Homeಕರ್ನಾಟಕಅತ್ಯಾಚಾರಕ್ಕೊಳಗಾದ ಅಪ್ರಾಪ್ತೆಯ ಭಾವಚಿತ್ರ ಪ್ರಕಟ: ಪತ್ರಿಕೆಯ ವರದಿಗಾರ, ಸಂಪಾದಕನಿಗೆ 1 ವರ್ಷ ಜೈಲು ಶಿಕ್ಷೆ

ಅತ್ಯಾಚಾರಕ್ಕೊಳಗಾದ ಅಪ್ರಾಪ್ತೆಯ ಭಾವಚಿತ್ರ ಪ್ರಕಟ: ಪತ್ರಿಕೆಯ ವರದಿಗಾರ, ಸಂಪಾದಕನಿಗೆ 1 ವರ್ಷ ಜೈಲು ಶಿಕ್ಷೆ

- Advertisement -
- Advertisement -

ಅತ್ಯಾಚಾರಕ್ಕೊಳಗಾದ ಅಪ್ರಾಪ್ತ ಬಾಲಕಿಯ ಭಾವಚಿತ್ರವನ್ನು ಕಾನೂನು ಬಾಹಿರವಾಗಿ ಪತ್ರಿಕೆಯಲ್ಲಿ ಪ್ರಕಟಿಸಿ ವರದಿ ಮಾಡಿದ ಕೊಡಗಿನ ಪತ್ರಿಕೆಯೊಂದರ ವರದಿಗಾರ ಮತ್ತು ಸಂಪಾದಕನಿಗೆ ನ್ಯಾಯಾಲಯವು ಒಂದು ವರ್ಷ ಜೈಲು ಮತ್ತು ತಲಾ ರೂ 25,000 ದಂಡ ವಿಧಿಸಿ ಆದೇಶಿಸಿದೆ.

2019ರಲ್ಲಿ ಅಪ್ರಾಪ್ತ ವಯಸ್ಸಿನ ವಿದ್ಯಾರ್ಥಿನಿಯನ್ನು ದುಷ್ಕರ್ಮಿಗಳು ಅತ್ಯಾಚಾರವೆಸಗಿ ಕೊಲೆ ಮಾಡಿದ್ದು, ಸಿದ್ಧಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದರು. ಬಳಿಕ ನ್ಯಾಯಾಲಯ ಆರೋಪಿಗಳಿಗೆ ಜೀವಾವಧಿ ಶಿಕ್ಷೆ ಕೂಡ ವಿಧಿಸಿತ್ತು.

ಈ ಪ್ರಕರಣಕ್ಕೆ ಸಂಬಂಧಿಸಿ ಸಂತ್ರಸ್ತೆಯು ಅಪ್ರಾಪ್ತ ವಯಸ್ಕಳೆಂದು ಗೊತ್ತಿದ್ದರೂ ಸಹ ಸಿದ್ದಾಪುರದಲ್ಲಿ ಪತ್ರಿಕಾ ವರದಿಗಾರನಾಗಿರುವ ವಸಂತ್ ಕುಮಾರ್ ʼಕಾವೇರಿ ಟೈಮ್ಸ್ʼ ಎಂಬ ದಿನ ಪತ್ರಿಕೆಯಲ್ಲಿ ಭಾವಚಿತ್ರವನ್ನು ಪ್ರಕಟಿಸಿದ್ದರು.

ಈ ಬಗ್ಗೆ ದೂರು ನೀಡಿದ್ದ ಬಾಲಕಿಯ ಸಹೋದರ, ”ನನ್ನ ತಂಗಿಯ ಭಾವ ಚಿತ್ರಸಹಿತವನ್ನು ಕಾನೂನು ಬಾಹಿರವಾಗಿ ಪತ್ರಿಕೆಯಲ್ಲಿ ಪ್ರಕಟಿಸಿ, ಮಾನಸಿಕವಾಗಿ ತೊಂದರೆ ನೀಡಿದ್ದಾರೆ” ಎಂದು ಆರೋಪಿಸಿ 26.7.2019 ರಂದು ಗೋಣಿಕೊಪ್ಪ ಪೊಲೀಸ್ ಠಾಣೆಗೆ ದೂರು ನೀಡಿದ್ದರು.

