Homeಚಳವಳಿಕೂಡಲೇ 4G, 5G ಸೇವೆ ನೀಡಿ, BSNL ಬದುಕಿಸಿ: ದೇಶಾದ್ಯಂತ ನೌಕರರ ಹೋರಾಟ

ಕೂಡಲೇ 4G, 5G ಸೇವೆ ನೀಡಿ, BSNL ಬದುಕಿಸಿ: ದೇಶಾದ್ಯಂತ ನೌಕರರ ಹೋರಾಟ

- Advertisement -
- Advertisement -

ಕೂಡಲೇ 4G, 5G ಸೇವೆ ನೀಡುವುದರ ಮೂಲಕ ಸಾರ್ವಜನಿಕ ಉದ್ಯಮವಾದ BSNL ಉಳಿಸಬೇಕು ಎಂದು ಒತ್ತಾಯಿಸಿ ಬಿಎಸ್‌ಎನ್‌ಎಲ್‌ ಅಧಿಕಾರಿಯೇತರ ಸಂಘಟನೆಗಳ ಜಂಟಿ ವೇದಿಕೆ ವತಿಯಿಂದ ಇಂದು ದೇಶಾದ್ಯಂತ ಮಾನವ ಸರಪಳಿ ಪ್ರತಿಭಟನೆ ನಡೆಯಿತು.

ಬೆಂಗಳೂರಿನ ಕಬ್ಬನ್ ಪಾರ್ಕ್ ಎದುರು ಭಿತ್ತಿಫಲಕ ಹಿಡಿದು ಬಿಎಸ್‌ಎನ್‌ಎಲ್‌ ನೌಕರರು ಪ್ರತಿಭಟನೆ ನಡೆಸಿದರು. ಬಿಎಸ್‌ಎನ್‌ಎಲ್ ನೌಕರರ ಸಂಘದ ಪ್ರಧಾನ ಕಾರ್ಯದರ್ಶಿ ಸಿ.ಕೆ.ಗುಂಡಣ್ಣ ಮಾತನಾಡಿ, “ಖಾಸಗಿ ಟೆಲಿಕಾಂ ಸಂಸ್ಥೆಗಳು ಈಗಾಗಲೇ 5G ಸೇವೆ ನೀಡುತ್ತಿರುವ ಸಂದರ್ಭದಲ್ಲಿ ಸರ್ಕಾರಿ ಸ್ವಾಮ್ಯದ ಬಿಎಸ್‌ಎನ್‌ಎಲ್‌ಗೆ ಇನ್ನೂ 4G ಸೇವೆ ನೀಡಲು ಸಾಧ್ಯವಾಗಿಲ್ಲ. 4ಜಿ ಸೇವೆ ನೀಡಲು ಇನ್ನು 18 ತಿಂಗಳು ಬೇಕಾಗಬಹುದು ಎಂದು ಮಾಹಿತಿ ಸಿಕ್ಕಿದೆ. ಕೇವಲ 4ಜಿ ಸೇವೆ ನೀಡಲು ಒಂದೂವರೆ ವರ್ಷ ಬೇಕಾಗುತ್ತದೆ ಅಂದರೆ ಅಷ್ಟರಲ್ಲಿ ಬಿಎಸ್‌ಎನ್‌ಎಲ್ ಸಂಪೂರ್ಣ ನಿರ್ನಾಮವಾಗುತ್ತದೆ” ಎಂದು ಆತಂಕ ವ್ಯಕ್ತಪಡಿಸಿದರು.

