Homeಕರ್ನಾಟಕಗಿಗ್ ಕಾರ್ಮಿಕರ ಕಲ್ಯಾಣ ಮಂಡಳಿ ಸ್ಥಾಪಿಸಲು ನಿರ್ಧರಿಸಿದ ಸಿದ್ದರಾಮಯ್ಯ ಸರ್ಕಾರ

ಗಿಗ್ ಕಾರ್ಮಿಕರ ಕಲ್ಯಾಣ ಮಂಡಳಿ ಸ್ಥಾಪಿಸಲು ನಿರ್ಧರಿಸಿದ ಸಿದ್ದರಾಮಯ್ಯ ಸರ್ಕಾರ

- Advertisement -
- Advertisement -

ರಾಜ್ಯದ ಕಾಂಗ್ರೆಸ್ ಸರ್ಕಾರ ಗಿಗ್ ಕಾರ್ಮಿಕರ ಕಲ್ಯಾಣ ಮಂಡಳಿ ಸ್ಥಾಪಿಸಲು ತೀರ್ಮಾನಿಸಿದ್ದು, ಈ ಬಗ್ಗೆ ವಿಪಕ್ಷ ನಾಯಕ ರಾಹುಲ್ ಗಾಂಧಿ ಜೊತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಚರ್ಚೆ ನಡೆಸಿದ್ದಾರೆ. ಸಭೆಯಲ್ಲಿ ಸಚಿವರಾದ ಸಚಿವರಾದ ಸಂತೋಷ್ ಲಾಡ್, ಪ್ರಿಯಾಂಕ್ ಖರ್ಗೆ ಮತ್ತು ಎಂ.ಬಿ. ಪಾಟೀಲ್ ಅವರು ಭಾಗಿಯಾಗಿದ್ದರು ಎಂದು ವರದಿಯಾಗಿದೆ.

ಅಮೆಜಾನ್, ಫ್ಲಿಪ್ ಕಾರ್ಟ್ ಸೇರಿದಂತೆ ಹತ್ತಾರು ಸಂಸ್ಥೆಗಳಲ್ಲಿ ಕಾರ್ಯ ನಿರ್ವಹಿಸುವ ಕಾರ್ಮಿಕರ ಕಲ್ಯಾಣಕ್ಕಾಗಿ ರಾಜ್ಯ ಸರ್ಕಾರ ಅಗತ್ಯ ಕ್ರಮಗಳಿಗಾಗಿ ಮುಂದಾಗಿತ್ತು. ಭಾರತ್ ಜೋಡೋ ಯಾತ್ರೆ ಸಂದರ್ಭದಲ್ಲಿ ರಾಹುಲ್ ಗಾಂಧಿ ಅವರೂ ಗಿಗ್ ಕಾರ್ಮಿಕರ ಕಲ್ಯಾಣಕ್ಕಾಗಿ ಅವರ ಪರವಾಗಿ ಧ್ವನಿ ಎತ್ತಿದ್ದರು.

ಗುರುವಾರ ರಾಹುಲ್ ಗಾಂಧಿ ಅವರ ನಿವಾಸದಲ್ಲಿ ನಡೆದ ಸಭೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಸಚಿವರುಗಳಾದ ಸಂತೋಷ್ ಲಾಡ್, ಪ್ರಿಯಾಂಕ್ ಖರ್ಗೆ, ಎಂ.ಬಿ.ಪಾಟೀಲ್ ಅವರು ಪಾಲ್ಗೊಂಡು ಈ ಬಗ್ಗೆ ಸಮಗ್ರವಾಗಿ ಚರ್ಚಿಸಿದ್ದಾರೆ. ಸಭೆ ಫಲಪ್ರದವಾಗಿದ್ದು “ಗಿಗ್ ಕಾರ್ಮಿಕರ ಕಲ್ಯಾಣ ಮಂಡಳಿ” ಸ್ಥಾಪಿಸುವ ತೀರ್ಮಾನಕ್ಕೆ ಬರಲಾಗಿದೆ ಎಂದು ವರದಿಯಾಗಿದೆ.

