Homeಕರ್ನಾಟಕಆಧ್ಯಾತ್ಮಕ ಸಂಘಟನೆಯಾದ ಕಾರಣಕ್ಕೆ ಯಾರೂ ಕಾನೂನಿಗಿಂತ ಮಿಗಿಲಲ್ಲ: ಜಗ್ಗಿ ವಾಸುದೇವ್‌ಗೆ ಹೈಕೋರ್ಟ್‌ ತರಾಟೆ..

ಆಧ್ಯಾತ್ಮಕ ಸಂಘಟನೆಯಾದ ಕಾರಣಕ್ಕೆ ಯಾರೂ ಕಾನೂನಿಗಿಂತ ಮಿಗಿಲಲ್ಲ: ಜಗ್ಗಿ ವಾಸುದೇವ್‌ಗೆ ಹೈಕೋರ್ಟ್‌ ತರಾಟೆ..

- Advertisement -
- Advertisement -

’ಕಾವೇರಿ ಕೂಗು’ ಅಭಿಯಾನಕ್ಕಾಗಿ ಸಾರ್ವಜನಿಕರಿಂದ ಕೋಟ್ಯಂತರ ರೂಪಾಯಿ ಸಂಗ್ರಹ ಮಾಡಿರುವ ಇಶಾ ಫೌಂಡೇಶನ್‌ ಸ್ಥಾಪಕ ಜಗ್ಗಿ ವಾಸುದೇವ್‌ ಅಫಿಡವಿಟ್‌ ಮೂಲಕ ಎಷ್ಟು ಹಣ ಸಂಗ್ರಹಿಸಿದ್ದಾರೆ ಮತ್ತು ಯಾವೆಲ್ಲಾ ವಿಧಾನಗಳ ಮೂಲಕ ಸಂಗ್ರಹಿಸಲಾಗಿದೆ ಎಂಬುದನ್ನು ಬಹಿರಂಗಪಡಿಸಬೇಕೆಂದು ಕರ್ನಾಟಕ ಹೈಕೋರ್ಟ್‌ ಆದೇಶಿಸಿದೆ.

ಆಧ್ಯಾತ್ಮಕ ಸಂಘಟನೆಯಾದ ಕಾರಣಕ್ಕೆ ಯಾರೂ ಕೂಡ ಕಾನೂನಿಗಿಂತ ಮಿಗಿಲಲ್ಲ ಎಂದು ಒತ್ತಿ ಹೇಳಿದ ಮುಖ್ಯ ನ್ಯಾಯಮೂರ್ತಿ ಅಭಯ್‌ ಓಕ ಮತ್ತು ಹೇಮಂತ್‌ ಚಂದನ್‌ಗೌಡರ್‌ ಅವರಿದ್ದ ಪೀಠ, ಜಗ್ಗಿ ವಾಸುದೇವ್‌ ಸಂಗ್ರಹಿಸಿರುವ ಹಣದ ಲೆಕ್ಕ ಕೊಡಬೇಕು ಎಂದು ತಾಕೀತು ಮಾಡಿದೆ.

ಕಾವೇರಿ ಕೂಗು ಯೋಜನೆಗೆ ಯಾವ ಕಾರಣಕ್ಕೂ ಸಾರ್ವಜನಿಕರಿಂದ ಹಣ ಸಂಗ್ರಹಿಸಬಾರದು ಎಂದು ವಕೀಲ ಎ.ವಿ. ಅಮರನಾಥನ್ ಸಲ್ಲಿಸಿದ ಸಾರ್ವಜನಿಕ ಹಿತರಕ್ಷಣಾ ಅರ್ಜಿಯ ವಿಚಾರಣೆ ನಡೆಸಿದ ಪೀಠ ಈ ತೀರ್ಮಾನಕ್ಕೆ ಬಂದಿದೆ.

ಯಾರಾದರೂ ಜನರಿಗೆ ಅರಿವು ಮೂಡಿಸಿದರೆ ಅದನ್ನು ನಾವು ಸ್ವಾಗತಿಸುತ್ತೇವೆ. ಆದರೆ ಅದರ ನೆಪದಲ್ಲಿ ಜನರಿಂದ ಒತ್ತಾಯಪೂರ್ವಕವಾಗಿ ಹಣ ಸಂಗ್ರಹಿಸುವುದನ್ನು ಒಪ್ಪುವುದಿಲ್ಲ ಎಂದು ಪೀಠ ಅಭಿಪ್ರಾಯಪಟ್ಟಿದೆ.

