Homeಮುಖಪುಟಬಾಲಕಿಗೆ ಲೈಂಗಿಕ ಕಿರುಕುಳ ಆರೋಪ; ರೈಲ್ವೇ ನೌಕರನನ್ನು ಹೊಡೆದು ಕೊಂದ ಪ್ರಯಾಣಿಕರು

ಬಾಲಕಿಗೆ ಲೈಂಗಿಕ ಕಿರುಕುಳ ಆರೋಪ; ರೈಲ್ವೇ ನೌಕರನನ್ನು ಹೊಡೆದು ಕೊಂದ ಪ್ರಯಾಣಿಕರು

- Advertisement -
- Advertisement -

11 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ನಂತರ ರೈಲ್ವೇ ಉದ್ಯೋಗಿಯನ್ನು ಗುರುವಾರ ಮುಂಜಾನೆ ರೈಲಿನಲ್ಲಿದ್ದ ಬಾಲಕಿಯ ಕುಟುಂಬ ಸದಸ್ಯರು ಮತ್ತು ಇತರ ಪ್ರಯಾಣಿಕರು ನವದೆಹಲಿಯಲ್ಲಿ ಹೊಡೆದು ಕೊಂದಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಅಧಿಕಾರಿಗಳ ಪ್ರಕಾರ, ಸಿವಾನ್‌ನ ಕುಟುಂಬವೊಂದು ಬುಧವಾರ ಬಿಹಾರದ ಬರೌನಿನಿಂದ ನವದೆಹಲಿಗೆ ಹಮ್‌ಸಫರ್ ಎಕ್ಸ್‌ಪ್ರೆಸ್ ಹತ್ತಿದೆ. ರಾತ್ರಿ 11.30 ರ ಸುಮಾರಿಗೆ, ಗ್ರೂಪ್ ಡಿ ರೈಲ್ವೆ ಉದ್ಯೋಗಿ ಪ್ರಶಾಂತ್ ಕುಮಾರ್ ಕುಟುಂಬದ 11 ವರ್ಷದ ಬಾಲಕಿಯನ್ನು ತನ್ನ ಸೀಟಿನಲ್ಲಿ ಕೂರಿಸಿಕೊಂಡರು. ಬಳಿಕ, ಬಾಲಕಿಯ ತಾಯಿ ವಾಶ್ ರೂಂಗೆ ಹೋದಾಗ ಕುಮಾರ್ ಬಾಲಕಿಗೆ ಕಿರುಕುಳ ನೀಡಿದ್ದಾನೆ ಎನ್ನಲಾಗಿದೆ.

ಮಹಿಳೆ ವಾಶ್ ರೂಂನಿಂದ ಹೊರಬಂದ ತಕ್ಷಣ, ಹುಡುಗಿ ತಾಯಿಯ ಬಳಿಗೆ ಓಡಿ, ಆಕೆಯನ್ನು ತಬ್ಬಿಕೊಂಡು ಅಳಲು ಪ್ರಾರಂಭಿಸಿದಳು. ಅವಳು ತನ್ನ ತಾಯಿಯನ್ನು ವಾಶ್‌ರೂಮ್‌ಗೆ ಕರೆದೊಯ್ದು ನಡೆದದ್ದನ್ನು ಹೇಳಿದಳು. ನಂತರ ತಾಯಿ ರೈಲಿನಲ್ಲಿ ಎಂ1ಕೋಚ್‌ನಲ್ಲಿದ್ದ ತನ್ನ ಪತಿ, ಮಾವ ಮತ್ತು ಇತರ ಪ್ರಯಾಣಿಕರಿಗೆ ಮಾಹಿತಿ ನೀಡಿದರು.