4G, 5G ಸೇವೆ ಇಲ್ಲದ ಏಕೈಕ ಕಾರಣಕ್ಕಾಗಿ ಪ್ರತಿ ತಿಂಗಳು ಲಕ್ಷಾಂತರ ಗ್ರಾಹಕರು ಬಿಎಸ್‌ಎನ್‌ಎಲ್ ತ್ಯಜಿಸುತ್ತಿದ್ದಾರೆ. ಹೀಗಾಗಿ ಬಿಎಸ್‌ಎನ್‌ಎಲ್ ಉಳಿಸಿಕೊಳ್ಳಲು ನಿರಂತರ ಹೋರಾಟಕ್ಕೆ ಮುಂದಾಗಿದ್ದೇವೆ. ಇದೇ ತಿಂಗಳ 16 ರಂದು ಪ್ರತಿ ರಾಜ್ಯಗಳ ರಾಜ್ಯಪಾಲರಿಗೆ ಮನವಿ ನೀಡುತ್ತೇವೆ. ಜುಲೈ 7 ರಂದು ನವದೆಹಲಿಯ ಸಂಚಾರ್ ಭವನ್ ಚಲೋ ಹೋರಾಟ ನಡೆಯಲಿದೆ ಎಂದರು.

4G, 5G ಸೇವೆ ಜೊತೆಗೆ ನಮ್ಮ ಹಳೆಯ ಬೇಡಿಕೆಗಳಾದ 2017ರ ಜನವರಿಯಿಂದ 3ನೇ ವೇತನ ಪರಿಷ್ಕರಣೆ ಆಗಬೇಕಿದೆ. ಮಾತುಕತೆಗಳು ಮುಗಿದರೂ ಬಿಎಸ್‌ಎನ್‌ಎಲ್ ಮ್ಯಾನೇಜ್‌ಮೆಂಟ್ ಕಡೆ ಕ್ಷಣದಲ್ಲಿ ವಂಚಿಸುತ್ತಿದೆ. ಇನ್ನು ಪಿಂಚಣಿ ಪರಿಷ್ಕರಣೆ ಕೂಡ ಆಗಬೇಕು. ಈ ಮೂರು ಹಕ್ಕೊತ್ತಾಯಗಳ ಈಡೇರಿಕೆಗೆ ಹೋರಾಟ ಮಾಡುತ್ತಿದ್ದೇವೆ ಎಂದರು.

ಬಿಎಸ್‌ಎನ್‌ಎಲ್‌ ಮುಳುಗುತ್ತಿರುವ ಹಡಗು

ಕರ್ನಾಟಕ ರಾಜ್ಯ ಪೊಲೀಸರು ತಾವು ಬಳಸುತ್ತಿರುವ ಸರ್ಕಾರಿ ಸ್ವಾಮ್ಯದ ಭಾರತ್‌ ಸಂಚಾರ ನಿಗಮ ಲಿಮಿಟೆಡ್‌ (ಬಿಎಸ್‌ಎನ್‌ಎಲ್‌)ನ ತಮ್ಮ ಎಲ್ಲಾ 38,000 ಅಧಿಕೃತ ಮೊಬೈಲ್ ಫೋನ್ ಸಿಮ್ ಕಾರ್ಡ್‌ಗಳನ್ನು ರಿಲಯನ್ಸ್ ಜಿಯೋಗೆ ಪೋರ್ಟ್ ಮಾಡಲು ಕಳೆದ ಫೆಬ್ರವರಿ ತಿಂಗಳಿನಲ್ಲಿಯೇ ನಿರ್ಧರಿಸಿದ್ದಾರೆ.

“ಪೊಲೀಸ್ ವ್ಯವಸ್ಥೆಯಂತಹ ತುರ್ತು ಸೇವೆಗೆ ನೆಟ್‌ವರ್ಕ್ ಉತ್ತಮವಾಗಿ ಕಾರ್ಯನಿರ್ವಹಿಸಬೇಕಾಗುತ್ತದೆ. ಲಭ್ಯವಿರುವ ನೆಟ್‌ವರ್ಕ್‌ನ ದಕ್ಷತೆಯನ್ನು ಹೆಚ್ಚಿಸಲು ಈ ಕ್ರಮ ಕೈಗೊಳ್ಳಲಾಗುತ್ತಿದೆ. ಇದು ಸಂಪೂರ್ಣವಾಗಿ ವಾಣಿಜ್ಯಿಕ ನಿರ್ಧಾರವಾಗಿದೆ” ಎಂದು ಹಿರಿಯ ಅಧಿಕಾರಿಯೊಬ್ಬರು ಹೇಳಿದ್ದಾರೆ.

