Homeಕರ್ನಾಟಕಸಾವರ್ಕರ್ ಸಂಸ್ಮರಣಾ ಕಾರ್ಯಕ್ರಮದ ಗಾಯನ ತರಬೇತಿಗೆ ವಿದ್ಯಾರ್ಥಿನಿಯರು: ಪಿಯು ಪ್ರಾಂಶುಪಾಲರ ವಿರುದ್ಧ ಕ್ರಮಕ್ಕೆ ಮುಂದಾದ ಸರ್ಕಾರ!

ಸಾವರ್ಕರ್ ಸಂಸ್ಮರಣಾ ಕಾರ್ಯಕ್ರಮದ ಗಾಯನ ತರಬೇತಿಗೆ ವಿದ್ಯಾರ್ಥಿನಿಯರು: ಪಿಯು ಪ್ರಾಂಶುಪಾಲರ ವಿರುದ್ಧ ಕ್ರಮಕ್ಕೆ ಮುಂದಾದ ಸರ್ಕಾರ!

- Advertisement -
- Advertisement -

ಹಾವೇರಿಯಲ್ಲಿ ನಡೆದ ‘ವಿಡಿ ಸಾವರ್ಕರ್ ಸಂಸ್ಮರಣಾ ಕಾರ್ಯಕ್ರಮ’ದ ಸಮೂಹ ಗಾಯನದ ಪೂರ್ವಭಾವಿ ತರಬೇತಿಗೆ ಸರ್ಕಾರಿ ಪದವಿಪೂರ್ವ ಕಾಲೇಜು ವಿದ್ಯಾರ್ಥಿನಿಯರನ್ನು ಕರೆದೊಯ್ದಿದ್ದ ಪ್ರಾಂಶುಪಾಲರ ವಿರುದ್ಧ ಸರ್ಕಾರ ಶಿಸ್ತುಕ್ರಮ ಜರುಗಿಸಲು ಮುಂದಾಗಿದೆ ಎಂದು ‘ದಿ ಫೈಲ್’ ಸುದ್ದಿ ಸಂಸ್ಥೆ ವರದಿ ಮಾಡಿದೆ.

ಡಿಸೆಂಬರ್ 17ರಂದು ಹಾವೇರಿಯಲ್ಲಿ ಸಾವರ್ಕರ್ ಸಂಸ್ಮರಣೆ ಕಾರ್ಯಕ್ರಮ ನಡೆದಿತ್ತು. ಮಾಜಿ ಸಚಿವ ಕೆಎಸ್ ಈಶ್ವರಪ್ಪ, ಹಾವೇರಿ ಲೋಕಸಭಾ ಬಿಜೆಪಿ ಟಿಕೆಟ್ ಆಕಾಂಕ್ಷಿ ಕೆಈ ಕಾಂತೇಶ್ ನೇತೃತ್ವದಲ್ಲಿ ನಡೆದ ಕಾರ್ಯಕ್ರಮದಲ್ಲಿ ಸಾವರ್ಕರ್ ಮೊಮ್ಮಗ ಸತ್ಯಕಿ ಸಾವರ್ಕರ್ ಭಾಗವಹಿಸಿದ್ದರು. ಇದೇ ಕಾರ್ಯಕ್ರಮದಲ್ಲಿ ನಡೆದ ಗೀತ ಗಾಯನ ಕಾರ್ಯಕ್ರಮದ ಪೂರ್ವ ಸಿದ್ಧತೆಗೆ ವಿದ್ಯಾರ್ಥಿನಿಯರನ್ನು ಕರೆದೊಯ್ದಿದ್ದರು ಎನ್ನಲಾಗಿದೆ.

