕ್ಷಳು ಹಾಗೂ ಇತರ ಚುನಾಯಿತ ಪ್ರತಿನಿಧಿಗಳಿಗೆ ರೈತರ ಪರವಾಗಿ ಬೆಂಬಲ ನೀಡುವಂತೆ ವಿನಂತಿಸುತ್ತಲೆ ಇವೆ. ಈ ಜನಪ್ರತಿನಿಧಿಗಳಿಗೆ ತಮ್ಮ ಹುದ್ದೆಗಳಿಗೆ ರಾಜೀನಾಮೆ ನೀಡುವ ಮೂಲಕ ಹಾಗೂ ಇತರ ಯಾವುದೇ ರೂಪದಲ್ಲಿ ಬೆಂಬಲ ನೀಡಬಹುದು ಎಂದು ಸಂಯುಕ್ತ ಕಿಸಾನ್ ಮೋರ್ಚಾ ಮನವಿ ಮಾಡಿದೆ.

ಏಪ್ರಿಲ್ 5 ರಂದು ‘ಭಾರತೀಯ ಆಹಾರ ನಿಗಮ’ ಉಳಿಸಿ ದಿನ

ಏಪ್ರಿಲ್ 5 ರಂದು ‘ಭಾರತೀಯ ಆಹಾರ ನಿಗಮ ಉಳಿಸಿ ದಿನ’(ಎಫ್‌ಸಿಐ) ಎಂದು ಆಚರಿಸಲಾಗುವುದು ಸಂಯುಕ್ತ ಕಿಸಾನ್ ಮೋರ್ಚಾ ಕರೆ ನೀಡಿದೆ. ಇದರ ಅಡಿಯಲ್ಲಿ ದೇಶಾದ್ಯಂತ ಎಫ್‌ಸಿಐ ಕಚೇರಿಗಳ ಮುಂದೆ ಬೆಳಿಗ್ಗೆ 11 ರಿಂದ ಸಂಜೆ 6 ರವರೆಗೆ ಘೆರಾವ್ ನಡೆಸಲಾಗುತ್ತದೆ.

ಈ ಹೋರಾಟದ ಮೂಲಕ ಎಲ್ಲಾ ಬೆಳೆಗಳನ್ನೂ ಖರೀದಿಸುವ ಖಾತರಿ ಇರಬೇಕು ಮತ್ತು ಪಡಿತರ ವ್ಯವಸ್ಥೆಯು ಪಾರದರ್ಶಕವಾಗಿ ಮತ್ತು ನಿಯಮಿತವಾಗಿ ಕಾರ್ಯನಿರ್ವಹಿಸಬೇಕು ಎಂದು ರೈತರು ಒತ್ತಾಯಿಸುತ್ತಾರೆ. ಇದು ಆಹಾರ ಬೆಳೆಗಾರರು ಮತ್ತು ಆಹಾರ ಸೇವಿಸುವವರ ಭವಿಷ್ಯದ ವಿಷಯವಾಗಿದ್ದು, ಆದ್ದರಿಂದ ಈ ಪ್ರತಿಭಟನೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ರೈತ ಸಂಘಟನೆಗಳು ರೈತರಿಗೆ ಮತ್ತು ಸಾರ್ವಜನಿಕರಿಗೆ ಮನವಿ ಮಾಡಿವೆ.

ಇದನ್ನೂ ಓದಿ: ಭಾರತ್ ಬಂದ್: ದೇಶಾದ್ಯಂತ ನಡೆದ ಪ್ರತಿಭಟನೆಯ ಝಲಕ್ ಇಲ್ಲಿದೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಾನಪದ ಕಲಾವಿದ ಡಿಂಗ್ರಿ ನರಸಪ್ಪ, ಬೆಂಗಳೂರಿನ ಚಂದ್ರಮ್ಮ ಸೇರಿದಂತೆ ಐದು ಜನರಿಗೆ ಬಾಬು ಜಗಜೀವನ್‌ ರಾಮ್‌ ಪ್ರಶಸ್ತಿ