ಇದನ್ನೂ ಓದಿ: ಜಗ್ಗಿ ವಾಸುದೇವ್ ಹಣ ಸಂಗ್ರಹಿಸುವಂತಿಲ್ಲ: ಹೈಕೋರ್ಟ್ ನಲ್ಲಿ ಪಿ.ಐ.ಎಲ್

ಈ ಹಣ ಸಂಗ್ರಹಣೆಯ ವಿಚಾರದಲ್ಲಿ ಯಾವುದೇ ತನಿಖೆ ನಡೆಸದೇ, ಕೈಕಟ್ಟಿ ಕೂತಿರುವ ರಾಜ್ಯಸರ್ಕಾರವನ್ನು ಸಹ ಹೈಕೋರ್ಟ್‌ ತರಾಟೆಗೆ ತೆಗೆದುಕೊಂಡಿದೆ. ರಾಜ್ಯಸರ್ಕಾರದ ಹೆಸರಿನಲ್ಲಿ ಯಾರಾದರೂ ಜನರಿಂದ ಒತ್ತಾಯಪೂರ್ವಕವಾಗಿ ಹಣ ಸಂಗ್ರಹಣೆ ಮಾಡತ್ತಿದ್ದಾರೆ ಎಂಬ ದೂರು ಬಂದರೆ ಅದನ್ನು ತನಿಖೆ ಮಾಡುವುದು, ಸಮಸ್ಯೆ ಬಗೆಹರಿಸುವುದು ನಿಮ್ಮ ಕರ್ತವ್ಯವಲ್ಲವೇ ಎಂದು ಸರ್ಕಾರವನ್ನು ಪ್ರಶ್ನಿಸಿದೆ.

ಸರ್ಕಾರವು ಬಲವಂತವಾಗಿ ಹಣ ವಸೂಲಿ ಮಾಡುತ್ತಿರುವುದರ ಬಗ್ಗೆ ನಮಗೆ ಯಾವುದೇ ದೂರುಗಳು ಬಂದಿಲ್ಲ ಮತ್ತು ಸರ್ಕಾರಿ ಜಾಗದಲ್ಲಿ ಫೌಂಡೇಶನ್‌ ಕೆಲಸ ಮಾಡಲು ಬಿಡುವುದಿಲ್ಲ ಎಂದು ಸ್ಪಷ್ಟಪಡಿಸಿತು.

ಮಾಡುತ್ತಿರುವುದನ್ನು ಪ್ರಶ್ನಿಸಿ ಸಲ್ಲಿಸಿರುವ ಅರ್ಜಿ ವಿಚಾರಣೆಯಿಂದ ನ್ಯಾ.ಎಸ್.ಆರ್‌.ಕೃಷ್ಣಕುಮಾರ್‌ ಹಿಂದೆ ಸರಿದಿದ್ದಾರೆ. ’ಕಾವೇರಿ ಕೂಗು’ ಹೆಸರಲ್ಲಿ ಈಶ ಫೌಂಡೇಶನ್ ಸುಮಾರು ೨೫೩ ಕೋಟಿ ಸಸಿ ನೆಡುವ ಅಭಿಯಾನ ಹಮ್ಮಿಕೊಂಡಿದೆ. ಅದಕ್ಕಾಗಿ ಒಂದು ಸಸಿಗೆ ೪೨ ರೂ.ಗಳಂತೆ ಜನರಿಂದ ೧೦,೬೨೬ ಕೋಟಿ ರೂ. ಸಂಗ್ರಹಿಸಲಾಗುತ್ತಿದೆ ಎಂದು ವಕೀಲ ಎ.ವಿ.ಅಮರನಾಥನ್ ಅರ್ಜಿ ಸಲ್ಲಿಸಿದ್ದರು.

