Homeಕರ್ನಾಟಕಸಂಕೇಶ್ವರರ Some-ಶೋಧನೆಗಳು: ಉಚಿತ ರೇಷನ್ ಕೊಟ್ಟರೆ ಜನ ಕೆಲಸಕ್ಕೆ ಬರಲ್ಲ! ಆಮ್ಲಜನಕ ಸಮಸ್ಯೆ ಬಗೆಹರಿಸಲು ನಿಂಬೆರಸ!

ಸಂಕೇಶ್ವರರ Some-ಶೋಧನೆಗಳು: ಉಚಿತ ರೇಷನ್ ಕೊಟ್ಟರೆ ಜನ ಕೆಲಸಕ್ಕೆ ಬರಲ್ಲ! ಆಮ್ಲಜನಕ ಸಮಸ್ಯೆ ಬಗೆಹರಿಸಲು ನಿಂಬೆರಸ!

ಕೊರೋನಾ ತಡೆಗೆ ಕೊಬ್ಬರಿ ಎಣ್ಣೆ ಸಿದ್ಧಾಂತವನ್ನು ಅವರು ಪ್ರತಿಪಾದಿಸಿದ್ದಾರೆ.

- Advertisement -
- Advertisement -

‘ಹಂಗೆಲ್ಲ ಫ್ರೀಯಾಗಿ ರೇಷನ್ ಕೊಟ್ರೆ ಜನರು ಕೆಲಸಕ್ಕೆ ಬರಲ್ಲ. ಇದರಿಂದ ಕೈಗಾರಿಗೆ ಹೊಡೆತ ಬೀಳುತ್ತೆ’ ಎಂದು ಬಿಜೆಪಿ ನಾಯಕ, ವಿಆರ್‌ಎಲ್ ಮಾಲೀಕ ವಿಜಯ ಸಂಕೇಶ್ವರ ಇಂದು ಹುಬ್ಬಳ್ಳಿಯಲ್ಲಿ ಹೇಳಿದ್ದಾರೆ ಎಂದು ಪ್ರಜಾವಾಣಿ ವರದಿ ಮಾಡಿದೆ.

ಇದನ್ನು ಹೇಳಲೆಂದೇ ಸುದ್ದಿಗೋಷ್ಠಿ ಕರೆದಿದ್ದ ಅವರು, ‘ಕೇಂದ್ರ ಸರ್ಕಾರ ಮತ್ತೆ ಉಚಿತ ಪಡಿತರ ಕೊಡಲು ಹೊರಟಿದೆ. ಇದು ಸರಿಯಲ್ಲ. ಇದು ದೇಶಕ್ಕೇ ಗಂಡಾಂತರದ ವಿಷಯವಾಗಿದ್ದು, ಕೈಗಾರಿಕಾ ಉತ್ಪಾದನೆ ಕುಂಠಿತಗೊಳ್ಳುತ್ತದೆ, ಸರ್ಕಾರದ ಈ ನಡೆ ಸರಿಯಲ್ಲ; ಎಂದು ಹೇಳಿದ್ದಾರೆ.

‘ಹೋದ ವರ್ಷ ಲಾಕ್‌ಡೌನ್ ನಂತರವೂ ಮೂರು ತಿಂಗಳು ಕೇಂದ್ರ ಸರ್ಕಾರ ಉಚಿತ ಪಡಿತರ ನೀಡಿತ್ತು. ಇದರಿಂದ ಜನ ತಮ್ಮ ಕೆಲಸದ ಸ್ಥಳ ತೊರೆದು ಊರು ಸೇರುತ್ತಾರೆ. ಕೆಲಸಕ್ಕೆ ಬರುವುದಿಲ್ಲ. ಇದು ಕಾರ್ಖಾನೆ-ಕೈಗಾರಿಕೆ ಮೇಲೆ ವ್ಯತಿರಿಕ್ತ ಪರಿಣಾಮ ಬೀರುತ್ತದೆ. ಈಗಲೂ ಎರಡನೆ ಅಲೆ ಸಂದರ್ಭದಲ್ಲಿ ಮತ್ತೆ ಉಚಿತ ಪಡಿತರ ಕೊಡಲು ಹೊರಟಿದ್ದಾರೆ. ಇದರಿಂದ ಜನರು ಮನೆಯಲ್ಲೇ ಉಳಿದು ದುಡಿಯಲು ಬರುವುದಿಲ್ಲ. ಹೀಗಾಗಿ ಇದು ಕೈಗಾರಿಕೆಗಳ ಮೇಲೆ ಕೆಟ್ಟ ಪರಿಣಾಮ ಬೀರುತ್ತದೆ. ಕೇಂದ್ರ ಸರ್ಕಾರ ಪದೇ ಪದೇ ತಪ್ಪು ಮಾಡುತ್ತಿದೆ ’ ಎಂದು ಸಂಕೇಶ್ವರ್ ಅಭಿಪ್ರಾಯಪಟ್ಟರು.