ಹಿರಿಯ ಜಾನಪದ ಕಲಾವಿದ ಡಿಂಗ್ರಿ ನರಸಪ್ಪ, ಬೆಂಗಳೂರಿನ ಚಂದ್ರಮ್ಮ ಸೇರಿದಂತೆ ಐದು ಜನ ಹಿರಿಯ ಸಾಧಕರು 2026ನೇ ಸಾಲಿನ ಬಾಬು ಜಗಜೀವನ್‌ ರಾಮ್‌ ಪ್ರಶಸ್ತಿಗೆ ಭಾಜನರಾಗಿದ್ದಾರೆ. ರಾಯಚೂರು ಜಿಲ್ಲೆಯ ಹಿರಿಯ ದಲಿತ ಹೋರಾಟಗಾರ...

ಗಾಜಾ; ಗೊಂಬೆಯೊಂದಿಗೆ ‘ಅಂತ್ಯಕ್ರಿಯೆ’ ಆಟ ಆಡುವ ಎಳೆಯ ಮಕ್ಕಳ ವಿಡಿಯೋ ವೈರಲ್; ಸುತ್ತಲಿನ ಘಟನೆಯನ್ನು ಪುನರಾವರ್ತಿಸುವ ಮಕ್ಕಳು

ಅಕ್ಟೋಬರ್ 2023 ರಲ್ಲಿ ಇಸ್ರೇಲಿ ಮಿಲಿಟರಿ ದಾಳಿಯನ್ನು ಪ್ರಾರಂಭಿಸಿದ ನಂತರ ಗಾಜಾದಿಂದ ದುಃಖಕರ ದೃಶ್ಯಗಳು ಹೊರಹೊಮ್ಮುತ್ತಿವೆ. ಇತ್ತೀಚಿನ ಒಂದು ಘಟನೆಯಲ್ಲಿ, ಚಿಕ್ಕ ಮಕ್ಕಳು ಅಂತ್ಯಕ್ರಿಯೆಗಾಗಿ ಗೊಂಬೆಯನ್ನು ಹೊತ್ತುಕೊಂಡು ಹೋಗುವುದನ್ನು ಕಾಣಬಹುದು - ಇದು ಅವರು...

ದೆಹಲಿ| ಆಳವಾದ ಚರಂಡಿಗೆ ಬಿದ್ದು ನೈರ್ಮಲ್ಯ ಕಾರ್ಮಿಕ ಸಾವು; ನ್ಯಾಯಕ್ಕೆ ಆಗ್ರಹಿಸಿದ ಮೃತನ ಕುಟುಂಬ

ಮಾರ್ಚ್ 30 ರಂದು ಪೂರ್ವ ದೆಹಲಿಯ ದಿಲ್ಶಾದ್ ಗಾರ್ಡನ್ ಪ್ರದೇಶದಲ್ಲಿ ಸುರಕ್ಷತಾ ಸಾಧನಗಳಿಲ್ಲದೆ ಆಳವಾದ ಚರಂಡಿ ಸ್ವಚ್ಛಗೊಳಿಸುವ ಸಮಯದಲ್ಲಿ ಯುವ ನೈರ್ಮಲ್ಯ ಕಾರ್ಮಿಕ ರಾಹುಲ್ ಎಂಬುವವರು ಸಾವನ್ನಪ್ಪಿದ್ದಾರೆ. ಮಧ್ಯಾಹ್ನ 2:00 ರ ಸುಮಾರಿಗೆ...

ನಿವೃತ್ತ ನ್ಯಾಯಮೂರ್ತಿ ಸಂತೋಷ್‌ ಹೆಗ್ಡೆ ಆಸ್ಪತ್ರೆಗೆ ದಾಖಲು; ಕಾರ್ಯಕ್ರಮದಲ್ಲಿ ಏಕಾಏಕಿ ಕುಸಿದು ಬಿದ್ದು ಅಸ್ವಸ್ಥ

ಬೆಂಗಳೂರು: ಕರ್ನಾಟಕದ ನಿವೃತ್ತ ಲೋಕಾಯುಕ್ತ ಎನ್‌.ಸಂತೋಷ್‌ ಹೆಗ್ಡೆ ಅವರ ಆರೋಗ್ಯದಲ್ಲಿ ಏರುಪೇರು ಉಂಟಾಗಿದ್ದು, ಭಾಷಣದ ವೇಳೆ ಕುಸಿದು ಬಿದ್ದು ಅಸ್ವಸ್ಥರಾಗಿದ್ದ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಏಪ್ರಿಲ್ 4ರ, ಶುಕ್ರವಾರ ಬೆಂಗಳೂರಿನ ಕೊಂಡಜಿ ಬಸಪ್ಪ ಸಭಾಂಗಣದಲ್ಲಿ...