ಈ ಅಭಿಯಾನವು ತಲಕಾವೇರಿಯಿಂದ ತಿರುವರೂರಿನವರೆಗೆ ಕಾವೇರಿ ನದಿಗೆ ಅಡ್ಡಲಾಗಿ ಮರಗಳನ್ನು ಬೆಳೆಸುವ ಯೋಜನೆ ಹೊಂದಿದ್ದು, ಇದಕ್ಕಾಗಿ 253 ಕೋಟಿ ಸಸ್ಯಗಳನ್ನು ಸಂಗ್ರಹಿಸುವ ಗುರಿ ಹೊಂದಿದೆ. ಇದಕ್ಕಾಗಿ ಪ್ರತಿ ಮರಕ್ಕೆ 42 ರೂ. ಸಂಗ್ರಹಿಸುತ್ತಿದ್ದು ಇದು 10,626 ಕೋಟಿ ರೂ. ಆಗುತ್ತದೆ ಎಂದು ಅರ್ಜಿದಾರರ ವಕೀಲ ಎ.ವಿ. ಅಮರನಾಥನ್ ಹೈಕೋರ್ಟ್ ಗೆ ತಿಳಿಸಿದ್ದಾರೆ.

ಅರ್ಜಿದಾರ ವಕೀಲ ಎ.ವಿ.ಅಮರನಾಥನ್, ಸಸಿ ನೆಡುವುದಕ್ಕೆ ಆಕ್ಷೇಪವಿಲ್ಲ. ಆದರೆ ಸರ್ಕಾರಿ ಜಮೀನಿನಲ್ಲಿ ಇಷ್ಟೊಂದು ದೊಡ್ಡ ಮಟ್ಟದಲ್ಲಿ ಸಸಿ ನೆಡಲು ಜನರಿಂದ ಸಾವಿರಾರು ಕೋಟಿ ರೂ. ಸಂಗ್ರಹ ಮಾಡುತ್ತಿರುವುದಕ್ಕೆ ವಿರೊಧವಿದೆ ಎಂದು ಹೇಳಿದ್ದರು.

ಸಮಾನತೆ ಮತ್ತು ನ್ಯಾಯದ ಹಿತದೃಷ್ಟಿಯಿಂದ ‘ಕಾವೇರಿ ಕೂಗು ಯೋಜನೆ’ಗಾಗಿ ಸಾರ್ವಜನಿಕರಿಂದ ಯಾವುದೇ ಹಣವನ್ನು ಸಂಗ್ರಹಿಸಬಾರದು ಎಂದು ಈ ಹಿಂದೆ ಕರ್ನಾಟಕ ಹೈಕೋರ್ಟ್‌ ಜಗ್ಗಿ ವಾಸುದೇವ್ ನೇತೃತ್ವದ ಇಶಾ ಫೌಂಡೇಶನ್‌ಗೆ ನಿರ್ದೇಶನ ನೀಡಿತ್ತು.

ಪಿಐಎಲ್ ಪ್ರಕಾರ, ಕಾವೇರಿ ನದಿಗೆ ಅಡ್ಡಲಾಗಿ ತಲಕಾವೆರಿಯಿಂದ ತಿರುವರೂರುವರೆಗೆ ಮರಗಳನ್ನು ನೆಡಲು ಇಶಾ ಪ್ರತಿಷ್ಠಾನ ಯೋಜಿಸುತ್ತಿದೆ. ಅದಕ್ಕಾಗಿ 639.1 ಕಿ.ಮೀ ಉದ್ದ ತಲಕಾವೆರಿಯಿಂದ ತಿರುವರೂರುವರೆಗೆ ತನ್ನ ಬೈಕ್ ರ್ಯಾಲಿಯನ್ನು ಪ್ರಾರಂಭಿಸಿದೆ. “ಕಾವೇರಿ ಜಲಾನಯನ ಪ್ರದೇಶಕ್ಕೆ ಸಂಬಂಧಿಸಿದಂತೆ ಅಧ್ಯಯನಗಳನ್ನು ನಡೆಸಿದೆ ಎಂದು ಫೌಂಡೇಶನ್ ಹೇಳುತ್ತದೆ. ಆದರೆ ಅದರ ವರದಿಯನ್ನು ರಾಜ್ಯಕ್ಕೆ ಸಲ್ಲಿಸಬೇಕಾಗಿತ್ತು. ತಾವು ಮಾಡಿದ ಅಧ್ಯಯನಗಳನ್ನು ಚರ್ಚಿಸಿದ ನಂತರ ರಾಜ್ಯವು ಅನುಮೋದನೆ ನೀಡಬೇಕು. ಆದರೆ ಅಂತಹ ಯಾವುದೇ ಪ್ರಕ್ರಿಯೆಯನ್ನು ಕೈಗೊಳ್ಳಲಾಗುವುದಿಲ್ಲ. ರಾಜ್ಯದಿಂದ ಸರಿಯಾದ ಅನುಮೋದನೆ ಪಡೆಯದೆ ಯಾವುದೇ ಖಾಸಗಿ ಸಂಸ್ಥೆಗೆ ಸರ್ಕಾರಿ ಜಮೀನಿನಲ್ಲಿ ಯಾವುದೇ ಕೆಲಸ ಮಾಡಲು ಅನುಮತಿ ನೀಡಲಾಗುವುದಿಲ್ಲ ಎಂದು ಅರ್ಜಿದಾರರು ವಾದಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಲಂಚ ಪಡೆಯುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕ; ಲೋಕಾಯುಕ್ತ ಪೊಲೀಸರಿಂದ ಚಂದ್ರು ಲಮಾಣಿ ಬಂಧನ