“ಖಾಸಗಿ ಸಂಸ್ಥೆಗಳು 5G ಸೇವೆಗಳನ್ನು ನೀಡುತ್ತಿದ್ದರೆ, ಬಿಎಸ್‌ಎನ್‌ಎಲ್‌ ಇನ್ನೂ 4G ಸೇವೆಗಳನ್ನೂ ನೀಡುತ್ತಿಲ್ಲ. ನಮ್ಮಂಥವರ ತುರ್ತು ಸೇವೆಗೆ ಇದು ತೊಂದರೆಯುಂಟುಮಾಡಿದೆ. ವಾಣಿಜ್ಯ ಮೌಲ್ಯಮಾಪನದ ನಂತರ, ‘ಕರ್ನಾಟಕ ಟ್ರಾನ್ಸ್‌ಪರೆನ್ಸಿ ಇನ್‌ ಪಬ್ಲಿಕ್‌ ಪ್ರೊಕ್ಯೂರ್‌ಮೆಂಟ್ ಆಕ್ಟ್‌’ 1999ರ ಪ್ರಕಾರ ರಿಲಯನ್ಸ್ ಜಿಯೋವನ್ನು ಪರ್ಯಾಯ ಸೇವಾ ಪೂರೈಕೆದಾರರಾಗಿ ಆಯ್ಕೆ ಮಾಡಲಾಗಿದೆ” ಎಂದು ಅಧಿಕಾರಿ ಮಾಹಿತಿ ನೀಡಿದ್ದಾರೆ.

ಭಾರತೀಯ ರೈಲ್ವೇ ಮತ್ತು ತೆಲಂಗಾಣ ಪೊಲೀಸ್‌ ಸೇರಿದಂತೆ ಕೇಂದ್ರ ಸರ್ಕಾರದ ಹಲವು ಇಲಾಖೆಗಳಲ್ಲಿ ರಿಲಯನ್ಸ್ ಜಿಯೋಗೆ ಪೋರ್ಟ್‌ ಆಗಲು ನಿರ್ದೇಶನ ನೀಡಲಾಗಿದೆ. ಒಟ್ಟಾರೆಯಾಗಿ ಸಾರ್ವಜನಿಕ ವಲಯದ ಪ್ರಮುಖ ಸಂಸ್ಥೆಯೊಂದು ಸರ್ಕಾರದ ನಿರ್ಲಕ್ಷ್ಯ ಮತ್ತು ಖಾಸಗಿಯವರ ಲಾಬಿಗೆ ಕೊನೆಯುಸಿರೆಳೆಯುವ ಸ್ಥಿತಿಗೆ ಬಂದು ತಲುಪಿದೆ.

ಇದನ್ನೂ ಓದಿ: BSNL ದುಸ್ಥಿತಿಗೆ ಕೇಂದ್ರ ಸರ್ಕಾರವೇ ಹೊಣೆ: ಹಾಗಾದರೆ ಯಾರು ದೇಶದ್ರೋಹಿಗಳು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ್ಯಾಲೆಸ್ತೀನ್ ಜನರೊಂದಿಗೆ ಒಗ್ಗಟ್ಟು ಪ್ರದರ್ಶನ: ದೆಹಲಿಯ ಮೆಕ್‌ಡೊನಾಲ್ಡ್ಸ್ ಹೊರಗೆ ಪ್ರತಿಭಟನೆ

