Homeಮುಖಪುಟಮೇಲ್ಜಾತಿ ಹುಡುಗಿಗೆ ಮೊಬೈಲ್‌ ನೀಡಿದ್ದಕ್ಕೆ ದಲಿತ ಯುವಕರ ತಲೆ ಬೋಳಿಸಿ, ಎಂಜಲು ತಿನ್ನಿಸಿದ ಅಮಾವೀಯ ಘಟನೆ

ಮೇಲ್ಜಾತಿ ಹುಡುಗಿಗೆ ಮೊಬೈಲ್‌ ನೀಡಿದ್ದಕ್ಕೆ ದಲಿತ ಯುವಕರ ತಲೆ ಬೋಳಿಸಿ, ಎಂಜಲು ತಿನ್ನಿಸಿದ ಅಮಾವೀಯ ಘಟನೆ

ಯುವತಿಯ ತಂದೆ ದಲಿತ ಯುವಕನ ಕುಟುಂಬಕ್ಕೆ ಘಟನೆ ಕುರಿತು ಪೊಲೀಸರಿಗೆ ದೂರು ನೀಡದಂತೆ ಬೆದರಿಕೆಯನ್ನು ಸಹ ಹಾಕಿದ್ದಾನೆ.

- Advertisement -
- Advertisement -

ಮೇಲ್ಜಾತಿಯ ಯುವತಿಗೆ ಮೊಬೈಲ್‌ ಉಡುಗೊರೆ ನೀಡಿದ್ದಕ್ಕೆ ದಲಿತ ಯುವಕರ ತಲೆ ಬೊಳಿಸಿ, ಚಪ್ಪಲಿ ಹಾರ ಹಾಕಿ, ಎಂಜಲು ತಿನ್ನಿಸಿದ ಅಮಾನವೀಯ ಘಟನೆ ಮಧ್ಯಪ್ರದೇಶದ ಜಬಲ್‌ಪುರ ಜಿಲ್ಲೆಯಲ್ಲಿ ನಡೆದಿದೆ. ಜಾತಿ ದೌರ್ಜನ್ಯಕ್ಕೆ ಒಳಗಾದ ಯುವಕನನ್ನು 20 ವರ್ಷ ವಯಸ್ಸಿನ ರಾಜಕುಮಾರ್‌ ಮೆಹ್ರಾ ಎಂದು ಗುರುತಿಸಲಾಗಿದೆ.

ರಾಜ್‌ಕುಮಾರ್‌ ಮೆಹ್ರಾ ಮೇಲ್ಜಾತಿಗೆ ಸೇರಿದ 19 ವರ್ಷದ ಯುವತಿಯನ್ನು ಪ್ರೀತಿಸುತ್ತಿದ್ದ. ಯುವತಿ ರಾಜ್‌ಕುಮಾರ್‌ ಮೆಹ್ರಾ ಬಳಿ ಸ್ಮಾರ್ಟ್‌ ಫೋನ್‌ ಕೊಡಿಸುವಂತೆ ಕೇಳಿದ್ದಾಳೆ. ಸಂತ್ರಸ್ತ ರಾಜ್‌ಕುಮಾರ್‌ ಮೊಬೈಲ್‌ ಫೋನ್‌ ಅನ್ನು ಉಡುಗೊರೆಯಾಗಿ ನೀಡಿದ್ದಕ್ಕೆ ಮೇಲ್ಜಾತಿ ಜನರು ದೌರ್ಜನ್ಯವೆಸಗಿದ್ದಾರೆ. ಘಟನೆಯಲ್ಲಿ ದೌರ್ಜನ್ಯಕ್ಕೆ ಒಳಗಾದ ವ್ಯಕ್ತಿಯೊಬ್ಬನನ್ನು ಆರೋಪಿಗಳು ಮನೆಯಲ್ಲಿ ಬಂಧಿಸಿಟ್ಟಿದ್ದಾರೆ.

