Homeಕರ್ನಾಟಕ'ಗೃಹಲಕ್ಷ್ಮಿ' ಯೋಜನೆಗೆ ಇಂದು ಚಾಲನೆ: ಮನೆ ಯಜಮಾನಿಗೆ 2000ರೂ. ಗ್ಯಾರಂಟಿ

‘ಗೃಹಲಕ್ಷ್ಮಿ’ ಯೋಜನೆಗೆ ಇಂದು ಚಾಲನೆ: ಮನೆ ಯಜಮಾನಿಗೆ 2000ರೂ. ಗ್ಯಾರಂಟಿ

- Advertisement -
- Advertisement -

ರಾಜ್ಯ ಕಾಂಗ್ರೆಸ್ ಸರ್ಕಾರದ ಬಹುನೀರೀಕ್ಷಿತ ಗ್ಯಾರಂಟಿ ಎಂದರೆ ಮನೆ ಯಜಮಾನಿಗೆ 2 ಸಾವಿರ ರೂ. ನೀಡುವ ‘ಗೃಹಲಕ್ಷ್ಮಿ’ ಯೋಜನೆಯಾಗಿದೆ. ಇಂದು (ಬುಧವಾರ) ಈ ಯೋಜನೆಗೆ ಚಾಲನೆ ನೀಡಲಾಗುತ್ತಿದೆ. ಅದರೊಂದಿಗೆ ನಾಲ್ಕನೇ ಗ್ಯಾರಂಟಿ ಅನುಷ್ಠಾನವಾದಂತಾಗಲಿದೆ.

ಕಾಂಗ್ರೆಸ್ ಪಕ್ಷ ಚುನಾವಣೆಯ ಸಮಯದಲ್ಲಿ ಐದು ಗ್ಯಾರಂಟಿಗಳ ಆಶ್ವಾಸನೆ ನೀಡಿತ್ತು. ಅದರಲ್ಲಿ ಈಗಾಗಲೇ ಶಕ್ತಿ ಯೋಜನೆ ಜಾರಿಯಾಗಿದೆ. ಅನ್ನಭಾಗ್ಯ ಯೋಜನೆಯಲ್ಲಿ ಹೆಚ್ಚುವರಿ ಅಕ್ಕಿಯ ಬದಲು ಹಣ ಖಾತೆಗಳಿಗೆ ಜಮಾ ಆಗುತ್ತಿದೆ. ಗೃಹಜ್ಯೋತಿಯ ನೋಂದಣಿ ಒಂದು ಕೋಟಿ ದಾಟಿದೆ. ಇದೀಗ ಬುಧವಾರ ಗೃಹಲಕ್ಷ್ಮಿ ಜಾರಿಗೆ ಬರುತ್ತಿದೆ. ‘ಯುವನಿಧಿ’ಯೊಂದು ಮಾತ್ರ ತಡವಾಗಲಿದೆ. ವಿಧಾನಸೌಧದ ಬ್ಯಾಂಕ್ವೆಟ್ ಹಾಲ್​ನಲ್ಲಿ ಸಂಜೆ 5ಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಗೃಹಲಕ್ಷ್ಮೀ ಯೋಜನೆಗೆ ಚಾಲನೆ ನೀಡಲಿದ್ದಾರೆ.

ಈ ಕಾರ್ಯಕ್ರಮದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವತಿಯಿಂದ ಗೃಹಲಕ್ಷ್ಮಿ ಯೋಜನೆಯ ನೋಂದಣಿ ಪ್ರಕ್ರಿಯೆ ಕಾರ್ಯಕ್ರಮವನ್ನು ಬೆಂಗಳೂರಿನ ವಿಧಾನಸೌಧದ ಬ್ಯಾಂಕ್ವೆಟ್ ಹಾಲ್‌ನಲ್ಲಿ ಬುಧವಾರ ಸಂಜೆ 5 ಗಂಟೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಉದ್ಘಾಟಿಸಲಿದ್ದು, ಕೇಂದ್ರ ಸಚಿವರಾದ ನಿರ್ಮಲಾ ಸೀತಾರಾಮನ್‌, ರಾಜೀವ್ ಚಂದ್ರಶೇಖರ್, ಸ್ಪೀಕರ್ ಯು.ಟಿ.ಖಾದರ್, ಪರಿಷತ್ತಿನ ಸಭಾಪತಿ ಬಸವರಾಜ ಹೊರಟ್ಟಿ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಪಾಲ್ಗೊಳ್ಳಲಿದ್ದಾರೆ.

