Homeಮುಖಪುಟವಿಪಕ್ಷಗಳ ಹೆಸರು ಹೇಳಲು ಪೊಲೀಸರಿಂದ ಒತ್ತಡ: ಸಂಸತ್‌ ಭದ್ರತಾ ಲೋಪ ಆರೋಪಿಗಳಿಂದ ಹೇಳಿಕೆ

ವಿಪಕ್ಷಗಳ ಹೆಸರು ಹೇಳಲು ಪೊಲೀಸರಿಂದ ಒತ್ತಡ: ಸಂಸತ್‌ ಭದ್ರತಾ ಲೋಪ ಆರೋಪಿಗಳಿಂದ ಹೇಳಿಕೆ

- Advertisement -
- Advertisement -

ಸಂಸತ್‌ ಭವನದ ಭದ್ರತಾ ಲೋಪ ಘಟನೆಗೆ ಸಂಬಂಧಿಸಿದಂತೆ ಬಂಧಿತರಾಗಿರುವ ಆರೋಪಿಗಳು ದೆಹಲಿ ಪೊಲೀಸರ ವಿಶೇಷ ಘಟಕದ ವಿರುದ್ದ ನ್ಯಾಯಾಲಯದಲ್ಲಿ ಗಂಭೀರ ಆರೋಪಗಳನ್ನು ಮಾಡಿದ್ದಾರೆ.

ಪೊಲೀಸರು ನಮಗೆ ವಿದ್ಯುತ್‌ ಶಾಕ್ ಕೊಟ್ಟು ಹಿಂಸಿಸಿದಿದ್ದಾರೆ. ರಾಜಕೀಯ ಪಕ್ಷ (ವಿಪಕ್ಷ) ಗಳ ಜೊತೆ ನಂಟಿದೆ ಎಂದು ಒಪ್ಪಿಕೊಳ್ಳುವಂತೆ ಒತ್ತಡ ಹೇರಿದ್ದಾರೆ. ಅಲ್ಲದೆ, ಕಾನೂನು ಬಾಹಿರ ಚಟುವಟಿಕೆಗಳ (ತಡೆ) ಕಾಯ್ದೆ(ಯುಎಪಿಎ)ಯಡಿ  ತಪ್ಪು ಮಾಡಿರುವುದಾಗಿ ಒಪ್ಪಿಕೊಳ್ಳಲು ಒತ್ತಾಯಿಸಿದ್ದಾರೆ ಎಂದು ಹೇಳಿದ್ದಾರೆ.

ಆರೋಪಿಗಳಾದ ಮನೋರಂಜನ್ ಡಿ. ಸಾಗರ್‌ ಶರ್ಮ, ಲಲಿತ್‌ ಝಾ, ಅಮೋಲ್ ಶಿಂದೆ ಮತ್ತು ಮಹೇಶ್ ಕುಮಾವತ್ ಅವರು ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶರಾದ ಹರದೀಪ್ ಕೌರ್ ಅವರ ಎದುರು ಪೊಲೀಸರ ವಿರುದ್ದ ಆರೋಪಗಳನ್ನು ಹೊರಿಸಿದ್ದಾರೆ.

ಪೊಲೀಸರು ಸುಮಾರು 70ರಷ್ಟು ಖಾಲಿ ಹಾಲೆಗಳಿಗೆ ಸಹಿ ಹಾಕುವಂತೆ ಒತ್ತಾಯಿಸಿದ್ದಾರೆ. ಪಾಲಿಗ್ರಾಫ್, ನಾರ್ಕೊ ಅಥವಾ ಬ್ರೈನ್ ಮ್ಯಾಪಿಂಗ್ ಪರೀಕ್ಷೆಗಳ ಸಮಯದಲ್ಲಿ ನಮ್ಮಲ್ಲಿ ಇಬ್ಬರಿಗೆ ರಾಜಕೀಯ ಪಕ್ಷಗಳು ಅಥವಾ ನಾಯಕರ ಹೆಸರನ್ನು ಹೇಳುವಂತೆ ಒತ್ತಡ ಹೇರಿದ್ದಾರೆ. ಮೊಬೈಲ್ ನಂಬರ್, ಸಾಮಾಜಿಕ ಮಾಧ್ಯಮ ಮತ್ತು ಇಮೇಲ್ ಖಾತೆಗಳ ಪಾಸ್‌ವರ್ಡ್‌ ಹಾಗೂ ಮೊಬೈಲ್‌ ಫೋನ್‌ಗಳ ಬಯೋಮೆಟ್ರಿಕ್ ಡೇಟಾ ಮತ್ತು ಪಾಸ್‌ವರ್ಡ್‌ಗಳನ್ನು ಒದಗಿಸುವಂತೆ ಒತ್ತಾಯಿಸಿದ್ದಾರೆ ಎಂದು ಬಂಧಿತರು ಆರೋಪಿಸಿದ್ದಾರೆ.