ಮೇಲ್ಜಾತಿಯ ಯುವತಿಯನ್ನು ಪ್ರೀತಿಸಿದ ಕಾರಣಕ್ಕೆ ದಲಿತ ಯುವಕ ರಾಜ್‌ಕುಮಾರ್‌ ಮೆಹ್ರಾ ಮತ್ತು ಆತನ ಸ್ನೇಹಿತರ ತಲೆ ಬೋಳಿಸಿ ಒಬ್ಬರ ಎಂಜಲು ಇನ್ನೊಬ್ಬರು ಸೇವಿಸುವಂತೆ ಮಾಡಿರುವ ಅಮಾನವೀಯ ದೌರ್ಜನ್ಯ ಮಧ್ಯಪ್ರದೇಶದ ಜಬಲ್‌ಪುರ ಜಿಲ್ಲೆಯಲ್ಲಿ ನಡೆದಿದೆ. ಮೇಲ್ಜಾತಿಯ ಯುವಕರು ದಲಿತ ಯುವಕರಿಗೆ ಚಪ್ಪಲ್ಲಿಯ ಹಾರಹಾಕಿ ಹಳ್ಳಿಯಲ್ಲಿ ಮೆರವಣಿಗೆಯನ್ನು ಮಾಡುವ ಮೂಲಕ ಅಮಾನುಷ ದೌರ್ಜನ್ಯ ಎಸಗಿದ್ದಾರೆ.

ಘಟನೆ ಮೇ 22 ರಂದು ಜಬಲ್‌ಪುರ ಜಿಲ್ಲೆಯ ಚಾರ್‌ಗಾವ್‌ ಪೋಲಿಸ್‌ ಸ್ಟೇಷನ್‌ ವ್ಯಾಪ್ತಿಯ ದಮನ್‌ ಕಮರಿಯಾ ಹಳ್ಳಿಯಲ್ಲಿ ನಡೆದಿದೆ. ಅಮಾನವೀಯ ದೌರ್ಜನ್ಯದ ವಿಡಿಯೋ ಮೇ 30ರ ಭಾನುವಾರ ಸಂಜೆ ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿದೆ. ವಿಡಿಯೋ ಆಧಾರದಲ್ಲಿ ಪೊಲೀಸರು ದೌರ್ಜನ್ಯಕ್ಕೊಳಗಾದ ವ್ಯಕ್ತಿಯನ್ನು ಪತ್ತೆಹಚ್ಚಿದ್ದಾರೆ. ಆರೋಪಿಗಳು ದೂರು ನೀಡಿದರೆ ಗಂಭೀರ ಪರಿಣಾಮ ಎದುರಿಸುವ ಬೆದರಿಕೆ ಹಾಕಿದ್ದರಿಂದ ತಾನು ಪೊಲೀಸರಿಗೆ ಘಟನೆ ಕುರಿತು ಮಾಹಿತಿ ನೀಡಲಿಲ್ಲ ಎಂದು ಸಂತ್ರಸ್ತ ಯುವಕ ರಾಜ್‌ಕುಮಾರ್‌ ಮೆಹ್ರಾ ಪೊಲೀಸರಿಗೆ ಮಾಹಿತಿ ನೀಡಿದ್ದಾನೆ. ರಾಜ್‌ಕುಮಾರ್‌ ಹೇಳಿಕೆ ಆಧಾರಿಸಿ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.

ನಾವಿಬ್ಬರೂ ಮಾತನಾಡುವುದಕ್ಕಾಗಿ ನನ್ನ ಸ್ನೇಹಿತೆ ಮೊಬೈಲ್‌ ಕೇಳಿದಳು. ನಾನು ಸ್ನೇಹಿತ ಮಹೇಂದ್ರನಿಂದ ಪೋನ್‌ ಪಡೆದು ನನ್ನ ಗೆಳತಿಗೆ ನೀಡಿದೆ. ಮೇ 22 ರಂದು ಯುವತಿಯ ತಂದೆ ತನ್ನ ಮಗಳು ಮೊಬೈಲ್‌ ಸಂಭಾಷಣೆಯಲ್ಲಿ ನಿರತವಾಗಿರುವುದನ್ನು ಕಂಡು ಕೆಂಡಾಮಂಡಲರಾಗಿದ್ದಾರೆ. ಈ ಕುರಿತು ಯುವತಿಯನ್ನು ವಿಚಾರಿಸಿದಾಗ ರಾಜ್‌ಕುಮಾರ್‌ ಮೆಹ್ರಾ ವಿಚಾರ ಅವರಿಗೆ ತಿಳಿದಿದೆ.