ಪ್ಯಾಲೆಸ್ಟೈನ್ ಜೊತೆ ಒಗ್ಗಟ್ಟಿನ ಭಾರತೀಯ ಜನರು (ಐಪಿಎಸ್‌ಪಿ) ಗುಂಪಿನ ಸದಸ್ಯರು (ಏ.3) ಜನಪಥ್ ಪ್ರದೇಶದ ಮೆಕ್‌ಡೊನಾಲ್ಡ್ಸ್ ಔಟ್‌ಲೆಟ್‌ನ ಹೊರಗೆ ದಿಢೀರ್ ಪ್ರತಿಭಟನೆಯನ್ನು ಆಯೋಜಿಸಿದ್ದರು. ಪ್ಯಾಲೆಸ್ತೀನಿಯನ್ನರನ್ನು ಒಳಗೊಂಡ ನಡೆಯುತ್ತಿರುವ ಸಂಘರ್ಷದಲ್ಲಿ ಮೆಕ್‌ಡೊನಾಲ್ಡ್ಸ್ ಮತ್ತು ಕೋಕಾ-ಕೋಲಾದಂತಹ ಬಹುರಾಷ್ಟ್ರೀಯ...

‘ಇರಾನಿಯನ್ನರು ಸ್ಮಾರ್ಟ್ ಚೆಸ್ ಆಡುತ್ತಿದ್ದು, ಟ್ರಂಪ್ ಭ್ರಮಾಲೋಕದಲ್ಲಿದ್ದಾರೆ..’; ಮಾಜಿ ರಾಜತಾಂತ್ರಿಕ ಅಧಿಕಾರಿ ಕೆ.ಪಿ. ಫ್ಯಾಬಿಯನ್

ಪ್ರಸ್ತುತ ನಡೆಯುತ್ತಿರುವ ಪಶ್ಚಿಮ ಏಷ್ಯಾ ಸಂಘರ್ಷದ ಬಗ್ಗೆ ಮಾತನಾಡಿದ ಭಾರತದ ಮಾಜಿ ರಾಯಭಾರಿ ಕೆ.ಪಿ. ಫ್ಯಾಬಿಯನ್, "ಇರಾನಿಯನ್ನರು ಸ್ಮಾರ್ಟ್ ಚೆಸ್ ಆಟವನ್ನು ಆಡುತ್ತಿದ್ದಾರೆ. ಆದರೆ, ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗಳು...

‘ನಾನು ಸಂಸತ್ತಿಗೆ ಹೋಗುವುದು ಗದ್ದಲ ಸೃಷ್ಟಿಸಲು ಅಲ್ಲ’ : ಎಎಪಿ ಆರೋಪಗಳನ್ನು ತಳ್ಳಿ ಹಾಕಿದ ರಾಘವ್ ಚಡ್ಡಾ

ತನ್ನ ವಿರುದ್ದ ಆಮ್‌ ಆದ್ಮಿ ಪಕ್ಷ (ಎಎಪಿ) ಮಾಡಿರುವ ಎಲ್ಲಾ ಆರೋಪಗಳನ್ನು ರಾಘವ್ ಚಡ್ಡಾ ಶನಿವಾರ (ಏ.4) ಅಲ್ಲಗಳೆದಿದ್ದು, "ಅವೆಲ್ಲವೂ ಸುಳ್ಳು ಮತ್ತು ಸಂಘಟಿತ ಅಭಿಯಾನದ ಭಾಗ" ಎಂದಿದ್ದಾರೆ. "ಸಂಸತ್ತಿನಲ್ಲಿ ನನ್ನ ಉದ್ದೇಶ...

ಎಡರಂಗದಲ್ಲಿ ಎಡಪಂಥೀಯರೇ ಇಲ್ಲ; ದ್ವೇಷ ಹರಡುವ ಜನರೊಂದಿಗೆ ಪಿಣರಾಯಿ ಪಾಲುದಾರಿಕೆ ಹೊಂದಿದ್ದಾರೆ: ರಾಹುಲ್ ಗಾಂಧಿ