ಸಂಬಂಧಿತ ಸಂಸ್ಥೆಗಳಿಂದ 5% ದಷ್ಟು ಸೆಸ್ ಸಂಗ್ರಹಿಸುವುದು ಮತ್ತು ಉಳಿದ ಅಗತ್ಯ ಹಣವನ್ನು ಸರ್ಕಾರವೇ ಭರಿಸಿ ಗಿಗ್ ಕಾರ್ಮಿಕರ ಕಲ್ಯಾಣಕ್ಕೆ ಯೋಜನೆಗಳನ್ನು ರೂಪಿಸುವುದು, ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವ ಬಗ್ಗೆ ಸಭೆಯಲ್ಲಿ ತೀರ್ಮಾನಿಸಲಾಗಿದೆ ಎಂದು ವರದಿ ಹೇಳಿದೆ.  

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ಆಸ್ತಿ ವಿವರ ಸಾರ್ವಜನಿಕಗೊಳಿಸಲು ನಿರ್ಧರಿಸಿದ ಸುಪ್ರೀಂ ಕೋರ್ಟ್ ನ್ಯಾಯಾಧೀಶರು

ಆಸ್ತಿ ವಿವರ ಸಾರ್ವಜನಿಕಗೊಳಿಸಲು ನಿರ್ಧರಿಸಿದ ಸುಪ್ರೀಂ ಕೋರ್ಟ್ ನ್ಯಾಯಾಧೀಶರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಎನ್ಯೂಮರೇಷನ್ ಫಾರಂ ಭರ್ತಿ ಮಾಡುವ ಮೂಲಕ SIR ಗೆ ಚಾಲನೆ ನೀಡಿದ ಸಿಎಂ ಡಿ.ಕೆ ಶಿವಕುಮಾರ್

ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಇಂದು (ಜೂನ್ 30) ಮಂಗಳವಾರ ತಮ್ಮ ಸದಾಶಿವನಗರ ನಿವಾಸದಲ್ಲಿ ದಾಖಲಾತಿ ನಮೂನೆಯನ್ನು ಭರ್ತಿ ಮಾಡಿ ಸಲ್ಲಿಸುವ ಮೂಲಕ ಮತದಾರರ ಪಟ್ಟಿಯ 'ವಿಶೇಷ ತೀವ್ರ ಪರಿಷ್ಕರಣೆ' (SIR) ಅಭಿಯಾನಕ್ಕೆ ಅಧಿಕೃತವಾಗಿ...

‘ಆಪರೇಷನ್ ಸಿಂಧೂರ್‌’ ಕುರಿತು ಸಂಸತ್ತಿಗೆ ಸುಳ್ಳು ಮಾಹಿತಿ: ರಾಜನಾಥ್ ಸಿಂಗ್ ವಿರುದ್ಧ ಕಾಂಗ್ರೆಸ್‌ನಿಂದ ಹಕ್ಕುಚ್ಯುತಿ ನೋಟಿಸ್

ಕೇಂದ್ರ ರಕ್ಷಣಾ ಸಚಿವ ರಾಜ್‌ನಾಥ್ ಸಿಂಗ್ ವಿರುದ್ಧ ಕಾಂಗ್ರೆಸ್ ಪಕ್ಷ ಲೋಕಸಭೆಯಲ್ಲಿ ಹಕ್ಕುಚ್ಯುತಿ ನೋಟಿಸ್ ನೀಡಿದೆ. ಕಾಂಗ್ರೆಸ್ ಸಂಸದ ಕೆ. ಸಿ. ವೇಣುಗೋಪಾಲ್ ಅವರು ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಅವರಿಗೆ ಈ ಕುರಿತು ಪತ್ರ ಬರೆದಿದ್ದು,...

SIR | ಮತದಾರರ ಪಟ್ಟಿಯಲ್ಲಿ ಹೆಸರಿದ್ದರೆ ಮಾತ್ರ ಸರ್ಕಾರಿ ಸೌಲಭ್ಯ: ಸಿಎಂ

ರಾಜ್ಯ ಸರ್ಕಾರದ ಐದು ಪ್ರಮುಖ ಗ್ಯಾರಂಟಿ ಯೋಜನೆಗಳು ಹಾಗೂ ಇತರ ಸರ್ಕಾರಿ ಸವಲತ್ತುಗಳನ್ನು ಪಡೆಯುತ್ತಿರುವ ಫಲಾನುಭವಿಗಳಿಗೆ ಮುಖ್ಯಮಂತ್ರಿಗಳು ಗಂಭೀರ ಎಚ್ಚರಿಕೆಯೊಂದನ್ನು ನೀಡಿದ್ದಾರೆ. ಪ್ರತಿಯೊಬ್ಬ ಫಲಾನುಭವಿಯೂ ತಮ್ಮ ಹೆಸರು ಮತದಾರರ ಪಟ್ಟಿಯಲ್ಲಿ ಇರುವುದನ್ನು ಕಡ್ಡಾಯವಾಗಿ...