ಮೊಬೈಲ್‌ ಘಟನೆಯಿಂದ ಕೋಪಗೊಂಡ ಯುವತಿಯ ತಂದೆ ದಲಿತ ಯುವಕರನ್ನು ಮನೆಗೆ ಕರೆಸಿ ಮನಸೋ ಇಚ್ಚೆ ಥಳಿಸಿದ್ದಾರೆ. ನಂತರ ಯುವಕರ ತಲೆ ಬೋಳಿಸಿ ಚಪ್ಪಲ್ಲಿ ಹಾರ ಹಾಕಿ ಊರಿನಲ್ಲಿ ಮೆರವಣಿಗೆ ಮಾಡಿದ್ದಾರೆ. ಒಬ್ಬರ ಕಫವನ್ನು ಇನ್ನೊಬ್ಬರಿಗೆ ತಿನ್ನಿಸಿ ಅಮಾನವೀಯವಾದ ದೌರ್ಜನ್ಯವನ್ನು ನಡೆಸಿದ್ದಾರೆ.

ಯುವತಿಯ ತಂದೆ ದಲಿತ ಯುವಕನ ಕುಟುಂಬಕ್ಕೆ ಘಟನೆ ಕುರಿತು ಪೊಲೀಸರಿಗೆ ದೂರು ನೀಡದಂತೆ ಬೆದರಿಕೆಯನ್ನು ಸಹ ಹಾಕಿದ್ದಾನೆ.

ಅಮಾನವೀಯ ಘಟನೆ ಸಂಬಂಧ ಯುವತಿಯ ತಂದೆ ಸೇರಿ ನಾಲ್ವರ ವಿರುದ್ಧ ಪ್ರಕರಣ ದಾಖಲಿಸಿ ಆರೋಪಿಗಳನ್ನು ಬಂಧಿಸಿರುವುದಾಗಿ ಚಾರ್‌ಗಾವ್‌ ಠಾಣೆಯ ಪೊಲೀಸ್‌ ಇನ್ಸ್‌ಪೆಕ್ಟರ್‌ ರಿತೇಶ್‌ ಪಾಂಡೆ ತಿಳಿಸಿದ್ದಾರೆ.


ಇದನ್ನೂ ಓದಿ: ದಲಿತರ ಮೇಲಿನ ದೌರ್ಜನ್ಯ, ಮಹಿಳೆಯರ ಮೇಲಿನ ಅತ್ಯಾಚಾರಗಳನ್ನು ತಡೆಗಟ್ಟಿ: ರಾಜ್ಯಾದ್ಯಂತ ಹಕ್ಕೊತ್ತಾಯ ಸಲ್ಲಿಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...

ಕೊಲ್ಕತ್ತಾದ 26 ಲಕ್ಷ ಮತದಾರರ ಹೆಸರು 2002 ರ ಪಟ್ಟಿಗೆ ಹೊಂದಿಕೆಯಾಗುತ್ತಿಲ್ಲ: ಮುಖ್ಯ ಚುನಾವಣಾ ಅಧಿಕಾರಿ

ಕೋಲ್ಕತ್ತಾ ಮತ್ತು ಸುತ್ತಮುತ್ತಲಿನ ಹಲವಾರು ವಿಧಾನಸಭಾ ಕ್ಷೇತ್ರಗಳ ಮತದಾರರ ಹೆಸರುಗಳು 2002 ರ ಮತದಾರರ ಪಟ್ಟಿಯಲ್ಲಿರುವ ನಮೂದುಗಳಿಗೆ ಹೊಂದಿಕೆಯಾಗುತ್ತಿಲ್ಲ ಎಂದು ಮುಖ್ಯ ಚುನಾವಣಾ ಅಧಿಕಾರಿ ಮನೋಜ್ ಕುಮಾರ್ ಅಗರ್ವಾಲ್ ಕಚೇರಿಯ ಅಧಿಕಾರಿಗಳು ತಿಳಿಸಿದ್ದಾರೆ...