ಲಂಚ ಪಡೆಯುವಾಗಲೇ ಲೋಕಾಯುಕ್ತ ಪೊಲೀಸರು ಬಿಜೆಪಿ ಶಾಸಕ ಚಂದ್ರು ಲಮಾಣಿ ಅವರನ್ನು ಬಂಧಿಸಿದ್ದಾರೆ ಎಂದು ಅಧಿಕಾರಿಗಳು ಶನಿವಾರ ತಿಳಿಸಿದ್ದಾರೆ. ಗುತ್ತಿಗೆದಾರ ವಿಜಯ್ ಪೂಜಾರ್ ಅವರ ದೂರಿನ ಮೇರೆಗೆ ಗದಗ ಲೋಕಾಯುಕ್ತ ಪೊಲೀಸರು ನಡೆಸಿದ...

ಎಐ ಶೃಂಗಸಭೆಯಲ್ಲಿ ಪ್ರತಿಭಟನೆ : ನಾಲ್ವರು ಯುವ ಕಾಂಗ್ರೆಸ್‌ ಕಾರ್ಯಕರ್ತರು 5 ದಿನ ಪೊಲೀಸ್ ಕಸ್ಟಡಿಗೆ

ನವದೆಹಲಿಯ ಭಾರತ ಮಂಟಪದಲ್ಲಿ ಆಯೋಜಿಸಿದ್ದ ಎಐ ಶೃಂಗಸಭೆಯಲ್ಲಿ ಶರ್ಟ್ ಬಿಚ್ಚಿ ಪ್ರತಿಭಟಿಸಿದ್ದ ನಾಲ್ವರು ಯುವ ಕಾಂಗ್ರೆಸ್ ಕಾರ್ಯಕರ್ತರನ್ನು ದೆಹಲಿ ನ್ಯಾಯಾಲಯ ಶನಿವಾರ (ಫೆ.21) 5 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡಿದೆ. ದೆಹಲಿ ಪೊಲೀಸರು...

ಮೈಮೇಲೆ ದೇವರು ಬಂದಂತೆ ನಟಿಸಿ ದಲಿತ ನವದಂಪತಿ ದೇವಸ್ಥಾನ ಪ್ರವೇಶ ನಿರಾಕರಣೆ: ವ್ಯಕ್ತಿ ಬಂಧನ

ಮೈಮೇಲೆ ದೇವರು ಬಂದಂತೆ ನಾಟಕವಾಡಿದ ವ್ಯಕ್ತಿಯೊಬ್ಬ, ದೇವಸ್ಥಾನಕ್ಕೆ ಬಂದಿದ್ದ ದಲಿತ ನವದಂಪತಿಯನ್ನು ಹೊರಗೆ ಕಳುಹಿಸುವ ಮೂಲಕ ಅಸ್ಪೃಶ್ಯತೆ ಆಚರಣೆ ಮಾಡಿರುವ ಘಟನೆ ತುಮಕೂರು ಜಿಲ್ಲೆಯ ತುರುವೇಕೆರೆ ತಾಲೂಕಿನ ಗೋಣಿ ತುಮಕೂರಿನಲ್ಲಿ (ಫೆ.20) ನಡೆದಿದೆ. ಗೃಹ...