ಪ್ರಾಂಶುಪಾಲರ ವಿರುದ್ಧ ಶಿಕ್ಷಣ ಇಲಾಖೆ ಕ್ರಮ ಕೈಗೊಳ್ಳಲು ಮುಂದಾಗಿರುವ ದಾಖಲಾತಿಗಳು ‘ದಿ ಫೈಲ್’ಗೆ ಲಭ್ಯವಾಗಿವೆ ಎನ್ನಲಾಗಿದ್ದು, ‘ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಸರ್ಕಾರದ ಪ್ರಧಾನ ಕಾರ್ಯದರ್ಶಿ ಹಾಗೂ ಹಾವೇರಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು (ಸಿಇಒ) ಡಿಸೆಂಬರ್ 12ರಂದು ಹಾವೇರಿ ತಾಲೂಕಿನ ಇಜಾರಿ ಲಕ್ಕಾಪುರದ ಸರ್ಕಾರಿ ಪಿಯು ಕಾಲೇಜಿಗೆ ಪರಿಶೀಲನೆಗೆಂದು ತೆರಳಿದ್ದಾಗ ಈ ಪ್ರಕರಣ ಪತ್ತೆಯಾಗಿದೆ ಎನ್ನಲಾಗಿದೆ.

ಸಿಇಒ ಪರಿಶೀಲನೆಗೆ ತೆರಳಿದ್ದಾಗ, ಕಾಲೇಜಿನ ವಾಣಿಜ್ಯ ವಿಭಾಗದ ಪ್ರಥಮ ಹಿಯುಸಿ ವಿಭಾಗದ ವಿದ್ಯಾರ್ಥಿನಿಯರ ಹಾಜರಾತಿ ಕಡಿಮೆ ಇರುವುದನ್ನು ಗಮನಿಸಿದ್ದರು. ಈ ಬಗ್ಗೆ ಅತಿಥಿ ಉಪನ್ಯಾಸಕರಾದ ನಾಗರಾಜ ಬಣಕಾರ ಎಂಬುವವರನ್ನು ವಿಚಾರಿಸಿದಾಗ, ಸುಮಾರು 95 ವಿದ್ಯಾರ್ಥಿಗಳು ರಾಷ್ಟ್ರಭಕ್ತ ಬಳಗ ಹಾವೇರಿ ಘಟಕವು 2023ರ ಡಿಸೆಂಬರ್ 17ರಂದು ಹಮ್ಮಿಕೊಂಡಿರುವ ಸಾವರ್ಕರ್ ಸಂಸ್ಮರಣೆ ಕಾರ್ಯಕ್ರಮದ ಸಮೂಹ ಗಾಯನದ ಪೂರ್ವಭಾವಿ ತರಬೇತಿಗೆ ಹೋಗಿರುವುದಾಗಿ ತಿಳಿಸಿದ್ದಾರೆ ಎಂಬ ಅಂಶವನ್ನು ಸಿಇಒ ತಮ್ಮ ಟಿಪ್ಪಣಿಯಲ್ಲಿ ತಿಳಸಿದ್ದಾರೆ ಎಂದು ವರದಿಯಾಗಿದೆ.

‘ಸಾಲದ್ದಕ್ಕೆ, ಇದೇ ವಿದ್ಯಾರ್ಥಿನಿಯರು ತರಗತಿ ಅವಧಿಯಲ್ಲಿ ಹಾವೇರಿ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆದಿದ್ದ ಖಾಸಗಿ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು ಎನ್ನಲಾಗಿದ್ದು, ಈ ಎರಡೂ ಕಾರ್ಯಕ್ರಮಗಳಿಗೆ ಪ್ರಾಂಶುಪಾಲ ಕೆ. ಕೃಷ್ಣಪ್ಪ ಅನುಮತಿ ನೀಡಿದ್ದರು’ ಎಂದು ತಮ್ಮ ಟಿಪ್ಪಣಿಯಲ್ಲಿ ಉಲ್ಲೇಖಿಸಿದ್ದಾರೆ.

ಪ್ರಾಂಶುಪಾಲ ಕೃಷ್ಣಪ್ಪ ಅವರು ಇಲಾಖೆಯಿಂದ ಆಯೋಜಿಸುವ ಶೈಕ್ಷಣಿಕ ಕಾರ್ಯಕ್ರಮಗಳನ್ನು ಹೊರತುಪಡಿಸಿ ಖಾಸಗಿ ಕಾರ್ಯಕ್ರಮಕ್ಕೆ ಭಾಗವಹಿಸಲು ಅನುಮತಿ ನೀಡುವ ಮೂಲಕ ಕರ್ತವ್ಯಲೋಪ ಎಸಗಿದ್ದಾರೆ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಜಿಲ್ಲಾ ಉಪ ನಿರ್ದೇಶಕರು ಜಿಲ್ಲಾ ಪಂಚಾಯತ್ ಸಿಇಒಗೆ ವರದಿ ಸಲ್ಲಿಸಿದ್ದರು ಎಂದು ತಿಳಿದು ಬಂದಿದೆ.