ರೈಲು ಲಕ್ನೋದ ಐಶ್‌ಬಾಗ್ ಜಂಕ್ಷನ್‌ಗೆ ತಲುಪಿದಾಗ ಕೋಪಗೊಂಡ ಪ್ರಯಾಣಿಕರು ಮತ್ತು ಕುಟುಂಬ ಸದಸ್ಯರು ಕುಮಾರ್‌ನನ್ನು ಹಿಡಿದು ಕೋಚ್‌ನ ಬಾಗಿಲಿನ ಸಮೀಪವಿರುವ ಪ್ರದೇಶಕ್ಕೆ ಕರೆದೊಯ್ದು ರೈಲು ಕಾನ್ಪುರ ಸೆಂಟ್ರಲ್ ತಲುಪುವವರೆಗೆ, ಸುಮಾರು ಒಂದೂವರೆ ಗಂಟೆ ಥಳಿಸಿದ್ದಾರೆ ಎನ್ನಲಾಗಿದೆ. ಗುರುವಾರ ಮುಂಜಾನೆ 4.35 ಕ್ಕೆ ರೈಲು ಕಾನ್ಪುರ ಸೆಂಟ್ರಲ್‌ಗೆ ತಲುಪಿದಾಗ, ಸರ್ಕಾರಿ ರೈಲ್ವೆ ಪೊಲೀಸ್ (ಜಿಆರ್‌ಪಿ) ಅಧಿಕಾರಿಗಳು ಕುಮಾರ್ ಅವರನ್ನು ಆಸ್ಪತ್ರೆಗೆ ಕರೆದೊಯ್ದರು, ಅಲ್ಲಿ ಆತ ಮೃತಪಟ್ಟಿದ್ದಾರೆ ಎಂದು ಘೋಷಿಸಲಾಯಿತು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಬಾಲಕಿಯ ಕುಟುಂಬದವರು ಲೈಂಗಿಕ ದೌರ್ಜನ್ಯದ ದೂರು ದಾಖಲಿಸಿದರೆ, ಕುಮಾರ್ ಕುಟುಂಬವು ಕೊಲೆ ಎಂದು ದೂರು ದಾಖಲಿಸಿದೆ.

ಬಿಹಾರದ ಮುಜಾಫರ್‌ಪುರ ಜಿಲ್ಲೆಯ ಸಮಸ್ತ್‌ಪುರ ಗ್ರಾಮದಲ್ಲಿ ವಾಸಿಸುವ ಕುಟುಂಬಕ್ಕೆ ಸ್ಥಳೀಯ ಪೊಲೀಸ್ ಠಾಣೆಯ ಅಧಿಕಾರಿಯೊಬ್ಬರು ಮಾಹಿತಿ ನೀಡಿದ ನಂತರ ಅವರನ್ನು ಹೊಡೆದು ಸಾಯಿಸಲಾಗಿದೆ ಎಂದು ಕುಮಾರ್ ಅವರ ಚಿಕ್ಕಪ್ಪ ಪವನ್ ಹೇಳಿದ್ದಾರೆ.

“ಪ್ರಶಾಂತ್ ಅಂತಹ ವ್ಯಕ್ತಿಯಲ್ಲ, ಪಿತೂರಿಯ ಭಾಗವಾಗಿ ಅವನನ್ನು ಕೊಲ್ಲಲಾಗಿದೆ ಎಂದು ತೋರುತ್ತದೆ. ಅವನನ್ನು ಇಷ್ಟು ಜನ ಥಳಿಸಿದ್ದಾರೆ, ಸುತ್ತಲೂ ರೈಲ್ವೆ ಪೊಲೀಸ್ ಪಡೆಯ ಸಿಬ್ಬಂದಿ ಇರಲಿಲ್ಲವೇ” ಎಂದು ಅವರು ಪ್ರಶ್ನಿಸಿದ್ದಾರೆ.