SIR, ಚುನಾವಣಾ ಆಯೋಗದ ಕಾರ್ಯನಿರ್ವಹಣೆ ಕುರಿತು 23 ವಿಪಕ್ಷಗಳಿಂದ ಸಿಜೆಐಗೆ ಜಂಟಿ ಪತ್ರ

ಭಾರತೀಯ ಚುನಾವಣಾ ಆಯೋಗವು (ಇಸಿಐ) ನಡೆಸುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ ಹಾಗೂ ಇತರ ಚುನಾವಣೆ ಸಂಬಂಧಿತ ವಿಷಯಗಳ ವಿರುದ್ಧ ಇಂಡಿಯಾ ಮೈತ್ರಿಕೂಟದ ಹೊರಗಿರುವ ದ್ರಾವಿಡ ಮುನ್ನೇತ್ರ ಕಳಗಂ...

SIR: ಮತದಾರರ ಅನುಕೂಲಕ್ಕಾಗಿ ಸಹಾಯ ಕೇಂದ್ರಗಳನ್ನು ಸ್ಥಾಪಿಸಲು ಸರ್ಕಾರದ ಆದೇಶ

ರಾಜ್ಯಾದ್ಯಂತ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ-2026 (SIR) ಕಾರ್ಯವು ಜೂನ್ 30ರಿಂದ (ಇಂದಿನಿಂದ) ಅಧಿಕೃತವಾಗಿ ಆರಂಭವಾಗಿದೆ. ಜುಲೈ 29ರವರೆಗೆ ಒಂದು ತಿಂಗಳ ಕಾಲ ಬೂತ್ ಮಟ್ಟದ ಅಧಿಕಾರಿಗಳು ಮನೆ ಮನೆಗೆ ಭೇಟಿ...

SIR: ಕೇಂದ್ರ ಸರ್ಕಾರದ SIRಗೆ ಕೌಂಟರ್‌, ಮಹತ್ವದ ಆದೇಶಗಳನ್ನು ಹೊರಡಿಸಿದ ಕರ್ನಾಟಕ ಸರ್ಕಾರ

ಕೇಂದ್ರ ಸರ್ಕಾರ ಚುನಾವಣಾ ಆಯೋಗದ ಮೂಲಕ ನಡೆಸುತ್ತಿರುವ ವಿಶೇಷ ಮತದಾರ ಪಟ್ಟಿ ಪರಿಷ್ಕರಣೆ ಕುರಿತಂತೆ ದೇಶದಾದ್ಯಂತ ಭಾರೀ ವಿರೋಧ ವ್ಯಕ್ತವಾಗಿದ್ದವು. ಸುಪ್ರೀಂ ಕೋರ್ಟ್‌ ಆ ಪ್ರಕ್ರಿಯೆಯನ್ನು ಮಾನ್ಯ ಮಾಡಿತ್ತು. ಕರ್ನಾಟಕದಲ್ಲಿ ನಾಳೆಯಿಂದ (ಜೂನ್.30)‌...