ಶೈಕ್ಷಣಿಕ ಚಟುವಟಿಕೆಗಳನ್ನು ಹೊರತುಪಡಿಸಿ ಇತರೆ ಚಟುವಟಿಕೆಗಳಿಗೆ ಇಲಾಖೆಯ ಅನುಮತಿ ಇಲ್ಲದೆ ವಿದ್ಯಾರ್ಥಿಗಳನ್ನು ಬಳಸಿಕೊಳ್ಳುವಂತಿಲ್ಲ. ಶೈಕ್ಷಣಿಕ ಚಟುವಟಿಕೆಗಳ ಹೊರತುಪಡಿಸಿದ ಇತರೆ ರಾಜಕೀಯ ಮತ್ತು ಖಾಸಗಿ ಕಾರ್ಯಕ್ರಮಗಳಿಗೆ ವಿದ್ಯಾರ್ಥಿಗಳನ್ನು ಬಳಸಿಕೊಳ್ಳಲು ಅನುಮತಿಸಲು ಅವಕಾಶವನ್ನೂ ನೀಡಬಾರದು ಎಂದು ಎಂದು ಸರ್ಕಾರದ ಸೂಚನೆ ಮತ್ತು ನಿರ್ದೇಶನಗಳಿವೆ. ಆದರೂ ಇವುಗಳನ್ನು ಪ್ರಾಂಶಪಾಲ ಕೃಷ್ಣಪ್ಪ ಅವರು ಉಲ್ಲಂಪಿಸಿದ್ದಾರೆ ಎಂದು ವರದಿಯಲ್ಲಿ ಹೇಳಲಾಗಿದೆ.

ಅದೇ ರೀತಿ ‘ಸರ್ಕಾರದ ನಿರ್ದೇಶನಗಳನ್ನು ಉಲ್ಲಂಘಿಸಿ ಕಾಲೇಜಿನ ವಿದ್ಯಾರ್ಥಿನಿಯರನ್ನು ಇಲಾಖೆಯಿಂದ ಆಯೋಜಿಸುವ ಶೈಕ್ಷಣಿಕ ಕಾರ್ಯಕ್ರಮಗಳನ್ನು ಹೊರತುಪಡಿಸಿ ರಾಜಕೀಯ, ಖಾಸಗಿ ಕಾರ್ಯಕ್ರಮದಲ್ಲಿ ಭಾಗವಹಿಸಲು ಅನುಮತಿ ನೀಡುವ ಮೂಲಕ ತಮ್ಮ ಕರ್ತವ್ಯ ನಿರ್ವಹಣೆಯಲ್ಲಿನ ಜವಾಬ್ದಾರಿಯನ್ನು ಅರಿತು ಕರ್ತವ್ಯ ನಿರ್ವಹಿಸದೇ ತೀವ್ರ ಸ್ವರೂಪದ ಕರ್ತವ್ಯಲೋಪ ಎಸಗಿದ್ದಾರೆ. ಈ ಹಿನ್ನೆಲೆಯಲ್ಲಿ ಇವರ ವಿರುದ್ಧ ಕರ್ನಾಟಕ ನಾಗರೀಕ ಸೇವಾ (ವರ್ಗೀಕರಣ, ನಿಯಂತ್ರಣ ಮತ್ತು ಮೇಲ್ಮನವಿ) ನಿಯಮಗಳು 1957ರ ಅನ್ವಯ ಶಿಸ್ತು ಕ್ರಮ ಕೈಗೊಳ್ಳಬೇಕು. ಹಾಗೆಯೇ, ಕೃಷ್ಣಪ್ಪ ಅವರ ವಿರುದ್ಧ ತಾವರೆಕೆರೆಯ ಸೀಗೇಹಳ್ಳಿಯ ಹಿಯು ಕಾಲೇಜಿನಲ್ಲಿಯೂ ಇಲಾಖೆ ವಿಚಾರಣೆ ಬಾಕಿ ಇತ್ತು. ಆದರೂ ತಮ್ಮ ವಿರುದ್ಧ ಯಾವುದೇ ವಿಚಾರಣೆ ಬಾಕಿ ಇಲ್ಲವೆಂದು ತಪ್ಪು ಮಾಹಿತಿ ನೀಡಿ ಪ್ರಾಂಶುಪಾಲರ ಹುದ್ದೆಗೆ ಬಡ್ತಿ ಹೊಂದಿದ್ದರು. ಹೀಗಾಗಿ ಇವರ ಬಡ್ತಿಯನ್ನು ಹಿಂಪಡೆಯಬೇಕು ಎಂದು ಶಾಲಾ ಶಿಕ್ಷಣ ಇಲಾಖೆಯ ನಿರ್ದೇಶಕರು ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿದ್ದಾರೆ ಎಂದು ತಿಳಿದು ಬಂದಿದೆ.