ಜಾತಿವಾದಿ ಹೇಳಿಕೆ: ಜೆಎನ್‌ಯು ಉಪಕುಲಪತಿ ರಾಜೀನಾಮೆಗೆ ವಿದ್ಯಾರ್ಥಿ ಸಂಘ ಆಗ್ರಹ

ದೆಹಲಿಯ ಜವಾಹರಲಾಲ್ ನೆಹರು ವಿಶ್ವ ವಿದ್ಯಾಲಯದ (ಜೆಎನ್‌ಯು) ಉಪಕುಲಪತಿ ಶಾಂತಿಶ್ರೀ ಧೂಳಿಪುಡಿ ಪಂಡಿತ್ ಅವರು 'ದ ಸಂಡೇ ಗಾರ್ಡಿಯನ್' ಯೂಟ್ಯೂಬ್‌ ಚಾನೆಲ್‌ನ ಪಾಡ್‌ಕಾಸ್ಟ್‌ನಲ್ಲಿ 'ಜಾತಿ ಮತ್ತು ವಿಕ್ಟಿಮ್ ಕಾರ್ಡ್' ಕುರಿತು ನೀಡಿದ ಹೇಳಿಕೆ...

10 ವರ್ಷಗಳಲ್ಲಿ 33 ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ : ದಂಪತಿಗೆ ಮರಣದಂಡನೆ

ಸುಮಾರು 10 ವರ್ಷಗಳಲ್ಲಿ 33 ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣದಲ್ಲಿ ದಂಪತಿಗೆ ಮರಣದಂಡನೆ ವಿಧಿಸಿ ಉತ್ತರ ಪ್ರದೇಶದ ಬಂಡಾ ವಿಶೇಷ ಪೋಕ್ಸೋ ನ್ಯಾಯಾಲಯ ಶುಕ್ರವಾರ (ಫೆ.20) ಆದೇಶಿಸಿದೆ. ಉತ್ತರ ಪ್ರದೇಶದ...

ರಾಜ್ಯಸಭೆ ಚುನಾವಣೆ : ಬಿಹಾರದಲ್ಲಿ ಕಿಂಗ್ ಮೇಕರ್ ಆದ ಓವೈಸಿ ಪಕ್ಷ

ಮಾರ್ಚ್ 16ರಂದು ನಡೆಯಲಿರುವ ಬಿಹಾರದ ಐದು ರಾಜ್ಯಸಭಾ ಸ್ಥಾನಗಳ ಚುನಾವಣೆಯಲ್ಲಿ ಹೈದರಾಬಾದ್ ಸಂಸದ ಅಸಾದುದ್ದೀನ್ ಓವೈಸಿ ಅವರ ಎಐಎಂಐಎಂ ಪಕ್ಷವು 'ಕಿಂಗ್ ಮೇಕರ್' ಆಗಿ ಹೊರಹೊಮ್ಮಿದೆ. ಬಿಹಾರದಲ್ಲಿ ಒಂದು ರಾಜ್ಯಸಭಾ ಸ್ಥಾನ ಗೆಲ್ಲಲು ಕನಿಷ್ಠ...

ದೆಹಲಿ : ಪ್ರಧಾನಿ ಮನೆ ಬಳಿಯ ಕೊಳಗೇರಿಗಳ 717 ಕುಟುಂಬಗಳಿಗೆ ಮನೆ ಖಾಲಿ ಮಾಡುವಂತೆ ನೋಟಿಸ್

ನವದೆಹಲಿಯ ಪ್ರಧಾನಿ ನಿವಾಸದ ಬಳಿಯ ಮೂರು ಕೊಳಗೇರಿಗಳಲ್ಲಿ ವಾಸಿಸುತ್ತಿರುವ ಏಳುನೂರ ಹದಿನೇಳು ಕುಟುಂಬಗಳು ಮಾರ್ಚ್ 6ರೊಳಗೆ ತಮ್ಮ ಮನೆಗಳನ್ನು ಖಾಲಿ ಮಾಡುವಂತೆ ಸೂಚಿಸಲಾಗಿದೆ. ಇಲ್ಲದಿದ್ದರೆ ಕಾನೂನು ಕ್ರಮ ಎದುರಿಸಲು ಸಿದ್ದರಾಗುವಂತೆ ಎಚ್ಚರಿಕೆ ನೀಡಲಾಗಿದೆ...

