Homeಮುಖಪುಟ"ಉದ್ಯೋಗ ನೀಡಿ, ಇಲ್ಲದಿದ್ದರೆ ಕೊಂದುಬಿಡಿ": ಅಗ್ನಿಪಥ್ ಯೋಜನೆ ವಿರೋಧಿಸಿ ಉದ್ಯೋಗಾಂಕ್ಷಿಗಳ ಪ್ರತಿಭಟನೆ

“ಉದ್ಯೋಗ ನೀಡಿ, ಇಲ್ಲದಿದ್ದರೆ ಕೊಂದುಬಿಡಿ”: ಅಗ್ನಿಪಥ್ ಯೋಜನೆ ವಿರೋಧಿಸಿ ಉದ್ಯೋಗಾಂಕ್ಷಿಗಳ ಪ್ರತಿಭಟನೆ

- Advertisement -
- Advertisement -

ನಿನ್ನೆ ತಾನೇ ಪ್ರಧಾನಿ ನರೇಂದ್ರ ಮೋದಿಯವರು ಘೋಷಿಸಿದ ಅಗ್ನಿಪಥ್ ಸೈನಿಕರ ನೇಮಕಾತಿ ಯೋಜನೆಗೆ ತೀವ್ರ ವಿರೋಧ ವ್ಯಕ್ತವಾಗಿದೆ. ಈ ಕೇವಲ ನಾಲ್ಕು ವರ್ಷಗಳ ಗುತ್ತಿಗೆ ಆಧಾರದ ಕೆಲಸ ಬೇಡ ಎಂದು ಪೂರ್ಣ ಪ್ರಮಾಣದ ಸುಭದ್ರ ಉದ್ಯೋಗ ಆಕಾಂಕ್ಷಿಗಳು ಉತ್ತರ ಪ್ರದೇಶದ ಹಲವೆಡೆ ಇಂದು ಪ್ರತಿಭಟನೆ ನಡೆಸಿದ್ದಾರೆ.

ನರೇಂದ್ರ ಮೋದಿಯವರು ಮಂಗಳವಾರ ಹೊಸ ಯೋಜನೆ ಘೋಷಿಸಿದ್ದರು. ಅದರಂತೆ 17.5 ವರ್ಷ ತುಂಬಿದ ಮತ್ತು 21 ವರ್ಷದೊಳಗಿನ 45000 ಯುವಜನರನ್ನು ಭಾರತೀಯ ಸೇನೆಗೆ ಅರೆಕಾಲಿಕ ಸಮಯಕ್ಕೆ ಗುತ್ತಿಗೆ ಆಧಾರಲದಲ್ಲಿ ನೇಮಿಸಿಕೊಳ್ಳುವುದಾಗಿ ಘೋಷಿಸಿದ್ದರು. ಅವರನ್ನು ಅಗ್ನಿವೀರ್ ಎಂದು ಕರೆಯಲಾಗುವುದು ಮತ್ತು ಅದರಲ್ಲಿ ಕೇವಲ 25% ಸೈನಿಕರಿಗೆ ಮಾತ್ರ ಭತ್ಯೆ-ಸಂಬಳ ಸೌಲಭ್ಯ ನೀಡುವುದಾಗಿ ಉಳಿದ 75% ಜನರು 4 ವರ್ಷಗಳ ಸೇವೆ ಮುಗಿಸಿ ನಿವೃತ್ತರಾಗಬೇಕೆಂದು ಹೇಳಲಾಗಿತ್ತು. ಈ ಯೋಜನೆಗೆ ರಾಷ್ಟ್ರದ್ಯಾಂತದ ಯುವಜನರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಉದ್ಯೋಗ ನೀಡಿ, ಇಲ್ಲದಿದ್ದರೆ ಕೊಂದುಬಿಡಿ ಎಂಬ ಘೋಷಣೆಗಳೊಂದಿಗೆ ಉತ್ತರ ಪ್ರದೇಶ ಮತ್ತು ಬಿಹಾರದ ಹಲವೆಡೆ ಯುವಜನರು ಪ್ರತಿಭಟನೆ ನಡೆಸಿದ್ದಾರೆ. ಟೈರ್‌ಗಳಿಗೆ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಬಿಹಾರದಲ್ಲಿ ರೈಲು ತಡೆ ಹೋರಾಟ ನಡೆಸಲಾಗಿದೆ. ಮುಜಾಫರ್‌ಪುರದಲ್ಲಿ ನಡೆದ ಪ್ರತಿಭಟನೆಯಲ್ಲಿ ಮಾತನಾಡಿದ ಪ್ರತಿಭಟನಾಕಾರರು “ನಾವು ಸೈನಿಕರ ನೇಮಕಾತಿ ಮಾಡಿಕೊಳ್ಳುತ್ತಾರೆ ಎಂದು ಸತತ ಎರಡು ವರ್ಷಗಳಿಂದ ಕಾದಿದ್ದೇವೆ. ಆದರೆ ಕೊರೊನಾ ನೆಪ ಹೇಳಿ ನೇಮಕಾತಿ ನಡೆದಿಲ್ಲ. ಈಗ ಸರ್ಕಾರವು ಗುತ್ತಿಗೆ ಆಧಾರದಲ್ಲಿ ಕೇವಲ 4 ವರ್ಷಗಳ ಅವಧಿಗೆ ನೇಮಕ ಮಾಡಿಕೊಳ್ಳಲು ಮುಂದಾಗಿರುವುದನ್ನು ಒಪ್ಪಲು ಸಾಧ್ಯವಿಲ್ಲ” ಎಂದಿದ್ದಾರೆ.

