Homeಕರ್ನಾಟಕನಿರೀಕ್ಷೆ ಹುಟ್ಟಿಸಿದ ‘ಗಿರ್ಮಿಟ್’ ಟ್ರೇಲರ್: ನಟ, ನಟಿ ಪಾತ್ರದಲ್ಲಿ ಮಕ್ಕಳ ಮಿಂಚು

ನಿರೀಕ್ಷೆ ಹುಟ್ಟಿಸಿದ ‘ಗಿರ್ಮಿಟ್’ ಟ್ರೇಲರ್: ನಟ, ನಟಿ ಪಾತ್ರದಲ್ಲಿ ಮಕ್ಕಳ ಮಿಂಚು

- Advertisement -
- Advertisement -

ಮೊಟ್ಟ ಮೊದಲ ಮಕ್ಕಳ ಕಮರ್ಷಿಯಲ್​ ಚಿತ್ರ ‘ಗಿರ್ಮಿಟ್​’ ಟ್ರೇಲರ್ ​ ರಿಲೀಸ್ ಆಗಿದೆ. ದೊಡ್ಡವರ ಧಿರಿಸಿನಲ್ಲಿ ಮಕ್ಕಳು ಅಭಿನಯದ ಮೂಲಕ ಮನರಂಜನೆ ಉಣಬಡಿಸಿದ್ದಾರೆ. ಮಕ್ಕಳನ್ನೇ ಮೂಲವಾಗಿರಿಸಿಕೊಂಡು, ನಾಯಕ, ನಾಯಕಿಯರ ಪಾತ್ರದಲ್ಲಿ ಮಿಂಚುವಂತೆ ಮಾಡಿದ್ದಾರೆ ಬಸ್ರೂರು. ‘ಗಿರ್ಮಿಟ್’ ಚಿತ್ರದ ಬಗ್ಗೆ ನಿರೀಕ್ಷೆ ಹೆಚ್ಚಿದೆ. ಚಿತ್ರವು ಕನ್ನಡ, ತೆಲುಗು, ತಮಿಳು, ಮಲಯಾಳಂ, ಹಿಂದಿ ಮತ್ತು ಇಂಗ್ಲಿಷ್ ಭಾಷೆಗಳಲ್ಲಿ ಏಕಕಾಲದಲ್ಲಿ ರಿಲೀಸ್ ಆಗಲಿದೆ.

ವ್ಯವಹಾರಿಕ ಆಯಾಮ ಮತ್ತು ದೃಷ್ಟಿಕೋನವನ್ನಿಟ್ಟುಕೊಂಡ ಮಕ್ಕಳ ಚಿತ್ರ ‘ಗಿರ್ಮಿಟ್’ ಪ್ರೇಕ್ಷಕರಿಗೆ ಮನರಂಜನೆಯ ರಸದೂಟ ಉಣಿಸಲು ತೆರೆಗೆ ಬರಲು ಸಿದ್ಧವಾಗುತ್ತಿದೆ. ಮಕ್ಕಳೇ ಪ್ರಧಾನಪಾತ್ರದಲ್ಲಿ ನಟಿಸಿರುವ ಚಿತ್ರ ಗಿರ್ಮಿಟ್ ಭಾರತೀಯ ಚಿತ್ರರಂಗದಲ್ಲೇ ಮೊದಲ ಪ್ರಯತ್ನ ಎನ್ನಲಾಗಿದೆ. ಶೀರ್ಷಿಕೆಯ ಮೂಲಕವೇ ಗಮನ ಸೆಳೆದಿರುವ ಚಿತ್ರ ನವೆಂಬರ್​ 8 ರಂದು ಪ್ರಪಂಚದಾದ್ಯಂತ ಬಿಡುಗಡೆಗೊಳ್ಳುತ್ತಿದೆ.

ಚಿತ್ರದ ಟ್ರೇಲರ್‍ ನಲ್ಲಿ ನಾಯಕ, ನಾಯಕಿ ಪಾತ್ರದಲ್ಲಿ ಮಕ್ಕಳು ಗಮನಸೆಳೆದಿದ್ದಾರೆ. ನಾಯಕ ಹೇಳುವ ಡೈಲಾಗ್ಸ್, ಪ್ರೇಮ ಸನ್ನಿವೇಶ, ವಿಭಿನ್ನ ಪಾತ್ರಗಳು, ಕೌಟುಂಬಿಕ ಕಲಹ, ನಾಯಕ, ನಾಯಕಿಯ ಮಾಸ್​ ಗೀತೆ ಹೀಗೆ ಕಮರ್ಷಿಯಲ್​ ಚಿತ್ರದಲ್ಲಿರಬೇಕಾದ ಎಲ್ಲಾ ಅಂಶಗಳೂ ಟ್ರೇಲರ್‍ ನಲ್ಲಿ ಕಾಣಸಿಗುತ್ತವೆ. ನಟ ಯಶ್​, ನಟಿ ರಾಧಿಕಾ ಸೇರಿದಂತೆ ಹಿರಿಯ ಕಲಾವಿದರು ಹಿನ್ನೆಲೆ ಧ್ವನಿ ನೀಡಿದ್ದಾರೆ.