ಡಿಸೆಂಬರ್ 2023ರಲ್ಲಿ ಸಂಸತ್‌ನ ಚಳಿಗಾಲದ ಅಧಿವೇಶನದ ವೇಳೆ ನಡೆದ ಭದ್ರತಾ ಲೋಪ ಘಟನೆಗೆ ಸಂಬಂಧಿಸಿದಂತೆ ಆರು ಆರೋಪಿಗಳಾದ ಸಾಗರ್ ಶರ್ಮಾ, ಮನೋರಂಜನ್ ಡಿ, ಅಮೋಲ್ ಶಿಂಧೆ, ನೀಲಂ ಆಝಾದ್, ಲಲಿತ್ ಝಾ ಮತ್ತು ಮಹೇಶ್ ಕುಮಾವತ್ ಅವರನ್ನು ಬಂಧಿಸಲಾಗಿದೆ.

ಈ ಪೈಕಿ ಸಾಗರ್ ಶರ್ಮಾ ಮತ್ತು ಮನೋರಂಜನ್ ಡಿ ಲೋಕಸಭೆಯ ಸಾರ್ವಜನಿಕ ಗ್ಯಾಲರಿಯಿಂದ ಸಂಸದರು ಕುಳಿತುಕೊಳ್ಳುವ ಪ್ರದೇಶಕ್ಕೆ ಜಿಗಿದಿದ್ದರು. ನೀಲಮ್ ಆಝಾದ್ ಮತ್ತು ಅಮೋಲ್ ಶಿಂಧೆ ಸಂಸತ್‌ ಭವನದ ಹೊರಗಡೆ ಬಣ್ಣದ ಅನಿಲ ಕ್ಯಾನಿಸ್ಟರ್‌ಗಳನ್ನು ಎರಚಿ ಘೋಷಣೆಗಳನ್ನು ಕೂಗಿದ್ದರು.

ಬುಧವಾರ ದೆಹಲಿಯ ಪಟಿಯಾಲಾ ಹೌಸ್ ಕೋರ್ಟ್‌ನಲ್ಲಿ ನಡೆದ ವಿಚಾರಣೆಯ ವೇಳೆ, ನೀಲಂ ಆಝಾದ್ ಹೊರತುಪಡಿಸಿ ಉಳಿದ ಎಲ್ಲಾ ಆರೋಪಿಗಳು ಪೊಲೀಸರ ವಿರುದ್ದ ಕಿರುಕುಳ ಮತ್ತು ಒತ್ತಡದ ಆರೋಪ ಹೊರಿಸಿದ್ದಾರೆ. ನ್ಯಾಯಾಲಯವು ದೆಹಲಿ ಪೊಲೀಸ್ ವಿಶೇಷ ಘಟಕದಿಂದ ಈ ಕುರಿತು ಪ್ರತಿಕ್ರಿಯೆ ಕೇಳಿದೆ. ಫೆಬ್ರವರಿ 17 ಕ್ಕೆ ಮುಂದಿನ ವಿಚಾರಣೆಯನ್ನು ನಿಗದಿಪಡಿಸಿದೆ.