ವಯೋಮಿತಿಯನ್ನು ಸಹ 21ಕ್ಕೆ ವರ್ಷಕ್ಕೆ ಇಳಿಸಲಾಗಿದೆ. ಕಳೆದ ಎರಡು ವರ್ಷಗಳಿಂದ ಕಾದಿರುವ ಯುವಜನರು ಏನು ಮಾಡಬೇಕು. ಎರಡು ವರ್ಷಗಳ ಕಾಲ ನೇಮಕಾತಿ ಮಾಡದೇ ಇರುವುದು ಸರ್ಕಾರದ ತಪ್ಪು. ಹಾಗಾಗಿ ವಯೋಮಿತಿಯನ್ನು ಎರಡು ವರ್ಷ ಏರಿಸಿದರೆ ನಮಗೆ ನ್ಯಾಯ ಸಿಗುತ್ತದೆ ಎಂದು ಅವರು ಆಗ್ರಹಿಸಿದ್ದಾರೆ.

ನಮ್ಮನ್ನು ಮೂರ್ಖರನ್ನಾಗಿ ಮಾಡಲಾಗಿದೆ. ನಮ್ಮೊಂದಿಗೆ ಸರ್ಕಾರ ಪಬ್‌ಜಿ ರೀತಿ ಆಡುತ್ತಿದೆ. ಇಷ್ಟು ದಿನ ನೇಮಕಾತಿ ಮಾಡಿಕೊಳ್ಳದಿರುವುದು ಏಕೆ ಎಂದು ಯಾವುದೇ ಬಿಜೆಪಿ ನಾಯಕರು ಹೇಳಿಲ್ಲ. ಈಗ ಇದ್ದಕ್ಕಿದ್ದಂತೆ ಹೊಸ ಯೋಜನೆ ತಂದಿದ್ದಾರೆ. ನಮಗೆ ಭದ್ರತೆಯ ಉದ್ಯೋಗ ಸಿಗುವವರೆಗೂ ಹೋರಾಡುತ್ತೇವೆ ಎಂದು ಪ್ರತಭಟನಾಕಾರರು ಹೇಳಿದ್ದಾರೆ.