ರಾಮಮಂದಿರದ ದೇಣಿಗೆ ಕಳ್ಳತನ: ಆರೋಪಿಗಳ ಪರ ಯಾವುದೇ ವಕೀಲರು ವಾದಿಸುವಂತಿಲ್ಲ , ವಾದಿಸಿದರೆ ರೂ. 5ಲಕ್ಷ ದಂಡ

ರಾಮಮಂದಿರದ ದೇಣಿಗೆ ಕಳ್ಳತನ ಪ್ರಕರಣದಲ್ಲಿ ಬಂಧಿತರಾಗಿರುವ ಆರೋಪಿಗಳ ಪರವಾಗಿ ಯಾವುದೇ ವಕೀಲರು ನ್ಯಾಯಾಲಯದಲ್ಲಿ ವಕಾಲತ್ತು ವಹಿಸಬಾರದು ಎಂದು ಅಯೋಧ್ಯೆ ಬಾರ್ ಅಸೋಸಿಯೇಷನ್ ಮಹತ್ವದ ನಿರ್ಧಾರ ಕೈಗೊಂಡಿದೆ. ಒಂದು ವೇಳೆ ಸಂಘದ ಈ ತೀರ್ಮಾನವನ್ನು...

ವೋಟರ್ ಲಿಸ್ಟ್‌ನಿಂದ ಹೆಸರು ಡಿಲೀಟ್: ದಿ ಟೆಲಿಗ್ರಾಫ್’ ಪತ್ರಿಕೆಯ ಮಾಜಿ ಸಂಪಾದಕ ರಾಜಗೋಪಾಲ್ ಪಾಸ್‌ಪೋರ್ಟ್ ನವೀಕರಣಕ್ಕೆ ಬ್ರೇಕ್! ಬಂಗಾಳ ಸಿಎಂ ಗೆ ಪತ್ರ ಬರೆದ ಕೇರಳ ಸಿಎಂ

ಹಿರಿಯ ಪತ್ರಕರ್ತ ಮತ್ತು ‘ದಿ ಟೆಲಿಗ್ರಾಫ್’ ಪತ್ರಿಕೆಯ ಮಾಜಿ ಸಂಪಾದಕ ರಾಜಗೋಪಾಲ್ ರಾಮದಾಸ್ ಅವರ ಪಾಸ್‌ಪೋರ್ಟ್ ನವೀಕರಣ ವಿವಾದವು ಸೋಮವಾರ ಮತ್ತಷ್ಟು ತೀವ್ರಗೊಂಡಿದೆ. ಈ ಸಮಸ್ಯೆಯನ್ನು ತಕ್ಷಣವೇ ಬಗೆಹರಿಸಲು ಮಧ್ಯಪ್ರವೇಶಿಸಬೇಕು ಎಂದು ಕೋರಿ...

ರಾಮ ಮಂದಿರ ದೇಣಿಗೆ ಹಗರಣ: ಅರ್ಜಿ ವಿಚಾರಣೆ ಕೆಲ ದಿನ ತಡವಾದರೆ ‘ಆಕಾಶವೇನೂ ಉರುಳಿ ಬೀಳುವುದಿಲ್ಲ’ ಎಂದ ಸುಪ್ರೀಂ ಕೋರ್ಟ್

ಅಯೋಧ್ಯೆಯ ರಾಮ ಮಂದಿರಕ್ಕೆ ಭಕ್ತರಿಂದ ಬಂದ ದೇಣಿಗೆ ಹಣ ದುರುಪಯೋಗ ಆಗಿರುವ ಕುರಿತು ಸಿಬಿಐ ನೇತೃತ್ವದ ಬಹು-ಸಂಸ್ಥೆಗಳ ಜಂಟಿ ತನಿಖೆಗೆ ಆದೇಶಿಸಬೇಕೆಂದು ಕೋರಿ ಸಲ್ಲಿಕೆಯಾಗಿದ್ದ ಅರ್ಜಿಗಳ ತುರ್ತು ವಿಚಾರಣೆಯನ್ನು ಸುಪ್ರೀಂ ಕೋರ್ಟ್ ಸೋಮವಾರ...

ಕಾಕ್ರೋಚ್ ಪಾರ್ಟಿ ಧರಣಿ : ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ಆರಂಭಿಸಿದ ಸೋನಮ್ ವಾಂಗ್‌ಚುಕ್

ನೀಟ್ ಸೇರಿದಂತೆ ವಿವಿಧ ಪರೀಕ್ಷೆಗಳ ಪ್ರಶ್ನೆ ಪತ್ರಿಕೆ ಸೋರಿಕೆ, ಹಲವು ಅಕ್ರಮ, ಶೈಕ್ಷಣಿಕ ಅವ್ಯವಸ್ಥೆಗಳ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿ ಕಾಕ್ರೋಚ್ ಜನತಾ...