ಚಿತ್ರದ ‘ಆರಂಭವೇ ಆನಂದವೇ’ ಎಂಬ ಲಿರಿಕಲ್ ವಿಡಿಯೋ ಗೀತೆ ಅ.21 ರ ಸಂಜೆ 7 ಕ್ಕೆ ಬಿಡುಗಡೆಯಾಗಿತ್ತು. ಕಿನ್ನಾಳ ರಾಜ್ ಸಾಹಿತ್ಯವಿದ್ದು, ಸಂತೋಷ್ ವೆಂಕಿ ಗೀತೆಗೆ ಧ್ವನಿ ನೀಡಿದ್ದಾರೆ. ಮಕ್ಕಳೇ ಚಿತ್ರವನ್ನು ಚಿತ್ರಿಸಿದ್ದಾರೆ. ನಾಯಕ, ನಾಯಕಿಯ ವಾಗ್ಯುದ್ಧ, ನಾಯಕನ ಖಡಕ್ ಡೈಲಾಗ್, ನಾಯಕ, ನಾಯಕಿಯ ಪ್ರೇಮ ಸಲ್ಲಾಪ ಎಲ್ಲವೂ ಚಿತ್ರದಲ್ಲಿದೆ.

ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅವರ ಓಂಕಾರ್ ಮೂವೀಸ್ ಬ್ಯಾನರ್‍ ಅಡಿ ನಿರ್ಮಾಣವಾಗಿದೆ. ಚಿತ್ರಕ್ಕೆ ಎನ್.ಎಸ್.ರಾಜ್ ಕುಮಾರ್ ಬಂಡವಾಳ ಹೂಡಿದ್ದಾರೆ. ಸೂರಜ್ ಚೌಧರಿ ಮತ್ತು ನರೇನ್ ಚಂದ್ರ ಚೌಧರಿ ಸಹ ನಿರ್ಮಾಪಕರಾಗಿದ್ದಾರೆ. ಪ್ರಮೋದ್ ಮರವಂತೆ, ಕಿನ್ನಲ್ ರಾಜ್, ಸಂದೀಪ್ ಶಿರಸಿ, ಸುಚನ್ ಶೆಟ್ಟಿ ಮತ್ತು ಮಂಜುನಾಥ್ ಚಿತ್ರಕಥೆ ಮತ್ತು ಸಂಭಾಷಣೆ ಬರೆದಿದ್ದಾರೆ. ಚಿತ್ರದಲ್ಲಿ ಅಶ್ಲೇಷ್ ರಾಜ್, ಶ್ಲಾಘಾ ಸಾಲಿಗ್ರಾಮಾ, ಆರಾಧ್ಯ ಶೆಟ್ಟಿ, ತನಿಶಾ ಕೋನಿ, ಜಯೇಂದ್ರ, ನಾಗರಾಜ್ ಜಪ್ತಿ, ಆದಿತ್ಯ ಕುಂದಾಪುರ ಮತ್ತು ಸಿಂಚನಾ ಕೋಟೇಶ್ವರ ಮೊದಲಾದ ಕಲಾವಿದರು ಚಿತ್ರದಲ್ಲಿ ಅಭಿನಯಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಭಾರತದಲ್ಲಿ 12 ಸಾವಿರ ಉದ್ಯೋಗಿಗಳನ್ನು ವಜಾಗೊಳಿಸಿದ ಒರಾಕಲ್ : ಜಾಗತಿಕವಾಗಿ 30 ಸಾವಿರ ಜನರ ಕೆಲಸಕ್ಕೆ ಕುತ್ತು

ಐಟಿ ದೈತ್ಯ ಒರಾಕಲ್ ಜಾಗತಿಕ ಮಟ್ಟದಲ್ಲಿ ಸುಮಾರು 30,000 ಉದ್ಯೋಗಿಗಳನ್ನು ವಜಾಗೊಳಿಸಲು ನಿರ್ಧರಿಸಿದ್ದು, ಇದು ಭಾರತದ ಮೇಲೂ ತೀವ್ರ ಪರಿಣಾಮ ಬೀರಿದೆ. ವರದಿಗಳ ಪ್ರಕಾರ, ಭಾರತವೊಂದರಲ್ಲೇ ಸುಮಾರು 12,000 ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕಲಾಗಿದೆ. ಕಂಪನಿಯು ತನ್ನ ಒಟ್ಟು ಉದ್ಯೋಗಿಳ...

ಗೋವಾ ನೈಟ್‌ಕ್ಲಬ್ ಬೆಂಕಿ ಪ್ರಕರಣ: ಮಾಲೀಕರಾದ ಸೌರಭ್ ಲೂತ್ರಾ, ಗೌರವ್ ಲೂತ್ರಾ ಸಹೋದರರಿಗೆ ಜಾಮೀನು

ಪಣಜಿ: ಕಳೆದ ಡಿಸೆಂಬರ್‌ನಲ್ಲಿ 25 ಜನರ ಸಾವಿಗೆ ಕಾರಣವಾದ ವಿನಾಶಕಾರಿ ಬೆಂಕಿ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಿರ್ಚ್ ಬೈ ರೋಮಿಯೋ ಲೇನ್ ನೈಟ್‌ಕ್ಲಬ್‌ನ ಮಾಲೀಕರಾದ ಸೌರಭ್ ಲೂತ್ರಾ ಮತ್ತು ಗೌರವ್ ಲೂತ್ರಾ ಅವರಿಗೆ...

ಲೈಂಗಿಕ ದೌರ್ಜನ್ಯ ಆರೋಪ: ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ 

ಕೇರಳ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಿರ್ದೇಶಕ ಮತ್ತು ನಿರ್ಮಾಪಕ ರಂಜಿತ್ ಬಾಲಕೃಷ್ಣನ್ ಅವರನ್ನು ಬುಧವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಪ್ರಸ್ತುತ ಅವರನ್ನು ಎರ್ನಾಕುಲಂ ಸಬ್ ಜೈಲಿನಲ್ಲಿ ಇರಿಸಲಾಗಿದೆ.  ಜನವರಿ...

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...