ಸಾವರ್ಕರ್ ಪಠ್ಯ-ಫೋಟೋ ವಿವಾದ: 

ಹಿಂದುತ್ವ ಸಂಘಟನೆಗಳು ಹಾಗೂ ಅದರ ಕಾರ್ಯಕರ್ತರ ನೆಚ್ಚಿನ ನಾಯಕ ವಿ.ಡಿ. ಸಾವರ್ಕರ್ ಅವರನ್ನು ಹಿಂದಿನ ಬಿಜೆಪಿ ಸರ್ಕಾರ ವಿಜೃಂಭಿಸಿತ್ತು. ರೋಹಿತ್ ಚಕ್ರತೀರ್ಥ ಅಧ್ಯಕ್ಷತೆಯ ಪಠ್ಯ ಪರಿಷ್ಕರಣೆಯಲ್ಲಿ ಸಾವರ್ಕರ್ ಪಠ್ಯವನ್ನು ಸೇರಿಸಲಾಗಿತ್ತು. ಹಿಂದೆ ವಿಧಾನಸಭೆ ಸ್ಪೀಕರ್ ಆಗಿದ್ದ ವಿಶ್ವೇಶ್ವರ ಹೆಗಡೆ ಕಾಗೇರಿ ಬೆಳಗಾವಿ ಸುವರ್ಣಸೌಧದಲ್ಲಿ ಸಾವರ್ಕರ್ ಫೋಟೋ ಅಳವಡಿಸಿದ್ದರು. ಆಗ ವಿರೋಧಿಸಿದ್ದ ಕಾಂಗ್ರೆಸ್ ಮುಖಂಡರು ನಮ್ಮ ಸರ್ಕಾರ ಅಧಿಕಾರಕ್ಕೆ ಬರುತ್ತಿದ್ದಂತೆಯೇ ಸಾವರ್ಕರ್ ಪಠ್ಯ ಕೈಬಿಟ್ಟು, ಸದನದಲ್ಲಿರುವ ಫೋಟೋ ತೆಗೆಸುವುದಾಗಿ ಹೇಳಿದ್ದರು. ಕಾಂಗ್ರೆಸ್ ಅಧಿಕಾರಕ್ಕೆ ಬರುತ್ತಿದ್ದಂತೆಯೇ ಸಾವರ್ಕರ್ ಹಾಗೂ ಸಂಘಪರಿವಾರದ ಪಠ್ಯಗಳನ್ನು ಕೈಬಿಡಲಾಗಿದೆ. ಸದನದಲ್ಲಿರುವ ಫೋಟೋ ತೆರವುಗೊಳಿಸುವ ಕುರಿತು ಚರ್ಚೆ ಜೋರಾಗಿರುವಾಗಲೇ ಈ ಪ್ರಕರಣ ಬೆಳಕಿಗೆ ಬಂದಿದೆ.

