Homeಮುಖಪುಟಪ್ಯಾಕೇಜ್ ಹಣವನ್ನು ಲಾಕ್‌ಡೌನ್‌ನಿಂದ ಬಳಲುವ ಜನರ ಖಾತೆಗೆ ಹಾಕಿ: ರಾಹುಲ್ ಗಾಂಧಿ

ಪ್ಯಾಕೇಜ್ ಹಣವನ್ನು ಲಾಕ್‌ಡೌನ್‌ನಿಂದ ಬಳಲುವ ಜನರ ಖಾತೆಗೆ ಹಾಕಿ: ರಾಹುಲ್ ಗಾಂಧಿ

ಕಳೆದ ವರ್ಷ ಸಾರ್ವತ್ರಿಕ ಚುನಾವಣೆಗಳಲ್ಲಿ ತಮ್ಮ ಪಕ್ಷವು ಪ್ರಸ್ತಾಪಿಸಿದ ನ್ಯಾಯ್ ಯೋಜನೆಯನ್ನು ಪ್ರಸ್ತಾಪಿಸಿದ ರಾಹುಲ್ ಗಾಂಧಿ ಅದೇ ರೀತಿಯ ಯೋಜನೆಯನ್ನು ತರಲು ಸರ್ಕಾರವನ್ನು ಒತ್ತಾಯಿಸಿದ್ದಾರೆ.

- Advertisement -
- Advertisement -

ಕೊರೊನಾ ಲಾಕ್‌ಡೌನ್ ನಿಂದಾಗಿ ಪೀಡಿತವಾಗಿದ್ದ ಆರ್ಥಿಕತೆಯನ್ನು ಮೇಲೆತ್ತಲು ಘೋಷಿಸಿದ 20 ಲಕ್ಷ ಕೋಟಿ ರೂ.ಗಳ ಪ್ಯಾಕೇಜ್ ಅನ್ನು ಮರುಪರಿಶೀಲಿಸುವಂತೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಸರ್ಕಾರವನ್ನು ಒತ್ತಾಯಿಸಿದ್ದಾರೆ. ಅದನ್ನು ಕೊರೊನಾ ಹಾಗೂ ಲಾಕ್‌ಡೌನ್‌ ಕೆಟ್ಟ ಪರಿಣಾಮದಿಂದ ಬಳಲುತ್ತಿರುವ ಜನರ ಬ್ಯಾಂಕ್ ಖಾತೆಗಳಿಗೆ ಹಣವನ್ನು ಹಾಕದಿದ್ದರೆ “ಘೋರವಾದ ಸಮಸ್ಯೆ” ಉಂಟಾಗುತ್ತದೆ ಎಂದು ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ.

ಜೂಮ್ ವಿಡಿಯೋ ಕರೆಯ ಮೂಲಕ ಸುದ್ದಿಗಾರರನ್ನುದ್ದೇಶಿಸಿ ಮಾತನಾಡಿದ ರಾಹುಲ್ ಗಾಂಧಿ, “ಸಾಲಗಳ ಪ್ಯಾಕೇಜ್” ಎಂದು ಅವರು ಹೇಳಿದ್ದ ಘೋಷಣೆಯೂ ರೈತರು ಮತ್ತು ವಲಸಿಗರಿಗೆ ತಕ್ಷಣದ ನೆರವು ನೀಡುವುದಿಲ್ಲ ಎಂದು ಹೇಳಿದ್ದಾರೆ.

“ನಮ್ಮ ಜನರಿಗೆ ಹಣ ಬೇಕು. ಪ್ರಧಾನಿ ಈ ಪ್ಯಾಕೇಜ್ ಅನ್ನು ಮರುಪರಿಶೀಲಿಸಿ, ನೇರ ನಗದು ವರ್ಗಾವಣೆಯ ಬಗ್ಗೆ ಯೋಚಿಸಬೇಕು. ನರೇಗಾ ಅಡಿಯಲ್ಲಿ 200 ಕೆಲಸದ ದಿನಗಳು, ರೈತರಿಗೆ ಹಣ ನೀಡಬೇಕು. ಯಾಕೆಂದರೆ ಅವರು ಭಾರತದ ಭವಿಷ್ಯ” ಎಂದು ರಾಹುಲ್ ಗಾಂಧಿ ಹೇಳಿದರು.

ಕಳೆದ ವರ್ಷ ಸಾರ್ವತ್ರಿಕ ಚುನಾವಣೆಗಳಲ್ಲಿ ಪ್ರಚಾರ ಮಾಡುವಾಗ ತಮ್ಮ ಪಕ್ಷವು ಪ್ರಣಾಳಿಕೆಯಲ್ಲಿ ಸೇರಿಸಿದ್ದ ನ್ಯಾಯ್ ಯೋಜನೆಯನ್ನು ಪ್ರಸ್ತಾಪಿಸಿದ ರಾಹುಲ್ ಗಾಂಧಿ ಅದೇ ರೀತಿಯ ಯೋಜನೆಯನ್ನು ತರಲು ಸರ್ಕಾರವನ್ನು ಒತ್ತಾಯಿಸಿದ್ದಾರೆ.

