Homeಕರ್ನಾಟಕಶಾಲಾ ಮಕ್ಕಳಿಗೆ ಸೈಕಲ್ ನೀಡಿ, ಡೊನೇಶನ್ ಹಾವಳಿ ತಪ್ಪಿಸಿ: ಸಚಿವರಿಗೆ ಎಸ್‌ಎಫ್‌ಐ ಹಕ್ಕೊತ್ತಾಯ

ಶಾಲಾ ಮಕ್ಕಳಿಗೆ ಸೈಕಲ್ ನೀಡಿ, ಡೊನೇಶನ್ ಹಾವಳಿ ತಪ್ಪಿಸಿ: ಸಚಿವರಿಗೆ ಎಸ್‌ಎಫ್‌ಐ ಹಕ್ಕೊತ್ತಾಯ

- Advertisement -
- Advertisement -

ಸ್ಟೂಡೆಂಟ್ಸ್ ಫೆಡರೇಷನ್ ಆಫ್ ಇಂಡಿಯಾದ ಮುಖಂಡರು ಇಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಮಧು ಬಂಗಾರಪ್ಪರವರನ್ನು ಭೇಟಿ ಮಾಡಿ ಶಿಕ್ಷಣ ಕ್ಷೇತ್ರದ ಹಲವು ಸಮಸ್ಯೆಗಳನ್ನು ಬಗೆಹರಿಸುವಂತೆ ಹಕ್ಕೊತ್ತಾಯ ಸಲ್ಲಿಸಿದರು.

ಕಳೆದ 4 ವರ್ಷಗಳಿಂದ 8 ನೇ ತರಗತಿಯ ವಿದ್ಯಾರ್ಥಿಗಳಿಗೆ ಸೈಕಲ್ ವಿತರಿಸದೇ ಹಿಂದಿನ ಬಿಜೆಪಿ ಸರ್ಕಾರ ವಿದ್ಯಾರ್ಥಿಗಳಿಗೆ ಅನ್ಯಾಯ ಮಾಡಿದ್ದು, ನೂತನ ಸರ್ಕಾರ ಈ ವರ್ಷದಿಂದ ಸೈಕಲ್‌ ವಿತರಿಸಲು ಕ್ರಮವಹಿಸಬೇಕು ಎಂದು ಎಸ್‌ಎಫ್‌ಐ ಆಗ್ರಹಿಸಿದೆ.

ಡೊನೇಶನ್ ಹಾವಳಿ ನಿಯಂತ್ರಣ ಮಾಡಲು ಜಿಲ್ಲಾಧಿಕಾರಿಗಳ ಅಧ್ಯ ಕ್ಷತೆಯಲ್ಲಿರುವ ಡೇರಾ ಸಮಿತಿಯನ್ನು ಸಕ್ರಿಯಗೊಳಿಸಿ ಎಲ್ಲಾ ಜಿಲ್ಲೆಗಳಲ್ಲಿ ಸಭೆ ಮಾಡಲು ಸೂಚನೆ ನೀಡಬೇಕು. ಜೊತೆಗೆ ರಾಜ್ಯದ ಎಲ್ಲಾ ಸರ್ಕಾರಿ ಶಾಲಾ-ಕಾಲೇಜುಗಳಿಗೆ ಮೂಲಭೂತ ಸೌಲಭ್ಯಗಳಾದ ಶುದ್ಧ ಕುಡಿಯುವ ನೀರು, ಶೌಚಾಲಯಗಳು, ವಿದ್ಯಾರ್ಥಿಗಳ ಡೆಸ್ಕ್ ಗಳು ಒದಗಿಸಬೇಕು ಎಂದು ಮನವಿ ಮಾಡಿದೆ.

ಬಹುತೇಕ ಸರ್ಕಾರಿ ಶಾಲೆಗಳಲ್ಲಿ ಎಲ್ಲಾ ಹಂತದ ಶಿಕ್ಷಕರು ಹಾಗೂ ದೈಹಿಕ ಶಿಕ್ಷಕರ ಹುದ್ದೆಗಳು
ಖಾಲಿ ಇವೆ ಅವುಗಳನ್ನು ಭರ್ತಿ ಮಾಡಲು ಸರ್ಕಾರ ಮುಂದಾಗಬೇಕು. ರಾಜ್ಯದ ಎಲ್ಲಾ ಸರ್ಕಾರಿ ಶಾಲೆಗಳಲ್ಲಿ ‘ಡಿ’ ಗ್ರೂಪ್ ಹುದ್ದೆಗಳು ಹಾಗೂ ರಂಗ ಶಿಕ್ಷಕರ ಹುದ್ದೆಗಳನ್ನು ಮಂಜೂರು ಮಾಡಬೇಕು ಎಂದು ಹಕ್ಕೊತ್ತಾಯ ಪತ್ರದಲ್ಲಿ ತಿಳಿಸಲಾಗಿದೆ.

