Homeಮುಖಪುಟನಮಗೆ 5 ವರ್ಷ ಕೊಡಿ; ಬಿಜೆಪಿಯ 25 ವರ್ಷದ ಆಡಳಿತವನ್ನು ಮರೆಯುತ್ತೀರಿ - ಗುಜರಾತ್‌ನಲ್ಲಿ ಕೇಜ್ರಿವಾಲ್

ನಮಗೆ 5 ವರ್ಷ ಕೊಡಿ; ಬಿಜೆಪಿಯ 25 ವರ್ಷದ ಆಡಳಿತವನ್ನು ಮರೆಯುತ್ತೀರಿ – ಗುಜರಾತ್‌ನಲ್ಲಿ ಕೇಜ್ರಿವಾಲ್

- Advertisement -
- Advertisement -

ಗುಜರಾತ್‌ ಸ್ಥಳೀಯ ಸಂಸ್ಥೆಗಳಿಗೆ ನಡೆದ ಚುನಾವಣೆಯ ಮತ ಎಣಿಕೆ ಇಂದು (ಮಾ.2) ನಡೆಯುತ್ತಿದೆ. ಈ ಕುರಿತು ಟ್ವೀಟ್ ಮಾಡಿರುವ ಎಎಪಿ, “ಗುಜರಾತ್‌ನಿಂದ ಒಳ್ಳೆಯ ಸುದ್ದಿ ಬರುತ್ತಿದೆ. ಗ್ರಾಮೀಣ ಪ್ರದೇಶಗಳಲ್ಲಿ 24 ಎಎಪಿ ಅಭ್ಯರ್ಥಿಗಳು ಗೆಲುವು ಸಾಧಿಸಿದ್ದಾರೆ. ಗುಜರಾತ್‌ನ ನಗರಗಳಲ್ಲಿ ಪ್ರಾರಂಭವಾದ ಕ್ರಾಂತಿ ಗ್ರಾಮೀಣ ಚುನಾವಣೆಯಲ್ಲಿಯೂ ಮುಂದುವರೆದಿದೆ” ಎಂದು ಹರ್ಷ ವ್ಯಕ್ತಪಡಿಸಿದೆ.

81 ಪುರಸಭೆಗಳು, 31 ಜಿಲ್ಲಾ ಪಂಚಾಯಿತಿಗಳು ಹಾಗೂ 231 ತಾಲ್ಲೂಕು ಪಂಚಾಯಿತಿಗಳ ಸ್ಥಾನಗಳಿಗೆ ಭಾನುವಾರ ಮತದಾನ ನಡೆದಿತ್ತು.

ಬಿಜೆಪಿ 73 ತಾಲ್ಲೂಕು ಪಂಚಾಯಿತಿ ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದ್ದರೆ, ಕಾಂಗ್ರೆಸ್‌ 11 ಹಾಗೂ ಇತರೆ ಪಕ್ಷಗಳು 3 ಸ್ಥಾನಗಳಲ್ಲಿ ಮುಂದಿವೆ. ಜಿಲ್ಲಾ ಪಂಚಾಯಿತಿಯಲ್ಲಿ ಬಿಜೆಪಿ 30 ಸ್ಥಾನಗಳಲ್ಲಿ ಮುನ್ನಡೆ ಕಾಯ್ದುಕೊಂಡಿದೆ. 60 ಪುರಸಭೆ ಸ್ಥಾನಗಳಲ್ಲಿ ಬಿಜೆಪಿ, 6 ಸ್ಥಾನಗಳಲ್ಲಿ ಕಾಂಗ್ರೆಸ್‌ ಮುನ್ನಡೆಯಲ್ಲಿದೆ.

ಇದನ್ನೂ ಓದಿ: ದೆಹಲಿ ಹಿಂಸಾಚಾರ: ಮಾಧ್ಯಮಗಳಿಗೆ ಮಾಹಿತಿ ಸೋರಿಕೆ – ಪೊಲೀಸರಿಗೆ ಹೈಕೋರ್ಟ್ ತರಾಟೆ

ಫೆಬ್ರವರಿ 21 ರಂದು ನಡೆದ ಆರು ಪುರಸಭೆಗಳ ಚುನಾವಣೆಯಲ್ಲಿ, ಎಎಪಿಯ ಸಾಧನೆ ಅಚ್ಚರಿ ಮೂಡಿಸಿತ್ತು. ಇದೇ ಮೊದಲ ಬಾರಿಗೆ ಗುಜರಾತ್‌ನ ಎಲ್ಲಾ ನಾಗರಿಕ ಚುನಾವಣೆಗಳಲ್ಲಿ ಪಕ್ಷ ಸ್ಪರ್ಧಿಸಿತ್ತು. ಸೂರತ್ ಮುನ್ಸಿಪಲ್ ಕಾರ್ಪೊರೇಶನ್ ಚುನಾವಣೆಯಲ್ಲಿ ಎಎಪಿಯು ಕಾಂಗ್ರೆಸ್ ಅನ್ನು ಹಿಂದಿಕ್ಕಿ 27 ಸ್ಥಾನಗಳನ್ನು ಪಡೆದುಕೊಂಡು ಎರಡನೇ ಸ್ಥಾನಕ್ಕೆ ಏರಿದೆ.