ಪೊಲೀಸ್ ಅಧೀಕ್ಷಕ, ಜಿಆರ್‌ಪಿ (ಪ್ರಯಾಗ್‌ರಾಜ್) ಅಭಿಷೇಕ್ ಯಾದವ್ ಪ್ರತಿಕ್ರಿಯಿಸಿ, “ರೈಲು ಐಶ್‌ಬಾಗ್ ದಾಟಿದಾಗ, ಬಾಲಕಿ ತನಗೆ ಕಿರುಕುಳ ನೀಡಲಾಯಿತು ಎಂದು ಹೇಳಿದರು. ಆಕೆಯ ಕುಟುಂಬ ಸದಸ್ಯರು ಮತ್ತು ಇತರ ಪ್ರಯಾಣಿಕರು ಆರೋಪಿಯನ್ನು ಥಳಿಸಿದ್ದಾರೆ. ಕಾನ್ಪುರ ಸೆಂಟ್ರಲ್‌ನಲ್ಲಿ ಆರೋಪಿಯನ್ನು ಹಸ್ತಾಂತರಿಸಲಾಗಿದೆ. ಜಿಆರ್‌ಪಿ ಮತ್ತು ದೂರು ದಾಖಲಿಸಿದ್ದು, ಆತನನ್ನು ಆಸ್ಪತ್ರೆಗೆ ಸಾಗಿಸಿದಾಗ ಆತ ಮೃತಪಟ್ಟಿದ್ದಾನೆ” ಎಂದು ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ; ದೆಹಲಿ ಗಲಭೆ ಪ್ರಕರಣ: ವಿಚಾರಣೆಯಿಲ್ಲದೆ ನಾಲ್ಕು ವರ್ಷಗಳಿಂದ ಜೈಲಿನಲ್ಲಿರುವ ವಿದ್ಯಾರ್ಥಿ ಮುಖಂಡ ಉಮರ್ ಖಾಲಿದ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರ ಸಚಿವ ಜೆ.ಪಿ.ನಡ್ಡಾ ಅವರನ್ನು ಭೇಟಿಯಾದ ಸಿಜೆಪಿ ನಿಯೋಗ; ಮನವಿ ಪತ್ರ ಸಲ್ಲಿಕೆ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಆಗ್ರಹಿಸಿ ನವದೆಹಲಿಯಲ್ಲಿ ಪ್ರತಿಭಟನೆ ತೀವ್ರಗೊಂಡಿರುವ ಬೆನ್ನಲ್ಲೇ ಇಂದು ಕೇಂದ್ರ ಸಚಿವ ಜೆಪಿ ನಡ್ಡಾ ಅವರನ್ನು ಸಿಜೆಪಿ ಸದಸ್ಯರಾದ ಸೌರವ್ ದಾಸ್ ಮತ್ತು ಅಶುತೋಷ್ ರಂಕಾ...

‘ಸಂಸತ್ ಚಲೋ’: ‘ಸೋನಮ್ ವಾಂಗ್ಚುಕ್ ಪತ್ನಿ ಮೇಲೆ ದೆಹಲಿ ಪೊಲೀಸರಿಂದ ಹಲ್ಲೆ’: ವಿದ್ಯಾರ್ಥಿಗಳ ಮೇಲೂ ಲಾಠಿ ಚಾರ್ಜ್  

ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ಆಯೋಜಿಸಲಾಗಿದ್ದ ‘ಸಂಸದ್ ಚಲೋ’ ಮೆರವಣಿಗೆಯ ವೇಳೆ ಶಿಕ್ಷಣ ತಜ್ಞ ಹಾಗೂ ಲಡಾಖ್ ಹೋರಾಟಗಾರ ಸೋನಮ್ ವಾಂಗ್ಚುಕ್ ಅವರ ಪತ್ನಿ ಗೀತಾಂಜಲಿ ಜೆ. ಆಂಗ್ಮೋ ಸೇರಿದಂತೆ ಹಲವಾರು ಪ್ರತಿಭಟನಾಕಾರರ ಮೇಲೆ...

ಕನಿಷ್ಠ 20 ಸಾವಿರ ‘ಕಾಕ್ರೋಚ್‌’ಗಳಿಂದ ಸಂಸತ್ತಿಗೆ ಮೆರವಣಿಗೆ; ವಿದ್ಯಾರ್ಥಿಗಳ ಮೇಲೆ ಪೊಲೀಸರಿಂದ ಲಾಠಿಚಾರ್ಜ್ – ಅಶ್ರುವಾಯು

ಧರ್ಮೇಂದ್ರ ಪ್ರಧಾನ್ ರಾಜೀನಾಮಗೆ ಒತ್ತಾಯಿಸಿ ಮುಂಗಾರು ಅಧಿವೇಶನದ ಮೊದಲ ದಿನದಂದು ಸಂಸತ್ತಿಗೆ ಮೆರವಣಿಗೆ ನಡೆಸಲು ದೆಹಲಿಯಲ್ಲಿ ಜಮಾಯಿಸಿದ್ದ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ಸಾವಿರಾರು ಬೆಂಬಲಿಗರನ್ನು ಚದುರಿಸಲು ದೆಹಲಿ ಪೊಳಿಸರು ಅಶ್ರುವಾಯು ಶೆಲ್‌ಗಳನ್ನು...