ಪ್ರಕರಣದ ತನಿಖಾಧಿಕಾರಿಯಾಗಿದ್ದ ಪಿ.ಎಸ್.ಐ ಬಿ.ಎಸ್ ಶ್ರೀಧರ್, ಪ್ರಕರಣವನ್ನು ದಾಖಲಿಸಿ ಆರೋಪಿಗಳಾದ ಕಾವೇರಿ ಟೈಮ್ಸ್ ಪತ್ರಿಕೆಯ ವರದಿಗಾರ ವಸಂತ ಕುಮಾರ್ ಮತ್ತು ಪತ್ರಿಕೆಯ ಸಂಪಾದಕ ನಂಜಪ್ಪ ವಿರುದ್ಧ ತನಿಖೆಯನ್ನು ಕೈಗೊಂಡು ವಿರಾಜಪೇಟೆಯ 2ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯಕ್ಕೆ ದೋಷಾರೋಪಣಾ ಪತ್ರವನ್ನು ಸಲ್ಲಿಸಿದ್ದರು.

ಈ ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಾಲಯವು ಆರೋಪಿಗಳು ದೋಷಿ ಎಂದು ತೀರ್ಮಾನಿಸಿ ಆರೋಪಿಗಳಿಗೆ ಒಂದು ವರ್ಷದ ಸಜೆ ಮತ್ತು ತಲಾ ರೂ 25,000 ದಂಡ ವಿಧಿಸಿ ಆದೇಶಿಸಿದೆ.

ನ್ಯಾಯಾಧೀಶರಾದ ಸುಜಾತ ಅವರು ಈ ಆದೇಶವನ್ನು ಹೊರಡಿಸಿದ್ದು, ತಪ್ಪಿದಲ್ಲಿ 3 ತಿಂಗಳ ಸಜೆ ವಿಧಿಸಿದ್ದು, ಆರೋಪಿಗಳಿಗೆ ನ್ಯಾಯಾಲಯವು ಷರತ್ತು ಬದ್ಧ ಜಾಮೀನು ಕೂಡ ನೀಡಿದೆ.

ಸರ್ಕಾರದ ಪರವಾಗಿ ವಿಶೇಷ ಸರಕಾರಿ ಅಭಿಯೋಜಕರಾದ ಯಾಸಿನ್ ಅಹಮ್ಮದ್ ಅವರು ವಾದವನ್ನು ಮಂಡಿಸಿದರು.

ವರದಿಗಾರ ವಸಂತ್ ಕುಮಾರ್‌ಗೆ ಈ ಹಿಂದೆ ಪತ್ರಿಕೆಯಲ್ಲಿ ಸುಳ್ಳು ವರದಿ ಪ್ರಕಟಿಸಿದ ಪ್ರಕರಣದಲ್ಲೂ  ವಿರಾಜಪೇಟೆಯ ಕಿರಿಯ ಸಿವಿಲ್ ನ್ಯಾಯಾಲಯ 1 ಲಕ್ಷ ರೂ. ದಂಡ ವಿಧಿಸಿ ತೀರ್ಪು ನೀಡಲಾಗಿತ್ತು. ನಕಲಿ ಆರ್.ಎನ್.ಐ ಸಂಖ್ಯೆ ಬಳಸಿ ಪತ್ರಿಕೆ ಮುದ್ರಣ ಮಾಡಿರುವ ಬಗ್ಗೆಯೂ ಪ್ರಕರಣ ದಾಖಲಾಗಿತ್ತು.

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಮಣಿಪುರ ಹಿಂಸಾಚಾರಕ್ಕೆ ಒಂದು ವರ್ಷ: ನೆಮ್ಮದಿಯ ಬದುಕಿಗಾಗಿ ಇನ್ನೂ ಹೆಣಗಾಡುತ್ತಿರುವ ಜನರು

0
ಮಣಿಪುರದಲ್ಲಿ ಹಿಂಸಾಚಾರ ಪ್ರಾರಂಭಗೊಂಡು ಇಂದಿಗೆ (ಮೇ 3, 2024) ಒಂದು ವರ್ಷ ಪೂರ್ಣಗೊಂಡಿದೆ. ಭಾರತದ ಈಶಾನ್ಯದಲ್ಲಿರುವ ಪ್ರಶಾಂತವಾದ ಬೆಟ್ಟ ಗುಡ್ಡಗಳಾವೃತ ಪುಟ್ಟ ರಾಜ್ಯದ ಮೇ 3, 2023ರಿಂದ ಹಿಂಸಾಚಾರದ ಸುಳಿಯಲ್ಲಿ ಸಿಲುಕಿ ಹೆಣಗಾಡುತ್ತಿದೆ....