ಇದನ್ನೂ ಓದಿ: ವರರಿಲ್ಲದೆ ನೂರಾರು ವಧುಗಳ ಸಾಮೂಹಿಕ ವಿವಾಹ: ಉತ್ತರಪ್ರದೇಶದ ಮ್ಯಾರೇಜ್‌ ಸ್ಕೀಂ ಹಗರಣ ಬಯಲು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಐದು ರಾಜ್ಯಗಳ ವಿಧಾನಸಭೆ ಚುನಾವಣೆ ದಿನಾಂಕ ಪ್ರಕಟ; ಬಂಗಾಳದಲ್ಲಿ ಮಾತ್ರ ಎರಡು ಹಂತದ ಮತದಾನ

ಅಸ್ಸಾಂ, ಪಶ್ಚಿಮ ಬಂಗಾಳ, ತಮಿಳುನಾಡು, ಕೇರಳ ಮತ್ತು ಪುದುಚೇರಿ ವಿಧಾನಸಭಾ ಚುನಾವಣೆಗಳ ವೇಳಾಪಟ್ಟಿಯನ್ನು ಭಾರತೀಯ ಚುನಾವಣಾ ಆಯೋಗದ (ಇಸಿಐ) ಮುಖ್ಯಸ್ಥರಾದ ಜ್ಞಾನೇಶ್ ಕುಮಾರ್ ಪ್ರಕಟಿಸಿದರು. ದೆಹಲಿಯಲ್ಲಿ ಇಂದು ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮುಖ್ಯ...

ಫ್ಲಿಪ್‌ಕಾರ್ಟ್‌ನಿಂದ 1 ರೂ.ಗೆ ಹಾಲು ಮಾರಾಟ; ಪ್ರಧಾನಿ ಮೋದಿ ಮಧ್ಯಸ್ಥಿಕೆಗೆ ಬಮುಲ್‌ ಆಗ್ರಹ

ಫ್ಲಿಪ್‌ಕಾರ್ಟ್‌ ಸಂಸ್ಥೆಯು ಆನ್‌ಲೈನ್‌ ಮೂಲಕ 1 ರೂ.ಗೆ ಲೀಟರ್‌ ಹಾಲನ್ನು ಮಾರಾಟ ಮಾಡಿರುವುದು ಭಾರಿ ಜನಾಕ್ರೋಶಕ್ಕೆ ಕಾರಣವಾಗಿದೆ. ಈ ಬಗ್ಗೆ, ಬೆಂಗಳೂರು ನಗರ, ಗ್ರಾಮೀಣ ಮತ್ತು ರಾಮನಗರ ಜಿಲ್ಲಾ ಸಹಕಾರಿ ಹಾಲು ಉತ್ಪಾದಕರ...

“ಮಕ್ಕಳ ಹಂತಕನನ್ನು ಹುಡುಕಿ ಹತ್ಯೆ ಮಾಡುತ್ತೇವೆ” : ನೆತನ್ಯಾಹು ಸುರಕ್ಷಿತವಾಗಿದ್ದಾರೆ ಎಂಬ ಇಸ್ರೇಲ್ ಸ್ಪಷ್ಟನೆ ಬೆನ್ನಲ್ಲೆ ಐಆರ್‌ಜಿಸಿ ಹೇಳಿಕೆ

ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರನ್ನು ಹುಡುಕಿ ಹತ್ಯೆ ಮಾಡುತ್ತೇವೆ ಎಂದು ಇರಾನ್‌ನ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (ಐಆರ್‌ಜಿಸಿ) ಹೇಳಿರುವುದಾಗಿ ವರದಿಯಾಗಿದೆ. ನೆತನ್ಯಾಹು ಅವರ ಹತ್ಯೆಯ ವದಂತಿಗಳನ್ನು ಇಸ್ರೇಲ್ ನಿರಾಕರಿಸಿದ ಬೆನ್ನಲ್ಲೇ, ಐಆರ್‌ಜಿಸಿ ಈ...