‘ನಮ್ಮಂತಹ ವಿಚಿತ್ರ ದೇಶದಲ್ಲಿ ಹೀಗೆ ಉಚಿತ ಪಡಿತರ ನೀಡುವುದು ಸರಿಯಲ್ಲ. ಜನ ಕೆಲಸಕ್ಕೇ ಬರದಂತಾಗುತ್ತದೆ’ ಎಂದು ಅವರು ಹೇಳಿದರು.

ಆಮ್ಲಜನಕಕ್ಕೆ ನಿಂಬೆರಸ ಪರ್ಯಾಯ?

ಇದೇ ಸಂದರ್ಭದಲ್ಲಿ ಅವರು ಸದ್ಯ ತಲೆದೋರಿರುವ ಆಮ್ಲಜನಕ ಬಿಕ್ಕಟ್ಟಿಗೆ ತಮ್ಮದೇ ಆದ ಪರಿಹಾರವನ್ನೂ ಸೂಚಿಸಿದರು. ‘ಉಸಿರಾಟ ಸಮಸ್ಯೆ ಇರುವವರು, ಆಮ್ಲಜನಕ ಮಟ್ಟ ಕಡಿಮೆಯಾದವರು ಮೂಗಿನೊಳಗೆ ನಿಂಬೆರಸ ಹಾಕಿಕೊಂಡರೆ ಅರ್ಧ ಗಂಟೆಯಲ್ಲಿ ಸರಳವಾಗುತ್ತದೆ. ಇದರಿಂದ ರಕ್ತದಲ್ಲಿನ ಆಮ್ಲಜನಕ ವೃದ್ಧಿಯಾಗುತ್ತದೆ’ ಎಂದು ತಿಳಿಸಿದರು.
‘ಈ ವಿಧಾನ ಅನುಸರಿಸಿದರೆ ಶೇ. 80ರಷ್ಟು ಆಮ್ಲಜನಕ ಹಾಸಿಗೆಗಳು ಖಾಲಿಯಾಗುತ್ತವೆ’ ಎಂದು ಹೇಳಿದರು.

ಕೊರೋನಾ ತಡೆಗೆ ಕೊಬ್ಬರಿ ಎಣ್ಣೆ

‘ಡಾ.ಬಿ.ಎಂ ಹೆಗಡೆ ಅವರು ಹೇಳಿರುವಂತೆ, ಮುಖ ಮತ್ತು ಮೂಗಿನ ಹೊಳ್ಳೆಗಳಿಗೆ ಕೊಬ್ಬರಿ ಎಣ್ಣೆ ಸವರಿಕೊಂಡರೆ ವೈರಸ್ ದೇಹ ಪ್ರವೇಶಿಸದಂತೆ ತಡೆಯಬಹುದು. ಬಿಸಿ ಅವಿ ಉಸಿರಾಡಿದರೆ ಕೋವಿಡ್‌ನಿಂದ ದೂರ ಉಳಿಯಬಹುದು. ನಾನು ಇದನ್ನು ಕಟ್ಟುನಿಟ್ಟಾಗಿ ಪಾಲಿಸುತ್ತಿದ್ದೇನೆ. ಮೊದಲಿಗಿಂತ ಹೆಚ್ಚು ಪ್ರಯಾಣ ಮಾಡಿದರೂ ಯಾವುದೇ ಸೋಂಕು ತಗುಲಿಲ್ಲ’ ಎಂದು ಸಂಕೇಶ್ವರ್ ತಿಳಿಸಿದರು.

ಸರ್ಕಾರ ಎರಡು ದಿನ ವಿಳಂಬವಾದರೂ ಕೊವಿಡ್ ನಿಯಂತ್ರಣಕ್ಕೆ ಉತ್ತಮ ನಿರ್ಧಾರಗಳನ್ನು ತೆಗೆದುಕೊಂಡಿದೆ. ಇಂತಹ ಬೃಹತ್ ದೇಶದಲ್ಲಿ ಇಷ್ಟು ಮಾಡಿರುವುದೇ ದೊಡ್ಡ ಸಾಧನೆ ಎಂದು ಕೇಂದ್ರ ಸರ್ಕಾರವನ್ನು ಪ್ರಶಂಸಿದರು.


ಇದನ್ನೂ ಓದಿ: ಈ ಆರೋಗ್ಯ ಬಿಕ್ಕಟ್ಟಿಗೆ ಮೋದಿ ಸರ್ಕಾರದ ಅಸಮರ್ಥತೆಯೇ ಕಾರಣ: ಡಾ. ಪರಕಾಲ ಪ್ರಭಾಕರ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...