ಸರ್ಕಾರವು ಅಗ್ನಿಪಥ್ ಯೋಜನೆಯನ್ನು “ಐತಿಹಾಸಿಕ” ಎಂದು ಕರೆದಿದೆ. ಸುಮಾರು 45,000 ಸೈನಿಕರನ್ನು ಸೇನೆ, ನೌಕಾಪಡೆ ಮತ್ತು ವಾಯುಪಡೆಗೆ ಅಲ್ಪಾವಧಿಯ ಒಪ್ಪಂದದ ಮೇಲೆ ನೇಮಕ ಮಾಡಿಕೊಳ್ಳಲಾಗುವುದು ಎಂದು ಘೋಷಿಸಿದೆ. ಆ ಮೂಲಕ ಸಂಬಳ ಮತ್ತು ಪಿಂಚಣಿ ಬಿಲ್‌ಗಳ ಹೊರೆ ಕಡಿಮೆ ಮಾಡಿಕೊಳ್ಳಲು ಯೋಚಿಸುತ್ತಿದೆ. ಮುಂದಿನ 90 ದಿನಗಳಲ್ಲಿ ನೇಮಕಾತಿ ಪ್ರಾರಂಭವಾಗಲಿದ್ದು, ಜುಲೈ 2023 ರ ವೇಳೆಗೆ ಮೊದಲ ಬ್ಯಾಚ್ ಸಿದ್ಧವಾಗಲಿದೆ ಎಂದು ಸರ್ಕಾರ ಹೇಳಿದೆ.

ಸರ್ಕಾರದ ಯೋಜನೆಯನ್ನು ಆರ್‌ಜೆಡಿ ಮುಖಂಡ ತೇಜಸ್ವಿ ಯಾದವ್ ತೀವ್ರವಾಗಿ ಖಂಡಿಸಿದ್ದಾರೆ. “ದೇಶದ ಅತಿ ದೊಡ್ಡ ಉದ್ಯೋಗದಾತರಾದ “ಭಾರತೀಯ ರೈಲ್ವೇ ಮತ್ತು ಸೈನ್ಯ”ದ ನಾಗರಿಕ ಸೇವೆಯಲ್ಲಿ ಗುತ್ತಿಗೆ ಮತ್ತು ಲ್ಯಾಟರಲ್ ಎಂಟ್ರಿಯ ಹೆಸರಿನಲ್ಲಿ ಉದ್ಯೋಗಗಳನ್ನು ನೀಡಲು ಪ್ರಾರಂಭಿಸಿದರೆ ಯುವಕರು ಏನು ಮಾಡುತ್ತಾರೆ? ಭವಿಷ್ಯದಲ್ಲಿ ಬಿಜೆಪಿಯ ಬಂಡವಾಳಶಾಹಿ ಸ್ನೇಹಿತರ ವ್ಯಾಪಾರದ ನೆಲೆಗಳನ್ನು ಕಾಪಾಡಲು ಯುವಕರು ಕೇವಲ 4 ವರ್ಷಗಳ ಗುತ್ತಿಗೆ ಕೆಲಸವನ್ನು ಮಾಡುತ್ತಾರೆಯೇ?” ಎಂದು ಪ್ರಶ್ನಿಸಿದ್ದಾರೆ.

ಇದನ್ನೂ ಓದಿ: ದನ ಸಾಗಿಸುತ್ತಿದ್ದ ಮುಸ್ಲಿಂ ವ್ಯಕ್ತಿಯನ್ನು ಹೊಡೆದು ಕೊಂದಿದ್ದು ಮತ್ತು ಕಾಶ್ಮೀರ ನರಮೇಧಕ್ಕೂ ಯಾವುದೇ ವ್ಯತ್ಯಾಸ ಇಲ್ಲ: ಖ್ಯಾತ ನಟಿ ಸಾಯಿ ಪಲ್ಲವಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...