ಮೊದಲ ಪತ್ನಿಗೆ ಮುಸ್ಲಿಂ ಪತಿ ಜೀವನಾಂಶ ನಿರಾಕರಿಸುವಂತಿಲ್ಲ: ಕೇರಳ ಹೈಕೋರ್ಟ್

ಎರಡನೇ ಪತ್ನಿಯ ಮೇಲಿನ ಆರ್ಥಿಕ ಜವಾಬ್ದಾರಿ ಕುರಿತ ಮಹತ್ವದ ತೀರ್ಪಿನಲ್ಲಿ, ಮುಸ್ಲಿಂ ಪುರುಷನು ತನ್ನ ಮೊದಲ ಪತ್ನಿಗೆ ಜೀವನಾಂಶ ಪಾವತಿಸುವುದನ್ನು ತಪ್ಪಿಸಲು ಸಾಧ್ಯವಿಲ್ಲ ಎಂದು ಕೇರಳ ಹೈಕೋರ್ಟ್ ಹೇಳಿದೆ. ಎಲ್ಲ ಪತ್ನಿಯರನ್ನು ಸಮಾನವಾಗಿ...

ಆಸ್ಪತ್ರೆಗಳು ಕಡ್ಡಾಯವಾಗಿ ದರಪಟ್ಟಿ ಪ್ರದರ್ಶಿಸಬೇಕು, ಹಣ ಪಾವತಿಸದ ಕಾರಣ ತುರ್ತು ಆರೈಕೆ ನಿರಾಕರಿಸುವಂತಿಲ್ಲ : ಕಾನೂನು ಎತ್ತಿ ಹಿಡಿದ ಹೈಕೋರ್ಟ್

ಕೇರಳ ವೈದ್ಯಕೀಯ ಸಂಸ್ಥೆಗಳ ಕಾಯ್ದೆ ಮತ್ತು ನಿಬಂಧನೆಗಳನ್ನು ಎತ್ತಿಹಿಡಿದ ಹೈಕೋರ್ಟ್‌ನ ಏಕ ಸದಸ್ಯ ಪೀಠದ ಆದೇಶದ ವಿರುದ್ಧ ಭಾರತೀಯ ವೈದ್ಯಕೀಯ ಸಂಘ (ಐಎಂಎ) ಮತ್ತು ಕೇರಳ ಖಾಸಗಿ ಆಸ್ಪತ್ರೆಗಳ ಸಂಘ ಸಲ್ಲಿಸಿದ್ದ ಮೇಲ್ಮನವಿಗಳನ್ನು...

ಎಸ್‌ಐಆರ್‌ನ ನಿಜವಾದ ಉದ್ದೇಶ ಎನ್‌ಆರ್‌ಸಿ : ಮಮತಾ ಬ್ಯಾನರ್ಜಿ

ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯ (ಎಸ್‌ಐಆರ್‌) ಹಿಂದಿನ ಕೇಂದ್ರ ಸರ್ಕಾರದ ನಿಜವಾದ ಉದ್ದೇಶ ರಾಷ್ಟ್ರೀಯ ನಾಗರಿಕರ ನೋಂದಣಿ (ಎನ್‌ಆರ್‌ಸಿ) ಮಾಡುವುದು ಎಂದು ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಬುಧವಾರ (ನವೆಂಬರ್...

ಬೆಂಗಳೂರು ಚಲೋ: ಪ್ರತಿಭಟನೆ ತೀವ್ರಗೊಳ್ಳುತ್ತಿದ್ದಂತೆ ಸ್ಥಳಕ್ಕೆ ದೌಡಾಯಿಸಿದ ಸಚಿವ ಮಹದೇವಪ್ಪ: ಸಿಎಂ ಜೊತೆ ಚರ್ಚಿಸುವ ಭರವಸೆ 

ಕೇಂದ್ರ ಸರ್ಕಾರದ ರೈತ, ಕಾರ್ಮಿಕ, ಜನವಿರೋಧಿ ನೀತಿಗಳು ಹಾಗೂ ರಾಜ್ಯ ಸರ್ಕಾರದ ನಿರ್ಲಕ್ಷ್ಯ, ನಿರ್ಲಜ್ಜ ಧೋರಣೆಯ ವಿರುದ್ಧ ಸಂಯುಕ್ತ ಹೋರಾಟ ಕರ್ನಾಟಕದ ನೇತೃತ್ವದಲ್ಲಿ ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ನಡೆಯುತ್ತಿರುವ ‘ಬೆಂಗಳೂರು ಚಲೋ’...