ಕೇರಳ ವಿಧಾನಸಭಾ ಚುನಾವಣೆ ಪ್ರಚಾರವು ಅಂತಿಮ ಹಂತಕ್ಕೆ ತಲುಪುತ್ತಿದ್ದಂತೆ ತೀಕ್ಷ್ಣವಾದ ರಾಜಕೀಯ ದಾಳಿಯನ್ನು ಆರಂಭಿಸಿದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, "ಸಿಪಿಐ-ಎಂ ನೇತೃತ್ವದ ಎಡಪಕ್ಷವು ತನ್ನ ಸೈದ್ಧಾಂತಿಕ ತಿರುಳನ್ನು ಕಳೆದುಕೊಳ್ಳುತ್ತಿದೆ" ಎಂದು ಆರೋಪಿಸಿದ್ದಾರೆ. "ಎಲ್‌ಡಿಎಫ್...

ಬಿಜೆಪಿ ಟಿಕೆಟ್ ನಿರಾಕರಿಸಿಲ್ಲ, ನಾನೇ ಸ್ಪರ್ಧಿಸಲ್ಲ ಅಂದಿದ್ದೆ : ಅಣ್ಣಾಮಲೈ

"ವಿಧಾನಸಭಾ ಚುನಾವಣೆಗೆ ಬಿಜೆಪಿ ನನಗೆ ಟಿಕೆಟ್ ನಿರಾಕರಿಸಿಲ್ಲ, ನಾನೇ ಸ್ಪರ್ಧಿಸಲ್ಲ ಎಂದು ಮುಂಚಿತವಾಗಿ ಹೈಕಮಾಂಡ್‌ಗೆ ತಿಳಿಸಿದ್ದೆ" ಎಂದು ತಮಿಳುನಾಡು ಬಿಜೆಪಿಯ ಮಾಜಿ ರಾಜ್ಯಾಧ್ಯಕ್ಷ ಕೆ. ಅಣ್ಣಾಮಲೈ ಹೇಳಿದ್ದಾರೆ. ಚೆನ್ನೈ ವಿಮಾನ ನಿಲ್ದಾಣದಲ್ಲಿ ಶನಿವಾರ...

ಸುರಕ್ಷಿತವಾಗಿ ಹಾರ್ಮುಜ್ ದಾಟಿದ 7ನೇ ಎಲ್‌ಪಿಜಿ ಹಡಗು; ಸರದಿಯಲ್ಲಿ ಕಾಯುತ್ತಿವೆ ಭಾರತದ 17 ಟ್ಯಾಂಕರ್‌ಗಳು

ಭಾರತದ ಧ್ವಜ ಹೊಂದಿದ್ದ ಮತ್ತೊಂದು ದ್ರವೀಕೃತ ಪೆಟ್ರೋಲಿಯಂ ಅನಿಲ (ಎಲ್‌ಪಿಜಿ) ಟ್ಯಾಂಕರ್, ಗ್ರೀನ್ ಸಾನ್ವಿ ಹೆಸರಿನ ಹಡಗು ಹಾರ್ಮುಜ್ ಜಲಸಂಧಿಯ ಪೂರ್ವಕ್ಕೆ ಯಶಸ್ವಿಯಾಗಿ ತಲುಪಿದೆ. ಹಡಗು ಟ್ರ್ಯಾಕಿಂಗ್ ದತ್ತಾಂಶದ ಪ್ರಕಾರ, ನಡೆಯುತ್ತಿರುವ ಪಶ್ಚಿಮ...

ಸಿಬಿಎಸ್‌ಇ ಹಿಂದಿ ಹೇರಿಕೆಯು ತ್ರಿಭಾಷಾ ಸೂತ್ರ ಜಾರಿಯ ‘ರಹಸ್ಯ ಕಾರ್ಯವಿಧಾನ’: ಸ್ಟಾಲಿನ್ ಆರೋಪ

ಸಿಬಿಎಸ್‌ಇ ಇತ್ತೀಚೆಗೆ ಅನಾವರಣಗೊಳಿಸಿದ ಪಠ್ಯಕ್ರಮ ಚೌಕಟ್ಟಿನ ಕುರಿತು ಮಾತನಾಡಿದ ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್, "ಮೂರು ಭಾಷಾ ಸೂತ್ರ ಎಂದು ಕರೆಯಲ್ಪಡುವುದು ವಾಸ್ತವದಲ್ಲಿ ಹಿಂದಿ ಮಾತನಾಡದ ಪ್ರದೇಶಗಳಿಗೆ ಹಿಂದಿ ವಿಸ್ತರಿಸುವ ರಹಸ್ಯ ಕಾರ್ಯವಿಧಾನವಾಗಿದೆ"...