ಸರ್ಕಾರ ಆಧಾರ್ ವ್ಯವಸ್ಥೆಯನ್ನು ನಂಬುವುದಾದರೆ, SIR‌ ತಪಾಸಣೆಗೂ ಇದನ್ನೇ ಬಳಸಲಿ: ಆರ್‌ ಎಸ್‌ ಶರ್ಮಾ ಸಲಹೆ

ಪ್ರಸ್ತುತ ಚರ್ಚೆಯಲ್ಲಿರುವ ಮತದಾರರ ಪಟ್ಟಿ ಪರಿಷ್ಕರಣೆ (SIR) ಮತ್ತು ದಾಖಲೆಗಳ ತಪಾಸಣೆ ಪ್ರಕ್ರಿಯೆಗೆ ಸಂಬಂಧಿಸಿದಂತೆ ಆಧಾರ್‌ ವ್ಯವಸ್ಥೆಯ ಮಾಜಿ ಮುಖ್ಯಸ್ಥ (UIDAI) ಶರ್ಮಾ ಅವರು ಮಹತ್ವದ ಸಲಹೆಯೊಂದನ್ನು ನೀಡಿದ್ದಾರೆ. ಪ್ರತಿ ಬಾರಿ ಸಾವಿರಾರು...

ಸೋಶಿಯಲ್ ಮೀಡಿಯಾಗಳಲ್ಲಿ ಅಪ್ರಾಪ್ತರಿಗೆ ಹೆಚ್ಚುತ್ತಿರುವ ಅಪಾಯ; ಲೈಂಗಿಕ ಶೋಷಣೆ ತಡೆಗೆ ಮೆಟಾದಿಂದ ಮಹತ್ವದ ನಿರ್ಧಾರ!

ಸಾಮಾಜಿಕ ಜಾಲತಾಣಗಳ ಬಳಕೆ ಯುವಜನರು ಮತ್ತು ಮಕ್ಕಳ ದೈನಂದಿನ ಬದುಕಿನ ಅವಿಭಾಜ್ಯ ಭಾಗವಾಗಿರುವ ಬೆನ್ನಲ್ಲೇ, ಆನ್‌ಲೈನ್‌ನಲ್ಲಿ ಮಕ್ಕಳ ಲೈಂಗಿಕ ಶೋಷಣೆ ಮತ್ತು ದೌರ್ಜನ್ಯಕ್ಕೆ ಸಂಬಂಧಿಸಿದ ಪ್ರಕರಣಗಳನ್ನು ಎದುರಿಸಲು ಮೆಟಾ ಮಹತ್ವದ ನಿರ್ಧಾರ ಕೈಗೊಂಡಿದೆ....

ಬೆಂಗಳೂರಿನ ಎನ್‌ಎಲ್‌ಎಸ್‌ಐಯು‌ನಲ್ಲಿ ಉಮರ್ ಖಾಲಿದ್ ಸಾಕ್ಷ್ಯಚಿತ್ರ ಪ್ರದರ್ಶನ; ಕೇಂದ್ರದ ಹಸ್ತಕ್ಷೇಪಕ್ಕೆ ಎಬಿವಿಪಿ ಮನವಿ

ಬೆಂಗಳೂರಿನಲ್ಲಿರುವ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು‌) ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರದ ಪ್ರದರ್ಶನವನ್ನು ಕಾಯಂ ಆಗಿ ರದ್ದುಗೊಳಿಸಲು ಆರ್‌ಎಸ್ಎಸ್ ಸಂಯೋಜಿತ ವಿದ್ಯಾರ್ಥಿ ಸಂಘಟನೆ ಎಬಿವಿಪಿ ಕೇಂದ್ರ...