ಸೂರತ್ ಮತದಾರರಿಗೆ ಧನ್ಯವಾದ ಅರ್ಪಿಸಲು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ಶುಕ್ರವಾರ ಸೂರತ್‌ನಲ್ಲಿ ರೋಡ್ ಶೋ ನಡೆಸಿದರು. ಜೊತೆಗೆ ಇಲ್ಲಿ 2022 ರಲ್ಲಿ ನಡೆಯುವ ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ತಮ್ಮ ಪಕ್ಷ ಸಾಧಿಸಬೇಕಾದ ಗುರಿಯ ಕುರಿತು ಘೋಷಿಸಿದರು.

ಇದನ್ನೂ ಓದಿ: ಈ ಸಲದ ಬೇಸಿಗೆ: ಉತ್ತರ ಉರಿಯಲಿದೆ, ದಕ್ಷಿಣಕ್ಕೆ ಕೊಂಚ ರಿಲೀಫ್!

“ಒಂದು ಪಕ್ಷವು ರಾಜಿಯ ರಾಜಕಾರಣ ಮಾಡುತ್ತಿದ್ದರೆ, ಇನ್ನೊಂದು ಪಕ್ಷವು ದ್ವೇಷದ ರಾಜಕಾರಣವನ್ನು ಮಾಡುತ್ತದೆ. ಆದರೆ, ಜನರಿಗೆ ಉದ್ಯೋಗ ಬೇಕೇ ಹೊರತು ರಾಜಕೀಯವಲ್ಲ. ಜನರು ಉತ್ತಮ ರಸ್ತೆಗಳು, ಶಾಲೆಗಳು, ಕಾಲೇಜುಗಳು ಮತ್ತು ಆಸ್ಪತ್ರೆಗಳನ್ನು ಬಯಸುತ್ತಾರೆ” ಎಂದು ಕೇಜ್ರಿವಾಲ್ ಹೇಳಿದರು.

“ಅವರು 25 ವರ್ಷಗಳಲ್ಲಿ ಏನು ಮಾಡಲು ಸಾಧ್ಯವಾಗಲಿಲ್ಲವೋ ಅದನ್ನು ನಾವು 5 ವರ್ಷಗಳಲ್ಲಿ ಮಾಡುತ್ತೇವೆ. ಗುಜರಾತ್‌ನಲ್ಲಿ ಒಮ್ಮೆ ನಮಗೆ ಐದು ವರ್ಷಗಳನ್ನು ನೀಡಿ; ನಂತರ ಬಿಜೆಪಿಯ 25 ವರ್ಷಗಳ ಆಡಳಿತವನ್ನು ನೀವು ಮರೆತುಬಿಡುತ್ತೀರಿ” ಎಂದು ಕೇಜ್ರಿವಾಲ್ ವಾಗ್ದಾಳಿ ನಡೆಸಿದ್ದಾರೆ.

ಆಮ್ ಆದ್ಮಿ ಪಕ್ಷವು ಈಗಾಗಲೇ ಉತ್ತರ ಪ್ರದೇಶ, ಉತ್ತರಾಖಂಡ, ಗೋವಾ, ಪಂಜಾಬ್, ಹಿಮಾಚಲ ಪ್ರದೇಶ ಮತ್ತು ಗುಜರಾತ್ ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸುವ ಯೋಜನೆಯನ್ನು ಈಗಾಗಲೇ ಪ್ರಕಟಿಸಿದೆ.


ಇದನ್ನೂ ಓದಿ: ರೈತ ಹೋರಾಟ: ಗಾಜಿಪುರ್‌ ಗಡಿಯಿಂದ ಭಾಗಶಃ ವಾಹನ ಸಂಚಾರ ಆರಂಭ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

2ಜಿ ತರಂಗಾಂತರ ತೀರ್ಪಿನ ಸ್ಪಷ್ಟನೆ ಕೋರಿದ್ದ ಕೇಂದ್ರದ ಅರ್ಜಿ ತಿರಸ್ಕರಿಸಿದ ಸುಪ್ರೀಂ ಕೋರ್ಟ್ ರಿಜಿಸ್ಟ್ರಿ

0
2ಜಿ ತರಂಗಾಂತರ ಹಂಚಿಕೆ ಪ್ರಕರಣಕ್ಕೆ ಸಂಬಂಧಪಟ್ಟಂತೆ 2012ರಲ್ಲಿ ನೀಡಿರುವ ತೀರ್ಪಿನ ಸ್ಪಷ್ಟನೆ ಕೋರಿ ಕೇಂದ್ರ ಸರ್ಕಾರ ಸಲ್ಲಿಸಿದ್ದ ಅರ್ಜಿಯನ್ನು ಸ್ವೀಕರಿಸಲು ಸುಪ್ರೀಂ ಕೋರ್ಟ್‌ನ ರಿಜಿಸ್ಟ್ರಾರ್ ನಿರಾಕರಿಸಿದ್ದಾರೆ. ಕೆಲ ಸಂದರ್ಭಗಳಲ್ಲಿ ಸಾರ್ವಜನಿಕ ಹರಾಜು ಹೊರತುಪಡಿಸಿ...