ಎಸ್‌ಎಸ್‌ಎಲ್‌ಸಿಯಲ್ಲಿ ತೃತೀಯ ಭಾಷೆಗೆ ಗ್ರೇಡ್: ನಿರ್ಧಾರ ಪರಿಶೀಲಿಸುವಂತೆ ರಾಜ್ಯ ಸರ್ಕಾರಕ್ಕೆ ಸೂಚಿಸಿದ ರಾಜ್ಯಪಾಲ ಗೆಹ್ಲೋಟ್ 

ಬೆಂಗಳೂರು: 10ನೇ ತರಗತಿ ಪರೀಕ್ಷೆಯಲ್ಲಿ ತೃತೀಯ ಭಾಷೆಯ ವಿಷಯಕ್ಕೆ ಅಂಕಗಳನ್ನು ಬದಲಿಸುವ ನಿರ್ಧಾರವನ್ನು ಮರುಪರಿಶೀಲಿಸುವಂತೆ ಕರ್ನಾಟಕ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ರಾಜ್ಯ ಸರ್ಕಾರವನ್ನು ಕೇಳಿದ್ದಾರೆ. ಸರ್ಕಾರವು ಈ ನಿರ್ಧಾರವನ್ನು "ಸಮಗ್ರವಾಗಿ ಪರಿಶೀಲಿಸಬೇಕು" ಎಂದು ಲೋಕಭವನವು...

ತಿರುಚ್ಚಿ ಪೂರ್ವದ ಪೆರಂಬೂರಿನಲ್ಲಿ ಟಿವಿಕೆ ಸಂಸ್ಥಾಪಕ ವಿಜಯ್ ಸಲ್ಲಿಸಿದ ಅಫಿಡವಿಟ್‌ಗಳಲ್ಲಿ ಹಲವು ವ್ಯತ್ಯಾಸಗಳಿರುವುದಾಗಿ ವರದಿ  

ಚೆನ್ನೈ: ನಟ ಮತ್ತು ಟಿವಿಕೆ ಸಂಸ್ಥಾಪಕ ವಿಜಯ್ ಸಲ್ಲಿಸಿದ ಎರಡು ಪ್ರತ್ಯೇಕ ಚುನಾವಣಾ ಅಫಿಡವಿಟ್‌ಗಳಲ್ಲಿ ವ್ಯತ್ಯಾಸಗಳು ಕಾಣಿಸಿಕೊಂಡಿದ್ದು, ವಿಧಾನಸಭಾ ಚುನಾವಣೆಗೆ ಮುನ್ನ ಕಾನೂನು ಮತ್ತು ರಾಜಕೀಯ ಪರಿಶೀಲನೆಗೆ ಅವಕಾಶ ನೀಡುವ ಸಾಧ್ಯತೆಯಿದೆ. ಪೆರಂಬೂರು ಮತ್ತು...

ಉತ್ತಮ್ ನಗರದಲ್ಲಿ ಶಾಂತಿ ಕಾಪಾಡುವಲ್ಲಿ ದೆಹಲಿ ಪೊಲೀಸರ ಪ್ರಯತ್ನಗಳನ್ನು ಶ್ಲಾಘಿಸಿದ ಎಪಿಸಿಆರ್

ಈದ್ ಅಲ್-ಫಿತರ್, ರಾಮ ನವಮಿ ಮತ್ತು ಹನುಮಾನ್ ಜಯಂತಿ ಸೇರಿದಂತೆ ಧಾರ್ಮಿಕ ಹಬ್ಬಗಳ ಆಚರಣೆಯ ಸಂದರ್ಭದಲ್ಲಿ ರಾಷ್ಟ್ರ ರಾಜಧಾನಿಯ ಉತ್ತಮ್ ನಗರ ಪ್ರದೇಶದಲ್ಲಿ ಶಾಂತಿ ಮತ್ತು ಭದ್ರತೆಯನ್ನು ಕಾಪಾಡಿದ್ದಕ್ಕಾಗಿ ನಾಗರಿಕ ಹಕ್ಕುಗಳ ರಕ್ಷಣಾ...