ಗೃಹಲಕ್ಷ್ಮಿ ಯೋಜನೆಗೆ ಬುಧವಾರ ನೋಂದಣಿ ಆರಂಭವಾಗುತ್ತದೆ. ಆ.15ಕ್ಕೆ ಫಲಾನುಭವಿಗಳ ಬ್ಯಾಂಕ್ ಖಾತೆಗೆ ಹಣ ಸಂದಾಯ ಆಗಲಿದೆ. ರೇಷನ್ ಕಾರ್ಡ್​ನಲ್ಲಿ ಮನೆಯ ಯಜಮಾನಿಯಾಗಿರುವವರು ಯೋಜನೆಯ ಫಲಾನುಭವಿಯಾಗಲಿದ್ದಾರೆ. ಅವರ ಬ್ಯಾಂಕ್ ಖಾತೆಗೆ ಆಧಾರ್ ಲಿಂಕ್ ಆಗಿರಬೇಕು. ಅವರ ಪತಿಯ ಆಧಾರ್ ಕಾರ್ಡ್ ನೀಡಬೇಕು. ಜಿಎಸ್​ಟಿ ಹಾಗೂ ಆದಾಯ ತೆರಿಗೆ ಪಾವತಿದಾರರ ಪತ್ನಿಯರಿಗೆ ಈ ಯೋಜನೆ ಅನ್ವಯವಾಗುವುದಿಲ್ಲ. ಬೆಂಗಳೂರು ಒನ್, ಕರ್ನಾಟಕ ಒನ್, ಗ್ರಾಮ ಒನ್, ಗ್ರಾಪಂಗಳಲ್ಲಿರುವ ಬಾಪೂಜಿ ಸೇವಾ ಕೇಂದ್ರಗಳಲ್ಲಿ ನೋಂದಣಿಗೆ ಅವಕಾಶ ಇದೆ. ಸರ್ಕಾರ ನೇಮಕ ಮಾಡಿರುವ ಪ್ರಜಾಪ್ರತಿನಿಧಿಗಳು ಮನೆ ಬಾಗಿಲಿಗೆ ಬಂದು ನೋಂದಣಿ ಮಾಡಲಿದ್ದಾರೆ. ಯೋಜನೆ ಜಾರಿಗೆ ಸಂಬಂಧಿಸಿದಂತೆ ಜಿಲ್ಲಾಧಿಕಾರಿಗಳ ಜತೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ವಿಡಿಯೋ ಸಂವಾದ ನಡೆಸಿ ಕೆಲ ಸೂಚನೆ ನೀಡಿದ್ದಾರೆ.

ನಕಲಿ ಅರ್ಜಿಗಳ ಬಗ್ಗೆ ಎಚ್ಚರ:

ಗೃಹಲಕ್ಷ್ಮಿ ಯೋಜನೆಗೆ ಸಂಬಂಧಪಟ್ಟಂತೆ ಸಾಮಾಜಿಕ ಜಾಲತಾಣಗಳಲ್ಲಿ ನಕಲಿ ಅರ್ಜಿ ಹರಿದಾಡುತ್ತಿದ್ದು, ಸಾರ್ವಜನಿಕರು ಎಚ್ಚರಿಕೆಯಿಂದ ಇರಬೇಕು. ಯೋಜನೆಗೆ ಸಂಬಂಧಪಟ್ಟಂತೆ ಈವರೆಗೆ ಯಾವುದೇ ಅರ್ಜಿ ನಮೂನೆಗಳನ್ನು ಬಿಡುಗಡೆ ಮಾಡಿಲ್ಲ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಸ್ಪಷ್ಟಪಡಿಸಿದ್ದಾರೆ. ಬೆಂಗಳೂರು ಓನ್, ಕರ್ನಾಟಕ ಒನ್, ಗ್ರಾಮ ಓನ್, ಬಾಪೂಜಿ ಸೇವಾ ಕೇಂದ್ರಗಳಲ್ಲಿ, ಪ್ರಜಾಪ್ರತಿನಿಧಿಗಳ ಬಳಿ ಮಾತ್ರ ನೋಂದಾಯಿಸಿಕೊಳ್ಳಬೇಕು ಎಂದು ಸಚಿವರು ತಿಳಿಸಿದ್ದಾರೆ.

ನೋಂದಾಯಿಸುವುದು ಹೇಗೆ?

ರೇಷನ್ ಕಾರ್ಡ್​ನಲ್ಲಿ ಗುರುತಿಸಿರುವ ಮಹಿಳೆ ಮೊಬೈಲ್ ಸಂಖ್ಯೆಗೆನೋಂದಣಿ ದಿನಾಂಕ, ಸಮಯ, ಸ್ಥಳದ ವಿವರ ಎಸ್​ಎಂಎಸ್ ಮೂಲಕ ಕಳುಹಿಸಲಾಗುತ್ತದೆ.