ಸಾವರ್ಕರ್ ಫೋಟೋ ತೆಗೆಸುವ ವಿಚಾರದ ಕುರಿತು ಚರ್ಚೆ ನಡೆಯುತ್ತಿರುವ ಹೊತ್ತಿನಲ್ಲೇ ಸಾವರ್ಕರ್ ಸಂಸ್ಮರಣಾ ಕಾರ್ಯಕ್ರಮಕ್ಕೆ ಕಾಲೇಜು ವಿದ್ಯಾರ್ಥಿಗಳನ್ನು ಕರೆದೊಯ್ದಿದ್ದ ಪಿಯು ಕಾಲೇಜಿನ ಪ್ರಾಂಶುಪಾಲರ ವಿರುದ್ಧ ಶಿಸ್ತು ಕ್ರಮಕ್ಕೆ ಮುಂದಾಗಿರುವ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಕ್ರಮವು ಕಾಂಗ್ರೆಸ್-ಬಿಜೆಪಿ ನಡುವೆ ವಾಕ್ಸಮರಕ್ಕೆ ಕಾರಣವಾಗುವ ಸಾಧ್ಯತೆ ಇದೆ. ಈ ಬಗ್ಗೆ ಪ್ರತಿಕ್ರಿಯೆ ಪಡೆಯಲು ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರನ್ನು ದೂರವಾಣಿ ಮೂಲಕ ಸಂಪರ್ಕ ಮಾಡಲಾಯಿತಾದರೂ ಅವರು ಕರೆ ಸ್ವೀಕರಿಸಲಿಲ್ಲ.

ಇದನ್ನೂ ಓದಿ; ಜ್ಞಾನವಾಪಿ ಮಸೀದಿ ಪ್ರಕರಣ: ಮುಸ್ಲಿಮರ ಐದು ಅರ್ಜಿಗಳು ವಜಾ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಾಂಗ್ಲಾದೇಶದ ವಿದ್ಯಾರ್ಥಿ ನಾಯಕ ಷರೀಫ್ ಉಸ್ಮಾನ್ ಹಾದಿ ಸಾವಿನ ನಂತರ ರಾಜಧಾನಿ ಢಾಕಾದಲ್ಲಿ ಭುಗಿಲೆದ್ದ ಹಿಂಸಾಚಾರ

ಢಾಕಾ: ಬಾಂಗ್ಲಾದೇಶದ ವಿದ್ಯಾರ್ಥಿ ನಾಯಕ ಷರೀಫ್ ಉಸ್ಮಾನ್ ಹಾದಿ ಸಾವಿನ ಬಳಿಕ ಬಾಂಗ್ಲಾದೇಶದ ರಾಜಧಾನಿ ಢಾಕಾದಲ್ಲಿ ಶುಕ್ರವಾರ ಬೆಳಗಿನ ಜಾವ ಹಿಂಸಾಚಾರ ಭುಗಿಲೆದ್ದಿದೆ. ಹತ್ಯೆ ಯತ್ನದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಉಸ್ಮಾನ್ ಹಾದಿ, ಸಿಂಗಾಪುರದ ಆಸ್ಪತ್ರೆಯಲ್ಲಿ...

ಸತ್ನಾದಲ್ಲಿ ಆರು ಮಕ್ಕಳಿಗೆ ಎಚ್‌ಐವಿ ಪಾಸಿಟಿವ್: ಮಧ್ಯಪ್ರದೇಶ ಸರ್ಕಾರದಿಂದ ರಕ್ತ ನಿಧಿಯ ಮುಖ್ಯಸ್ಥ ಸೇರಿ ಮೂವರು ಅಮಾನತು

ಭೋಪಾಲ್: ಸತ್ನಾ ಜಿಲ್ಲೆಯ ಸರ್ದಾರ್ ವಲ್ಲಭಭಾಯಿ ಪಟೇಲ್ ಸರ್ಕಾರಿ ಆಸ್ಪತ್ರೆಯಲ್ಲಿ ಆರು ಮಕ್ಕಳಿಗೆ ಎಚ್‌ಐವಿ ಪಾಸಿಟಿವ್ ಬಂದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಧ್ಯಪ್ರದೇಶ ಸರ್ಕಾರ ಗುರುವಾರ ರಕ್ತ ನಿಧಿಯ ಉಸ್ತುವಾರಿ ಮತ್ತು ಇಬ್ಬರು ಪ್ರಯೋಗಾಲಯ...

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...