ಸಿಜೆಪಿ ಪ್ರತಿಭಟನೆಗೆ ನಡುಗಿದ ಕೇಂದ್ರ ಸರ್ಕಾರ; ತರಾತುರಿಯಲ್ಲಿ ಸಂಸತ್ತಿನ ಗೇಟ್ ಮುಚ್ಚಿದ ಭದ್ರತಾ ಸಿಬ್ಬಂದಿ

ನೀಟ್‌ ಪರೀಕ್ಷೆಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳನ್ನು ವಿರೋಧಿಸಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಒತ್ತಾಯಿಸಿ ಇಂದು ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಹಮ್ಮಿಕೊಂಡಿರುವ ಸಂಸತ್ ಮೆರವಣಿಗೆಗೆ ಕೇಂದ್ರ ಸರ್ಕಾರ...

ಹಕ್ಕುಗಳ ಕಾಯ್ದೆಗೆ 7 ವರ್ಷ: ಕಾಗದದಲ್ಲಷ್ಟೇ ಸಮಾನತೆ, ಉದ್ಯೋಗ ಸಿಗದೆ ಬೀದಿಗೆ ತಳ್ಳಲ್ಪಡುತ್ತಿರುವ ಟ್ರಾನ್ಸ್‌ಜೆಂಡರ್‌ ಸಮುದಾಯ

ಬೆಂಗಳೂರು: ರಾಷ್ಟ್ರೀಯ ಮಟ್ಟದಲ್ಲಿ ‘ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ಕಾಯ್ದೆ-2019’ ಜಾರಿಗೆ ಬಂದು ಏಳು ವರ್ಷಗಳು ಕಳೆದಿದ್ದರೂ, ಸಮುದಾಯದ ಆರ್ಥಿಕ ಸಬಲೀಕರಣ ಇನ್ನೂ ಕನಸಾಗಿಯೇ ಉಳಿದಿದೆ. ಬೆಂಗಳೂರಿನ ಸಾಮಾಜಿಕ ಮತ್ತು ಆರ್ಥಿಕ ಬದಲಾವಣೆ...

ಸಂಸತ್‌ ಚಲೋ: ಕಾಕ್ರೋಚ್ ಜನತಾ ಪಾರ್ಟಿ ಪ್ರತಿಭಟನೆಗೆ ಭಾರೀ ಬೆಂಬಲ

ದೇಶಾದ್ಯಂತ ಭಾರಿ ಸಂಚಲನ ಸೃಷ್ಟಿಸಿರುವ ನೀಟ್‌ (NEET) ಪ್ರಶ್ನೆಪತ್ರಿಕೆ ಸೋರಿಕೆ, ಸಾಲು ಸಾಲು ವಿದ್ಯಾರ್ಥಿಗಳ ಆತ್ಮಹತ್ಯೆ ಹಾಗೂ ದೇಶದ ಪರೀಕ್ಷಾ ವ್ಯವಸ್ಥೆಯ ಸರಣಿ ವೈಫಲ್ಯಗಳನ್ನು ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ (CJP) ಆಯೋಜಿಸಿರುವ...