ಛತ್ತೀಸ್‌ಗಢ : ಬಿಜಾಪುರದಲ್ಲಿ 41 ಮಾವೋವಾದಿಗಳು ಶರಣಾಗತಿ

ಛತ್ತೀಸ್‌ಗಢದ ಬಿಜಾಪುರ ಜಿಲ್ಲೆಯಲ್ಲಿ ಬುಧವಾರ (ನವೆಂಬರ್ 26) 41 ಮಂದಿ ನಕ್ಸಲರು ಶರಣಾಗಿದ್ದು, ಈ ಪೈಕಿ 32 ಮಂದಿಯ ತಲೆಗೆ ಒಟ್ಟು 1.19 ಕೋಟಿ ರೂಪಾಯಿ ಬಹುಮಾನ ಘೋಷಣೆಯಾಗಿತ್ತು ಎಂದು ವರದಿಯಾಗಿದೆ. ಸರ್ಕಾರದ ಹೊಸ...

ಬೆಂಗಳೂರು ಚಲೋ: ಧರಣಿ ಸ್ಥಳಕ್ಕೆ ಬಾರದ ಸಚಿವರು, ಕೋಪಗೊಂಡು ರಸ್ತೆಗಿಳಿದ ಪ್ರತಿಭಟನಾಕಾರರು

ಕೇಂದ್ರ ಸರ್ಕಾರದ ರೈತ, ಕಾರ್ಮಿಕ, ಜನವಿರೋಧಿ ನೀತಿಗಳು ಹಾಗೂ ರಾಜ್ಯ ಸರ್ಕಾರದ ನಿರ್ಲಕ್ಷ್ಯ, ನಿರ್ಲಜ್ಜ ಧೋರಣೆಯ ವಿರುದ್ಧ ಸಂಯುಕ್ತ ಹೋರಾಟ ಕರ್ನಾಟಕದ ನೇತೃತ್ವದಲ್ಲಿ ಬೃಹತ್ 'ಬೆಂಗಳೂರು ಚಲೋ' ಬುಧವಾರ (ನವೆಂಬರ್ 26) ಫ್ರೀಡಂ...

ಹಿಂಸಾಚಾರಕ್ಕೆ ತಿರುಗಿದ ವಿದ್ಯಾರ್ಥಿಗಳ ಪ್ರತಿಭಟನೆ: ವಿಐಟಿ ಭೋಪಾಲ್ ವಿವಿ ಕ್ಯಾಂಪಸ್ ಧ್ವಂಸ, ವಾಹನಗಳಿಗೆ ಬೆಂಕಿ

ಇಂದೋರ್-ಭೋಪಾಲ್ ಹೆದ್ದಾರಿಯಲ್ಲಿರುವ ಸೆಹೋರ್ ಜಿಲ್ಲೆಯ ವಿಐಟಿ ವಿಶ್ವವಿದ್ಯಾಲಯದಲ್ಲಿ ಮಂಗಳವಾರ ತಡರಾತ್ರಿ ನಡೆದ ಪ್ರತಿಭಟನೆ ದೊಡ್ಡ ಪ್ರಮಾಣದ ಹಿಂಸಾಚಾರಕ್ಕೆ ತಿರುಗಿದ್ದು, ಕೋಪಗೊಂಡ ವಿದ್ಯಾರ್ಥಿಗಳು ಹಲವಾರು ವಾಹನಗಳಿಗೆ ಬೆಂಕಿ ಹಚ್ಚಿ ಕ್ಯಾಂಪಸ್ ಆಸ್ತಿಗೆ ಹಾನಿ ಮಾಡಿದ್ದಾರೆ...