ದಲಿತ ಸಮುದಾಯಕ್ಕೆ ಕ್ಷಮೆಯಾಚಿಸಿದ ನೇಪಾಳದ ಹೊಸ ಸರ್ಕಾರ

ಪ್ರಧಾನಿ ಬಾಲೇಂದ್ರ ಶಾ ಅವರ ನೇಪಾಳದ ಹೊಸ ಸರ್ಕಾರದ 100 ಅಂಶಗಳ ಸುಧಾರಣಾ ಕಾರ್ಯಸೂಚಿಯಡಿಯಲ್ಲಿ, ಮುಂದಿನ 15 ದಿನಗಳ ಒಳಗೆ ದಲಿತರು ಮತ್ತು ಐತಿಹಾಸಿಕವಾಗಿ ಹೊರಗಿಡಲ್ಪಟ್ಟ ಇತರೆ ಸಮುದಾಯಗಳಿಗೆ 'ಔಪಚಾರಿಕ ಕ್ಷಮೆಯಾಚನೆ' ಕೇಳುವುದಾಗಿ...

‘ಯಾರು ಹೆದರುತ್ತಾನೋ ಅವನು ಸತ್ತಂತೆ’: ರಾಘವ್ ಛಡ್ಡಾಗೆ ತೀವ್ರವಾಗಿ ಪ್ರತಿಕ್ರಿಯೆ ನೀಡಿದ ಎಎಪಿ ನಾಯಕ ಸೌರಭ್ ಭಾರದ್ವಾಜ್ 

ಆಮ್ ಆದ್ಮಿ ಪಕ್ಷದ (ಎಎಪಿ) ನಾಯಕ ಮತ್ತು ದೆಹಲಿ ಘಟಕದ ಮುಖ್ಯಸ್ಥ ಸೌರಭ್ ಭಾರದ್ವಾಜ್ ಅವರು ವೀಡಿಯೊ ಸಂದೇಶದಲ್ಲಿ ಆಪ್ ಸಂಸದ ರಾಘವ್ ಛಡ್ಡಾ ಅವರು ಸಂಸತ್ತಿನಲ್ಲಿ "ಸಾಫ್ಟ್ ಪಿಆರ್" ನಲ್ಲಿ ತೊಡಗಿದ್ದಾರೆ...

ಚಂಡೀಗಢ ಬಿಜೆಪಿ ಕಚೇರಿ ಸ್ಫೋಟ: ಪಂಜಾಬ್ ಕೌಂಟರ್ ಇಂಟೆಲಿಜೆನ್ಸ್ ಪಡೆಯಿಂದ ಇಬ್ಬರು ಶಂಕಿತರ ಮನೆಗಳ ಮೇಲೆ ದಾಳಿ

ಚಂಡೀಗಢದಲ್ಲಿರುವ ಪಂಜಾಬ್ ಬಿಜೆಪಿ ಕಚೇರಿಯ ಹೊರಗೆ ಸ್ಫೋಟ ನಡೆಸಿದ ಆರೋಪದ ಮೇಲೆ ಇಬ್ಬರು ಶಂಕಿತರ ಮನೆಗಳ ಮೇಲೆ  ಪಂಜಾಬ್ ಪೊಲೀಸರ ಗುಪ್ತಚರ ನಿಗ್ರಹ ದಳವು ಇಂದು ಮುಂಜಾನೆ ದಾಳಿ ನಡೆಸಿದೆ.  ರೋಪರ್ ಜಿಲ್ಲೆಯ ಮೊರಿಂಡಾ ಪ್ರದೇಶದ...