‘ತಿಂದ ಮನೆಗೆ ಕನ್ನ ಹಾಕುವುದು ತರವಲ್ಲ, ನಿಮ್ಮ ಅಧಿಕ ಪ್ರಸಂಗ ಕರ್ನಾಟಕದ ಜನತೆ ಒಪ್ಪುವುದಿಲ್ಲ’ : ರಾಜ್ಯಪಾಲರ ವಿರುದ್ಧ ಕರವೇ ಕಿಡಿ

ರಾಜ್ಯದಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳಲ್ಲಿ ತೃತೀಯ ಭಾಷೆಗೆ ಗ್ರೇಡಿಂಗ್ ನೀಡುವ ಸರ್ಕಾರದ ನಿರ್ಧಾರವನ್ನು ಮರುಪರಿಶೀಲಿಸುವಂತೆ ಮುಖ್ಯ ಕಾರ್ಯದರ್ಶಿಗಳಿಗೆ ಪತ್ರ ಬರೆದಿರುವ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ವಿರುದ್ಧ ಕರ್ನಾಟಕ ರಕ್ಷಣಾ ವೇದಿಕೆ (ಕರವೇ) ರಾಜ್ಯಾಧ್ಯಕ್ಷ...

‘ತಪ್ಪಾಗಿದೆ’ : ಕೇಂದ್ರ ಸರ್ಕಾರದ ಟ್ರಾನ್ಸ್‌ಜೆಂಡರ್‌ ವಿಧೇಯಕದ ಕುರಿತ ಟೀಕೆಗಳನ್ನು ಕೈಬಿಟ್ಟ ರಾಜಸ್ಥಾನ ಹೈಕೋರ್ಟ್

ಟ್ರಾನ್ಸ್‌ಜೆಂಡರ್ ಕಾಯ್ದೆ, 2019ರಲ್ಲಿ ಬದಲಾವಣೆಗಳನ್ನು ತರಲಿರುವ ಕೇಂದ್ರ ಸರ್ಕಾರದ ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ವಿಧೇಯ, 2026ರ ಕುರಿತು ಈ ಹಿಂದೆ ಮಾಡಿದ್ದ ವಿಮರ್ಶಾತ್ಮಕ ಟಿಪ್ಪಣಿಗಳನ್ನು ರಾಜಸ್ಥಾನ ಹೈಕೋರ್ಟ್ ತೆಗೆದುಹಾಕಿದೆ ಎಂದು...

ಯುಸಿಸಿ ಜಾರಿ ನಂತರ ‘ಜನಸಂಖ್ಯಾ ನಿಯಂತ್ರಣ’ ಕಾನೂನಿಗೆ ಮುಂದಾದ ಉತ್ತರಾಖಂಡ ಬಿಜೆಪಿ ಸರ್ಕಾರ

ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತಂದ ನಂತರ, ಉತ್ತರಾಖಂಡ ಸರ್ಕಾರ ಈಗ ಜನಸಂಖ್ಯಾ ನಿಯಂತ್ರಣ ಕಾನೂನನ್ನು ತರುವ ಬಗ್ಗೆ ಯೋಚಿಸುತ್ತಿದೆ ಎಂದು ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಶುಕ್ರವಾರ ಸೂಚಿಸಿದ್ದಾರೆ. ಪ್ರಸ್ತಾವಿತ ಕ್ರಮದ...