‘NAZA’ಗೆ ವೆನಿಸ್ ವಿಶೇಷ ಜ್ಯೂರಿ ಪ್ರಶಸ್ತಿ; ಸ್ವದೇಶ ಇಸ್ರೇಲ್‌ನ ಎಐ ಹತ್ಯಾಕಾಂಡ ಬಯಲಿಗೆಳೆದ ನಿರ್ದೇಶಕರಿಗೆ ಪೌರತ್ವ ಕಸಿಯುವ ಬೆದರಿಕೆ

ವೆನಿಸ್ ಚಲನಚಿತ್ರೋತ್ಸವದಲ್ಲಿ ವಿಶೇಷ ಜ್ಯೂರಿ ಪ್ರಶಸ್ತಿ ಗೆದ್ದ ‘NAZA’ ಸಾಕ್ಷ್ಯಚಿತ್ರದ ನಿರ್ದೇಶಕರ ವಿರುದ್ಧ ಇಸ್ರೇಲಿ ಸಂಸ್ಕೃತಿ ಸಚಿವ ಮಿಕಿ ಜೋಹರ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ‘ರಾಜ್ಯಕ್ಕೆ ದ್ರೋಹ’ ಎಸಗಿದ್ದಾರೆಂದು ಆರೋಪಿಸಿ ಅವರ ಇಸ್ರೇಲಿ...

ಕರ್ನಾಟಕದಲ್ಲಿ ಬರದ ಬರೆ; ನೀರು, ವಿದ್ಯುತ್‌ ಕೊರತೆ ಸಾಧ್ಯತೆ: ಸಿಎಂ ಡಿಕೆ ಶಿವಕುಮಾರ್‌ ಎಚ್ಚರಿಕೆ

ದುರ್ಬಲ ಮುಂಗಾರು ಹಾಗೂ ಮಳೆಯ ಕೊರತೆಯಿಂದ ಕರ್ನಾಟಕದಲ್ಲಿ ಬರ ಪರಿಸ್ಥಿತಿ ಮತ್ತಷ್ಟು ಬಿಗಡಾಯಿಸುತ್ತಿದ್ದು, ಮುಂದಿನ ದಿನಗಳಲ್ಲಿ ರಾಜ್ಯವು ಕುಡಿಯುವ ನೀರು ಮತ್ತು ವಿದ್ಯುತ್‌ ಕೊರತೆಯನ್ನು ಎದುರಿಸುವ ಸಾಧ್ಯತೆಯಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌...

2,000 ರೂ.ವರೆಗಿನ UPI ಪಾವತಿಗೆ ಶುಲ್ಕವಿಲ್ಲ ಎಂದ ಕೇಂದ್ರ ಸರ್ಕಾರ

ಡಿಜಿಟಲ್ ಪಾವತಿ ಬಳಸುವ ಕೋಟ್ಯಂತರ ಸಾಮಾನ್ಯ ಜನರಿಗೆ ಕೇಂದ್ರ ಹಣಕಾಸು ಸಚಿವಾಲಯ ಮಹತ್ವದ ಸ್ಪಷ್ಟನೆ ನೀಡಿದ್ದು, 2,000 ರೂಪಾಯಿವರೆಗಿನ ಯುಪಿಐ (UPI) ವಹಿವಾಟುಗಳಿಗೆ ಯಾವುದೇ ರೀತಿಯ ಶುಲ್ಕ ವಿಧಿಸುವಂತಿಲ್ಲ ಎಂದು ಅಧಿಸೂಚನೆ ಹೊರಡಿಸಿದೆ....

ಯಾದಗಿರಿ| ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತರ ಮೇಲೆ ಮಾರಣಾಂತಿಕ ಹಲ್ಲೆ

ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತ ಸಮುದಾಯದ ಭಕ್ತರ ಮೇಲೆ ಸವರ್ಣೀಯರು ಮಾರಣಾಂತಿಕ ಹಲ್ಲೆ ನಡೆದಿರುವ ಆರೋಪ ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಗುರುಸುಣಿಗಿ ಗುಡ್ಡದಲ್ಲಿ ಕೇಳಿಬಂದಿದೆ. ಚಾಮನಾಳ ಗ್ರಾಮದ ದಲಿತ ಭಕ್ತರನ್ನು ಗುರಿಯಾಗಿಸಿಕೊಂಡು ಗುರುಸುಣಿಗಿ...