ಹೊಸ ಅಸ್ತ್ರ ಪ್ರಯೋಗಿಸಿದ ಟ್ರಂಪ್ : ಎಲ್ಲಾ ರಾಷ್ಟ್ರಗಳ ಆಮದು ಮೇಲೆ ಶೇ.10ರಷ್ಟು ಜಾಗತಿಕ ಸುಂಕ ಘೋಷಣೆ

ಎಲ್ಲಾ ದೇಶಗಳ ಆಮದುಗಳ ಮೇಲೆ ಹೊಸದಾಗಿ ಶೇಕಡ 10 ಸುಂಕ ವಿಧಿಸುವ ಕಾರ್ಯನಿರ್ವಾಹಕ ಆದೇಶಕ್ಕೆ ಸಹಿ ಹಾಕಿರುವುದಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶುಕ್ರವಾರ (ಫೆ.20) ಘೋಷಿಸಿದ್ದಾರೆ. ಇದಕ್ಕೂ ಕೆಲ ಗಂಟೆಗಳ ಮೊದಲು,...

ಭಾರತದೊಂದಿಗಿನ ವ್ಯಾಪಾರ ಒಪ್ಪಂದದಲ್ಲಿ ಯಾವುದೇ ಬದಲಾವಣೆ ಇಲ್ಲ: ಸುಪ್ರೀಂ ಕೋರ್ಟ್ ತೀರ್ಪಿನ ಬಳಿಕ ಟ್ರಂಪ್ ಹೇಳಿಕೆ

ಅಮೆರಿಕ ಸುಪ್ರೀಂ ಕೋರ್ಟ್ ಪ್ರತಿ ಸುಂಕ (Reciprocal tariffs) ನೀತಿಯನ್ನು ರದ್ದುಗೊಳಿಸಿದರೂ, ಭಾರತ-ಅಮೆರಿಕ ನಡುವಿನ ವ್ಯಾಪಾರ ಒಪ್ಪಂದದಲ್ಲಿ ಯಾವುದೇ ಬದಲಾವಣೆ ಆಗುವುದಿಲ್ಲ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶುಕ್ರವಾರ (ಫೆ.20) ತಿಳಿಸಿದ್ದಾರೆ. ಶ್ವೇತಭವನದಲ್ಲಿ...

ಗುಜರಾತ್: ‘ಲವ್ ಜಿಹಾದ್’ ತಡೆಗೆ ವಿವಾಹ ನೋಂದಣಿ ಪ್ರಕ್ರಿಯೆಯಲ್ಲಿ ಗಮನಾರ್ಹ ಬದಲಾವಣೆಗಳನ್ನು ಮಾಡುತ್ತೇವೆ; ಡಿಸಿಎಂ ಹರ್ಷ ಸಾಂಘವಿ ಘೋಷಣೆ

ಅಹಮದಾಬಾದ್: ಗುಜರಾತ್‌ನ ಉಪಮುಖ್ಯಮಂತ್ರಿ ಹರ್ಷ ಸಾಂಘವಿ ಶುಕ್ರವಾರ, ರಾಜ್ಯ ಸರ್ಕಾರವು ವಿವಾಹ ನೋಂದಣಿ ಕಾರ್ಯವಿಧಾನದಲ್ಲಿ ಬದಲಾವಣೆಗಳನ್ನು ತರಲಿದೆ ಎಂದು ಘೋಷಿಸಿದ್ದು, "ಸಮಾಜ ವಿರೋಧಿ ಶಕ್ತಿಗಳು", ವಿಶೇಷವಾಗಿ ಗುಜರಾತ್‌ನ ಹೆಣ್ಣುಮಕ್ಕಳನ್ನು "ಲವ್ ಜಿಹಾದ್" ಗಾಗಿ...