ಕೊರೋನ ಸಮಯದಲ್ಲಿ ಶಾಲೆ ಬಿಟ್ಟ ಮಕ್ಕಳನ್ನು ಗುರುತಿಸಿ ಅವರನ್ನು ಮರಳಿ ಶಾಲೆಗೆ ಕರೆದುಕೊಂಡು ಬರುವ ನಿಟ್ಟಿನಲ್ಲಿ ಹೊಸ ಯೋಜನೆಗಳನ್ನು ಜಾರಿ ಮಾಡಬೇಕು. ಆರ್.ಟಿ.ಇ ನಿಯಮಗಳನ್ನು ಎಲ್ಲಾ ಶಾಲೆಗಳಲ್ಲಿ ಸಮರ್ಪಕವಾಗಿ ಜಾರಿಗೊಳಿಸಲು ಆದೇಶ ಮಾಡಬೇಕು. ಸರ್ಕಾರಿ ನಿಯಮಗಳನ್ನು ಉಲ್ಲಂಘನೆ ಮಾಡಿ ಬಹುತೇಕ ಖಾಸಗಿ ಶಾಲೆಗಳಲ್ಲಿ ವಿದ್ಯಾರ್ಥಿಗಳಿಗೆ ಶೂ, ಸಾಕ್ಸ್, ನೋಟ್ ಬುಕ್ ಬಟ್ಟೆ ಮಾರಾಟ ಮಾಡುವಂತಹ ಶಾಲೆಗಳ ಮೇಲೆ ಕಾನೂನು ಕ್ರಮಕೈಗೊಳ್ಳಬೇಕು. ರಾಜ್ಯದಲ್ಲಿ ಅನಧೀಕೃತವಾಗಿವಾಗಿರುವ ಐಸಿಎಸ್‌ಇ ಹಾಗೂ ಸಿಬಿಎಸ್‌ಇ ಶಾಲೆಗಳ ಮೇಲೆ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಮನವಿ ಮಾಡಲಾಗಿದೆ.

ನಿಯೋಗದಲ್ಲಿ ರಾಜ್ಯಾಧ್ಯಕ್ಷರಾದ ಅಮರೇಶ ಕಡಗದ, ರಾಜ್ಯ ಕಾರ್ಯದರ್ಶಿ ಭೀಮನಗೌಡ ಸುಂಕೇಶ್ವರಹಾಳ, ರಾಜ್ಯ ಪಧಾದಿಕಾರಿಗಳಾದ ಗಣೇಶ ರಾಠೋಡ್, ಬಸವರಾಜ ಬೋವಿ, ವಿಜಯ ಕುಮಾರ ಹಾಗೂ ವಿಶ್ವನಾಥ ಇದ್ದರು.

ಇದನ್ನೂ ಓದಿ: ಕೋವಿಡ್ ಲಸಿಕೆ ಪಡೆದವರ ವೈಯಕ್ತಿಕ ವಿವರ ಸೋರಿಕೆ: ಇಬ್ಬರ ಬಂಧನ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಕೋವಿಶೀಲ್ಡ್ ಲಸಿಕೆಯ ಅಡ್ಡ ಪರಿಣಾಮಗಳ ಪರೀಕ್ಷೆ, ಸಂತ್ರಸ್ತರಿಗೆ ಪರಿಹಾರ ಕೋರಿ ಸುಪ್ರೀಂ ಕೋರ್ಟ್‌ಗೆ ಅರ್ಜಿ

0
ಔಷಧೀಯ ಕಂಪನಿ ಅಸ್ಟ್ರಾಜೆನೆಕಾ ತನ್ನ ಕೋವಿಶೀಲ್ಡ್ ಲಸಿಕೆ ಅಪರೂಪದ ಅಡ್ಡ ಪರಿಣಾಮಗಳನ್ನು ಉಂಟು ಮಾಡಬಹುದು ಎಂದು ಒಪ್ಪಿಕೊಂಡ ಹಿನ್ನೆಲೆ, ವಕೀಲರೊಬ್ಬರು ಈ ಲಸಿಕೆಯ ಅಡ್ಡ ಪರಿಣಾಮಗಳು ಮತ್ತು ಅಪಾಯದ ಅಂಶಗಳನ್ನು ಪರೀಕ್ಷಿಸಲು ವೈದ್ಯಕೀಯ...