ಮಹಾರಾಷ್ಟ್ರ| ಇಫ್ತಾರ್ ಕೂಟಕ್ಕೆ ಸೇರಿದ್ದ ಮುಸ್ಲಿಮರ ಮೇಲೆ ಹಿಂದುತ್ವವಾದಿ ಗುಂಪಿನಿಂದ ದಾಳಿ

ರಂಜಾನ್‌ ಮಾಸದ ಉಪವಾಸ ಮುರಿಯಲು ನೆರೆದಿದ್ದ ಜನರ ಮೇಲೆ ಅಪರಿಚಿತ ವ್ಯಕ್ತಿಗಳ ಗುಂಪೊಂದು ದಾಳಿ ನಡೆಸಿರುವ ಘಟನೆ ಮಹಾರಾಷ್ಟ್ರದ ಪುಣೆಯಲ್ಲಿ ನಡೆದಿದೆ. ಇಫ್ತಾರ್ ಕೂಟಕ್ಕೆ ಸಿದ್ಧತೆ ನಡೆಸುತ್ತಿದ್ದಾಗ, ಸುಮಾರು 100 ಕ್ಕೂ ಹೆಚ್ಚು...

ಆಸ್ಕರ್‌ ಅಂತಿಮ ಪಟ್ಟಿಗೆ ಆಯ್ಕೆಯಾದ ‘ದಿ ವಾಯ್ಸ್ ಆಫ್ ಹಿಂದ್ ರಜಬ್’

ಗಾಝಾದ ಆರು ವರ್ಷದ ಬಾಲಕಿ ಹಿಂದ್ ರಜಬ್‌ ಮತ್ತು ಆಕೆಯ ಸಂಬಂಧಿಕರನ್ನು ಇಸ್ರೇಲಿ ಸೈನಿಕರು ಭೀಕರವಾಗಿ ಹತ್ಯೆ ಮಾಡಿದ ಕಥೆಯನ್ನು ಹೇಳುವ 'ದಿ ವಾಯ್ಸ್ ಆಫ್ ಹಿಂದ್ ರಜಬ್' ಚಲನಚಿತ್ರವು 2026ರ ಆಸ್ಕರ್...

ಉತ್ತರ ಪ್ರದೇಶ| ದಲಿತ ಕುಟುಂಬದ ಮದುವೆ ಮನೆಯಲ್ಲಿ ಸವರ್ಣಿಯರಿಂದ ಹಲ್ಲೆ; ಬಂದೂಕಿನಿಂದ ಬೆದರಿಕೆ

ಮಾರ್ಚ್ 10 ರಂದು ಉತ್ತರ ಪ್ರದೇಶದ ಲಖಿಂಪುರ ಖೇರಿ ಜಿಲ್ಲೆಯ ಟಿಕುನಿಯಾ ಪೊಲೀಸ್ ಠಾಣೆ ಪ್ರದೇಶದಲ್ಲಿ ಜಾತಿ ಆಧಾರಿತ ಹಿಂಸಾಚಾರದ ತೀವ್ರ ಆತಂಕಕಾರಿ ಘಟನೆ ಬೆಳಕಿಗೆ ಬಂದಿದೆ. 24 ಗಂಟೆಗಳ ಒಳಗೆ ಎಫ್‌ಐಆರ್...

’70 ಲಕ್ಷ ಬಂಗಾಳಿ ಮುಸ್ಲಿಮರನ್ನು ಹೊರದಬ್ಬಲು ಸಾಧ್ಯವಿಲ್ಲ..ಅವರೇ ದೇಶ ಬಿಡುವಂತಹ ಪರಿಸ್ಥಿತಿ ಸೃಷ್ಟಿಸುತ್ತೇವೆ’: ಅಸ್ಸಾಂ ಸಿಎಂ ಹಿಮಂತ ಬಿಸ್ವಾ ಶರ್ಮಾ

ಸುಮಾರು 70 ಲಕ್ಷ 'ಬಂಗಾಳಿ ಮುಸ್ಲಿಮರ'ನ್ನು ಭಾರತದಿಂದ ಹೊರಹಾಕುವುದು 'ಮಾನವೀಯವಾಗಿ ಸಾಧ್ಯವಿಲ್ಲ'. ಹಾಗಾಗಿ, ಅವರಾಗಿಯೇ ದೇಶ ತೊರೆಯುವಂತಹ ಪರಿಸ್ಥಿತಿಯನ್ನು ನಾವು ಸೃಷ್ಟಿಸುತ್ತೇವೆ ಎಂದು ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಹೇಳಿದ್ದಾರೆ. ಈ...

