Homeಕರೋನಾ ತಲ್ಲಣಮೃತಪಟ್ಟ ಎಲ್ಲಾ ಶಿಕ್ಷಕರನ್ನು ಕೊರೊನಾ ವಾರಿಯರ್ಸ್ ಎಂದು ಪರಿಗಣಿಸಿ 50 ಲಕ್ಷ ರೂ. ಪರಿಹಾರ ನೀಡಿ:...

ಮೃತಪಟ್ಟ ಎಲ್ಲಾ ಶಿಕ್ಷಕರನ್ನು ಕೊರೊನಾ ವಾರಿಯರ್ಸ್ ಎಂದು ಪರಿಗಣಿಸಿ 50 ಲಕ್ಷ ರೂ. ಪರಿಹಾರ ನೀಡಿ: ಕುಮಾರಸ್ವಾಮಿ

- Advertisement -
- Advertisement -

ಚುನಾವಣೆ ಕರ್ತವ್ಯದಲ್ಲಿ ದುಡಿದ ಮತ್ತು ವಿದ್ಯಾಗಮ ಯೋಜನೆ ಮೂಲಕ ಪಾಠ ಮಾಡಿದ ಕಲ್ಯಾಣ ಕರ್ನಾಟಕದ 145 ಶಿಕ್ಷಕರು ಕೊರೋನಾ ಸೋಂಕಿನಿಂದ ಮೃತಪಟ್ಟಿದ್ದಾರೆ. ಉಳಿದ ಕಡೆ ಮೃತಪಟ್ಟವರ ಲೆಕ್ಕ ಸಿಗುತ್ತಿಲ್ಲ. ಮೃತಪಟ್ಟ ಎಲ್ಲಾ ಶಿಕ್ಷಕರನ್ನು ಕೊರೊನಾ ವಾರಿಯರ್ಸ್ ಎಂದು ಪರಿಗಣಿಸಿ ಕನಿಷ್ಠ 50 ಲಕ್ಷ ರೂ ಪರಿಹಾರ ನೀಡಿ ಎಂದು ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಸೋಮವಾರ ರಾಜ್ಯ ಸರ್ಕಾರಕ್ಕೆ ಒತ್ತಾಯಿಸಿದ್ದಾರೆ.

“145ಕ್ಕೂ ಹೆಚ್ಚು ಶಿಕ್ಷಕರು ಹೈದರಾಬಾದ್-ಕರ್ನಾಟಕದಲ್ಲಿ ಅಂದರೆ ಕಲ್ಯಾಣ ಕರ್ನಾಟಕದಲ್ಲಿ ಸಾವನ್ನಪ್ಪಿದ್ದಾರೆ. ಸರ್ಕಾರ ಕೊಟ್ಟ ಆದೇಶ ಪಾಲಿಸಿ ರಾಜ್ಯದಾದ್ಯಂತ ಇನ್ನೂ ಹಲವು ಶಿಕ್ಷಕರ ಪ್ರಾಣ ಹೋಗಿದೆ” ಎಂದು ಅವರು ಟ್ವೀಟ್ ಮಾಡಿದ್ದಾರೆ.

ಇದನ್ನೂ ಓದಿ: ಒಡಿಶಾದ ಬುಡಕಟ್ಟು ಸಮುದಾಯಗಳಲ್ಲಿ ಹೆಚ್ಚಿದ ಸೋಂಕು: ಕೊರೊನಾ ಕೇಂದ್ರಗಳನ್ನು ಆರಂಭಿಸಲು ಒತ್ತಾಯ

“ಶಿಕ್ಷಕರನ್ನು ಕೊರೋನಾ ವಾರಿಯರ್ಸ್ ಎಂದು ಪರಿಗಣಿಸಬೇಕು. ಅವರನ್ನು ಚುನಾವಣೆ ಹಾಗೂ ಮತ್ಯಾವುದೋ ಕಾರಣಕ್ಕೆ ನಿಯೋಜಿಸಿದ ಸರ್ಕಾರವೇ ಈ ಸಾವುಗಳ ಸಂಪೂರ್ಣ ಹೊಣೆ ಹೊರಬೇಕು. ಇನ್ನೂ ಸಾವಿರಾರು ಶಿಕ್ಷಕರು ಕೊರೋನಾ ಸೋಂಕಿನಿಂದ ಬಳಲುತ್ತಿದ್ದಾರೆ” ಎಂದು ಅವರು ಹೇಳಿದ್ದಾರೆ.

“ಭವಿಷ್ಯ ಕಟ್ಟುವ ಶಿಕ್ಷಕರ ಬಗ್ಗೆ ಸರ್ಕಾರದ ಉಡಾಫೆ ಹಾಗೂ ದಿವ್ಯ ನಿರ್ಲಕ್ಷ್ಯ ಧೋರಣೆ ಬಗ್ಗೆ ನನ್ನ ಧಿಕ್ಕಾರವಿದೆ. ಸರ್ಕಾರ ಈ ಬಗ್ಗೆ ತುರ್ತು ಕ್ರಮ ಕೈಗೊಳ್ಳಬೇಕು” ಎಂದು ಕುಮಾರಸ್ವಾಮಿ ಒತ್ತಾಯಿಸಿದ್ದರೆ.

ಇದನ್ನೂ ಓದಿ: ‘ಟೂಲ್‌ಕಿಟ್-ಲೆಟರ್‌ಹೆಡ್ ಫೋರ್ಜರಿ ಪ್ರಕರಣ: ಬಿಜೆಪಿಯ ರಮಣಸಿಂಗ್, ಸಂಬಿತ್ ಪಾತ್ರಾ ವಿರುದ್ಧ ಎಫ್‌ಐಆರ್ ದಾಖಲು

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಹಾಸನ ಪೆನ್‌ಡ್ರೈವ್ ಪ್ರಕರಣ: ಎಸ್‌ಐಟಿ ರಚಿಸಲು ಕೋರಿ ಮಹಿಳಾ ಆಯೋಗದಿಂದ ಸಿಎಂಗೆ ಪತ್ರ

0
ಹಾಸನ ಜಿಲ್ಲೆಯಲ್ಲಿ ಹರಿದಾಡುತ್ತಿರುವ ಪೆನ್‌ಡ್ರೈವ್ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆಗೆ ವಿಶೇಷ ತಂಡ ರಚನೆ ಮಾಡುವಂತೆ ಕೋರಿ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ. ನಾಗಲಕ್ಷ್ಮೀ ಚೌದರಿ ಅವರು ಸಿಎಂ ಸಿದ್ದರಾಮಯ್ಯ, ಗೃಹ ಸಚಿವ...