ನೋಂದಣಿ ಮಾಡಿಸಲು ಯಾವುದೇ ರೀತಿಯ ಶುಲ್ಕ ಇರುವುದಿಲ್ಲ.

ಪ್ರಜಾಪ್ರತಿನಿಧಿಗಳು ಮನೆ ಬಾಗಿಲಿಗೆ ತೆರಳಿ ನೋಂದಣಿ ಮಾಡಲಿದ್ದಾರೆ.

ಸಮಸ್ಯೆಗಳಿದ್ದಲ್ಲಿ 1902ಗೆ ಕರೆ ಮಾಡಿ ಅಥವಾ 8147500500 ಸಂಖ್ಯೆಗೆ ಎಸ್​ಎಂಎಸ್ ಮಾಡಿ ಮಾಹಿತಿ ಪಡೆಯಬಹುದು.

ನಿಗದಿತ ಸಮಯಕ್ಕೆ ಹೋಗಲು ಸಾಧ್ಯವಾಗದಿದ್ದರೆ ಮುಂದಿನ ಯಾವುದೇ ದಿನಾಂಕದಂದು ಸಂಜೆ 5 -7 ಗಂಟೆಯೊಳಗೆ ಭೇಟಿ ನೀಡಿ.

ಆಧಾರ್ ಜೋಡಣೆಯಾಗಿರುವ ಬ್ಯಾಂಕ್ ಬಿಟ್ಟು ಬೇರೆ ಬ್ಯಾಂಕ್​ಗೆ ನೋಂದಣಿ ಮಾಡಿಸಬಹುದು.
ನೋಂದಣಿ ಆದಾಗ ಮಂಜೂರಾತಿ ಪತ್ರ ನೀಡಲಾಗುತ್ತದೆ.

ಪ್ರಜಾಪ್ರತಿನಿಧಿಗಳಲ್ಲಿ ನೋಂದಣಿ ಯಾದರೆ ಮಂಜೂರಾತಿ ಪತ್ರ ತಡವಾಗಿ ತಲುಪಲಿದೆ.

ಡಿಸಿಗಳಿಗೆ ಸೂಚನೆ

* ಗೃಹಲಕ್ಷ್ಮಿ ನೋಂದಣಿ ಮಾಡುವ ಕೇಂದ್ರಗಳ ಮೇಲ್ವಿಚಾರಣೆಗೆ ಸರ್ಕಾರಿ ಅಧಿಕಾರಿ/ಸಿಬ್ಬಂದಿ ನಿಯೋಜನೆ.

* ಕೇಂದ್ರಗಳಲ್ಲಿ ಜನದಟ್ಟಣೆ ನಿಯಂತ್ರಣಕ್ಕೆ ಪೊಲೀಸರ ನೇಮಕ.

* ವಿದ್ಯುತ್ ಕೈಕೊಟ್ಟರೆ ನೋಂದಣಿಗೆ ತೊಂದರೆಯಾಗದಂತೆ ಬ್ಯಾಟರಿ ಬ್ಯಾಕ್​ಅಪ್ ಹಾಗೂ ಸುಸ್ಥಿತಿಯಲ್ಲಿರುವ ಪ್ರಿಂಟರ್ ನೀಡುವುದು.

* ಪ್ರತಿ ತಾಲೂಕಿನಲ್ಲಿ ಹೆಲ್ಪ್​ಡೆಸ್ಕ್ ಸ್ಥಾಪನೆ.

* ಜಿಲ್ಲಾ ಉಸ್ತುವಾರಿ ಸಚಿವರಿಂದ ಪ್ರಜಾಪ್ರತಿನಿಧಿಗಳ ಪಟ್ಟಿ ಪಡೆದು ನೋಂದಣಿ ಮಾಡಿಸಿ ತರಬೇತಿ ನೀಡಬೇಕು.

* ನೋಂದಣಿ ಕೇಂದ್ರದಲ್ಲಿ ಮಳೆಯಿಂದ ರಕ್ಷಿಸಲು ಸೂಕ್ತ ರಕ್ಷಣೆ.

* ನೋಡಲ್ ಅಧಿಕಾರಿಗಳ ವಿವರಗಳನ್ನು ಇ-ಆಡಳಿತ ಇಲಾಖೆಯ ಲಿಂಕ್​ನಲ್ಲಿ ಅಪ್​ಲೋಡ್ ಮಾಡುವುದು.

ಇದನ್ನೂ ಓದಿ: 1.28 ಕೋಟಿ ಕುಟುಂಬಗಳಿಗೆ ಹಣ: ಜುಲೈ 19 ರಿಂದ ಗೃಹಲಕ್ಷ್ಮಿ ಯೋಜನೆಗೆ ನೋಂದಣಿ ಆರಂಭ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...