ಮೋದಿಯವರ ವಿದೇಶಾಂಗ ನೀತಿ ಸಂಪೂರ್ಣವಾಗಿ ದಿಕ್ಕು ತಪ್ಪಿದೆ, ನಗೆಪಾಟಲಿಗೆ ಈಡಾಗಿದೆ, ಅನೈತಿಕತೆಯಿಂದ ಕೂಡಿದೆ. ಇದು ಜಗಜ್ಜಾಹೀರಾಗಿದೆ – ಶ್ರೀಪಾದ್‌ ಭಟ್

ತಮ್ಮ ಸ್ಥಳೀಯ ಮತಬ್ಯಾಂಕ್ ರಾಜಕಾರಣದ ಜೊತೆಗೆ ವಿದೇಶಿ ನೀತಿಯನ್ನು ತಳುಕು ಹಾಕುವುದು. ಉದಾಹರಣೆಗೆ ಅಮೆರಿಕ-ಇಸ್ರೇಲ್ ಜಂಟಿಯಾಗಿ ನಡೆಸುತ್ತಿರುವ ಇರಾನ್ ಮೇಲಿನ ಯುದ್ಧದ ಸಮಯದಲ್ಲಿ ಮೋದಿ ನೇತೃತ್ವದ ಸರ್ಕಾರವು ತಾನು ಇರಾನ್ ಪರ ನಿಲುವು ತಾಳಿದರೆ...

ದೆಹಲಿ ಪೊಲೀಸರಿಂದ 10 ಮಂದಿ ಹೋರಾಟಗಾರರ ಅಪಹರಣ ಆರೋಪ : ಹೈಕೋರ್ಟ್‌ಗೆ ಹೇಬಿಯಸ್ ಕಾರ್ಪಸ್ ಅರ್ಜಿ

ಸಿವಿಲ್ ಸೊಸೈಟಿಯ ಹತ್ತು ಮಂದಿ ಹೋರಾಟಗಾರರನ್ನು ದೆಹಲಿ ಪೊಲೀಸರು ಅಪಹರಿಸಿದ್ದಾರೆ ಅಥವಾ ಅಕ್ರಮವಾಗಿ ಬಂಧಿಸಿದ್ದಾರೆ ಎಂದು ಮಾನವ ಹಕ್ಕುಗಳ ಗುಂಪುಗಳು ಆರೋಪಿಸಿವೆ. ಹತ್ತು ಮಂದಿಯನ್ನು ದೆಹಲಿ ಪೊಲೀಸರು ಮತ್ತು ಇತರ ರಾಜ್ಯಗಳ ಏಜೆನ್ಸಿಗಳು ಅಪಹರಿಸಿವೆ...

ಗುಜರಾತ್‌: 34 ಜಿಲ್ಲೆಗಳ ಪೈಕಿ 20 ಜಿಲ್ಲೆಗಳಲ್ಲಿ 2 ಲಕ್ಷಕ್ಕೂ ಹೆಚ್ಚು ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ: ವಿಧಾನಸಭೆಗೆ ಮಾಹಿತಿ ನೀಡಿದ ಸರ್ಕಾರ

ಗಾಂಧಿನಗರ: ರಾಜ್ಯದ 34 ಜಿಲ್ಲೆಗಳ ಪೈಕಿ 20 ಜಿಲ್ಲೆಗಳಲ್ಲಿ 2 ಲಕ್ಷಕ್ಕೂ ಹೆಚ್ಚು ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ ಮತ್ತು ಪರಿಸ್ಥಿತಿಯನ್ನು ಸುಧಾರಿಸಲು ವಿವಿಧ ಕ್ರಮಗಳನ್ನು ತೆಗೆದುಕೊಳ್ಳಲಾಗುತ್ತಿದೆ ಎಂದು ಗುಜರಾತ್ ಸರ್ಕಾರ ಶನಿವಾರ ವಿಧಾನಸಭೆಗೆ...