ನ್ಯಾಯ್ ಯೋಜನೆಯೂ ಸಮಾಜದ ಬಡ ವರ್ಗಗಳಿಗೆ ವಾರ್ಷಿಕ 72,000 ರೂ. ಆದಾಯದ ಬೆಂಬಲವನ್ನು ನೀಡುವುದಾಗಿ ಹೇಳುತ್ತದೆ.

“ಬೀದಿಯಲ್ಲಿ ನಡೆಯುವ ವಲಸೆ ಕಾರ್ಮಿಕನಿಗೆ ಹಣ ಬೇಕು, ಸಾಲವಲ್ಲ. ಬಳಲುತ್ತಿರುವ ರೈತನಿಗೆ ಹಣ ಬೇಕು, ಸಾಲವಲ್ಲ. ಇದನ್ನು ಮಾಡದಿದ್ದರೆ ಘೋರವಾದ ಸಮಸ್ಯೆಯಾಗುತ್ತದೆ” ಎಂದು ರಾಹುಲ್ ಗಾಂಧಿ ಹೇಳಿದರು.

ಈ ತಿಂಗಳ ಆರಂಭದಲ್ಲಿ ನೊಬೆಲ್ ಪ್ರಶಸ್ತಿ ಪುರಸ್ಕೃತ ಅರ್ಥಶಾಸ್ತ್ರಜ್ಞ ಅಭಿಜಿತ್ ಬ್ಯಾನರ್ಜಿ ರಾಹುಲ್ ಗಾಂಧಿ ಅವರೊಂದಿಗಿನ ಚರ್ಚೆಯಲ್ಲಿ ಈ ವಿಷಯವನ್ನು ತಿಳಿಸಿದ್ದರು. “ಜನಸಂಖ್ಯೆಯ ಶೇಕಡಾ 60 ರಷ್ಟು ಜನರಿಗೆ ನಾವು  ಸ್ವಲ್ಪ ಹಣವನ್ನು ನೀಡಿದರೆ, ಕೆಟ್ಟದ್ದೇನೂ ಆಗುವುದಿಲ್ಲ, ಇದೇ ರೀತಿಯ ಅಭ್ಯಾಸವನ್ನು ಅಮೆರಿಕಾ ಕೂಡಾ ಅನುಸರಿಸುತ್ತಿದೆ” ಎಂದು ಹೇಳಿದ್ದರು.

ಭಾರತದಲ್ಲಿ ಇದುವರೆಗೂ ಸುಮಾರು 86,000 ಕೊರೊನಾ ಪ್ರಕರಣಗಳನ್ನು ವರದಿಯಾಗಿವೆ. ಅದಲ್ಲದೆ ಸೋಂಕಿನಿಂದ 2,700 ಕ್ಕೂ ಹೆಚ್ಚು ಸಾವುಗಳು ಸಂಭವಿಸಿದೆ. ಇಷ್ಟೇ ಅಲ್ಲದೆ ಕೊರೊನಾ ಹರಡುವಿಕೆಯನ್ನು ತಡೆಯಲು ದೇಶಾದ್ಯಂತ ಘೋಷಿಸಿದ್ದ ಲಾಕ್‌ಡೌನ್ ನಿಂದಾಗಿ ಲಕ್ಷಾಂತರ ಜನರ ದುಡಿಮೆಯ ಮೇಲೆ ಕೆಟ್ಟ ಪರಿಣಾಮ ಬೀರಿದೆ, ಅದರಲ್ಲೂ ವಲಸೆ ಕಾರ್ಮಿಕರು ಮತ್ತು ದಿನಗೂಲಿ ಕಾರ್ಮಿಕರು ಹೆಚ್ಚು ಹಾನಿಗೊಳಗಾಗಿದ್ದಾರೆ.


ಓದಿ: ಗಾಯಗೊಂಡ ಬಾಲಕನನ್ನು ಸ್ಟ್ರೆಚರ್‌ನಲ್ಲಿ ಹೊತ್ತುಕೊಂಡು 1300 ಕಿ.ಮಿ. ಹೊರಟ ವಲಸೆ ಕಾರ್ಮಿಕರು


ಸದ್ದು…ಈ ಸುದ್ದಿಯೇನಾಗಿದೆ ? ವಿಶೇಷ ಕಾರ್ಯಕ್ರಮದ ಸರಣಿ ಸಂಚಿಕೆಗಾಗಿ ಇಲ್ಲಿ ಕ್ಲಿಕ್ ಮಾಡಿ


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....