ಡಿಜಿಟಲೀಕರಣಗೊಂಡ 2002ರ ಮತದಾರರ ಪಟ್ಟಿಯಿಂದ ಬೆಂಗಳೂರಿನ ಮತಗಟ್ಟೆಗಳೇ ಮಾಯ: ಮಾಹಿತಿ ಸಿಗದೆ ಆತಂಕದಲ್ಲಿ ನೂರಾರು ಮತದಾರರು

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನ ಹಲವು ಭಾಗಗಳಲ್ಲಿ 2002ರ ಡಿಜಿಟಲೀಕರಣಗೊಂಡ ಮತದಾರರ ಪಟ್ಟಿಯಿಂದ ಇಡೀ ಮತಗಟ್ಟೆಗಳೇ ಕಾಣೆಯಾಗಿರುವ ಗಂಭೀರ ಪ್ರಕರಣವೊಂದು ಬೆಳಕಿಗೆ ಬಂದಿದೆ. ಇದರಿಂದಾಗಿ ನೂರಾರು ಮತದಾರರು ಆತಂಕ ಮತ್ತು ಗೊಂದಲಕ್ಕೊಳಗಾಗಿದ್ದಾರೆ ಎಂದು...

‘ರಾಮನಿಗೆ ಅವಮಾನಿಸಿದ್ದಕ್ಕೆ ಶಾಯಿ ಎರಚಿದೆ’: ಜಂತರ್ ಮಂತರ್‌ನಲ್ಲಿ ಅಭಿಜೀತ್ ದೀಪ್ಕೆ ಮೇಲಿನ ದಾಳಿಯನ್ನು ಸಮರ್ಥಿಸಿಕೊಂಡ ಬರ್ಖಾ ಟ್ರೆಹಾನ್

ನವದೆಹಲಿ: ದೇಶದ ರಾಜಧಾನಿಯ ಜಂತರ್ ಮಂತರ್‌ನಲ್ಲಿ ಜುಲೈ 18 ರ ಶನಿವಾರದಂದು ನಡೆದ ಪ್ರತಿಭಟನಾ ಸಭೆಯಲ್ಲಿ ಭಾಷಣ ಮಾಡುತ್ತಿದ್ದ ‘ಜಿರಳೆ ಜನತಾ ಪಕ್ಷ’ದ ಸಂಸ್ಥಾಪಕ ಅಭಿಜೀತ್ ದೀಪ್ಕೆ ಅವರ ಮೇಲೆ ಶಾಯಿ ಎರಚಿದ...

ಸರ್ವಪಕ್ಷ ಸಭೆ: TMC ಬಂಡಾಯ ಸಂಸದರಿಗೆ ಸ್ಪೆಷಲ್ ಸೀಟು, INDIA ಮೈತ್ರಿಕೂಟದ ಸಂಸದರು ವಾಕೌಟ್

ಸಂಸತ್ತಿನ ಮುಂಗಾರು ಅಧಿವೇಶನ ಆರಂಭಕ್ಕೆ ಕೆಲವೇ ದಿನಗಳು ಬಾಕಿ ಇರುವಾಗ, ರವಿವಾರ ನಡೆದ ಸರ್ವಪಕ್ಷಗಳ ಸಭೆಯು ತೀವ್ರ ರಾಜಕೀಯ ಸಂಘರ್ಷಕ್ಕೆ ಸಾಕ್ಷಿಯಾಗಿದೆ. ತೃಣಮೂಲ ಕಾಂಗ್ರೆಸ್ (TMC) ಪಕ್ಷದಿಂದ ಬಂಡಾಯವೆದ್ದ ಸಂಸದರಿಗೆ ಕೇಂದ್ರ ಸರ್ಕಾರವು...

ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ಹಾದಿ ತಪ್ಪಿಸಲು BJP ಪಿತೂರಿ: ಸಿಜೆಪಿ ಗಂಭೀರ ಆರೋಪ

ದೇಶಾದ್ಯಂತ ಭಾರಿ ಸಂಚಲನ ಸೃಷ್ಟಿಸಿರುವ ನೀಟ್ (NEET) ಪರೀಕ್ಷಾ ಹಗರಣದ ವಿರುದ್ಧ ಜಂತರ್ ಮಂತರ್‌ನಲ್ಲಿ ಸೋನಮ್ ವಾಂಗ್ಚುಕ್ ಹಾಗೂ ಕಾಕ್ರೋಚ್ ಜನತಾ ಪಾರ್ಟಿ (CJP) ಯುವಜನರು ನಡೆಸುತ್ತಿರುವ ಹೋರಾಟದ ಮೈದಾನದಿಂದ ಆತಂಕಕಾರಿ ವರದಿಗಳು...